Site icon Vistara News

ದೂರದರ್ಶನ ಸಿನಿಮಾದ ಟೈಟಲ್ ಟೀಸರ್| ಇದು 70-80ರ ದಶಕದ ನೆನಪಿನ ಯಾನ

ದೂರದರ್ಶನ ಸಿನಿಮಾದ ಟೈಟಲ್ ಟೀಸರ್

ಬೆಂಗಳೂರು: ಆರಂಭದಿಂದಲೂ ತನ್ನ ವಿಭಿನ್ನ ಕಥಾವಸ್ತು ಮೂಲಕ ಪ್ರೇಕ್ಷಕರ ಚಿತ್ತ ಸೆಳೆಯುತ್ತಿರುವ ʼದೂರದರ್ಶನʼ ಸಿನಿಮಾದ ಟೈಟಲ್ ಟೀಸರ್ ಅನಾವರಣಗೊಂಡಿದೆ. ಅದೊಂದು ಸುಂದರ ಗ್ರಾಮ. ಬೆಟ್ಟ, ಗುಡ್ಡ, ಹಸಿರನ್ನು ಹಾಸಿ ಹೊದ್ದಿರುವ, ಏನೂ ಇಲ್ಲದೇ ಇದ್ದರೂ ಎಲ್ಲವೂ ದೊರಕುವ ಸಣ್ಣ ಪೇಟೆ. ನಾಟಕ, ಹರಿಕಥೆ, ಭಜನೆ, ವಾಲಿಬಾಲ್ ಇಷ್ಟೇ ಮನರಂಜನೆ ಎಂದುಕೊಂಡಾಗ ಎಂಟ್ರಿ ಕೊಟ್ಟಿರುವ ದೂರದರ್ಶನ. ಇಷ್ಟು ಅಂಶಗಳನ್ನು ಒಳಗೊಂಡ ಟೈಟಲ್ ಟೀಸರ್ ನೋಡುಗರನ್ನು ಆಕರ್ಷಿಸುತ್ತಿದೆ.

ಕರಾವಳಿ ಮತ್ತು ಪಶ್ಚಿಮ ಘಟ್ಟಗಳ ನಡುವಿನ ಒಂದು ಚಿಕ್ಕ ಊರೊಳಗೆ ಟಿವಿ ಬಂದ ಮೇಲೆ ಹೇಗೆಲ್ಲಾ ಪ್ರಭಾವ ಬೀರುತ್ತದೆ, ಅಂದಿನ ಕಾಲಘಟ್ಟದ ಹಲವಾರು ವಿದ್ಯಮಾನಗಳನ್ನು ನೋಡುಗರು ಮೆಲುಕು ಹಾಕುವಂತೆ ನಿರ್ದೇಶಕ ಸುಕೇಶ್ ಶೆಟ್ಟಿ ಅದ್ಭುತವಾಗಿ ಕಟ್ಟಿಕೊಟ್ಟಿದ್ದಾರೆ. ಸುಕೇಶ್ ಅವರಿಗೆ ಇದು ಚೊಚ್ಚಲ ಸಿನಿಮಾ ಆಗಿದ್ದು, ಈ ಹಿಂದೆ ಅವರು ಸಂಭಾಷಣೆಕಾರರಾಗಿ, ಬರಹಗಾರರಾಗಿ ಮತ್ತು ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿದ್ದರು. ಈ ಸಿನಿಮಾ ಮೂಲಕ ಸ್ವತಂತ್ರ ನಿರ್ದೇಶಕರಾಗಿ ಬಡ್ತಿ ಪಡೆದಿದ್ದಾರೆ.

ದಿಯಾ ಸಿನಿಮಾ ಮೂಲಕ ಪ್ರೇಕ್ಷಕರ ಮನೆ ಮನ ಗೆದ್ದಿರುವ ಮಂಗಳೂರಿನ ಪ್ರತಿಭೆ ಪೃಥ್ವಿ ಅಂಬರ್‌ ದೂರದರ್ಶನ ಸಿನಿಮಾದಲ್ಲಿ ನಾಯಕನಾಗಿ ನಟಿಸಿದ್ದು, ಪೃಥ್ವಿಗೆ ಜೋಡಿಯಾಗಿ ಅಯಾನಾ ನಟಿಸಿದ್ದಾರೆ. ಪ್ರಮುಖ ಪಾತ್ರದಲ್ಲಿ ಉಗ್ರಂ ಮಂಜು, ಸುಂದರ್ ವೀಣಾ ಕಾಣಿಸಿಕೊಂಡಿದ್ದು, ಉಳಿದಂತೆ ಹರಿಣಿ, ದೀಪಕ್‌ ರೈ ಪಾಣಾಜೆ, ರಘು ರಮಣಕೊಪ್ಪ, ಹುಲಿ ಕಾರ್ತಿಕ್‌, ಸೂರಜ್‌ ಮಂಗಳೂರು, ಸೂರ್ಯ ಕುಂದಾಪುರ ಸೇರಿದಂತೆ ಮತ್ತಿತರ ತಾರಾಗಣ ಸಿನಿಮಾದಲ್ಲಿದೆ.

ಈಗಾಗಲೇ ಶೂಟಿಂಗ್ ಕಂಪ್ಲೀಟ್ ಮಾಡಿರುವ ಸಿನಿಮಾಗೆ ರಾಜೇಶ್ ಭಟ್ ನಿರ್ಮಾಣ ಮಾಡಿದ್ದು, ಕಾರ್ಯಕಾರಿ ನಿರ್ಮಾಪಕರಾಗಿ ಉಗ್ರಂ ಮಂಜು ಜವಾಬ್ದಾರಿ ಹೊತ್ತಿದ್ದು, ಅರುಣ್ ಸುರೇಶ್ ಛಾಯಾಗ್ರಹಣ, ವಾಸುಕಿ ವೈಭವ ಸಂಗೀತ, ಪ್ರದೀಪ್ ಆರ್ ರಾವ್ ಸಂಕಲನ, ನಂದೀಶ್ ಟಿಜಿ ಸಂಭಾಷಣೆ ಸಿನಿಮಾಕ್ಕಿದೆ.

ಇದನ್ನೂ ಓದಿ: Window Seat Trailer: ಭೂಮಿನೂ ರೌಂಡು, ಕಾಲಾನೂ ರೌಂಡು, ಎಲ್ಲೇ ಸುತ್ತಿದ್ರೂ ಇನ್ನೆಲ್ಲಿಗೆ ಬರ್ಬೇಕು?!

Exit mobile version