Site icon Vistara News

Driver Jamuna Movie |ನಟಿ ಐಶ್ವರ್ಯಾ ರಾಜೇಶ್ ನಟನೆಯ ‘ಡ್ರೈವರ್ ಜಮುನಾ’ ಟ್ರೈಲರ್‌ ಔಟ್‌

Driver Jamuna Movie

ಬೆಂಗಳೂರು : ತಮಿಳು ಚಿತ್ರರಂಗದಲ್ಲಿ ಮನೆ ಮಾತಾಗಿರುವ ನಟಿ ಐಶ್ವರ್ಯಾ ರಾಜೇಶ್ ನಟನೆಯ ಬಹುನಿರೀಕ್ಷಿತ ಸಿನಿಮಾ ಡ್ರೈವರ್ ಜಮುನಾ(Driver Jamuna Movie) ಚಿತ್ರದ ಟ್ರೈಲರ್‌ ಬಿಡುಗಡೆಗೊಂಡಿದೆ. ಒಬ್ಬ ಹೆಣ್ಣು ಮಗಳು ಡ್ರೈವರ್‌ ವೃತ್ತಿಗೆ ಇಳಿದಾಗ ಆಕೆ ಎದುರಿಸುವ ಸವಾಲುಗಳನ್ನು ಇಡೀ ಚಿತ್ರ ಕಟ್ಟಿಕೊಟ್ಟಿದೆ. ಕನ್ನಡದಲ್ಲಿ ಈ ಟ್ರೈಲರ್‌ ಅನ್ನು ನಟ ಕಿಶೋರ್ ಬಿಡುಗಡೆ ಮಾಡಿದರು.

‘ವತ್ತಿಕುಚ್ಚಿ’ ಸಿನಿಮಾ ಖ್ಯಾತಿಯ ಪಾ.ಕಿನ್ಸ್ಲಿನ್‌ ನಿರ್ದೇಶನಲ್ಲಿ ಮೂಡಿಬಂದಿರುವ ಈ ಚಿತ್ರದಲ್ಲಿ ಐಶ್ವರ್ಯಾ ರಾಜೇಶ್ ಕ್ಯಾಬ್ ಡ್ರೈವರ್ ಆಗಿ ಬಣ್ಣ ಹಚ್ಚಿದ್ದಾರೆ. ತಾರಾಬಳಗದಲ್ಲಿ ಆಡುಕಳಂ ನರೇನ್, ಶ್ರೀ ರಂಜನಿ, ಸ್ಟ್ಯಾಂಡ್ ಅಪ್ ಕಾಮಿಡಿಯನ್ ಅಭಿಷೇಕ್, ‘ರಾಜಾ ರಾಣಿ’ ಸಿನಿಮಾ ಖ್ಯಾತಿಯ ಪಾಂಡಿಯನ್, ಕವಿತಾ ಭಾರತಿ, ಮಣಿಕಂಡನ್, ರಾಜೇಶ್ ಸೇರಿದಂತೆ ಹಲವರು ನಟಿಸಿದ್ದಾರೆ. ಗೋಕುಲ್‌ ಬೆನೊಯ್‌ ಛಾಯಾಗ್ರಹಣ, ಗಿಬ್ರಾನ್ ಸಂಗೀತ ಜವಾಬ್ದಾರಿ ಹೊತ್ತುಕೊಂಡಿದ್ದು, ಎಸ್.ಪಿ.ಚೌಧರಿ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ.

ಇದನ್ನೂ ಓದಿ | ತಮಿಳುನಾಡು ವಿಭಜನೆ ಮಾಡ್ಬೇಕಾ? ಮಾಡ್ತೀವಿ ಬಿಡಿ, ನಮ್ಗೆ ಆ ತಾಕತ್ತಿದೆ ಎಂದ ಬಿಜೆಪಿ ನಾಯಕ

ಡ್ರೈವರ್ ಜಮುನಾ ಸಿನಿಮಾ ಮಹಿಳಾ ಕ್ಯಾಬ್ ಡ್ರೈವರ್ ಸುತ್ತ ನಡೆಯುವ ಘಟನೆಯಾಗಿದೆ. ಈ ಪಾತ್ರಕ್ಕಾಗಿ ಐಶ್ವರ್ಯಾ ಮಹಿಳಾ ಕ್ಯಾಬ್ ಡ್ರೈವರ್‌ಗಳನ್ನು ಭೇಟಿ ಮಾಡಿ ಅವರ ಹಾವಭಾವವನ್ನು ತಮ್ಮ ಪಾತ್ರದಲ್ಲಿ ಅಳವಡಿಸಿಕೊಂಡಿದ್ದಾರೆ. ಯಾವುದೇ ಡ್ಯೂಪ್ ಬಳಸದೇ ಐಶ್ವರ್ಯಾ ತಮ್ಮ ಪಾತ್ರ ಮಾಡಿದ್ದಾರೆ. ಸಿನಿಮಾದ ಶೂಟಿಂಗ್ ಕಂಪ್ಲೀಟ್ ಆಗಿದ್ದು, ತಮಿಳು, ತೆಲುಗು, ಕನ್ನಡ ಹಾಗೂ ಮಲಯಾಳಂನಲ್ಲಿ ಸಿನಿಮಾ ಮೂಡಿ ಬಂದಿದೆ.

ಇದನ್ನೂ ಓದಿ | ತಮಿಳುನಾಡು ಪ್ರತ್ಯೇಕ ರಾಷ್ಟ್ರದ ಪ್ರಸ್ತಾಪ ಮಾಡಿ ವಿವಾದ ಎಬ್ಬಿಸಿದ ಡಿಎಂಕೆ ನಾಯಕ

Exit mobile version