ಬೆಂಗಳೂರು: ಸ್ಯಾಂಡಲ್‌ವುಡ್ ನಟ ಡಾಲಿ ಧನಂಜಯ್ (Dolly Dhananjay) ಅವರಿಗೆ ದೊಡ್ಡ ಸಂಖ್ಯೆಯ ಅಭಿಮಾನಿ ವರ್ಗವಿದೆ. ನಾಲ್ಕು ವರ್ಷದ ಬಳಿಕ ಡಾಲಿ ಅವರು ಅದ್ಧೂರಿಯಾಗಿ ಹುಟ್ಟುಹಬ್ಬ ಆಚರಣೆಯನ್ನು ಮಾಡಿಕೊಳ್ಳುತ್ತಿದ್ದಾರೆ. ಬೆಂಗಳೂರಿನ ನಂದಿ ಲಿಂಕ್ಸ್ ಗ್ರೌಂಡ್‌ನಲ್ಲಿ ಡಾಲಿ ಅವರು ಅಭಿಮಾನಿಗಳನ್ನು ಭೇಟಿಯಾಗಲಿದ್ದಾರೆ. ಅಷ್ಟೇ ಅಲ್ಲದೇ ಊಟದ ವ್ಯವಸ್ಥೆಯನ್ನು ಮಾಡಲಾಗುತ್ತಿದೆ. ಉತ್ತರ ಕರ್ನಾಟಕ ಹಾಗೂ ಸೌತ್ ಇಂಡಿಯನ್ ಎರಡು ಶೈಲಿಯ ಊಟದ ವ್ಯವಸ್ಥೆ ಮಾಡಲಾಗಿದ್ದು, ರಾಯಚೂರು ಸಿಂಧನೂರಿನಿಂದ ಖಡಕ್ ರೊಟ್ಟಿ, ಎಣ್ಣೆಗಾಯಿ, ಪುಂಡೆ ಪಲ್ಯೆ, ಬೂಂದಿ, ಶೇಂಗಾ ಹಿಂಡಿ ತರಲಾಗಿದೆ. ತಮ್ಮ ನೆಚ್ಚಿನ ನಟನ ಹುಟ್ಟು ಹಬ್ಬವನ್ನು (Dolly Dhanjay Birthday menu) ಆಚರಿಸಲು ಅಭಿಮಾನಿಗಳು ‘ಡಾಲಿ ಉತ್ಸವ’ (Dolly Utsava) ಹೆಸರಿನಲ್ಲಿ ಕಾರ್ಯಕ್ರಮವನ್ನೇ ಆಯೋಜನೆ ಮಾಡಿದ್ದಾರೆ.
ಮಧ್ಯಾಹ್ನ ಎಲ್ಲಾ ಅಭಿಮಾನಿಗಳು ಊಟ ಮಾಡಿ ಸುರಕ್ಷಿತವಾಗಿತಮ್ಮ ಊರುಗಳಿಗೆ ಮರಳಬೇಕು ಎನ್ನುವುದು ಧನಂಜಯ್ ಅವರ ಆಸೆ. ಸುಮಾರು 2000 ಅಭಿಮಾನಿಗಳಿಗೆ ಶಿವರಾಜ್ ಪಾಟೀಲ್ ಗುಂಜಳ್ಳಿ ಅವರಿಂದ ಉತ್ತರ ಕರ್ನಾಟಕ ಶೈಲಿಯ ಊಟದ ವ್ಯವಸ್ಥೆ ಮಾಡಲಾಗಿದೆ. ಜತೆಗೆ ರಕ್ತದಾನ ಶಿಬಿರ ಸಹ ಆಯೋಜಿಸಲಾಗಿದೆ.
ಈ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಧನಂಜಯ್, ‘ನಾನು ಜನುಮ ದಿನವನ್ನು ಆಚರಿಸಿಕೊಂಡು ತುಂಬಾ ದಿನ ಆಗಿತ್ತು. ಕಾರಣಾಂತರಗಳಿಂದ 3-4 ವರ್ಷಗಳಿಂದ ಮಾಡಿರಲಿಲ್ಲ. ಈ ವರ್ಷ ಅಭಿಮಾನಿಗಳ ಜತೆ ಆಚರಣೆ ಮಾಡಿದ್ದು ತುಂಬಾ ಖುಷಿಯಾಗಿದೆ. ʼಉತ್ತರಕಾಂಡʼ ಸಿನಿಮಾದ ಗಬ್ರು ಸತ್ಯ ಲುಕ್, ಅಣ್ಣ from Mexico” ಸೇರಿ 2 ಪ್ರಾಜೆಕ್ಟ್ ಅನೌನ್ಸ್ ಮಾಡಿದ್ದೇವೆʼʼ ಎಂದರು.
ಡಾಲಿ ಮಾತು ಮುಂದುವರಿಸಿ ʻʻಜನರು ನೀನು ಚೆನ್ನಾಗಿ ಬೆಳೆಯಬೇಕು ಎಂದು ಹಾರೈಸುತ್ತಿದ್ದಾರೆ. ಜನರ ಪ್ರೀತಿಗೆ ನಾನು ಯಾವತ್ತೂ ಬೆಲೆ ಕಟ್ಟುವುದಕ್ಕೆ ಆಗುವುದಿಲ್ಲ. ಅಣ್ಣ from Mexico ಸಿನಿಮಾ ಬಗ್ಗೆ ಹೇಳುವುದಾದರೆ ಅದು ಬಹಳ ವಿಭಿನ್ನವಾಗಿದೆ. ಅಭಿಮಾನಿಗಳಿಗೆ ಇಷ್ಟವಾಗುವಂತಹ ಪಾತ್ರವನ್ನ ಕೊಡುತ್ತ ಇದ್ದೇವೆʼʼ ಎಂದರು.
ಇದನ್ನೂ ಓದಿ: Dolly Dhananjay: ಡಾಲಿ ಧನಂಜಯ್‌ಗೆ ಹುಟ್ಟುಹಬ್ಬದ ಸಂಭ್ರಮ; ಟೈಮ್ಸ್ ಸ್ಕ್ವೇರ್‌ನಲ್ಲಿ ಪೋಸ್ಟರ್ ರಿಲೀಸ್
ನೆರೆ, ಕೊರೊನಾ, ಹಾಗೂ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿಧನದ ಕಾರಣದಿಂದ ಧನಂಜಯ್ ಕಳೆದ 4 ವರ್ಷಗಳಿಂದ ಹುಟ್ಟುಹಬ್ಬ ಆಚರಿಸಿಕೊಂಡಿರಲಿಲ್ಲ. ಅಭಿಮಾನಿಗಳ ಕೈಗೂ ಸಿಕ್ಕಿರಲಿಲ್ಲ. ಹಾಗಾಗಿ ಈ ಬಾರಿ ದೊಡ್ಡ ಮಟ್ಟದಲ್ಲಿ ಬರ್ತ್‌ಡೇ ಸೆಲೆಬ್ರೇಟ್ ಮಾಡಿಕೊಳ್ಳುತ್ತಿದ್ದು, ಹುಟ್ಟುಹಬ್ಬದ ದಿನ ಅಭಿಮಾನಿಗಳ ಜತೆಯೇ ಸಮಯ ಕಳೆಯಲು ನಿರ್ಧರಿಸಿದ್ದಾರೆ. ಡಾಲಿ ಉತ್ಸವ ಎಂದು ಹೆಸರಿಟ್ಟು ‘ಅಭಿಮಾನದ ತೇರು ಎಳೆಯೋಣ ಬನ್ನಿ’ ಎಂದು ಟ್ಯಾಗ್ ಲೈನ್ ಇಡಲಾಗಿದೆ.