ದುನಿಯಾ ವಿಜಯ್ (Duniya Vijay) ಅವರು ಕೊಲ್ಲೂರು ಮೊಕಾಂಬಿಕಾ ದೇವಸ್ಥಾನಕ್ಕೆ ಬುಧವಾರ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ.
ಈ ವೇಳೆ ದುನಿಯಾ ವಿಜಯ್ ಅವರನ್ನು ನೋಡಲು ಫ್ಯಾನ್ಸ್ ಮುತ್ತಿಕೊಂಡಿದ್ದಾರೆ. ಎಲ್ಲರೂ ಬಂದು ದುನಿಯಾ ವಿಜಯ್ ಬಳಿ ಸೆಲ್ಫಿ ಕೇಳಿದ್ದಾರೆ.
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಆಗಾಗ ಸೆಲೆಬ್ರಿಟಿಗಳು ಭೇಟಿ ನೀಡುತ್ತಲೇ ಇರುತ್ತಾರೆ. ಯುಗಾದಿ ಹಬ್ಬದ ಸಂದರ್ಭದಲ್ಲಿ ನಟಿ ಹರ್ಷಿಕಾ ಪೂಣಚ್ಚ ವಿಶೇಷ ಪೂಜೆ ಸಲ್ಲಿಸಿದ್ದರು.
ಇದನ್ನೂ ಓದಿ: Duniya Vijay: ಪುತ್ರಿಗಾಗಿ ಹೊಸ ಸಿನಿಮಾ ಅನೌನ್ಸ್ ಮಾಡಿದ ದುನಿಯಾ ವಿಜಯ್
ಇದಾದ ಬಳಿಕ ಚಿತ್ರರಂಗದ ಸ್ಟಾರ್ ನಟ ಮೋಹನ್‌ಲಾಲ್ ಭೇಟಿ ನೀಡಿ, ಮುಂಜಾನೆ ಮಹಾಮಂಗಳಾರತಿಯಲ್ಲಿ ಪಾಲ್ಗೊಂಡಿದ್ದರು.
ದುನಿಯಾ ವಿಜಯ್ ಅವರು ‘ಭೀಮ’ ಸಿನಿಮಾದಲ್ಲಿ ನಟಿಸುವುದ ಜತೆಗೆ ನಿರ್ದೇಶನ ಕೂಡ ಮಾಡುತ್ತಿದ್ದಾರೆ. ಇತ್ತೀಚೆಗೆ ಅವರ ಹೊಸ ಸಿನಿಮಾ ಘೋಷಣೆ ಆಗಿದೆ. ನಿಖಿಲ್ ಕುಮಾರ್ ಸಿನಿಮಾದಲ್ಲೂ ದುನಿಯಾ ವಿಜಯ್ ನಟಿಸುತ್ತಿದ್ದಾರೆ. ಸ್ಯಾಂಡಲ್‌ವುಡ್ ನಟ ದುನಿಯಾ ವಿಜಯ್ (Duniya Vijay) ಕೆಲವು ದಿನಗಳ ಹಿಂದೆಯಷ್ಟೇ ಹೊಸ ಸಿನಿಮಾ ಘೋಷಣೆ ಮಾಡಿದ್ದರು. ವಿಶೇಷ ಅಂದರೆ ಈ ಸಿನಿಮಾ ಮೂಲಕ ದುನಿಯಾ ವಿಜಯ್ ಅವರ ಮಗಳು ಮೋನಿಕಾ ಸಿನಿರಂಗಕ್ಕೆ ಎಂಟ್ರಿ ಕೊಡುತ್ತಿದ್ದಾರೆ. ‘ಕಾಟೇರ’ ಚಿತ್ರಕ್ಕೆ ಕಥೆ ಬರೆದಿದ್ದ ಜಡೇಶ್ ಹಂಪಿ ಅವರು ನಿರ್ದೇಶನ ಮಾಡುತ್ತಿದ್ದಾರೆ. ಸದ್ಯಕ್ಕೆ ಪ್ರೊಡಕ್ಷನ್ ನಂ 2. ಟೈಟಲ್ ಮೂಲಕ ಸಿನಿಮಾ ಚಿತ್ರೀಕರಣ ಚಾಲನೆ ದೊರೆತಿದೆ. ಸತ್ಯ ಪ್ರಕಾಶ್ ನಿರ್ಮಾಪಕರಾಗಿ, ಸಹ ನಿರ್ಮಾಪಕರಾಗಿ ಸೂರಜ್ ಗೌಡ ಇದ್ದಾರೆ.