Site icon Vistara News

Kichcha Sudeep: ಇಂದೇ ದಿಗಂತ್‌ ಸಿನಿಮಾ ಟೀಸರ್‌ ರಿಲೀಸ್‌; ಅಭಿನಯ ಚಕ್ರವರ್ತಿ ಸಾಥ್‌!

Edagaiye Apghatakke Karana teaser Release By Kichcha Sudeep

ಬೆಂಗಳೂರು: ಎಡಗೈ ಬಳಸುವವರ ಕಥೆ ಆಧಾರಿತ ಸಿನಿಮಾ ‘ಎಡಗೈಯೇ ಅಪಘಾತಕ್ಕೆ ಕಾರಣ’ ಬಿಡುಗಡೆಗೆ ಸಜ್ಜಾಗುತ್ತಿದೆ. ಅದರ ಮೊದಲ ಭಾಗವೆಂಬಂತೆ ಚಿತ್ರದ ಟೀಸರ್ ಎಂಟ್ರಿಗೆ ದಿನಾಂಕ ನಿಗದಿಯಾಗಿದೆ. ಇಂದೇ (ಡಿ.28) ‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾದ ಟೀಸರ್ ಅನ್ನು ಕಿಚ್ಚ ಸುದೀಪ್ ಅನಾವರಣಗೊಳಿಸಲಿದ್ದಾರೆ. ಈ ಮೂಲಕ ದಿಗಂತ್ ಸಿನಿಮಾಗೆ ಸಾಥ್‌ಕೊಡಲಿದ್ದಾರೆ ಅಭಿನಯ ಚಕ್ರವರ್ತಿ.

ಎಡಗೈಯೇ ಅಪಘಾತಕ್ಕೆ ಕಾರಣ ಸಿನಿಮಾಗೆ ಸಮರ್ಥ್ ಬಿ ಕಡಕೊಳ್ ಆಕ್ಷನ್ ಕಟ್ ಹೇಳಿದ್ದು, ಇದು ಇವರ ಚೊಚ್ಚಲ ನಿರ್ದೇಶನದ ಚಿತ್ರವಾಗಿದೆ. ಮರ್ಡರ್ ಮಿಸ್ಟರಿ, ಡಾರ್ಕ್ ಕಾಮಿಡಿ ಹಾಗೂ ಸಸ್ಪೆನ್ಸ್ ಥ್ರಿಲ್ಲರ್ ಸಬ್ಜೆಕ್ಟ್ ಒಳಗೊಂಡ ಕಥಾ ಹಂದರ ಈ ಸಿನಿಮಾದಲ್ಲಿದೆ. ಹೆಸರೇ ಹೇಳುವಂತೆ ಎಡಗೈ ಬಳಸುವವರ ಸಮಸ್ಯೆಗಳ ಸುತ್ತ ಹೆಣೆದ ಚಿತ್ರವಿದು. ದೂದ್ ಪೇಡಾ ದಿಗಂತ್ ನಾಯಕನಾಗಿ ನಟಿಸಿದ್ದು, ದಿಗಂತ್‌ ಅವರಿಗೆ ಜೋಡಿಯಾಗಿ ಹೊಸ ನಟಿ ಧನು ಹರ್ಷ ನಟಿಸುತ್ತಿದ್ದಾರೆ. ನಿಧಿ ಸುಬ್ಬಯ್ಯ, ರಾಧಿಕಾ ನಾರಾಯಣ್, ಭಜರಂಗಿ ಲೋಕಿ, ಕೃಷ್ಣ ಹೆಬ್ಬಾಳ್ ಕೂಡ ಚಿತ್ರದ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಸ್ಟಾರ್ ಕಲಾವಿದರು ಒಟ್ಟಿಗೆ ಸಿನಿಮಾ ಮಾಡುವುದು ತೀರ ಅಪರೂಪವಾಗಿದೆ. ಮಲ್ಟಿಸ್ಟಾರರ್ ಸಿನಿಮಾಗಳಿಗೆ ಖ್ಯಾತ ಕಲಾವಿದರನ್ನು ಸೇರಿಸಿ ಸಿನಿಮಾ ಮಾಡುವುದು ನಿರ್ಮಾಪಕರಿಗೂ ಸಹ ದೊಡ್ಡ ಸವಾಲಾಗಿದೆ. ಹೀಗಿರುವಾಗ ದಿಗಂತ್ ಅವರ ಈ ಸಿನಿಮಾದಲ್ಲಿ ನಿರೂಪ್ ಭಂಡಾರಿ ಕಾಣಿಸಿಕೊಂಡಿರುವುದು ವಿಶೇಷ. ಈ ಸಿನಿಮಾದಲ್ಲಿ ನಿರೂಪ್ ಅತಿಥಿ ಪಾತ್ರದಲ್ಲಿ ಮಿಂಚಿದ್ದಾರೆ. ಅಷ್ಟಕ್ಕೂ ಹೀರೊ ಆಗಿ ಅಬ್ಬರಿಸುತ್ತಿದ್ದ ನಿರೂಪ್ ಭಂಡಾರಿ, ದಿಗಂತ್ ಚಿತ್ರದಲ್ಲಿ ವಿಶೇಷ ಪಾತ್ರ ಮಾಡಲು ಕಾರಣ ಸಿನಿಮಾ ಕಥೆ ಮತ್ತು ಕಾನ್ಸೆಪ್ಟ್.

ಇದನ್ನೂ ಓದಿ:Nirup Bhandari: ಎಡಗೈಯೇ ಅಪಘಾತಕ್ಕೆ ಕಾರಣ ಸಿನಿಮಾದ ವಿಶೇಷ ಪಾತ್ರದಲ್ಲಿ ನಿರೂಪ್ ಭಂಡಾರಿ!

ಎಡಗೈ ಅಪಘಾತಕ್ಕೆ ಕಾರಣ ಸಿನಿಮಾವನ್ನು ಹೈಫನ್ ಪಿಕ್ಚರ್ಸ್ ಹಾಗೂ ಗುರುದತ್ ಗಾಣಿಗ ಫಿಲ್ಮಂಸ್ ಬ್ಯಾನರ್ ನಡಿ ಗುರುದತ್ ಗಾಣಿಗ ಹಾಗೂ ನಿರ್ದೇಶಕ ಸಮರ್ಥ್ ಬಿ ಕಡಕೊಳ್ ಜಂಟಿಯಾಗಿ ನಿರ್ಮಾಣ ಮಾಡುತ್ತಿದ್ದಾರೆ. ಚಿತ್ರಕ್ಕೆ ಅಭಿಮನ್ಯು ಸದಾನಂದ್ ಕ್ಯಾಮೆರಾ ವರ್ಕ್, ರಾಹುಲ್ ವಿ ಪಾರ್ವತಿಕರ್ ಹಾಗೂ ಶ್ರೀಪಾದ್ ಜೋಶಿ ಸಂಭಾಷಣೆ ಇದೆ.

Exit mobile version