Site icon Vistara News

Actor Chetan: ವಿಧಾನಸೌಧದ ಮುಂದೆ ಭುವನೇಶ್ವರಿ ಪ್ರತಿಮೆ ಬೇಡ: ನಟ ಚೇತನ್‌

actor Chetan

ಚಿಕ್ಕಬಳ್ಳಾಪುರ: ವಿಧಾನಸೌಧದ (Vidhana Soudha) ಆವರಣದಲ್ಲಿ ಕನ್ನಡ ತಾಯಿ ಭುವನೇಶ್ವರಿ (Goddess Buvanehswari) ಪ್ರತಿಮೆ ಸ್ಥಾಪನೆಗೆ ನಟ ಚೇತನ್ (Actor Chetan) ವಿರೋಧ ವ್ಯಕ್ತಪಡಿಸಿದ್ದಾರೆ. ʼಸರ್ಕಾರ 25 ಅಡಿಯ ಭುವನೇಶ್ವರಿ ಪ್ರತಿಮೆ (Bhuvaneshwari Statue) ಸ್ಥಾಪನೆ ಮಾಡಿರುವುದು ಕನ್ನಡ ಪರ ಅಲ್ಲ, ಮೌಢ್ಯದ ಪರʼ ಎಂದಿದ್ದಾರೆ.

ಎಲ್ಲಾ ಬ್ರಾಹ್ಮಣ್ಯಗಳ ನಡುವೆ ಈ ಸರ್ಕಾರ ವಿಧಾನಸೌಧದಲ್ಲಿ ಭುವನೇಶ್ವರಿ ಪ್ರತಿಮೆ ಸ್ಥಾಪನೆ ಮಾಡಿದ್ದಾರೆ. ಕನ್ನಡ ಶಾಲೆಗಳಲ್ಲಿ ಕನ್ನಡದ ಪ್ರಾಬಲ್ಯ ಹೆಚ್ಚಿಸಲು ಕಾನೂನು ತರಬೇಕು. ಕನ್ನಡ ಮಾಧ್ಯಮದಲ್ಲಿ ಓದಿರೋರಿಗೆ ಉದ್ಯೋಗ ಕಲ್ಪಿಸಿಕೊಡಿ. ಖಾಸಗಿ ವಲಯದ ಉದ್ಯೋಗಗಳಲ್ಲಿ ಕನ್ನಡಿಗರಿಗೆ ಮೀಸಲಾತಿ ಕಲ್ಪಿಸಿಕೊಡಿ. ಅದು ನಿಜವಾದ ಕನ್ನಡ ಅಭಿಮಾನ. ಹೊರತು ಭುವನೇಶ್ವರಿ ಪ್ರತಿಮೆ ಸ್ಥಾಪನೆ ಮಾಡುವುದಲ್ಲ ಎಂದು ಚೇತನ್‌ ನುಡಿದಿದ್ದಾರೆ.

ಮುಂದಿನ ದಿನಗಳಲ್ಲಿ ಭುವನೇಶ್ವರಿ ಪ್ರತಿಮೆ ಸ್ಥಾಪನೆ ಪಾಲಿಟಿಕ್ಸ್ ಆಗುತ್ತೆ. ಭುವನೇಶ್ವರಿ ಪ್ರತಿಮೆಗೆ ಒಬ್ಬ ಅರ್ಚಕ ಬರ್ತಾರೆ. ಮುಂದೆ ಅದು ಮಂದಿರ ಆಗುತ್ತೆ. ಮುಂದಿನ ದಿನಗಳಲ್ಲಿ ವಿಧಾನಸೌಧ ಒಂದು ಧಾರ್ಮಿಕ ಕೇಂದ್ರವಾಗಿಬಿಡುತ್ತೆ ಎಂದು ಚಿಕ್ಕಬಳ್ಳಾಪುರದ ಪತ್ರಕರ್ತರ ಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ನಟ ಚೇತನ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ವಾಲ್ಮೀಕಿ ನಿಗಮ ಹಗರಣಕ್ಕೆ ಆಕ್ರೋಶ

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ (Valmiki Corporation Scam) ವಿಚಾರದಲ್ಲಿ ಸರ್ಕಾರದ ವಿರುದ್ಧ ಚಿಕ್ಕಬಳ್ಳಾಪುರದಲ್ಲಿ ನಟ ಚೇತನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. 187 ಕೋಟಿ ರೂಪಾಯಿ ವಾಲ್ಮೀಕಿ ನಿಗಮದ ಹಣ ದುರ್ಬಳಕೆ ಆಗಿದೆ. ವಾಲ್ಮೀಕಿ ಹಗರಣವನ್ನು ಮುಚ್ಚಿಹಾಕಲು ಪ್ರಯತ್ನಗಳು ನಡೆಯುತ್ತಿವೆ ಎಂದು ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಈ ಹಗರಣದ ಬಗ್ಗೆ ಎಸ್.ಐ.ಟಿ. ಒಂದೂವರೆ ತಿಂಗಳಿಂದ ಕ್ರಮ ತೆಗೆದುಕೊಳ್ಳುತ್ತಿಲ್ಲ. ಬಿ.ನಾಗೇಂದ್ರ ಬಳ್ಳಾರಿಯ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಭಾಗಿಯಾಗಿ ಜೈಲಿಗೆ ಹೋಗಿದ್ದ ವ್ಯಕ್ತಿ. ಮಂತ್ರಿ ಆಗಲು ಅರ್ಹತೆ ಇಲ್ಲದ ವ್ಯಕ್ತಿ. ಅಂತಹವರು ಸಚಿವರಾದರು. ಎಸ್.ಐ.ಟಿ. ಸರ್ಕಾರದ ತಾಳಕ್ಕೆ ತಕ್ಕಂತೆ ಕುಣಿಯುತ್ತಿದೆ. ಇಡಿ ಪ್ರವೇಶ ಮಾಡಿದ ನಂತರ ತನಿಖೆ ಚುರುಕುಗೊಂಡಿದೆ. ತೆಲಂಗಾಣ-ಆಂಧ್ರಕ್ಕೆ ಆ ಹಣ ಹೋಗಿದೆ ಅನ್ನೋದು ಬೆಳಕಿಗೆ ಬಂದಿದೆ. ಇದರ ಬಗ್ಗೆ ಸೂಕ್ತ ತನಿಖೆ ಆಗಬೇಕು ಎಂದು ಅವರು ಹೇಳಿದ್ದಾರೆ.

ನ್ಯಾಯಾಂಗ ತನಿಖೆಗೆ ಒಪ್ಪಲ್ಲ: ವಿಜಯೇಂದ್ರ

ಮುಡಾ ಹಗರಣದಲ್ಲಿ ನ್ಯಾಯಾಂಗ ತನಿಖೆಗೆ ನಾವು ಒಪ್ಪುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದ್ದಾರೆ. ಮುಡಾ ಹಗರಣ ನ್ಯಾಯಾಂಗ ತನಿಖೆಗೆ ನೀಡಿರುವುದು ಸರಿಯಲ್ಲ. ಸರ್ಕಾರ CBI ತನಿಖೆಗೆ ನೀಡಬೇಕು. ಯಾವುದೇ ಕಾರಣಕ್ಕೂ ನ್ಯಾಯಾಂಗ ತನಿಖೆಯನ್ನು ಒಪ್ಪಲ್ಲ. ಸಿಎಂಗೆ ತಾಕತ್‌ ಇದ್ದರೆ ಇದನ್ನು ಸಿಬಿಐ ತನಿಖೆಗೆ ಕೊಡಬೇಕು ಎಂದು ಅವರು ಆಗ್ರಹಿಸಿದ್ದಾರೆ.

ನ್ಯಾಯಾಂಗ ತನಿಖೆ ಅಂತ ನಾಟಕ‌ಮಾಡುತ್ತಿದ್ದಾರೆ. ಇದೊಂದು ದೊಡ್ಡ ಹಗರಣ. ಸದನದ ಒಳಗೆ ಹೊರಗೆ ನಾವು ಹೋರಾಟ ಮಾಡುತ್ತೇವೆ. ಸಿಎಂ ರಾಜೀನಾಮೆ ಕೋಡಬೇಕು. ದಲಿತರ ಹೆಸರಲ್ಲಿ ಅಧಿಕಾರಕ್ಕೆ ಬಂದು ದಲಿತರ ಹಣ ದೋಚಿದ್ದಾರೆ. ಕಾಂಗ್ರೆಸ್ ಸರ್ಕಾರದ ಬಂಡವಾಳ ಬಯಲಾಗಿದೆ. ಸಿಎಂ ನೈತಿಕತೆ ‌ಕಳೆದುಕೊಂಡಿದ್ದಾರೆ. ವಾಲ್ಮೀಕಿ ನಿಗಮ ಹಗರಣದಲ್ಲಿ ನಾಗೇಂದ್ರ ಈಗಾಗಲೇ ಇಡಿ‌ ಕಸ್ಟಡಿಯಲ್ಲಿದ್ದಾರೆ. ಸಿಎಂ ಇದಕ್ಕೆ ಉತ್ತರ ಕೊಡಬೇಕು ಎಂದು ವಿಜಯೇಂದ್ರ ಆಗ್ರಹಿಸಿದರು.

ಡಿಸಿಎಂ ಆರೋಪಿಗಳಿಗೆ ಕ್ಲೀನ್ ಚಿಟ್ ಕೊಡ್ತಾ ಇದ್ದಾರೆ. ಮುಡಾ ಹಗರಣ ಸಿಬಿಐಗೆ ವಹಿಸಬೇಕು. ವಾಲ್ಮೀಕಿ ನಿಗಮದ ಹಗರಣಕ್ಕೆ ಸದನದಲ್ಲಿ ಸಿಎಂ ಉತ್ತರ ಕೋಡಬೇಕು. ವಾಲ್ಮೀಕಿ ನಿಗಮ ಹಗರಣದ ಬಗ್ಗೆ ನಿಲುವಳಿ‌ ಸೂಚನೆ ಕೊಟ್ಟಿದ್ದೇವೆ. ಇವತ್ತು ಚರ್ಚೆಗೆ ಅವಕಾಶ ಕೊಡುತ್ತೇವೆ. ಮುಡಾದಲ್ಲಿ ಯಾರದೇ ಮೇಲೆ ಆರೋಪ ಇರಲಿ, ಸಿಬಿಐ ತನಿಖೆಗೆ ನೀಡಿ ಎಂದು ಸರ್ಕಾರಕ್ಕೆ ವಿಜಯೇಂದ್ರ ಒತ್ತಾಯಿಸಿದರು.

ಇದನ್ನೂ ಓದಿ: CM Siddaramaiah: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಖಾಸಗಿ ದೂರು ನೀಡಲು ಮುಂದಾದ ಬಿಜೆಪಿ

Exit mobile version