Site icon Vistara News

Dolly Dhananjay: ಸೂರ್ಯಕಾಂತಿ ನಾನು ಎಂದು ಕುಣಿದ ಲವ್ಲಿಸ್ಟಾರ್ ಪುತ್ರಿ!

Dolly Dhananjay

ಬೆಂಗಳೂರು: ನಟರಾಕ್ಷಸ ಡಾಲಿ ಧನಂಜಯ್ (Dolly Dhananjay) ನಟನೆಯಲ್ಲಿ ಮಾತ್ರವಲ್ಲ, ನಿರ್ಮಾಣದಲ್ಲೂ ಪ್ರಯೋಗಾತ್ಮಕ ಸಿನಿಮಾಗಳ ನಿರ್ಮಾಣದಲ್ಲಿ ತೊಡಗಿಸಿಕೊಂಡಿದ್ದಾರೆ. ಹೊಸ ಪ್ರತಿಭೆಗಳಿಗೆ ಅವಕಾಶ ನೀಡಬೇಕು ಎನ್ನುವ ಉದ್ದೇಶದೊಂದಿಗೆ ಅವರು ‘ಡಾಲಿ ಪಿಕ್ಚರ್ಸ್​’ ನಿರ್ಮಾಣ (dally picture) ಸಂಸ್ಥೆ ಆರಂಭಿಸಿದ್ದಾರೆ. ಈ ಸಂಸ್ಥೆಯ ಮೂರನೇ ಪ್ರಯತ್ನವೇ ‘ಟಗರು ಪಲ್ಯ’. (Tagaru Palya) ಸೆಟ್ಟೇರಿದ ದಿನದಿಂದಲೂ ಭಾರೀ ಸದ್ದು ಮಾಡುತ್ತಿರುವ ಟಗರು ಪಲ್ಯ ಸಿನಿಮಾದ ಎರಡನೇ ಹಾಡು ಬಿಡುಗಡೆಯಾಗಿದೆ.

ಈಗಾಗಲೇ ರಿಲೀಸ್ ಆಗಿರುವ ಟೈಟಲ್ ಟ್ರ್ಯಾಕ್‌ಗೆ ಅದ್ಭುತ ಪ್ರತಿಕ್ರಿಯೆ ಸಿಕ್ಕಿದೆ. ಇದೀಗ ಚಿತ್ರತಂಡ ಸೂರ್ಯಕಾಂತಿ ನಾನು ಎಂಬ ಮೆಲೋಡಿ ಹಾಡನ್ನು ಅನಾವರಣ ಮಾಡಿದೆ. ಸ್ವತಃ ಧನಂಜಯ್ ಅವರೇ ಕ್ಯಾಚಿ‌ ಮ್ಯಾಚಿ ಪದಗಳನ್ನು ಪೊಣಿಸಿ ಸಾಹಿತ್ಯ ಬರೆದಿದ್ದು, ಮಾಧುರಿ ಶೇಷಾದ್ರಿ ಹಾಡಿದ್ದಾರೆ, ವಾಸುಕಿ ವೈಭವ್ ಟ್ಯೂನ್ ಹಾಕಿದ್ದಾರೆ. ಹಳ್ಳಿ ಸೊಗಡಿನ ಕಂಪು ಹೊಂದಿರುವ ಈ ಮೆಲೋಡಿ ಹಾಡಿಗೆ ಲವ್ಲಿ ಸ್ಟಾರ್ ಪ್ರೇಮ್ ಪುತ್ರಿ ಅಮೃತಾ ಪ್ರೇಮ್ ಹೆಜ್ಜೆ ಹಾಕಿದ್ದಾರೆ.

ಡಾಲಿ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣ ಆಗುತ್ತಿರುವ ‘ಟಗರು ಪಲ್ಯ’ ಚಿತ್ರಕ್ಕೆ ಉಮೇಶ್ ಕೆ ಕೃಪ ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾ ಮೂಲಕ ಅನೇಕ ಹೊಸಬರಿಗೆ ಅವಕಾಶ ಸಿಕ್ಕಿದೆ. ಈ ಸಿನಿಮಾ ಮೂಲಕ ನಟಿಯಾಗಿ ನೆನಪಿರಲಿ ಪ್ರೇಮ್ ಮಗಳು ಅಮೃತಾ ಚಿತ್ರರಂಗಕ್ಕೆ ಕಾಲಿಡುತ್ತಿದ್ದಾರೆ. ವಿಭಿನ್ನ ಪಾತ್ರಗಳನ್ನ ಆಯ್ಕೆ ಮಾಡಿಕೊಂಡು, ಕನ್ನಡ ಸಿನಿಮಾ ಪ್ರೇಕ್ಷಕರನ್ನು ರಂಜಿಸುತ್ತಿರುವ ನಾಗಭೂಷಣ್ ಟಗರು ಪಲ್ಯದ ನಾಯಕ.

ಇದನ್ನೂ ಓದಿ: Dolly Dhananjay: ಡಾಲಿ ಜನುಮ ದಿನದ ಸಂಭ್ರಮ; ಇರಲಿದೆ ಖಡಕ್‌ ರೊಟ್ಟಿ, ಎಣ್ಣೆಗಾಯಿ!

‘ಟಗರು ಪಲ್ಯ’ ಸಿನಿಮಾದಲ್ಲಿ ದೊಡ್ಡ ತಾರಾಬಳಗವೇ ಇದ್ದು ಕೂತೂಹಲ ದುಪ್ಪಟ್ಟಾಗಿದೆ. ಹಿರಿಯ ಕಲಾವಿದರಾದ ರಂಗಾಯಣ ರಘು, ತಾರಾ, ಶರತ್ ಲೋಹಿತಾಶ್ವ ಸೇರಿದಂತೆ ದೊಡ್ಡ ಸ್ಟಾರ್ ಕಾಸ್ಟ್ ಚಿತ್ರಕ್ಕೆ ಸಾಥ್ ಕೊಟ್ಟಿದೆ. ಹಾಗೇ ವಾಸುಕಿ ವೈಭವ್ ಸಂಗೀತವಿದೆ ಇನ್ನು ಎಸ್.ಕೆ.ರಾವ್ ಕ್ಯಾಮೆರಾ ಕೈಚಳಕ ತೋರಿಸಿದ್ದಾರೆ. ಪ್ರಚಾರ ಕಾರ್ಯ ಆರಂಭಿಸಿರುವ ಟಗರು ಪಲ್ಯ ತಂಡ ಇದೇ ವರ್ಷದ ಕನ್ನಡ ರಾಜ್ಯೋತ್ಸವಕ್ಕೆ ಸಿನಿಮಾ ರಿಲೀಸ್ ಮಾಡಲು ಸಕಲ ಸಿದ್ಧತೆ ನಡೆಸುತ್ತಿದೆ.

Exit mobile version