Site icon Vistara News

Dolly Dhananjay: `ಅಭಿಮಾನದ ತೇರು ಎಳೆಯಲುʼ ಸಜ್ಜಾಗುತ್ತಿದೆ ‘ಡಾಲಿ ಉತ್ಸವ’!

Dolly Dhananjay

ಬೆಂಗಳೂರು: ಸ್ಯಾಂಡಲ್‌ವುಡ್ ಡಾಲಿ ಎಂದೇ ಖ್ಯಾತಿಗಳಿಸಿರುವ ನಟ ಧನಂಜಯ್ (Dolly Dhananjay) ಅವರಿಗೆ ದೊಡ್ಡ ಸಂಖ್ಯೆಯ ಅಭಿಮಾನಿ ವರ್ಗವಿದೆ. ಆಗಸ್ಟ್‌ 23 ಡಾಲಿ ಧನಂಜಯ್‌ ಅವರಿಗೆ ಜನುಮದಿನದ ಸಂಭ್ರಮ. ‘ಕಾಮನ್ ಮ್ಯಾನ್ ಹೀರೊʼʼಎಂದೇ ಖ್ಯಾತಿ ಪಡೆದಿರುವ ಡಾಲಿ ಈ ಬಾರಿ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಿಸಿಕೊಳ್ಳುತ್ತಿದ್ದಾರೆ. ಈಗಾಗಲೇ ಅಭಿಮಾನಿಗಳ ಸಂಭ್ರಮ ಶುರುವಾಗಿದೆ. ಡಾಲಿ ಉತ್ಸವಕ್ಕೆ (Dali Utsav) ಅಭಿಮಾನಿಗಳು ಸಜ್ಜಾಗಿದ್ದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟರ್‌ಗಳನ್ನು ಶೇರ್ ಮಾಡಿ ಸಂಭ್ರಮಿಸುತ್ತಿದ್ದಾರೆ. ಈಗಿನಿಂದಲೇ ಅಭಿಮಾನಿಗಳ ಸಂಭ್ರಮ ಪ್ರಾರಂಭವಾಗಿದೆ. ಧನಂಜಯ್ ಹುಟ್ಟುಹಬ್ಬವನ್ನು ‘ಡಾಲಿ ಉತ್ಸವ’ವೆಂದು ಆಚರಿಸಲು ಅಭಿಮಾನಿಗಳು ಸಜ್ಜಾಗಿದ್ದಾರೆ.

ಈ ಬಾರಿಯ ಹುಟ್ಟುಹಬ್ಬವನ್ನು ಅಭಿಮಾನಿಗಳು ಡಾಲಿ ಉತ್ಸವ ಹೆಸರಿನಲ್ಲಿ ಆಚರಿಸುತ್ತಿದ್ದಾರೆ. ಡಾಲಿ ಉತ್ಸವ ಎಂದು ಹೆಸರಿಟ್ಟು ‘ಅಭಿಮಾನದ ತೇರು ಎಳೆಯೋಣ ಬನ್ನಿ’ ಎಂದು ಟ್ಯಾಗ್ ಲೈನ್ ಇಡಲಾಗಿದೆ. ಇವತ್ತಿಗೆ ಸರಿಯಾಗಿ 25 ದಿನಗಳು ಬಾಕಿ ಉಳಿದಿದ್ದು. ಇಂದಿನಿಂದಲೇ ಅಭಿಮಾನಿಗಳು ಉತ್ಸವಕ್ಕೆ ರೆಡಿಯಾಗಿದ್ದಾರೆ. ಅಂದಹಾಗೆ ಈ ಬಾರಿಯ ಧನಂಜಯ್ ಹುಟ್ಟುಹಬ್ಬ ತುಂಬಾನೇ ವಿಶೇಷ. 4 ವರ್ಷಗಳ ಬಳಿಕ ಅದ್ಧೂರಿಯಾಗಿ ಅಭಿಮಾನಿಗಳ ಜತೆ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಜತೆಗೆ ಡಾಲಿ ಸಿನಿಮಾರಂಗಕ್ಕೆ ಎಂಟ್ರಿ ಕೊಟ್ಟು 10 ವರ್ಷಗಳಾಗಿದೆ. ಹಾಗಾಗಿ ಈ ಬಾರಿಯ ಹುಟ್ಟುಹಬ್ಬ ಧನಂಜಯ್ ಅವರಿಗೆ ತುಂಬಾ ವಿಶೇಷವಾಗಿದೆ.

ನೆರೆ, ಕೊರೊನಾ, ಹಾಗೂ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿಧನದ ಕಾರಣದಿಂದ ಧನಂಜಯ್ ಕಳೆದ 4 ವರ್ಷಗಳಿಂದ ಹುಟ್ಟುಹಬ್ಬ ಆಚರಿಸಿಕೊಂಡಿರಲಿಲ್ಲ. ಅಭಿಮಾನಿಗಳ ಕೈಗೂ ಸಿಕ್ಕಿರಲಿಲ್ಲ. ಹಾಗಾಗಿ ಈ ಬಾರಿ ದೊಡ್ಡ ಮಟ್ಟದಲ್ಲಿ ಬರ್ತ್‌ಡೇ ಸೆಲೆಬ್ರೇಟ್ ಮಾಡಿಕೊಳ್ಳುತ್ತಿದ್ದು ಹುಟ್ಟುಹಬ್ಬದ ದಿನ ಅಭಿಮಾನಿಗಳ ಜತೆಯೇ ಸಮಯ ಕಳೆಯಲು ನಿರ್ಧರಿಸಿದ್ದಾರೆ.

ಇದನ್ನೂ ಓದಿ: Dolly Dhananjay: 10 ವರ್ಷದ ಪಯಣದಲ್ಲಿ ಹೆಗಲಾಗಿ ನಿಂತ ಜೀವಗಳಿಗೆ ನಮನ ಸಲ್ಲಿಸಿದ ನಟ ರಾಕ್ಷಸ!

ಜಿಪಿ ನಗರದ ಗ್ರೌಂಡ್‌ನಲ್ಲಿ ಸೆಲೆಬ್ರೇಷನ್

ಧನಂಜಯ್ ಬರ್ತಡೇ ಸೆಲೆಬ್ರೇಷನ್ ಜೆಪಿ ನಗರದ ಗ್ರೌಂಡ್‌ನಲ್ಲಿ ನಡೆಯಲಿದೆ ಎನ್ನುವ ಮಾಹಿತಿ ತಿಳಿದು ಬಂದಿದೆ. ರಾಜ್ಯದ ಮೂಲೆ ಮೂಲೆಗಳಿಂದ ಅಪಾರ ಸಂಖ್ಯೆಯ ಅಭಿಮಾನಿಗಳು ಬರುವ ಕಾರಣ ದೊಡ್ಡ ಗ್ರೌಂಡ್‌ನಲ್ಲಿ ಆಚರಣೆ ಮಾಡಿಕೊಳ್ಳಲು ಧನಂಜಯ್ ನಿರ್ಧರಿಸಿದ್ದಾರೆ. ಆಗಸ್ಟ್ 22ರ ರಾತ್ರಿಯಿಂದಲೇ ಸೆಲೆಬ್ರೇಷನ್ ಶುರುವಾಗಲಿದೆ. 23ರಂದು ಗ್ರೌಂಡ್‌ನಲ್ಲಿ ಧನಂಜಯ್ ಎಲ್ಲಾ ಅಭಿಮಾನಿಗಳನ್ನು ಭೇಟಿ ಮಾಡಿ ಅಭಿಮಾನಿಗಳ ಪ್ರೀತಿಯ ವಿಶ್ ಸ್ವೀಕರಿಸಲಿದ್ದಾರೆ.

ಇದನ್ನೂ ಓದಿ: Dolly Dhananjay | ಡಾಲಿ ಧನಂಜಯ್‌ ನಟನೆಯ ʻಹೆಡ್ ಬುಷ್ʼ ಸಿನಿಮಾ ಒಟಿಟಿ ದಿನಾಂಕ ಪ್ರಕಟ

ಊಟದ ವ್ಯವಸ್ಥೆ

ದೂರ ಊರುಗಳಿಂದ ಅಭಿಮಾನಿಗಳು ಬರುವ ಕಾರಣದಿಂದ ಊಟದ ವ್ಯವಸ್ಥೆ ಕೂಡ ಇರಲಿದೆ ಎನ್ನಲಾಗಿದೆ. ಮಧ್ಯಾಹ್ನದ ಊಟದ ವ್ಯವಸ್ಥೆಯನ್ನು ಮಾಡಿಸಲಾಗಿದ್ದು ಎಲ್ಲಾ ಅಭಿಮಾನಿಗಳು ಊಟ ಮಾಡಿ ಸುರಕ್ಷಿತವಾಗಿ ಮತ್ತೆ ತಮ್ಮ ಊರುಗಳಿಗೆ ಮರಳಬೇಕು ಎನ್ನುವುದು ಧನಂಜಯ್ ಅವರ ಆಸೆ. ಹಾಗಾಗಿ ಡಾಲಿ ಉತ್ಸವ ಎಲ್ಲಾ ರೀತಿಯ ಸಕಲ ಸಿದ್ಧತೆ ಈಗಾಗಲೇ ನಡೆಯುತ್ತಿದ್ದು ದೊಡ್ಡ ಮಟ್ಟದಲ್ಲಿ ಅಭಿಮಾನಿಗಳು ಬರುವ ನಿರೀಕ್ಷೆ ಇದೆ.

Exit mobile version