Site icon Vistara News

Diganth | ಎಡಗೈಯೇ ಅಪಘಾತಕ್ಕೆ ಕಾರಣ ಸಿನಿಮಾಗೆ ಮತ್ತೆ ಒಂದಾದ ಪಂಚರಂಗಿ ಜೋಡಿ

Diganth

ಬೆಂಗಳೂರು: ಸ್ಯಾಂಡಲ್‌ವುಡ್‌ ದೂಧ್‌ ಪೇಡಾ ದಿಗಂತ್ (Diganth) ನಾಯಕನಾಗಿ ಅಭಿನಯಿಸುತ್ತಿರುವ ‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಹೊಸ ಸುದ್ದಿಯೊಂದನ್ನು ನೀಡಿದೆ. ಇತ್ತೀಚೆಗಷ್ಟೇ ಸರಳವಾಗಿ ಮುಹೂರ್ತ ನೆರವೇರಿಸಿದ್ದ ಚಿತ್ರತಂಡ ಭರದಿಂದ ಶೂಟಿಂಗ್ ನಡೆಸುತ್ತಿದ್ದು, ಪಂಚರಂಗಿ ಬ್ಯೂಟಿ ನಿಧಿ ಸುಬ್ಬಯ್ಯ ಎಂಟ್ರಿ ಕೊಟ್ಟಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ.

ಯೋಗರಾಜ್ ಭಟ್ ನಿರ್ದೇಶನದಲ್ಲಿ ಮೂಡಿ ಬಂದಿದ್ದ ಬ್ಲಾಕ್ ಬಸ್ಟರ್ ಹಿಟ್ ಸಿನಿಮಾ ʻಪಂಚರಂಗಿʼಯಲ್ಲಿ ದಿಗಂತ್ ಹಾಗೂ ನಿಧಿ ಸುಬ್ಬಯ್ಯ ಜೋಡಿ ಮೋಡಿ ಮಾಡಿತ್ತು. ಈ ಸಿನಿಮಾ ಇವರಿಬ್ಬರಿಗೂ ಬ್ರೇಕ್ ನೀಡಿತ್ತು. ಈ ಚಿತ್ರದ ನಂತರ ನಿಧಿ ಸುಬ್ಬಯ್ಯ ಮತ್ತು ದಿಗಂತ್ ಮತ್ತೆ ಯಾವುದೇ ಚಿತ್ರದಲ್ಲಿಯೂ ನಟಿಸಿರಲಿಲ್ಲ. ಇದೀಗ ಹತ್ತು ವರ್ಷದ ನಂತರ ದಿಗಂತ್ ನಾಯಕನಾಗಿ ನಟಿಸುತ್ತಿರುವ ‘ಎಡಗೈಯೇ ಅಪಘಾತಕ್ಕೆ ಕಾರಣ’ ಚಿತ್ರದಲ್ಲಿ ನಿಧಿ ನಟಿಸುತ್ತಿದ್ದಾರೆ. ಈ ಪಾತ್ರದ ಬಗ್ಗೆ ಗುಟ್ಟುಬಿಟ್ಟು ಕೊಡದ ನಿರ್ದೇಶಕ ಸಮರ್ಥ್ ಕಡ್ಕೋಳ್ ನಿಧಿ ಪಾತ್ರ ಪ್ರೇಕ್ಷಕರಿಗೆ ಪಕ್ಕ ಮನರಂಜನೆ ನೀಡುತ್ತದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ | ಎಡಗೈಯೇ ಅಪಘಾತಕ್ಕೆ ಕಾರಣ | ದೂದ್‌ ಪೇಡ ದಿಗಂತ್‌ಗೆ ಜೋಡಿಯಾದ ಯುವ ನಟಿ ಧನು ಹರ್ಷ

ಸಮರ್ಥ್ ಕಡ್ಕೋಳ್‌ ನಿರ್ದೇಶನ ಮಾಡುತ್ತಿರುವ ಈ ಸಿನಿಮಾವನ್ನು ‘ಅಂಬಿ ನಿಂಗ್‌ ವಯಸ್ಸಾಯ್ತೋ’ ಖ್ಯಾತಿಯ ಗುರುದತ್‌ ಗಾಣಿಗ ನಿರ್ಮಾಣ ಮಾಡುತ್ತಿದ್ದಾರೆ. ನಿರ್ದೇಶಕ ಸಮರ್ಥ್ ಕೂಡ ನಿರ್ಮಾಣದಲ್ಲಿ ಕೈ ಜೋಡಿಸಿದ್ದಾರೆ. ಯಲಹಂಕ ಬಳಿಯ ಲಕ್ಷುರಿ ಅಪಾರ್ಟ್‌ಮೆಂಟ್‌ ಒಂದರಲ್ಲಿ ಈ ಸಿನಿಮಾದ ಚಿತ್ರೀಕರಣ ಆರಂಭವಾಗಿದೆ. ದಿಗಂತ್‌ ಜೋಡಿಯಾಗಿ ನಾಯಕಿ ಧನು ಹರ್ಷ ನಟಿಸುತ್ತಿದ್ದಾರೆ. ರಾಧಿಕಾ ಎಂಬ ಪಾತ್ರದಲ್ಲಿ ಬಣ್ಣ ಹಚ್ಚಿದ್ದಾರೆ.

ʻಎಡಗೈ’ ಆಧಾರಿತ ಪರಿಕಲ್ಪನೆಯ ಸಿನಿಮಾವಾಗಿರುವುದರಿಂದ ಈ ಪಾತ್ರ ತಮಗೆ ವಿಶೇಷವಾಗಿದ್ದು, ಡಿಫರೆಂಟ್ ಶೇಡ್‌ನಲ್ಲಿ ಕಾಣಿಸಿಕೊಳ್ಳುವುದಾಗಿ ಧನು ಹರ್ಷ ಈ ಹಿಂದೆ ಹೇಳಿಕೊಂಡಿದ್ದರು.

ಪ್ರಪಂಚದಲ್ಲಿ ಹಲವು ವಿಷಯಗಳನ್ನು ಬಲಗೈ ಬಳಕೆಗೆ ಅನುಕೂಲವಾಗಿ ಮಾಡಲಾಗಿರುತ್ತದೆ. ಆದರೆ, ಎಡಗೈ ಬಳಕೆದಾರರ ಸಂಖ್ಯೆ ಬಹಳ ಕಡಿಮೆ ಇದೆ. ಇದರಿಂದ ಅವರಿಗೆ ಒಂದಷ್ಟು ತೊಂದರೆಗಳೂ ಆಗುತ್ತಿವೆ. ಅದರ ಬಗೆಗಿನ ಕಥೆ ಇದಾಗಿದೆ. ಅಭಿಮನ್ಯು ಸದಾನಂದ್ ಛಾಯಾಗ್ರಹಣ, ರಾಹುಲ್ ವಿ. ಪಾರ್ವತಿಕರ್ ಹಾಗೂ ಶ್ರೀಪಾದ್ ಜೋಶಿ ಸಂಭಾಷಣೆ ಈ ಚಿತ್ರಕ್ಕಿದೆ.

ಇದನ್ನೂ ಓದಿ | ಎಡಗೈಯೇ ಅಪಘಾತಕ್ಕೆ ಕಾರಣ| ದಿಗಂತ್ ನಟನೆಯ ಹೊಸ ಚಿತ್ರದ ಚಿತ್ರೀಕರಣ ಇಂದಿನಿಂದ ಶುರು

Exit mobile version