Dolly Dhananjay: `ಅಭಿಮಾನದ ತೇರು ಎಳೆಯಲುʼ ಸಜ್ಜಾಗುತ್ತಿದೆ ‘ಡಾಲಿ ಉತ್ಸವ’! - Vistara News

South Cinema

Dolly Dhananjay: `ಅಭಿಮಾನದ ತೇರು ಎಳೆಯಲುʼ ಸಜ್ಜಾಗುತ್ತಿದೆ ‘ಡಾಲಿ ಉತ್ಸವ’!

Dolly Dhananjay: ಡಾಲಿ ಉತ್ಸವಕ್ಕೆ (Dali Utsav) ಅಭಿಮಾನಿಗಳು ಸಜ್ಜಾಗಿದ್ದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟರ್‌ಗಳನ್ನು ಶೇರ್ ಮಾಡಿ ಸಂಭ್ರಮಿಸುತ್ತಿದ್ದಾರೆ. ಈಗಿನಿಂದಲೇ ಅಭಿಮಾನಿಗಳ ಸಂಭ್ರಮ ಪ್ರಾರಂಭವಾಗಿದೆ. ಧನಂಜಯ್ ಹುಟ್ಟುಹಬ್ಬವನ್ನು ‘ಡಾಲಿ ಉತ್ಸವ’ವೆಂದು ಆಚರಿಸಲು ಅಭಿಮಾನಿಗಳು ಸಜ್ಜಾಗಿದ್ದಾರೆ.

VISTARANEWS.COM


on

Dolly Dhananjay
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಸ್ಯಾಂಡಲ್‌ವುಡ್ ಡಾಲಿ ಎಂದೇ ಖ್ಯಾತಿಗಳಿಸಿರುವ ನಟ ಧನಂಜಯ್ (Dolly Dhananjay) ಅವರಿಗೆ ದೊಡ್ಡ ಸಂಖ್ಯೆಯ ಅಭಿಮಾನಿ ವರ್ಗವಿದೆ. ಆಗಸ್ಟ್‌ 23 ಡಾಲಿ ಧನಂಜಯ್‌ ಅವರಿಗೆ ಜನುಮದಿನದ ಸಂಭ್ರಮ. ‘ಕಾಮನ್ ಮ್ಯಾನ್ ಹೀರೊʼʼಎಂದೇ ಖ್ಯಾತಿ ಪಡೆದಿರುವ ಡಾಲಿ ಈ ಬಾರಿ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಿಸಿಕೊಳ್ಳುತ್ತಿದ್ದಾರೆ. ಈಗಾಗಲೇ ಅಭಿಮಾನಿಗಳ ಸಂಭ್ರಮ ಶುರುವಾಗಿದೆ. ಡಾಲಿ ಉತ್ಸವಕ್ಕೆ (Dali Utsav) ಅಭಿಮಾನಿಗಳು ಸಜ್ಜಾಗಿದ್ದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟರ್‌ಗಳನ್ನು ಶೇರ್ ಮಾಡಿ ಸಂಭ್ರಮಿಸುತ್ತಿದ್ದಾರೆ. ಈಗಿನಿಂದಲೇ ಅಭಿಮಾನಿಗಳ ಸಂಭ್ರಮ ಪ್ರಾರಂಭವಾಗಿದೆ. ಧನಂಜಯ್ ಹುಟ್ಟುಹಬ್ಬವನ್ನು ‘ಡಾಲಿ ಉತ್ಸವ’ವೆಂದು ಆಚರಿಸಲು ಅಭಿಮಾನಿಗಳು ಸಜ್ಜಾಗಿದ್ದಾರೆ.

ಈ ಬಾರಿಯ ಹುಟ್ಟುಹಬ್ಬವನ್ನು ಅಭಿಮಾನಿಗಳು ಡಾಲಿ ಉತ್ಸವ ಹೆಸರಿನಲ್ಲಿ ಆಚರಿಸುತ್ತಿದ್ದಾರೆ. ಡಾಲಿ ಉತ್ಸವ ಎಂದು ಹೆಸರಿಟ್ಟು ‘ಅಭಿಮಾನದ ತೇರು ಎಳೆಯೋಣ ಬನ್ನಿ’ ಎಂದು ಟ್ಯಾಗ್ ಲೈನ್ ಇಡಲಾಗಿದೆ. ಇವತ್ತಿಗೆ ಸರಿಯಾಗಿ 25 ದಿನಗಳು ಬಾಕಿ ಉಳಿದಿದ್ದು. ಇಂದಿನಿಂದಲೇ ಅಭಿಮಾನಿಗಳು ಉತ್ಸವಕ್ಕೆ ರೆಡಿಯಾಗಿದ್ದಾರೆ. ಅಂದಹಾಗೆ ಈ ಬಾರಿಯ ಧನಂಜಯ್ ಹುಟ್ಟುಹಬ್ಬ ತುಂಬಾನೇ ವಿಶೇಷ. 4 ವರ್ಷಗಳ ಬಳಿಕ ಅದ್ಧೂರಿಯಾಗಿ ಅಭಿಮಾನಿಗಳ ಜತೆ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಜತೆಗೆ ಡಾಲಿ ಸಿನಿಮಾರಂಗಕ್ಕೆ ಎಂಟ್ರಿ ಕೊಟ್ಟು 10 ವರ್ಷಗಳಾಗಿದೆ. ಹಾಗಾಗಿ ಈ ಬಾರಿಯ ಹುಟ್ಟುಹಬ್ಬ ಧನಂಜಯ್ ಅವರಿಗೆ ತುಂಬಾ ವಿಶೇಷವಾಗಿದೆ.

ನೆರೆ, ಕೊರೊನಾ, ಹಾಗೂ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿಧನದ ಕಾರಣದಿಂದ ಧನಂಜಯ್ ಕಳೆದ 4 ವರ್ಷಗಳಿಂದ ಹುಟ್ಟುಹಬ್ಬ ಆಚರಿಸಿಕೊಂಡಿರಲಿಲ್ಲ. ಅಭಿಮಾನಿಗಳ ಕೈಗೂ ಸಿಕ್ಕಿರಲಿಲ್ಲ. ಹಾಗಾಗಿ ಈ ಬಾರಿ ದೊಡ್ಡ ಮಟ್ಟದಲ್ಲಿ ಬರ್ತ್‌ಡೇ ಸೆಲೆಬ್ರೇಟ್ ಮಾಡಿಕೊಳ್ಳುತ್ತಿದ್ದು ಹುಟ್ಟುಹಬ್ಬದ ದಿನ ಅಭಿಮಾನಿಗಳ ಜತೆಯೇ ಸಮಯ ಕಳೆಯಲು ನಿರ್ಧರಿಸಿದ್ದಾರೆ.

ಇದನ್ನೂ ಓದಿ: Dolly Dhananjay: 10 ವರ್ಷದ ಪಯಣದಲ್ಲಿ ಹೆಗಲಾಗಿ ನಿಂತ ಜೀವಗಳಿಗೆ ನಮನ ಸಲ್ಲಿಸಿದ ನಟ ರಾಕ್ಷಸ!

ಜಿಪಿ ನಗರದ ಗ್ರೌಂಡ್‌ನಲ್ಲಿ ಸೆಲೆಬ್ರೇಷನ್

ಧನಂಜಯ್ ಬರ್ತಡೇ ಸೆಲೆಬ್ರೇಷನ್ ಜೆಪಿ ನಗರದ ಗ್ರೌಂಡ್‌ನಲ್ಲಿ ನಡೆಯಲಿದೆ ಎನ್ನುವ ಮಾಹಿತಿ ತಿಳಿದು ಬಂದಿದೆ. ರಾಜ್ಯದ ಮೂಲೆ ಮೂಲೆಗಳಿಂದ ಅಪಾರ ಸಂಖ್ಯೆಯ ಅಭಿಮಾನಿಗಳು ಬರುವ ಕಾರಣ ದೊಡ್ಡ ಗ್ರೌಂಡ್‌ನಲ್ಲಿ ಆಚರಣೆ ಮಾಡಿಕೊಳ್ಳಲು ಧನಂಜಯ್ ನಿರ್ಧರಿಸಿದ್ದಾರೆ. ಆಗಸ್ಟ್ 22ರ ರಾತ್ರಿಯಿಂದಲೇ ಸೆಲೆಬ್ರೇಷನ್ ಶುರುವಾಗಲಿದೆ. 23ರಂದು ಗ್ರೌಂಡ್‌ನಲ್ಲಿ ಧನಂಜಯ್ ಎಲ್ಲಾ ಅಭಿಮಾನಿಗಳನ್ನು ಭೇಟಿ ಮಾಡಿ ಅಭಿಮಾನಿಗಳ ಪ್ರೀತಿಯ ವಿಶ್ ಸ್ವೀಕರಿಸಲಿದ್ದಾರೆ.

ಇದನ್ನೂ ಓದಿ: Dolly Dhananjay | ಡಾಲಿ ಧನಂಜಯ್‌ ನಟನೆಯ ʻಹೆಡ್ ಬುಷ್ʼ ಸಿನಿಮಾ ಒಟಿಟಿ ದಿನಾಂಕ ಪ್ರಕಟ

ಊಟದ ವ್ಯವಸ್ಥೆ

ದೂರ ಊರುಗಳಿಂದ ಅಭಿಮಾನಿಗಳು ಬರುವ ಕಾರಣದಿಂದ ಊಟದ ವ್ಯವಸ್ಥೆ ಕೂಡ ಇರಲಿದೆ ಎನ್ನಲಾಗಿದೆ. ಮಧ್ಯಾಹ್ನದ ಊಟದ ವ್ಯವಸ್ಥೆಯನ್ನು ಮಾಡಿಸಲಾಗಿದ್ದು ಎಲ್ಲಾ ಅಭಿಮಾನಿಗಳು ಊಟ ಮಾಡಿ ಸುರಕ್ಷಿತವಾಗಿ ಮತ್ತೆ ತಮ್ಮ ಊರುಗಳಿಗೆ ಮರಳಬೇಕು ಎನ್ನುವುದು ಧನಂಜಯ್ ಅವರ ಆಸೆ. ಹಾಗಾಗಿ ಡಾಲಿ ಉತ್ಸವ ಎಲ್ಲಾ ರೀತಿಯ ಸಕಲ ಸಿದ್ಧತೆ ಈಗಾಗಲೇ ನಡೆಯುತ್ತಿದ್ದು ದೊಡ್ಡ ಮಟ್ಟದಲ್ಲಿ ಅಭಿಮಾನಿಗಳು ಬರುವ ನಿರೀಕ್ಷೆ ಇದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸ್ಯಾಂಡಲ್ ವುಡ್

Yuva Rajkumar: ಇಂದು ಚಾಮರಾಜನಗರದಲ್ಲಿ ‘ಯುವ’ ಪರ್ವ; ಅತಿಥಿಯಾಗಿ ಬರುವ ನಟ ಯಾರು?

Yuva Rajkumar: ಈಗಾಗಲೇ ನಿರ್ದೇಶಕ ಪ್ರಶಾಂತ್ ನೀಲ್ ಮನೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗಿ ಆಗಲು ತೆಲುಗು ನಟ ಜ್ಯೂನಿಯರ್‌ ಎನ್‌ಟಿಆರ್‌ ಬೆಂಗಳೂರಿಗೆ ಬಂದಿದ್ದಾರೆ. ಜ್ಯೂ. ಎನ್‌ಟಿಆರ್ ಚಾಮರಾಜನಗರಕ್ಕೆ ಪ್ರಯಾಣಿಸಿ ‘ಯುವ’ ಫಸ್ಟ್ ಸಾಂಗ್ ರಿಲೀಸ್ ಮಾಡಲಿದ್ದಾರೆ ಎನ್ನಲಾಗುತ್ತಿದೆ.

VISTARANEWS.COM


on

Unleashing the rage of Yuva The First Single
Koo

ಬೆಂಗಳೂರು: ಯುವ ರಾಜ್‌ಕುಮಾರ್ (Yuva Rajkumar) ಅಭಿನಯದ ಯುವ ಸಿನಿಮಾ ಇದೇ ಮಾರ್ಚ್ 29ರಂದು ಬಿಡುಗಡೆಯಾಗುತ್ತಿದೆ. ಸಂತೋಷ್ ಆನಂದರಾಮ್ (Santhosh Anand Ram) ನಿರ್ದೇಶಿಸಿ, ಅಜನೀಶ್ ಲೋಕನಾಥ್ ಸಂಗೀತ ನೀಡಿರುವ ‘ಯುವ’ ಚಿತ್ರದ ಮೊದಲ ಹಾಡು ಇಂದು (ಮಾ.2) ಬಿಡುಗಡೆಯಾಗಲಿದೆ. ಚಾಮರಾಜನಗರದ ರಥದ ಬೀದಿ, ಚಾಮರಾಜೇಶ್ವರ ದೇವಸ್ಥಾನ ಮೈದಾನದಲ್ಲಿ ಸಂಜೆ 5.30ರ ಸುಮಾರಿಗೆ ಕಾರ್ಯಕ್ರಮ ಶುರುವಾಗಲಿದೆ. ಸಂಜೆ 7 ಗಂಟೆ ವೇಳೆಗೆ ಆನಂದ್ ಯೂಟ್ಯೂಬ್ ಚಾನಲ್‌ನಲ್ಲಿ ಲಿರಿಕಲ್ ವಿಡಿಯೊ ಸಾಂಗ್ ಅಪ್‌ಲೋಡ್ ಆಗಲಿದೆ. ಈಗಾಗಲೇ ನಿರ್ದೇಶಕ ಪ್ರಶಾಂತ್ ನೀಲ್ ಮನೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗಿ ಆಗಲು ತೆಲುಗು ನಟ ಜ್ಯೂನಿಯರ್‌ ಎನ್‌ಟಿಆರ್‌ ಬೆಂಗಳೂರಿಗೆ ಬಂದಿದ್ದಾರೆ. ಜ್ಯೂ. ಎನ್‌ಟಿಆರ್ ಚಾಮರಾಜನಗರಕ್ಕೆ ಪ್ರಯಾಣಿಸಿ ‘ಯುವ’ ಫಸ್ಟ್ ಸಾಂಗ್ ರಿಲೀಸ್ ಮಾಡಲಿದ್ದಾರೆ ಎನ್ನಲಾಗುತ್ತಿದೆ.

ಫಸ್ಟ್ ಸಾಂಗ್‌ಗೆ ನಿರ್ದೇಶಕ ಸಂತೋಷ್ ಆನಂದ್‌ರಾಮ್ ಸಾಹಿತ್ಯ ಬರೆದಿದ್ದಾರೆ. ನಕಾಶ್ ಅಜೀಜ್ ಜತೆ ಸೇರಿ ಸಂತೋಷ್ ಆನಂದ್ ರಾಮ್ ಹಾಗೂ ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ ಹಾಡಿದ್ದಾರೆ. ಮೋಹನ್ ಭಜರಂಗಿ ಸಾಂಗ್ ಕೊರಿಯೋಗ್ರಫಿ ಮಾಡಿದ್ದಾರೆ. ಅಂದಾಜು 3 ಕೋಟಿ ರೂ. ಮೊತ್ತಕ್ಕೆ ‘ಯುವ’ ಆಡಿಯೊ ರೈಟ್ಸ್ ಆನಂದ್ ಆಡಿಯೊ ಪಾಲಾಗಿದೆ ಎನ್ನಲಾಗಿದೆ.

ಇದನ್ನೂ ಓದಿ: Yuva Rajkumar: ನಾಳೆ ಚಾಮರಾಜನಗರದಲ್ಲಿ ‘ಯುವ’ ಚಿತ್ರದ ಮೊದಲ ಹಾಡು ಬಿಡುಗಡೆ!

ಪುನೀತ್ ರಾಜ್‌ಕುಮಾರ್ ಉಪಸ್ಥಿತಿಯಲ್ಲಿ ‘ಯುವ’ ಚಿತ್ರದ ಫಸ್ಟ್ ಸಾಂಗ್ ರಿಲೀಸ್ ಆಗುತ್ತದೆ ಎಂದೂ ಹೇಳಲಾಗುತ್ತಿದೆ. ಅಪ್ಪು ಪ್ರತಿಮೆ ಅಥವಾ ಅಪ್ಪು AI ತಂತ್ರಜ್ಞಾನದ ಆಡಿಯೊ ಶುಭಾಶಯದ ಮೂಲಕ ‘ಯುವ’ ಸಾಂಗ್ ಔಟ್‌ ಆಗಲಿದೆ ಎಂದು ವರದಿಯಾಗಿದೆ.

ಈ ಸಿನಿಮಾಗೆ ‘ಹೊಂಬಾಳೆ ಫಿಲ್ಮ್ಸ್​’ (Hombale Films) ಸಂಸ್ಥೆ ಬಂಡವಾಳ ಹೂಡಿದೆ. ಖ್ಯಾತ ನಿರ್ದೇಶಕ ಸಂತೋಷ್ ಆನಂದ್​ರಾಮ್ ಅವರು ಈ ಚಿತ್ರಕ್ಕೆ ಆ್ಯಕ್ಷನ್​-ಕಟ್​ ಹೇಳಿದ್ದಾರೆ. ಹಾಡುಗಳ ಮೂಲಕ ಕ್ರೇಜ್​ ಸೃಷ್ಟಿಸಲು ಚಿತ್ರತಂಡ ರೆಡಿಯಾಗಿದೆ.ಚಿತ್ರದಲ್ಲಿ ಸಪ್ತಮಿ ಪಾತ್ರಕ್ಕೆ ಹೆಚ್ಚಿನ ಆದ್ಯತೆಯಿದ್ದು, ನಟಿ ಬಿಗ್ ಸ್ಕ್ರೀನ್‌ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಯುವ-ಸಪ್ತಮಿ ಜೋಡಿ ಮೊದಲ ಬಾರಿಗೆ ತೆರೆಯ ಮೇಲೆ ಕಾಣಿಸಿಕೊಳುತ್ತಿದೆ. ಶ್ರೀಶ ಕುದುವಳ್ಳಿ ಛಾಯಾಗ್ರಹಣ ‘ಯುವ’ ಚಿತ್ರಕ್ಕಿದೆ.

Continue Reading

ಸ್ಯಾಂಡಲ್ ವುಡ್

Viral Video: ನಟಿಯ 4 ತಿಂಗಳ ಮಗು ‘ಐ ಲವ್ ಯು’ ಅಂದು ಬಿಡೋದೆ! ಇದು ಕಲಿಗಾಲ ಗುರೂ ಅಂದ್ರು ಫ್ಯಾನ್ಸ್‌!

Viral Video: ಅಂತಾರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಪಡೆದ ʻತಿಥಿʼ ಸಿನಿಮಾದ (Thithi Kannada Film) ಕಾವೇರಿ ಪಾತ್ರದಲ್ಲಿ ಅಭಿನಯಿಸಿದ್ದ ಅವರು ಎಲ್ಲರ ಗಮನ ಸೆಳೆದಿದ್ದರು. ಸಾಫ್ಟವೇರ್‌ ಎಂಜಿನಿಯರ್‌ ಪ್ರೇಮ್‌ ಎಂಬುವರ ಕೈ ಹಿಡಿದಿದ್ದರು.

VISTARANEWS.COM


on

thithi fame actress pooja kaveri 4 months baby boy says i love you
Koo

ಬೆಂಗಳೂರು: “ತಿಥಿʼʼ ಸಿನಿಮಾ ಮೂಲಕ (Viral Video) ಮನೆಮಾತಾಗಿದ್ದ ಸ್ಯಾಂಡಲ್‌ವುಡ್‌ ನಟಿ ಪೂಜಾ ಎಸ್ ಎಂ ಆಗಾಗ ತಮ್ಮ ವೈಯಕ್ತಿಕ ವಿಚಾರಗಳನ್ನು ಸೋಷಿಯಲ್‌ ಮೀಡಿಯಾದಲ್ಲಿ ಶೇರ್‌ ಮಾಡಿಕೊಳ್ಳುತ್ತಲೇ ಇರುತ್ತಾರೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಪಡೆದ ʻತಿಥಿʼ ಸಿನಿಮಾದ (Thithi Kannada Film) ಕಾವೇರಿ ಪಾತ್ರದಲ್ಲಿ ಅಭಿನಯಿಸಿದ್ದ ಅವರು ಎಲ್ಲರ ಗಮನ ಸೆಳೆದಿದ್ದರು. ಸಾಫ್ಟವೇರ್‌ ಎಂಜಿನಿಯರ್‌ ಪ್ರೇಮ್‌ ಎಂಬುವರ ಕೈ ಹಿಡಿದಿದ್ದರು. 4 ತಿಂಗಳ ಹಿಂದೆ ಮುದ್ದಾದ ಗಂಡು ಮಗುವಿಗೆ ಪೂಜಾ ಜನ್ಮ ನೀಡಿದ್ದರು. ಇದೀಗ ಮಗ ‘ಐ ಲವ್ ಯು’ ಎಂದು ತಂದೆ ಹೇಳಿಕೊಟ್ಟಂತೆ ಹೇಳಿರುವ ಕ್ಯೂಟ್‌ ವಿಡಿಯೊ ವೈರಲ್‌ ಆಗುತ್ತಿದೆ. 4 ತಿಂಗಳ ಮಗನನ್ನು ಮಡಿಲಲ್ಲಿ ಮಲಗಿಸಿಕೊಂಡು ಪೂಜಾ ಪತಿ ಪ್ರೇಮ್ ‘ಐ ಲವ್ ಯು’ ಎಂದು ಒಂದೊಂದೇ ಪದವನ್ನು ಹೇಳಿಕೊಟ್ಟಿದ್ದಾರೆ. ಅದನ್ನು ಮಗು ಕೂಡ ಚೆನ್ನಾಗಿ ಆಲಿಸಿ ಹೇಳಿದೆ.

“ನಮ್ಮ 4 ತಿಂಗಳ ಮಗು ತಂದೆಗೆ ತನ್ನ ಮೊದಲ ಪ್ರೀತಿಯನ್ನು ವ್ಯಕ್ತಪಡಿಸುತ್ತಿದೆ” ಎಂದು ಬರೆದು ಪೂಜಾ ವಿಡಿಯೊ ಹಂಚಿಕೊಂಡಿದ್ದಾರೆ. 2 ದಿನಗಳಲ್ಲಿ 1 ಮಿಲಿಯನ್‌ಗೂ ಹೆಚ್ಚು ವೀವ್ಸ್ ಪಡೆದು ವಿಡಿಯೊ ಗಮನ ಸೆಳೆದಿದೆ. ‘ಕಲಿಗಾಲ ಇದು’,4 ತಿಂಗಳಿಗೆ ಹೀಗಾದರೆ ಮುಂದೆ ಹೇಗೆ? ಎಂದು ಕಮೆಂಟ್‌ ಮಾಡಿದ್ದಾರೆ ನೆಟ್ಟಿಗರು.

ಇದನ್ನೂ ಓದಿ: Hair Growth Tips: ತಲೆ ಕೂದಲು ವೇಗವಾಗಿ ಬೆಳೆಯಬೇಕೆ? ಹೀಗೆ ಮಾಡಿ

ತಿಥಿ ಚಿತ್ರದಲ್ಲಿ ಅಭಿನಯಕ್ಕಾಗಿ ಅತ್ಯುತ್ತಮ ಪೋಷಕ ನಟಿ ರಾಜ್ಯ ಪ್ರಶಸ್ತಿಯನ್ನು ಪೂಜಾ ಪಡೆದಿದ್ದರು. “ದಾರಿ ಯಾವುದಯ್ಯ ವೈಕುಂಠಕ್ಕೆʼʼ ಸೇರಿದಂತೆ ಹಲವು ಸಿನಿಮಾದಲ್ಲಿ ನಟಿಸಿದ್ದರು. “ನೀವು ಕರೆ ಮಾಡಿದ ಚಂದದಾರರುʼʼ ಸಿನಿಮಾ ನಂತರ ಅವಕಾಶಗಳು ಅಷ್ಟಾಗಿ ಪೂಜಾರವರಿಗೆ ಸಿಕ್ಕಿರಲಿಲ್ಲ. ಹೀಗಾಗಿ ಅವರು ತಮ್ಮ ವಿದ್ಯಾಭ್ಯಾಸದ ಕಡೆ ಗಮನ ಹರಿಸಿದ್ದರು. ಖಾಸಗಿ ಕಂಪನಿಯೊಂದರಲ್ಲಿ ಕೆಲಸಕ್ಕೂ ಸೇರಿಕೊಂಡಿದ್ದರೆಂದು ಹೇಳಲಾಗಿದೆ. ಉತ್ತಮ ಅವಕಾಶಗಳು ಸಿಕ್ಕರೆ ಮತ್ತೆ ಸ್ಯಾಂಡಲ್‌ವುಡ್‌ಗೆ ಕಾಲಿಡುವುದಾಗಿ ಅವರು ಈ ಹಿಂದೆ ಹೇಳಿಕೊಂಡಿದ್ದರು.

Continue Reading

ಟಾಲಿವುಡ್

Rashmika Mandanna: ಜಪಾನ್‌ನಲ್ಲಿ ಮಿಂಚಿದ ಕಿರಿಕ್‌ ಬೆಡಗಿ ರಶ್ಮಿಕಾ ಮಂದಣ್ಣ!

Rashmika Mandanna: ಜಪಾನ್‌ನಲ್ಲಿ ರಶ್ಮಿಕಾ ಪೋಸ್‌ ಕೊಟ್ಟು ಪೋಸ್ಟ್‌ ಹಂಚಿಕೊಂಡಿದ್ದಾರೆ. ಇದೀಗ ರಶ್ಮಿಕಾ ಅವರ ವಿಡಿಯೊ ಹಾಗೂ ಫೋಟೊಗಳು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ.

VISTARANEWS.COM


on

Rashmika Mandanna jets off to Tokyo to attend ceremony
Koo

ಬೆಂಗಳೂರು: ನ್ಯಾಷನಲ್‌ ಕ್ರಶ್‌ ರಶ್ಮಿಕಾ ಮಂದಣ್ಣ (Rashmika Mandanna) ಅವರು ಸದ್ಯ ಜಪಾನ್‌ನಲ್ಲಿದ್ದಾರೆ. ಜಪಾನ್‌ನ ಟೋಕಿಯೊದಲ್ಲಿ ನಡೆಯುತ್ತಿರುವ ಪ್ರತಿಷ್ಠಿತ ‘ಕ್ರಂಚೈರೋಲ್ ಅನಿಮೆ ಅವಾರ್ಡ್ಸ್’ 2024 ರಲ್ಲಿ (Crunchyroll Anime Awards) ಭಾರತವನ್ನು ಪ್ರತಿನಿಧಿಸುವ ಅವಕಾಶ ರಶ್ಮಿಕಾಗೆ ಸಿಕ್ಕಿದೆ. ಟೋಕಿಯೋ ವಿಮಾನ ನಿಲ್ದಾಣದಲ್ಲಿ ಹೋಗಿ ಇಳಿದ ತಕ್ಷಣ, ಅಲ್ಲಿನ ಅಭಿಮಾನಿಗಳಿಂದ ಭರ್ಜರಿ ಸ್ವಾಗತ ಸಿಕ್ಕಿದೆ. ಅಷ್ಟೇ ಅಲ್ಲ ಜಪಾನ್‌ನಲ್ಲಿ ರಶ್ಮಿಕಾ ಪೋಸ್‌ ಕೊಟ್ಟು ಪೋಸ್ಟ್‌ ಹಂಚಿಕೊಂಡಿದ್ದಾರೆ. ಇದೀಗ ರಶ್ಮಿಕಾ ಅವರ ವಿಡಿಯೊ ಹಾಗೂ ಫೋಟೊಗಳು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ.

ಜಪಾನ್ ಅಭಿಮಾನಿಗಳು ತಮ್ಮ ಮೇಲೆ ತೋರಿದ ಪ್ರೀತಿಗೆ ರಶ್ಮಿಕಾ ಸಂತಸ ಮಂದಣ್ಣ ವ್ಯಕ್ತಪಡಿಸಿದ್ದಾರೆ. ಕೆಲಹೊತ್ತು ಅದನ್ನು ನೋಡುತ್ತಾ ನಿಂತು ಬಿಟ್ಟಿದ್ದಾರೆ. ಬಳಿಕ ಥ್ಯಾಂಕ್ಸ್ ಎಂದು ಅಭಿಮಾನಿಗಳ ಪ್ರೀತಿಗೆ ಧನ್ಯವಾದ ತಿಳಿಸಿದ್ದಾರೆ. ಇಂದು (ಮಾರ್ಚ್ 2) ಟೋಕಿಯೊದಲ್ಲಿ ‘ಕ್ರಂಚೈರೋಲ್ ಅನಿಮೆ’ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ವಿಶ್ವದ ನಾನಾ ಕಡೆಗಳಿಂದ ನಟರು ಹಾಗೂ ಗಾಯಕರು ಆಗಮಿಸಿದ್ದಾರೆ. ಕೆಲವು ವರದಿಗಳ ಪ್ರಕಾರ ರಶ್ಮಿಕಾ ಮಂದಣ್ಣ ಅವರು ಹೊಸ ಪಿಆರ್ ಏಜೆನ್ಸಿಯನ್ನು ನೇಮಕ ಮಾಡಿಕೊಂಡಿದ್ದಾರೆ. ಈ ತಂಡ ಮುಂಬೈ ಮೂಲದ್ದು. ಪಿಆರ್ ಏಜಿನ್ಸಿ ಅವರೇ ರಶ್ಮಿಕಾ ಮಂದಣ್ಣ ಅವರಿಗೆ ಈ ಅವಕಾಶ ಬರುವಂತೆ ನೋಡಿಕೊಂಡಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: Rashmika Mandanna: ಧನುಷ್‌ -ರಶ್ಮಿಕಾ ಅಭಿನಯದ ಸಿನಿಮಾವೊಂದರ ದೃಶ್ಯ ಲೀಕ್‌!

ರಶ್ಮಿಕಾ ಮಂದಣ್ಣ ಅವರು ತಮ್ಮ ಪ್ಯಾಕ್ಡ್ ಶೆಡ್ಯೂಲ್‌ನಲ್ಲಿ ನಿರತರಾಗಿದ್ದಾರೆ. ಇತ್ತೀಚೆಗೆ ಹೈದರಾಬಾದ್‌ನಲ್ಲಿ ಧುನುಷ್‌ ಅವರ ಜತೆ DNS (D51) ಚಿತ್ರೀಕರಣದಲ್ಲಿ ಭಾಗಿಯಾಗಿದ್ದರು. ಇದೇ ಮೊದಲ ಬಾರಿಗೆ ಧನುಷ್ ಮತ್ತು ರಶ್ಮಿಕಾ ಮಂದಣ್ಣ ಜತೆಯಾಗಿ ಸಿನಿಮಾ ಮಾಡುತ್ತಿದ್ದಾರೆ. ವರದಿಯ ಪ್ರಕಾರ ಇದೊಂದು ರಾಜಕೀಯ ವಸ್ತುವುಳ್ಳ ಕತೆಯಾಗಿದ್ದು, ರಾಜಕೀಯ ಕುತಂತ್ರಗಳನ್ನು ಸಾಮಾನ್ಯ ವ್ಯಕ್ತಿಯೊಬ್ಬ ಹೇಗೆ ಎದುರಿಸುತ್ತಾನೆ, ರಾಜಕೀಯದ ದೌರ್ಜನ್ಯಕ್ಕೆ ಹೇಗೆ ತುತ್ತಾಗುತ್ತಾನೆ ಅದರಿಂದ ಹೊರಗೆ ಹೇಗೆ ಬರುತ್ತಾನೆ ಎಂಬ ಕತೆಯನ್ನು ಈ ಸಿನಿಮಾ ಒಳಗೊಂಡಿದೆ ಎನ್ನಲಾಗಿದೆ.

ಶ್ರೀವೆಂಕಟೇಶ್ವರ ಸಿನಿಮಾಸ್​ ಮತ್ತು ಒಮಿಗೋಸ್​ ಕ್ರಿಯೇಷನ್ಸ್​ ಬ್ಯಾನರ್​ ಮೂಲಕ ಈ ಚಿತ್ರ ನಿರ್ಮಾಣ ಆಗಲಿದೆ. ಧನುಷ್‌​​ ಮತ್ತು ರಶ್ಮಿಕಾ ಮಂದಣ್ಣ ಅವರನ್ನು ಹೊರತುಪಡಿಸಿ ಬೇರೆ ಯಾವೆಲ್ಲ ಕಲಾವಿದರು ನಟಿಸುತ್ತಾರೆ ಎಂಬುದು ಇನ್ನಷ್ಟೇ ಗೊತ್ತಾಗಬೇಕಿದೆ. ತಾಂತ್ರಿಕ ವರ್ಗದ ಬಗ್ಗೆಯೂ ಹೆಚ್ಚಿನ ಮಾಹಿತಿ ಹೊರಬರುವುದು ಬಾಕಿ ಇದೆ.

Continue Reading

ಸ್ಯಾಂಡಲ್ ವುಡ್

Kannada New Movie: ‘ಕೆರೆಬೇಟೆ’ ಟೈಟಲ್ ಟ್ರ್ಯಾಕ್ ರಿಲೀಸ್!

Kannada New Movie: ಇತ್ತೀಚಿಗಷ್ಟೇ ಮೊದಲ ಹಾಡನ್ನು ರಿಲೀಸ್ ಮಾಡಿದ್ದ ಚಿತ್ರತಂಡ ಇದೀಗ ಸಿನಿಮಾದ ಬಹುನಿರೀಕ್ಷಿಯ ಟೈಟಲ್ ಟ್ರ್ಯಾಕ್ ಅನ್ನು ಅದ್ದೂರಿಯಾಗಿ ಬಿಡುಗಡೆ ಮಾಡಿದೆ.

VISTARANEWS.COM


on

Kannada New Movie kerebete title track Out
Koo

ಬೆಂಗಳೂರು: ‘ಕೆರೆಬೇಟೆ’ ಸ್ಯಾಂಡಲ್‌ವುಡ್‌ನಲ್ಲಿ (Kannada New Movie) ಸಿಕ್ಕಾಪಟ್ಟೆ ನಿರೀಕ್ಷೆ ಮತ್ತು ಕುತೂಹಲ ಮೂಡಿಸಿರುವ ಸಿನಿಮಾ. ಗೌರಿಶಂಕರ್ ನಟನೆಯ ರಾಜ್ ಗುರು ನಿರ್ದೇಶನದ ಕೆರೆಬೇಟೆ ಚಿತ್ರದ ಟ್ರೈಲರ್, ಟೀಸರ್ ಮತ್ತು ರೊಮ್ಯಾಂಟಿಕ್ ಹಾಡು ಈಗಾಗಲೇ ರಿಲೀಸ್ ಆಗಿದ್ದು ಕುತೂಹಲ ದುಪ್ಪಟ್ಟು ಮಾಡಿದೆ. ಇದೀಗ ಸಿನಿಮಾ ತಂಡ ಟೈಟಲ್ ಟ್ರ್ಯಾಕ್ ರಿಲೀಸ್ ಮಾಡುವ ಮೂಲಕ ಮತ್ತಷ್ಟು ನಿರೀಕ್ಷೆ ಹೆಚ್ಚಿಸಿದೆ. ಇತ್ತೀಚಿಗಷ್ಟೇ ಮೊದಲ ಹಾಡನ್ನು ರಿಲೀಸ್ ಮಾಡಿದ್ದ ಚಿತ್ರತಂಡ ಇದೀಗ ಸಿನಿಮಾದ ಬಹುನಿರೀಕ್ಷಿಯ ಟೈಟಲ್ ಟ್ರ್ಯಾಕ್ ಅನ್ನು ಅದ್ದೂರಿಯಾಗಿ ಬಿಡುಗಡೆ ಮಾಡಿದೆ.

ವಿಶೇಷ ಎಂದರೆ ಈ ಹಾಡನ್ನು ಶಾಸಕ ಹಾಗೂ ಮಾಜಿ ಹೋಂ ಮಿನಿಸ್ಟರ್ ಆರಗ ಜ್ಞಾನೇಂದ್ರ ಹಾಗೂ ಸಂಸದರಾದ ಬಿ ವೈ ರಾಘವೇಂದ್ರ ರಿಲೀಸ್ ಮಾಡಿ ಸಿನಿಮಾ ತಂಡಕ್ಕೆ ಶುಭ ಹಾರೈಸಿದರು. ಶಿವಮೊಗ್ಗದ ಕುವೆಂಪು ರಂಗಮಂದಿರದಲ್ಲಿ ನಡೆದ ಟೈಟಲ್ ಟ್ರ್ಯಾಕ್ ರಿಲೀಸ್ ಕಾರ್ಯಕ್ರಮದಲ್ಲಿ ಕೆರೆಬೇಟೆ ಚಿತ್ರದ ಹಾಡು ಅದ್ಧೂರಿಯಾಗಿ ಬಿಡುಗಡೆಯಾಯಿತು.

‘ಕೆರಿಬ್ಯಾಟಿ ಶುರುವಾತು…’ ಎನ್ನುವ ಈ ಟೈಟಲ್ ಟ್ರ್ಯಾಕ್ ಅನ್ನು ಪ್ರಮೋದ್ ಮರವಂತೆ ಬರೆದಿದ್ದಾರೆ, ಗಗನ್ ಬಡೇರಿಯಾ ಸಂಗೀತ ಸಂಯೋಜನೆ ಮಾಡಿದ್ದು ಕರಿಬಸವ ತಡಕಲ್ ಈ ಹಾಡಿಗೆ ಧ್ವನಿ ನೀಡಿದ್ದಾರೆ. ಈ ಹಾಡನ್ನು ಕೇಳಿ ಮನಸೋತ ಶಾಸಕ ಆರಗ ಜ್ಞಾನೇಂದ್ರ ಹಾಗೂ ಸಂಸದ ಬಿ ವೈ ರಾಘವೇಂದ್ರ ಅವರು ಸಂತಸ ವ್ಯಕ್ತಪಡಿಸಿದರು.

ಇದನ್ನೂ ಓದಿ: Kannada New Movie: ʻಧೀರ ಭಗತ್ ರಾಯ್ʼ ಸಿನಿಮಾದ ʼಏನು ಕರ್ಮʼ ಹಾಡು ಬಿಡುಗಡೆ

ಟೈಟಲ್ ಟ್ರ್ಯಾಕ್ ರಿಲೀಸ್ ಮಾಡಿ ಮಾತನಾಡಿದ ಬಿ ವೈ ರಾಘವೇಂದ್ರ, ‘ಈ ಸಿನಿಮಾ ಸಂಪೂರ್ಣವಾಗಿ ಮಲೆನಾಡಿನ ಸುತ್ತಮುತ್ತವೇ ಚಿತ್ರೀಕರಣಗೊಂಡಿದೆ. ಜೊತೆಗೆ ಮಲೆನಾಡಿನವರೇ ಸೇರಿ ಈ ಸಿನಿಮಾ ಮಾಡಿದ್ದಾರೆ. ಮಲೆನಾಡಿನ ಸೌಂದರ್ಯವನ್ನು ತುಂಬಾ ಸುಂದರವಾಗಿ ತೋರಿಸಲಾಗಿದೆ. ಇಡೀ ಚಿತ್ರತಂಡಕ್ಕೆ ಒಳ್ಳೆಯದಾಗಲಿ’ ಎಂದು ಶುಭ ಹಾರೈಸಿದರು.

ಇನ್ನು ಆರಗ ಜ್ಞಾನೇಂದ್ರ ಮಾತನಾಡಿ, ‘ಇತ್ತೀಚಿನ ದಿನಗಳಲ್ಲಿ ಮಲೆನಾಡಿನ ಸಂಸ್ಕೃತಿಗಳು ಕಣ್ಮರೆಯಾಗಿವೆ. ಅನೇಕ ಪದ್ಧತಿಗಳು ಮರೆಯಾಗಿವೆ. ಇದೀಗ ಕೆರೆಬೇಟೆ ಸಂಸ್ಕೃತಿಯ ಬಗ್ಗೆ ಸಿನಿಮಾ ಮಾಡಿರುವುದು ತುಂಬಾ ಖುಷಿ ಆಗುತ್ತೆ. ಟ್ರೈಲರ್ ಮತ್ತು ಸಾಂಗ್ ಅದ್ಭುತವಾಗಿ ಮೂಡಿ ಬಂದಿದೆ. ನಾಯಕ ನಟ, ನಿರ್ದೇಶಕ ನಿರ್ಮಾಪಕ ಸೇರಿದಂತೆ ಎಲ್ಲರೂ ಮಲೆನಾಡಿನವರೇ ಎನ್ನುವುದು ಖುಷಿಯ ವಿಚಾರ. ಸಿನಿಮಾ ಎಲ್ಲಾ ಕಡೆ ಹೌಸ್ ಫುಲ್ ಪ್ರದರ್ಶನ ಕಾಣಲಿ’ ಎಂದು ಹೇಳಿದರು.

ಸಾಂಗ್ ರಿಲೀಸ್ ಬಳಿಕ, ನಿಜವಾದ ಕೆರೆಬೇಟೆ ಆಟಗಾರರು ಕೂಣಿ ಹಿಡಿದು ಪ್ರತಿ ಜಿಲ್ಲೆಗಳಿಗೂ ಚಿತ್ರದ ಪ್ರಚಾರಕ್ಕಾಗಿ ಬೈಕ್ ರ್ಯಾಲಿ ಹೊರಡಲಿದ್ದು ರ್ಯಾಲಿಗೂ ಚಾಲನೆ ನೀಡಲಾಯಿತು.

ಸದ್ಯ ರಿಲೀಸ್ ಗೆ ಸಿದ್ಧವಾಗಿರುವ ‘ಕೆರೆಬೇಟೆ’ ಸಿನಿಮಾ ಟೈಟಲ್ ಟ್ರ್ಯಾಕ್ ಮೂಲ ಮತ್ತಷ್ಟು ಕುತೂಹಲ ಹೆಚ್ಚಿಸಿದೆ. ಅಪ್ಪಟ ಹಳ್ಳಿ ಸೊಗಡಿನ ಸಿನಿಮಾ ಇದಾಗಿದ್ದು ಇದೇ ಮಾರ್ಚ್ 15ಕ್ಕೆ ಚಿತ್ರಮಂದಿರಕ್ಕೆ ಎಂಟ್ರಿ ಕೊಡುತ್ತಿದೆ. ಜನಮನ ಸಿನಿಮಾ ಸಂಸ್ಥೆಯಲ್ಲಿ ಮೂಡಿ ಬಂದಿರುವ ಕೆರಬೇಟೆ ಸಿನಿಮಾ ಹೇಗಿರಲಿದೆ, ಮಲೆನಾಡಿನ ಮೀನು ಬೇಟೆಯ ಸಂಸ್ಕೃತಿ ಹೇಗೆ ಮೂಡಿ ಬಂದಿದೆ ಎಂದು ನೋಡಲು ಅಭಿಮಾನಿಗಳು ಸಹ ಕಾತರರಾಗಿದ್ದಾರೆ.

Continue Reading
Advertisement
vrinda dinesh injury
ಕ್ರೀಡೆ1 min ago

WPL 2024: ಭುಜದ ಗಾಯ; ಟೂರ್ನಿಯಿಂದಲ್ಲೇ ಹೊರಬಿದ್ದ ಕನ್ನಡತಿ ವೃಂದಾ

rameshwaram cafe bengaluru incident
ಬೆಂಗಳೂರು5 mins ago

Blast In Bengaluru: ಬೆಂಗಳೂರಿಗರೇ Be alert; ಸಂಶಯ ಬಂದರೆ ಇಲ್ಲಿಗೆ ಕಾಲ್‌ ಮಾಡಿ

Blast in Bengaluru Karnataka is becoming a haven for terrorists under Congress rule says Pralhad Joshi
ಕ್ರೈಂ6 mins ago

Blast in Bengaluru: ಕಾಂಗ್ರೆಸ್ ಆಡಳಿತದಲ್ಲಿ ಕರ್ನಾಟಕವಾಗುತ್ತಿದೆ ಉಗ್ರರ ಸ್ವರ್ಗ: ಪ್ರಲ್ಹಾದ್‌ ಜೋಶಿ

Narendra Modi
ದೇಶ13 mins ago

ಮ್ಯಾಟ್ರಿಮೋನಿ ಸೇರಿ ಹಲವು ಆ್ಯಪ್‌ಗಳಿಗೆ ಗೂಗಲ್‌ ಕೊಕ್;‌ ಕೇಂದ್ರದ ಮುಂದಿನ ನಡೆ ಏನು?

Yuvraj Singh
ಕ್ರೀಡೆ36 mins ago

Yuvraj Singh: ಲೋಕಸಭಾ ಸ್ಪರ್ಧೆ ಬಗ್ಗೆ ಅಧಿಕೃತ ಮಾಹಿತಿ ನೀಡಿದ ಯುವರಾಜ್​ ಸಿಂಗ್​

Anant Ambani wedding bollywood celebrities Pose
ಬಾಲಿವುಡ್40 mins ago

Anant Ambani: ಅಂಬಾನಿ ಫ್ಯಾಮಿಲಿಯ ಪ್ರಿ-ವೆಡ್ಡಿಂಗ್‌ಗೆ ಬಾಲಿವುಡ್‌ ಸೆಲೆಬ್ರಿಟಿಗಳು ಪೋಸ್‌ ಕೊಟ್ಟಿದ್ದು ಹೀಗೆ!

Share Market
ದೇಶ40 mins ago

Stock Market: ರಜಾ ದಿನವೂ ಸ್ಪೆಷಲ್‌ ಟ್ರೇಡಿಂಗ್, ಸೆನ್ಸೆಕ್ಸ್‌, ನಿಫ್ಟಿ ಅಬ್ಬರ ಜೋರು

Blast in Bengaluru NIA to take over probe into Rameswaram Cafe bomb blast case
ಕ್ರೈಂ47 mins ago

Blast in Bengaluru: ರಾಮೇಶ್ವರಂ ಕೆಫೆ ಬಾಂಬ್‌ ಬ್ಲಾಸ್ಟ್ ಕೇಸ್‌ ತನಿಖೆ NIA ಹೆಗಲಿಗೆ? ಇಂದೇ ಹಸ್ತಾಂತರ!

no abuse
ಕ್ರೈಂ48 mins ago

ಮಾತು ಬಾರದ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ; ಗುದ ದ್ವಾರಕ್ಕೆ ಪೆನ್‌ ತುರುಕಿಸಿ ವಿಕೃತಿ ಮೆರೆದ ಸಂಬಂಧಿಕರು

ಕ್ರೀಡೆ1 hour ago

BCCI Annual Contract: ಅಯ್ಯರ್, ಇಶಾನ್​ಗೆ ಗುತ್ತಿಗೆ ಪಟ್ಟಿ ಸೇರಲು ಇನ್ನೂ ಇದೆ ಅವಕಾಶ; ಈ ಷರತ್ತು ಅನ್ವಯ!

Sharmitha Gowda in bikini
ಕಿರುತೆರೆ5 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ5 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ5 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ3 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ5 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ5 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ4 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ3 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ3 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Rameswaram Cafe Blast Suspected travels in BMTC Volvo bus
ಬೆಂಗಳೂರು3 hours ago

Blast In Bengaluru: ರಾಮೇಶ್ವರಂ ಕೆಫೆ ಬ್ಲಾಸ್ಟ್‌; ವೋಲ್ವೋ ಬಸ್‌ನಲ್ಲಿ ಬಾಂಬರ್ ಸಂಚಾರ, ಸಿಸಿಟಿವಿಯಲ್ಲಿ ಸೆರೆ

Blast in Bengaluru Time bomb planted in rameshwaram cafe Important evidence found
ಬೆಂಗಳೂರು22 hours ago

Blast in Bengaluru: ರಾಮೇಶ್ವರಂ ಕೆಫೆ ಬ್ಲಾಸ್ಟ್‌; ಹೋಟೆಲ್‌ನಲ್ಲಿಟ್ಟಿದ್ದು ಟೈಂ ಬಾಂಬ್‌? ಸಿಕ್ಕಿದೆ ಮಹತ್ವದ ಸಾಕ್ಷ್ಯ

rameshwaram cafe bengaluru incident
ಬೆಂಗಳೂರು24 hours ago

Blast in Bengaluru : ರಾಮೇಶ್ವರಂ ಕೆಫೆ ಸ್ಫೋಟದ ಸ್ಥಳದಲ್ಲಿ ಬ್ಯಾಟರಿ ಪತ್ತೆ!

Elephants spotted in many places
ಹಾಸನ1 day ago

Elephant Attack: ಹಾಸನ, ರಾಮನಗರ, ಮೈಸೂರಲ್ಲಿ ಆನೆ ಬೇನೆ; ಬೆಳಗಾವಿಯಲ್ಲಿ ಬಿಂದಾಸ್‌ ಓಡಾಟ

read your daily horoscope predictions for march 1st 2024
ಭವಿಷ್ಯ1 day ago

Dina Bhavishya : ಈ ರಾಶಿಯವರು ಪ್ರಮುಖ ಜನರೊಡನೆ ವ್ಯವಹರಿಸುವಾಗ ಎಚ್ಚರಿಕೆಯಿಂದ ಮಾತನಾಡಿ

dina bhavishya read your daily horoscope predictions for February 28 2024
ಭವಿಷ್ಯ2 days ago

Dina Bhavishya: ಇಂದು 12 ರಾಶಿಯವರ ಲಕ್ಕಿ ನಂಬರ್‌ ಏನು? ಯಾರಿಗೆ ಧನ ಲಾಭ?

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯವರು ಇಂದು ದೊಡ್ಡದೊಂದು ಸಮಸ್ಯೆಯಿಂದ ಮುಕ್ತಿ ಪಡೆಯುವಿರಿ

Rajya Sabha election Pakistan Zindabad slogans raised inside Vidhana Soudha by Nasir Hussain supporters
ರಾಜಕೀಯ4 days ago

ವಿಧಾನಸೌಧದೊಳಗೇ ಪಾಕಿಸ್ತಾನ ಜಿಂದಾಬಾದ್‌ ಘೋಷಣೆ; ನಾಸಿರ್‌ ಹುಸೇನ್‌ ಬೆಂಬಲಿಗ ದೇಶದ್ರೋಹಿಗಳ ಉದ್ಧಟತನ

Ghar Wapsi ST Somashekhar and Shivaram Hebbar to quit BJP
ರಾಜಕೀಯ4 days ago

Ghar Wapsi: ಎಸ್‌.ಟಿ. ಸೋಮಶೇಖರ್‌, ಶಿವರಾಂ ಹೆಬ್ಬಾರ್‌ ಬಿಜೆಪಿಗೆ ಗುಡ್‌ ಬೈ? ಇಂದೇ ರಾಜೀನಾಮೆ?

Rajyasabha Elections 42 Congress MLAs contacted by JDS candidate says DK Shivakumar
ರಾಜಕೀಯ4 days ago

Rajya sabha Election: ಕಾಂಗ್ರೆಸ್‌ನ 42 ಶಾಸಕರನ್ನು ಸಂಪರ್ಕ ಮಾಡಿದ್ದಾರೆ: ಡಿ.ಕೆ. ಶಿವಕುಮಾರ್

ಟ್ರೆಂಡಿಂಗ್‌