Site icon Vistara News

Dr Raj Cup: ವಿದೇಶಿ ಮೈದಾನಗಳಲ್ಲಿ ಡಾ. ರಾಜ್ ಕಪ್ ಸಂಭ್ರಮ! ಸಿನಿ ತಾರೆಯರ ಭರ್ಜರಿ ಸಿದ್ಧತೆ

press meet about Dr Raj Cup

#image_title

ಬೆಂಗಳೂರು: ಈಗಷ್ಟೇ ಐಪಿಎಲ್‌ ಪಂದ್ಯಾವಳಿ ಮುಗಿದಿದೆ. ಅದರ ಬೆನ್ನಲ್ಲೇ ನಮ್ಮ ಸ್ಯಾಂಡಲ್‌ವುಡ್‌ನ ಕ್ರಿಕೆಟ್‌ ಸಂಭ್ರಮ ಕೂಡ ಶುರುವಾಗಲಿದೆ. ಸಿಸಿಎಲ್ ಕ್ರಿಕೆಟ್ ಲೀಗ್ ಬೆನ್ನಲ್ಲೀಗ ಡಾ.ರಾಜ್ ಕಪ್ (Dr Raj Cup) ಸೀಸನ್ 6ಗೆ ಮುಹೂರ್ತ ಫಿಕ್ಸ್ ಆಗಿದ್ದು, ಇದಕ್ಕಾಗಿ ತಾರೆಯರು ತಯಾರಿ ಆರಂಭಿದ್ದಾರೆ.

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಸ್ಮಾರಣಾರ್ಥವಾಗಿ ರಾಜ್ ಕಪ್ ಆಯೋಜಿಸಲಾಗಿದ್ದು, ಇದೇ ಜೂನ್ 17 ರಂದು ದುಬೈನಲ್ಲಿ ಅದರ ಹರಾಜು ಪ್ರಕ್ರಿಯೆ ನಡೆಯಲಿದೆ. ಈ ಪ್ರಕ್ರಿಯೆಯಲ್ಲಿ ಪುನೀತ್ ರಾಜ್ ಕುಮಾರ್ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ವಿಶೇಷ ಅತಿಥಿಯಾಗಿ ಆಗಮಿಸಲಿದ್ದಾರೆ. ‌ಈ ಕ್ರಿಕೆಟ್‌ ಪಂದ್ಯಾವಳಿ ಕುರಿತಂದೆ ಮಂಗಳವಾರ ಸುದ್ದಿಗೋಷ್ಠಿ ನಡೆಸಲಾಗಿದೆ.

ಇದನ್ನೂ ಓದಿ: Suresh Raina: ಲಂಕಾ ಪ್ರೀಮಿಯರ್ ಲೀಗ್‌ನ ಹರಾಜಿನಲ್ಲಿ ಸುರೇಶ್​ ರೈನಾ; ಮೂಲ ಬೆಲೆ ಎಷ್ಟು?
ಸುದ್ದಿಗೋಷ್ಠಿಯಲ್ಲಿ ರಾಜ್ ಕಪ್ ಆಯೋಜಕರಾದ ರಾಜೇಶ್ ಬ್ರಹ್ಮಾವರ ಮಾತನಾಡಿ, “ಇದೇ 17ಕ್ಕೆ ದುಬೈನಲ್ಲಿ ರಾಜ್ ಕಪ್ ಆಟಗಾರರ ಹರಾಜು ಪ್ರಕ್ರಿಯೆ ನಡೆಯಲಿದೆ. ಕಳೆದ ಬಾರಿ 8 ತಂಡ ಇತ್ತು. ಈ ಬಾರಿ 12 ತಂಡಗಳಾಗಿವೆ. 1000ಕ್ಕೂ ಹೆಚ್ಚು ಅಪ್ಲೀಕೇಷನ್ ಬಂದಿತ್ತು. ಅವುಗಳಲ್ಲಿ ರೂಲ್ಸ್‌ಗೆ ತಕ್ಕಂತೆ ಆಯ್ಕೆ ಮಾಡಲಾಗಿದೆ. 12 ತಂಡಗಳಿಗೆ 12 ಕ್ಯಾಪ್ಟನ್, 12 ವೈಸ್ ಕ್ಯಾಪ್ಟನ್, ಸ್ಟಾರ್ ಕ್ಯಾಪ್ಟನ್ ಇರಲಿದ್ದಾರೆ. ರಾಜ್ ಕಪ್ ಸೀಸನ್ 6ನ್ನು ಆರು ದೇಶಗಳಲ್ಲಿ ಮಾಡುವ ಪ್ಲಾನ್ ನಡೆದಿದೆ. ಶ್ರೀಲಂಕಾ, ಸಿಂಗಾಪುರ್, ಮಲೇಷಿಯಾ, ಬ್ಯಾಂಕಾಕ್ ಮತ್ತು ದುಬೈನಲ್ಲಿ ಪಂದ್ಯ ನಡೆಯಲಿವೆ. ಇನ್ನೊಂದು ದೇಶ ಬಾಕಿ ಉಳಿದಿದೆ” ಎಂದು ತಿಳಿಸಿದರು.

ನಟ ಅನಿರುದ್ಧ್ ಮಾತನಾಡಿ, “ಡಾ.ರಾಜ್ ಕಪ್ ಹೆಸರಲ್ಲೇ ಸಕಾರಾತ್ಮಕತೆ ಇದೆ. ಆ ಮಹಾನ್ ಕಲಾವಿದರ ಹೆಸರಲ್ಲಿ ಅವರ ಸ್ಮಾರಣಾರ್ಥವಾಗಿ ಕ್ರಿಕೆಟ್ ಪಂದ್ಯಾವಳಿ ಆಡುತ್ತಿರುವುದು ನಿಜಕ್ಕೂ ಸಂತೋಷ. ಅದರಲ್ಲಿ ನಾನು ಭಾಗಿಯಾಗಿದ್ದು, ರಾಜೇಶ್ ಅವಕಾಶ ಕಲ್ಪಿಸಿಕೊಟ್ಟಿದ್ದು, ನನಗೆ ವೈಯಕ್ತಿಕವಾಗಿ ಬಹಳ ಸಂತೋಷವಾಗಿದೆ. ರಾಜೇಶ್ ನನಗೆ ಆತ್ಮೀಯರು. ನನ್ನ ಮೊದಲ ಸಿನಿಮಾದಲ್ಲಿ ಒಟ್ಟಿಗೆ ಅಭಿನಯಿಸಿದ್ದೇವೆ. ಕ್ರಿಕೆಟ್ ಅನ್ನೋದು ನಿಮಿತ್ತ ಅಷ್ಟೇ. ಈ ಪಂದ್ಯಾವಳಿ ನಮ್ಮ ಕನ್ನಡ ಚಿತ್ರರಂಗ ಒಗ್ಗಟ್ಟಾಗಿದ್ದೇವೆ, ನಮ್ಮಲ್ಲಿ ಬಾಂಧವ್ಯ ಇದೆ ಅನ್ನೋದನ್ನು ತೋರಿಸಿಕೊಡುತ್ತದೆ. ಈ ಪಂದ್ಯಾವಳಿ ಯಶಸ್ವಿಯಾಗಲಿ” ಎಂದು ಹೇಳಿದರು.

ಇದನ್ನೂ ಓದಿ: Abhishek-Aviva:‌ ಅಭಿಷೇಕ್‌- ಅವಿವಾ ಜೋಡಿಗೆ ಪ್ರಧಾನಿ, ರಾಷ್ಟ್ರಪತಿ ಶುಭ ಹಾರೈಕೆ, 16ರಂದು ಭರ್ಜರಿ ಬೀಗರೂಟ
ಡಾ. ರಾಜ್ ಕಪ್ ಸೀಸನ್ 6ರಲ್ಲಿ ಒಟ್ಟು 12 ತಂಡಗಳು ಭಾಗಿಯಾಗಲಿದ್ದು, 27 ಪಂದ್ಯಗಳು ನಡೆಯಲಿದೆ. ಡಾಲಿ ಧನಂಜಯ್, ಅನಿರುಧ್, ಡಾರ್ಲಿಂಗ್ ಕೃಷ್ಣ , ಅಭಿಷೇಕ್ ಅಂಬರೀಶ್, ನೀನಾಸಂ ಸತೀಶ್, ಲೂಸ್ ಮಾದ ಯೋಗಿ, ವಶಿಷ್ಠ ಸಿಂಹ, ಪ್ರಜ್ವಲ್, ಕೋಮಲ್, ಶ್ರೀನಗರ ಕಿಟ್ಟಿ, ರಾಜುಗೌಡ ನೇತೃತ್ವದ ತಂಡಗಳು ಪಾಲ್ಗೊಳ್ಳಲಿವೆ. ಇನ್ನು, ರಾಜ್ ಕಪ್ ಸೀಸನ್ 6ರ ಲೀಗ್ ಮ್ಯಾಚ್‌ಗಳು ವಿದೇಶದಲ್ಲಿ ನಡೆಯಲಿದೆ ಎಂದು ಮಾಹಿತಿ ನೀಡಲಾಗಿದೆ.‌

ಸುದ್ದಿಗೋಷ್ಠಿಯಲ್ಲಿ ಪಾಲ್ಗೊಂಡಿದ್ದ ಗಣ್ಯರು


ಸುದ್ದಿಗೋಷ್ಠಿಯಲ್ಲಿ ಆಯೋಜಕರಾದ ರಾಜೇಶ್ ಬ್ರಹ್ಮಾವರ, ಅನಿರುಧ್, ಮಣಿಕಾಂತ್ ಕದ್ರಿ, ಸಿಂಪಲ್ ಸುನಿ, ರವಿಶಂಕರ್ ಗೌಡ, ಜೇಮ್ಸ್ ಚೇತನ್, ಪವನ್ ಒಡೆಯರ್ ಸೇರಿದಂತೆ ಅನೇಕರು ಪಾಲ್ಗೊಂಡಿದ್ದಾರೆ.

Exit mobile version