ಎಡಗೈಯೇ ಅಪಘಾತಕ್ಕೆ ಕಾರಣ| ದಿಗಂತ್ ನಟನೆಯ ಹೊಸ ಚಿತ್ರದ ಚಿತ್ರೀಕರಣ ಇಂದಿನಿಂದ ಶುರು - Vistara News

ಸಿನಿಮಾ

ಎಡಗೈಯೇ ಅಪಘಾತಕ್ಕೆ ಕಾರಣ| ದಿಗಂತ್ ನಟನೆಯ ಹೊಸ ಚಿತ್ರದ ಚಿತ್ರೀಕರಣ ಇಂದಿನಿಂದ ಶುರು

ದೂದ್ ಪೇಡ ದಿಗಂತ್ ಅಭಿನಯದ “ಎಡಗೈಯೇ ಅಪಘಾತಕ್ಕೆ ಕಾರಣʼ ಸಿನಿಮಾದ ಮುಹೂರ್ತ ನೆರವೇರಿದೆ. ಚಿತ್ರದ ಚಿತ್ರೀಕರಣ ಆರಂಭಗೊಂಡಿದೆ.

VISTARANEWS.COM


on

ದೂದ್ ಪೇಡ ದಿಗಂತ್
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಗಾಳಿಪಟ-2 ಭರ್ಜರಿ ಯಶಸ್ಸಿನ ಬಳಿಕ ದೂದ್ ಪೇಡ ದಿಗಂತ್ ‘ಎಡಗೈಯೇ ಅಪಘಾತಕ್ಕೆ ಕಾರಣʼ ಎಂಬ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ವರ್ಲ್ಡ್‌ ಲೆಫ್ಟ್‌ ಹ್ಯಾಂಡ್‌ ಡೇ ನಿಮಿತ್ತ ಪೋಸ್ಟರ್ ಹಾಗೂ ಟೈಟಲ್ ರಿವೀಲ್ ಮಾಡಿದ್ದ ಚಿತ್ರತಂಡ ಶುಕ್ರವಾರ (ಸೆ.9) ಬೆಂಗಳೂರಿನ ವರಸಿದ್ಧಿ ವಿನಾಯಕ ದೇಗುಲದಲ್ಲಿ ಮುಹೂರ್ತ ನೆರವೇರಿಸಿದೆ.

ಸಸ್ಪೆನ್ಸ್ ಥ್ರಿಲ್ಲರ್ ಕಾಮಿಡಿ ಆಗಿರುವ ಈ ಚಿತ್ರಕ್ಕೆ ಸಮರ್ಥ್ ಬಿ ಕಡ್ಕೋಲ್ ಆ್ಯಕ್ಷನ್ ಕಟ್ ಹೇಳಿದ್ದಾರೆ. ಗುರುದತ್ತ ಗಾಣಿಗ ಮತ್ತು ಸಮರ್ಥ್ ಜಂಟಿಯಾಗಿ ನಿರ್ಮಾಣ ಮಾಡಲಿದ್ದಾರೆ. ‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾದಲ್ಲಿ ಧನು ಹರ್ಷ ಅವರು ದಿಗಂತ್‌ಗೆ ಜೋಡಿಯಾಗಿ ನಟಿಸುತ್ತಿದ್ದು, ರಾಧಿಕಾ ಎಂಬ ಪಾತ್ರದಲ್ಲಿ ಬಣ್ಣ ಹಚ್ಚಿದ್ದಾರೆ. ʻಎಡಗೈ’ ಆಧಾರಿತ ಪರಿಕಲ್ಪನೆಯ ಸಿನಿಮಾವಾಗಿರುವುದರಿಂದ ಈ ಪಾತ್ರ ತಮಗೆ ವಿಶೇಷವಾಗಿದ್ದು, ಡಿಫರೆಂಟ್ ಶೇಡ್‌ನಲ್ಲಿ ಕಾಣಿಸಿಕೊಳ್ಳುವುದಾಗಿ ಧನು ಹರ್ಷ ಈ ಹಿಂದೆ ಹೇಳಿಕೊಂಡಿದ್ದರು.

ಇದನ್ನೂ ಓದಿ | ಎಡಗೈಯೇ ಅಪಘಾತಕ್ಕೆ ಕಾರಣ | ದೂದ್‌ ಪೇಡ ದಿಗಂತ್‌ಗೆ ಜೋಡಿಯಾದ ಯುವ ನಟಿ ಧನು ಹರ್ಷ

ಈ ಮೊದಲು ದಿಗಂತ್ ಫಸ್ಟ್ ಲುಕ್‌ಗೆ ಭಾರಿ ಮೆಚ್ಚುಗೆ ವ್ಯಕ್ತವಾಗಿದ್ದು, ನಾಯಕಿ ಪರಿಚಯದ ಟೀಸರ್ ಸಿನಿಮಾ ಮೇಲಿನ ನಿರೀಕ್ಷೆ ಹೆಚ್ಚಿಸಿತ್ತು. ಪ್ರಪಂಚದಲ್ಲಿ ಹಲವು ವಿಷಯಗಳನ್ನು ಬಲಗೈ ಬಳಕೆಗೆ ಅನುಕೂಲವಾಗಿ ಮಾಡಲಾಗಿರುತ್ತದೆ. ಆದರೆ ಎಡಗೈ ಬಳಕೆದಾರರ ಸಂಖ್ಯೆ ಬಹಳ ಕಡಿಮೆ ಇದೆ. ಇದರಿಂದ ಅವರಿಗೆ ಒಂದಷ್ಟು ತೊಂದರೆಗಳೂ ಆಗುತ್ತಿವೆ. ಅದರ ಬಗೆಗಿನ ಕಥೆ ಇದಾಗಿದ್ದು, ಶೀಘ್ರದಲ್ಲಿ ಉಳಿದ ಕಲಾವಿದರ ಬಗ್ಗೆ ಮಾಹಿತಿ ನೀಡಲಾಗುವುದು ಎಂದು ಚಿತ್ರತಂಡ ಹೇಳಿಕೊಂಡಿದೆ.

ಇಂದಿನಿಂದ ಬೆಂಗಳೂರಿನಲ್ಲಿ ಸಿನಿಮಾದ ಚಿತ್ರೀಕರಣ ನಡೆಯಲಿದೆ. ಅಭಿಮನ್ಯು ಸದಾನಂದ್ ಛಾಯಾಗ್ರಾಹಣ, ರಾಹುಲ್ ವಿ ಪಾರ್ವತಿಕರ್ ಹಾಗೂ ಶ್ರೀಪಾದ್ ಜೋಶಿ ಸಂಭಾಷಣೆ ಈ ಚಿತ್ರಕ್ಕಿದೆ.

ಇದನ್ನೂ ಓದಿ | Kannada New Movies | ಸೆಪ್ಟೆಂಬರ್‌ನಲ್ಲಿ ತೆರೆಗೆ ಸಾಲು ಸಾಲು ಸಿನಿಮಾ: ನಿಮಗಿಷ್ಟದ ಚಿತ್ರ ಇದೆಯೇ?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬಾಲಿವುಡ್

Sonakshi Sinha: ಮುಸ್ಲಿಂ ಹುಡುಗನ ಜತೆ ಮಗಳು ಸೋನಾಕ್ಷಿ ಮದುವೆ; ಶತ್ರುಘ್ನ ಸಿನ್ಹಾ ಮುನಿಸು?

Sonakshi Sinha: ಶತ್ರುಘ್ನ ತಮ್ಮ ಮಗಳೊಂದಿಗೆ ಅಸಮಾಧಾನ ಹೊಂದಿದ್ದಾರೆ. ಆದರೆ ಈ ಮುನಿಸು ಹೆಚ್ಚು ಕಾಲ ಉಳಿಯುವುದಿಲ್ಲ. ಶತ್ರುಘ್ನ ಕೂಡ ಮದುವೆ (Sonakshi Sinha’s Wedding) ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಸೋನಾಕ್ಷಿ ಅವರ ಮಾವ ಪಹ್ಲಾಜ್ ನಿಹಲಾನಿ ತಿಳಿಸಿದ್ದಾರೆ.

VISTARANEWS.COM


on

By

Sonakshi Sinha
Koo

ಮುಂಬಯಿ: ಬಾಲಿವುಡ್ ನಟಿ (bollywood actress) ಸೋನಾಕ್ಷಿ ಸಿನ್ಹಾ (Sonakshi Sinha) ಮುಸ್ಲಿಂ ಹುಡುಗನ ಜತೆ ಮದುವೆ ಆಗುತ್ತಿರುವ ಬಗ್ಗೆ (Sonakshi Sinha’s Wedding) ಮತ್ತು ತಮ್ಮ ಮದುವೆ ಬಗ್ಗೆ ಮೊದಲೇ ತಿಳಿಸದಿದ್ದಕ್ಕಾಗಿ ತಂದೆ ಶತ್ರುಘ್ನ ಸಿನ್ಹಾ (Shatrughan Sinha) ಅವರು ಅಸಮಾಧಾನಗೊಂಡಿದ್ದಾರೆ ಎಂದು ಸೋನಾಕ್ಷಿ ಅವರ ಮಾವ ಪಹ್ಲಾಜ್ ನಿಹಲಾನಿ (Pahlaj Nihalani) ಖಚಿತಪಡಿಸಿದ್ದಾರೆ.

ಕಳೆದ ವಾರವಷ್ಟೇ ಸೋನಾಕ್ಷಿ ಅವರು ತಮ್ಮ ಬಹುಕಾಲದ ಗೆಳೆಯ ಜಹೀರ್ ಇಕ್ಬಾಲ್ ಅವರನ್ನು ವರಿಸುತ್ತಿದ್ದಾರೆ ಎಂಬ ಸುದ್ದಿ ಹೊರಬಿದ್ದಿದ್ದು, ಬಳಿಕ ಇದನ್ನು ಮದುವೆಯ ಆಮಂತ್ರಣವು ದೃಢಪಡಿಸಿತು. ಸೋನಾಕ್ಷಿ ಏಳು ವರ್ಷಗಳಿಂದ ಜಹೀರ್ ಜೊತೆ ಡೇಟಿಂಗ್ ನಡೆಸುತ್ತಿದ್ದಾರೆ. ಮದುವೆಯ ವದಂತಿಗಳಿಗೆ ಮೊದಲ ಪ್ರತಿಕ್ರಿಯೆ ನೀಡಿದ ಶತ್ರುಘ್ನ ಅವರು ಮದುವೆಯ ಬಗ್ಗೆ ತಿಳಿದಿರಲಿಲ್ಲ ಎಂದು ಒಪ್ಪಿಕೊಂಡರು. ಮಾತ್ರವಲ್ಲದೇ ಅವರು ಇದರಿಂದ ಅಸಮಾಧಾನಗೊಂಡಿರುವುದು ಅವರ ಹೇಳಿಕೆಯಿಂದ ತಿಳಿದು ಬಂದಿತ್ತು.

ಈ ಬಗ್ಗೆ ಪಹ್ಲಾಜ್ ನಿಹಲಾನಿ ಅವರು ಪ್ರತಿಕ್ರಿಯೆ ನೀಡಿದ್ದು, ಶತ್ರುಘ್ನ ತಮ್ಮ ಮಗಳೊಂದಿಗೆ ಅಸಮಾಧಾನ ಹೊಂದಿದ್ದಾರೆ. ಆದರೆ ಅದು ಹೆಚ್ಚು ಕಾಲ ಉಳಿಯುವುದಿಲ್ಲ ಎಂದು ಅವರು ಖಚಿತಪಡಿಸಿದರು. ಶತ್ರುಘ್ನ ಕೂಡ ಮದುವೆ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.


ಸೋನಾಕ್ಷಿ ಅವರ ಮುದ್ದಿನ ಮಗಳು. ಅವರು ಮದುವೆಗೆ ಬಾರದೇ ಇರಲು ಸಾಧ್ಯವೇ ಇಲ್ಲ. ಶತ್ರುಜಿ ಅವರು “”ಈಗಿನ ಮಕ್ಕಳು ಪೋಷಕರ ಅನುಮತಿ ಪಡೆಯದೇ ಮದುವೆಯಾಗುತ್ತಾರೆ. ಸೋನಾಕ್ಷಿ ತನ್ನ ಇಷ್ಟದ ಹುಡುಗನನ್ನು ಮದುವೆಯಾಗುವುದಾದರೆ ನಾನೇಕೆ ಅಸಮಾಧಾನಗೊಳ್ಳಬೇಕುʼʼ ಎಂದು ಹೇಳಿರುವುದಾಗಿ ತಿಳಿಸಿದ್ದಾರೆ.

ನಲವತ್ತು ವರ್ಷಗಳ ಹಿಂದೆ ತಮಗೆ ಇಷ್ಟವಾದ ಹುಡುಗಿಯನ್ನು ಮದುವೆಯಾಗಿದ್ದಾರೆ. ನಾನು ನನ್ನ ಹೆಂಡತಿಯನ್ನು ಮದುವೆಯಾದಾಗ ನಾನು ನನ್ನ ಜೀವನ ಸಂಗಾತಿಯನ್ನು ಆರಿಸಿಕೊಂಡೆ. ಒಬ್ಬನು ತನ್ನ ಮಕ್ಕಳಿಂದ ಅವಾಸ್ತವಿಕ ನಿರೀಕ್ಷೆಗಳನ್ನು ಹೊಂದಿರಬಾರದು ಎಂದು ಶತ್ರುಘ್ನ ಸಿನ್ಹಾ ಇತ್ತೀಚೆಗೆ ಹೇಳಿದ್ದರು.

ಶತ್ರುಘ್ನ ಅವರ ಆರಂಭಿಕ ಪ್ರತಿಕ್ರಿಯೆಯನ್ನು ಸಮರ್ಥಿಸಿಕೊಂಡ ಪಹ್ಲಾಜ್, ಚುನಾವಣೆಯಿಂದಾಗಿ ಅವರು ಸುಮಾರು ಮೂರು ತಿಂಗಳ ಕಾಲ ಮುಂಬಯಿನಿಂದ ಹೊರಗಿದ್ದರು. ಶತ್ರುಘ್ನ ಅವರ ಪತ್ನಿಗೆ ಈ ವಿಷಯ ಗೊತ್ತಿರಬೇಕು. ಶತ್ರುಘ್ನ ಅವರು ಹಿಂದಿರುಗಿದ ಅನಂತರ ಅವರಿಗೆ ಈ ಬಗ್ಗೆ ಹೇಳಲು ನಿರ್ಧರಿಸಿರಬೇಕು. ಈಗ ಅವರು ಮುಂಬಯಿಗೆ ಮರಳಿದ್ದಾರೆ ಮತ್ತು ಸೋನಾಕ್ಷಿ ಮತ್ತು ಅವರ ಕುಟುಂಬದ ನಡುವೆ ಎಲ್ಲವೂ ಚೆನ್ನಾಗಿದೆ ಎಂದು ತಿಳಿಸಿದರು.


ಶತ್ರುಘ್ನ ಹೇಳಿದ್ದೇನು?

ಸೋನಾಕ್ಷಿ ವಿವಾಹದ ಕುರಿತು ಮಾತನಾಡಿದ್ದ ಶತ್ರುಘ್ನ ಅವರು, ನನಗೆ ಸೋನಾಕ್ಷಿ ಮದುವೆ ಬಗ್ಗೆ ಯಾಕೆ ತಿಳಿದಿಲ್ಲ ಎಂದು ನನ್ನ ಹತ್ತಿರದ ಜನರು ನನ್ನನ್ನು ಕೇಳುತ್ತಿದ್ದಾರೆ. ನಾನು ಹೇಳುವುದು ಇಷ್ಟೇ, ಅವರು ಇವತ್ತಿನ ಮಕ್ಕಳು ತಂದೆ ತಾಯಿಯ ಅನುಮತಿ ಕೇಳುವುದಿಲ್ಲ. ಕೇವಲ ಮಾಹಿತಿ ನೀಡುತ್ತಾರೆ. ನಾವು ಆ ಮಾಹಿತಿಗಾಗಿ ಕಾಯುತ್ತಿದ್ದೇವೆ ಎಂದಿದ್ದರು.

ಅವರ ಈ ಹೇಳಿಕೆ ಬಳಿಕ ಮದುವೆಯ ವದಂತಿಗಳನ್ನು ಅವರು ದೃಢೀಕರಿಸದೇ ಇದ್ದರೂ, ಸೋನಾಕ್ಷಿಗೆ ತಮ್ಮ ಜೀವನದ ಮಹತ್ವದ ದಿನಕ್ಕಾಗಿ ಎಲ್ಲಾ ಆಶೀರ್ವಾದಗಳನ್ನು ನೀಡುತ್ತಿದ್ದೇನೆ ಎಂದು ಹೇಳಿದ್ದರು.

ನನ್ನ ಮಗಳು ಮದುವೆಯಾದರೆ ನಾನು ಅವಳಿಗೆ ನನ್ನ ಆಶೀರ್ವಾದವನ್ನು ನೀಡುತ್ತೇನೆ. ಅವಳ ನಿರ್ಧಾರ ಮತ್ತು ಆಯ್ಕೆಯನ್ನು ಬೆಂಬಲಿಸುತ್ತೇನೆ. ಸೋನಾಕ್ಷಿಗೆ ತನ್ನ ಒಡನಾಡಿಯನ್ನು ಆಯ್ಕೆ ಮಾಡುವ ಹಕ್ಕಿದೆ ಮತ್ತು ಅವಳ ಮದುವೆಯ ದಿನದಂದು ನಾನು ಅತ್ಯಂತ ಸಂತೋಷದ ತಂದೆಯಾಗುತ್ತೇನೆ. ನಾನು ಯಾವಾಗಲೂ ಅವಳಿಗೆ ಶುಭ ಹಾರೈಸುತ್ತೇನೆ ಎಂದು ಶತ್ರುಘ್ನ ಹೇಳಿದರು. ಮುಂಬಯಿನಲ್ಲಿ ಆತ್ಮೀಯರ ಸಮ್ಮುಖದಲ್ಲಿ ಜೂನ್ 23ರಂದು ಸೋನಾಕ್ಷಿ ಮತ್ತು ಜಹೀರ್ ವಿವಾಹವಾಗಲಿದ್ದಾರೆ.

Continue Reading

ಕರ್ನಾಟಕ

Actor Chikkanna: ದರ್ಶನ್‌ ಊಟಕ್ಕೆ ಕರೆದಿದ್ರು, ಹೋಗಿದ್ದೆ; ಪೊಲೀಸ್‌ ವಿಚಾರಣೆ ಬಳಿಕ ಚಿಕ್ಕಣ್ಣ ಫಸ್ಟ್‌ ರಿಯಾಕ್ಷನ್!

Actor Chikkanna: Actor Chikkanna: ರೇಣುಕಾಸ್ವಾಮಿ ಕೊಲೆಯಾದ ದಿನವೇ ಅಂದರೆ, ಜೂನ್‌ 8ರಂದು ನಟ ದರ್ಶನ್‌ ಜತೆ ಪಾರ್ಟಿ ಮಾಡಿರುವುದು ನಿಜ ಎಂಬುದಾಗಿ ನಟ ಚಿಕ್ಕಣ್ಣ ಒಪ್ಪಿಕೊಂಡಿದ್ದಾರೆ. ಸ್ಟೋನಿ ಬ್ರೂಕ್‌ ರೆಸ್ಟೋರೆಂಟ್‌ನಲ್ಲಿ ಪೊಲೀಸರು ಮಹಜರು ಮಾಡುವ ವೇಳೆ ಪಬ್‌ಗೆ ತೆರಳಿದ ಚಿಕ್ಕಣ್ಣ, ಪಾರ್ಟಿಯ ಕುರಿತು ಮಾಹಿತಿ ನೀಡಿದ್ದಾರೆ. ಇದಾದ ಬಳಿಕ ಚಿಕ್ಕಣ್ಣ ಅವರು ಪೊಲೀಸ್‌ ಠಾಣೆಗೂ ತೆರಳಿ, ಸುಮಾರು ಮೂರು ತಾಸು ವಿಚಾರಣೆ ಎದುರಿಸಿದ್ದಾರೆ.

VISTARANEWS.COM


on

actor darshan Actor Chikkanna
Koo

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ (Renukaswamy Murder Case) ಸಂಬಂಧಿಸಿದಂತೆ ನಟ ಚಿಕ್ಕಣ್ಣ (Actor Chikkanna) ಅವರನ್ನೂ ಕಾಮಾಕ್ಷಿಪಾಳ್ಯ ಪೊಲೀಸರು ವಿಚಾರಣೆ ನಡೆಸಿದ್ದಾರೆ. ರೇಣುಕಾಸ್ವಾಮಿ ಕೊಲೆಯಾದ ದಿನವಾದ ಜೂನ್‌ 8ರಂದೇ ಕೊಲೆ ಆರೋಪಿ ನಟ ದರ್ಶನ್‌ (Actor Darshan) ಜತೆಗೆ ಚಿಕ್ಕಣ್ಣ ಪಾರ್ಟಿ ಮಾಡಿದ ಹಿನ್ನೆಲೆಯಲ್ಲಿ ಪೊಲೀಸರು ನೋಟಿಸ್‌ ನೀಡಿದ್ದು, ಅದರಂತೆ ಚಿಕ್ಕಣ್ಣ ಅವರು ವಿಚಾರಣೆಗೆ ಹಾಜರಾದರು. ಸುಮಾರು ಮೂರು ತಾಸಿನ ವಿಚಾರಣೆ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಚಿಕ್ಕಣ್ಣ, “ದರ್ಶನ್‌ ಅವರು ಜೂನ್‌ 8ರಂದು ಊಟಕ್ಕೆ ಕರೆದಿದ್ರು, ಹೋಗಿದ್ದೆ” ಎಂದಷ್ಟೇ ತಿಳಿಸಿದ್ದಾರೆ.

“ಸಾಮಾನ್ಯವಾಗಿ ದರ್ಶನ್‌ ಅವರು ನನ್ನನ್ನು ಊಟಕ್ಕೆ ಕರೆಯುತ್ತಾರೆ. ಅದರಂತೆ, ಜೂನ್‌ 8ರಂದು ಸ್ಟೋನಿ ಬ್ರೂಕ್‌ ರೆಸ್ಟೋರೆಂಟ್‌ಗೆ ಊಟಕ್ಕೆ ಹೋಗಿದ್ದೆ. ಊಟ ಮುಗಿಸಿಕೊಂಡು ನಾನು ಅಲ್ಲಿಂದ ತೆರಳಿದೆ. ಅದಕ್ಕೆ ಸಂಬಂಧಿಸಿದಂತೆ ಪೊಲೀಸರು ಕರೆದಿದ್ದರು” ಎಂಬುದಾಗಿ ಚಿಕ್ಕಣ್ಣ ಮೊದಲ ಪ್ರತಿಕ್ರಿಯೆ ನೀಡಿದರು. “ದರ್ಶನ್‌ ಜತೆ ಊಟಕ್ಕೆ ಹೋದಾಗ ಯಾರ‍್ಯಾರು ಇದ್ದರು” ಎಂದು ಮಾಧ್ಯಮದವರು ಕೇಳಿದ್ದಕ್ಕೆ, “ಪ್ರಕರಣವು ವಿಚಾರಣೆ ಹಂತದಲ್ಲಿದೆ. ನಾನು ಇದುವರೆಗೆ ವಿಚಾರಣೆಗೆ ಸಹಕರಿಸಿದ್ದೇನೆ. ಇದಕ್ಕಿಂತ ಹೆಚ್ಚೇನೂ ಹೇಳಲು ಆಗುವುದಿಲ್ಲ” ಎಂಬುದಾಗಿ ಪ್ರತಿಕ್ರಿಯಿಸಿದರು.

ರೇಣುಕಾಸ್ವಾಮಿ ಕೊಲೆಗೀಡಾದ ದಿನವೇ ಸ್ಟೋನಿ ಬ್ರೂಕ್‌ನಲ್ಲಿ ದರ್ಶನ್‌ ಸೇರಿ ಹಲವರು ಪಾರ್ಟಿ ಮಾಡಿದ ಹಿನ್ನೆಲೆಯಲ್ಲಿ ಪೊಲೀಸರು ಆರೋಪಿಗಳನ್ನು ಸ್ಟೋನಿ ಬ್ರೂಕ್‌ ರೆಸ್ಟೋರೆಂಟ್‌ಗೆ ಕರೆದುಕೊಂಡು ಹೋಗಿ ಸ್ಥಳ ಮಹಜರು ಮಾಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕ್ಕಣ್ಣ ಅವರೂ ಸ್ಥಳ ಮಹಜರಿನ ವೇಳೆ ಸ್ಟೋನಿ ಬ್ರೂಕ್‌ ರೆಸ್ಟೋರೆಂಟ್‌ಗೆ ಭೇಟಿ ನೀಡಿದ್ದಾರೆ. ಅಲ್ಲಿಯೇ, ದರ್ಶನ್‌ ಜತೆ ಪಾರ್ಟಿ ಮಾಡಿರುವುದನ್ನು ಚಿಕ್ಕಣ್ಣ ಪೊಲೀಸರ ಎದುರು ಒಪ್ಪಿಕೊಂಡಿದ್ದಾರೆ.

“ಜೂನ್‌ 8ರಂದು ಆರ್‌ ಆರ್‌ ನಗರದ ಸ್ಟೋನಿ ಬ್ರೂಕ್‌ ಪಬ್‌ಗೆ ಹೋಗಿದ್ದೆ. ಮಧ್ಯಾಹ್ನ 1.30ರ ಸುಮಾರಿಗೆ ಪಬ್‌ಗೆ ಹೋಗಿದ್ದೆ. ದರ್ಶನ್‌ ಹಾಗೂ ನಾನು ಒಂದೇ ಟೇಬಲ್‌ನಲ್ಲಿ ಪಾರ್ಟಿ ಮಾಡಿದ್ವಿ. ಸಂಜೆ 4.30ರ ಸುಮಾರಿಗೆ ದರ್ಶನ್‌ ಅವರು ಪಬ್‌ನಿಂದ ಹೊರಟರು. ಅವರ ಜತೆ ನಾನೂ ಅಲ್ಲಿಂದ ಹೊರಟೆ. ನಾನು ನಮ್ಮ ಮನೆಗೆ ಹೋದೆ, ದರ್ಶನ್‌ ಅವರು ಎಲ್ಲಿಗೆ ಹೋದರೋ ಗೊತ್ತಿಲ್ಲ. ನಾವು ಸಿನಿಮಾ ವಿಚಾರಕ್ಕಾಗಿ ಭೇಟಿ ಮಾಡಿದ್ವಿ. ಅದಷ್ಟೇ ಮಾತನಾಡಿ ನಾವು ಹೊರಟು ಹೋದೆವು” ಎಂಬುದಾಗಿ ಪೊಲೀಸರಿಗೆ ಚಿಕ್ಕಣ್ಣ ಮಾಹಿತಿ ನೀಡಿದ್ದಾರೆ.

ನಟ ದರ್ಶನ್‌ ಸೇರಿ ಹಲವು ಆರೋಪಿಗಳನ್ನು ಸ್ಟೋನಿ ಬ್ರೂಕ್‌ ರೆಸ್ಟೋರೆಂಟ್‌ಗೆ ಕರೆದುಕೊಂಡ ಹೋದ ಪೊಲೀಸರು ಸ್ಥಳ ಮಹಜರು ಮಾಡಿದ್ದಾರೆ. ಇದಾದ ನಂತರ ಚಿಕ್ಕಣ್ಣ ಅವರು ಕೂಡ ಕಾಮಾಕ್ಷಿಪಾಳ್ಯ ಪೊಲೀಸ್‌ ಠಾಣೆಗೆ ತೆರಳಿ ಹೇಳಿಕೆ ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ. ಚಿಕ್ಕಣ್ಣ ಅವರು ಪೊಲೀಸ್‌ ಠಾಣೆಗೆ ಹೋದ ವಿಡಿಯೊ ಕೂಡ ಲಭ್ಯವಾಗಿದೆ. ಪಾರ್ಟಿ ಹಿನ್ನೆಲೆಯಲ್ಲಿ ನಟ ಚಿಕ್ಕಣ್ಣ ಅವರಿಗೆ ಇದಕ್ಕೂ ಮೊದಲು ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ನೋಟಿಸ್‌ ನೀಡಿದ್ದರು. ಇದು ಚಿಕ್ಕಣ್ಣ ಅವರಿಗೂ ಆತಂಕ ತಂದಿತ್ತು ಎನ್ನಲಾಗಿದೆ.

ಇದನ್ನೂ ಓದಿ: Actor Darshan: ಅಂದು `ತಗಡು’ ಅಂದಿದ್ದ ದರ್ಶನ್‌ಗೆ ಇಂದು ಉಮಾಪತಿ ಕೌಂಟರ್!

Continue Reading

ಕರ್ನಾಟಕ

Kalki 2898 AD: ʼಕಲ್ಕಿ 2898 ADʼ ಚಿತ್ರದ ಭೈರವ ಆಂಥಮ್‌ ರಿಲೀಸ್‌!

Kalki 2898 AD: ಪ್ರಭಾಸ್‌, ಅಮಿತಾಭ್ ಬಚ್ಚನ್, ಕಮಲ್ ಹಾಸನ್, ದೀಪಿಕಾ ಪಡುಕೋಣೆ ಮತ್ತು ದಿಶಾ ಪಟಾನಿ ನಟಿಸಿರುವ ‘ಕಲ್ಕಿ 2898 AD’ ಚಿತ್ರದ ಟ್ರೈಲರ್ ಬಿಡುಗಡೆಯ ಬಳಿಕ ಇದೀಗ ಇದೇ ಚಿತ್ರದ ಭೈರವ ಆಂಥಮ್‌ ಬಿಡುಗಡೆಯಾಗಿದೆ. ವೈಜಯಂತಿ ಮೂವೀಸ್‌ ಯೂಟ್ಯೂಬ್‌ ಚಾನಲ್‌ನಲ್ಲಿ ಹಾಡು ರಿಲೀಸ್‌ ಆಗಿದೆ. ನಟ ಪ್ರಭಾಸ್‌ ನಟಿಸಿರುವ ಈ ಚಿತ್ರದ ಹಾಡಿಗೆ ಮೊದಲ ಸಲ ಪಂಜಾಬಿ ಗಾಯಕ ದಿಲ್ಜಿತ್‌ ದೋಸಾಂಜ್‌ ಧ್ವನಿ ನೀಡಿದ್ದಾರೆ. ಸಂತೋಷ್‌ ನಾರಾಯಣನ್‌ ಈ ಹಾಡಿಗೆ ಸಂಗೀತ ನೀಡಿದ್ದಾರೆ.

VISTARANEWS.COM


on

Kalki 2898 AD Movie Bhairava Anthem Released
Koo

ಬೆಂಗಳೂರು: ಪ್ರಭಾಸ್‌, ಅಮಿತಾಭ್ ಬಚ್ಚನ್, ಕಮಲ್ ಹಾಸನ್, ದೀಪಿಕಾ ಪಡುಕೋಣೆ ಮತ್ತು ದಿಶಾ ಪಟಾನಿ ನಟಿಸಿರುವ ‘ಕಲ್ಕಿ 2898 AD’ ಚಿತ್ರದ ಟ್ರೈಲರ್ ಬಿಡುಗಡೆಯ ಬಳಿಕ ಇದೀಗ ಇದೇ ಚಿತ್ರದ ಭೈರವ ಆಂಥಮ್‌ ಬಿಡುಗಡೆಯಾಗಿದೆ. ವೈಜಯಂತಿ ಮೂವೀಸ್‌ ಯೂಟ್ಯೂಬ್‌ ಚಾನಲ್‌ನಲ್ಲಿ ಹಾಡು ರಿಲೀಸ್‌ ಆಗಿದೆ. ನಟ ಪ್ರಭಾಸ್‌ ನಟಿಸಿರುವ ಈ ಚಿತ್ರದ ಹಾಡಿಗೆ ಮೊದಲ ಸಲ ಪಂಜಾಬಿ ಗಾಯಕ ದಿಲ್ಜಿತ್‌ ದೋಸಾಂಜ್‌ ಧ್ವನಿ ನೀಡಿದ್ದಾರೆ. ಸಂತೋಷ್‌ ನಾರಾಯಣನ್‌ ಈ ಹಾಡಿಗೆ ಸಂಗೀತ ನೀಡಿದ್ದಾರೆ.

ಪಕ್ಕಾ ಮಾಸ್‌ ಅವತಾರದಲ್ಲಿ ನಟ ಪ್ರಭಾಸ್‌ ಈ ಹಾಡಿನಲ್ಲಿ ಎದುರಾಗಿದ್ದಾರೆ. ತಲೆಗೆ ಟರ್ಬನ್‌ ಧರಿಸಿ ಮತ್ತು ಪಂಚೆಯಲ್ಲಿ ಮಿಂಚಿದ್ದಾರೆ. ಈಗಾಗಲೇ ಟ್ರೇಲರ್‌ ಮೂಲಕ ಎಲ್ಲರ ಗಮನ ಸೆಳೆದ ಈ ಸಿನಿಮಾ, ಇದೀಗ ಭೈರವ ಆಂಥಮ್‌ ಮೂಲಕ ಕಿಕ್‌ ಹೆಚ್ಚಿಸುತ್ತಿದೆ. ತೆಲುಗು ಮಾತ್ರವಲ್ಲದೆ ಹಿಂದಿ, ತಮಿಳು, ಮಲಯಾಳಂ, ಕನ್ನಡ ಮತ್ತು ಇಂಗ್ಲಿಷ್ ಸೇರಿದಂತೆ ಬಹು ಭಾಷೆಗಳಲ್ಲಿ ಈ ಸಿನಿಮಾ ಬಿಡುಗಡೆಯಾಗಲಿದೆ.

ಇದನ್ನೂ ಓದಿ: Job Recruitment: ಕರ್ನಾಟಕ ಗ್ರಾಮೀಣ ಬ್ಯಾಂಕ್‌ನಲ್ಲಿ 586 ಹುದ್ದೆಗಳಿಗೆ ಅರ್ಜಿ ಆಹ್ವಾನ

ಈ ವರ್ಷದ ಅತೀ ನಿರೀಕ್ಷಿತ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ‘ಕಲ್ಕಿ 2898 AD’ ಚಿತ್ರದಲ್ಲಿ ಅಮಿತಾಭ್‍ ಬಚ್ಚನ್, ಕಮಲ್ ಹಾಸನ್, ಪ್ರಭಾಸ್,‍ ದೀಪಿಕಾ ಪಡುಕೋಣೆ, ದಿಶಾ ಪಠಾಣಿ ಮುಂತಾದವರು ನಟಿಸಿದ್ದಾರೆ. ವೈಜಯಂತಿ ಮೂವೀಸ್ ಬ್ಯಾನರ್‌ನಡಿ ಅಶ್ವಿನಿ ದತ್‍ ನಿರ್ಮಿಸಿರುವ ಈ ಚಿತ್ರವನ್ನು ನಾಗ್‍ ಅಶ್ವಿನ್‍ ನಿರ್ದೇಶನ ಮಾಡಿದ್ದಾರೆ. ‘ಕಲ್ಕಿ 2898 AD’ ಚಿತ್ರವು ಜಗತ್ತಿನಾದ್ಯಂತ ಜೂನ್‍ 27ರಂದು ಬಿಡುಗಡೆ ಆಗಲಿದೆ.

Continue Reading

ಸಿನಿಮಾ

Pushpa 2: ಪುಷ್ಪ 2 ಸಿನಿಮಾ ಬಿಡುಗಡೆ 5 ತಿಂಗಳು ಮುಂದೂಡಿಕೆ; ಇಲ್ಲಿದೆ ಹೊಸ ಡೇಟ್

Pushpa 2: Pushpa 2: 2021ರಲ್ಲಿ ತೆರೆಕಂಡು ಬಾಕ್ಸ್‌ ಆಫೀಸ್‌ನಲ್ಲಿ ಮ್ಯಾಜಿಕ್‌ ಮಾಡಿದ್ದ ಪ್ಯಾನ್‌ ಇಂಡಿಯಾ ಸಿನಿಮಾ ʼಪುಷ್ಪʼದ ಮುಂದುವರಿದ ಭಾಗ ಇದು. ಸುಕುಮಾರ್ ನಿರ್ದೇಶನದ ‘ಪುಷ್ಪ 2’ ಚಿತ್ರದ ಮೊದಲ ಹಾಡು ಈಗಾಗಲೇ ರಿಲೀಸ್‌ ಆಗಿ ಧೂಳೆಬ್ಬಿಸುತ್ತಿದೆ. ಅದರಲ್ಲಿಯೂ ಯೂಟ್ಯೂಬ್‌ನಲ್ಲಿ ದಾಖಲೆಯ ವೀಕ್ಷಣೆ ಕಂಡಿದೆ. ʻಪುಷ್ಪ ಪುಷ್ಪʼ ಎಂದು ಶುರುವಾಗುವ ಹಾಡಿಗೆ ರಾಕ್ ಸ್ಟಾರ್ ದೇವಿಶ್ರೀ ಪ್ರಸಾದ್ ಸಂಗೀತ ನೀಡಿದ್ದು, ಇದರಲ್ಲಿನ ಹುಕ್ ಸ್ಟೆಪ್ ವೈರಲ್‌ ಆಗಿದೆ. ಇದರ ಬೆನ್ನಲ್ಲೇ ಸಿನಿಮಾ ಬಿಡುಗಡೆಯನ್ನು ಮುಂದೂಡಲಾಗಿದೆ.

VISTARANEWS.COM


on

Pushpa 2
Koo

ಹೈದರಾಬಾದ್:‌ ಟಾಲಿವುಡ್‌ ಐಕಾನ್‌ ಸ್ಟಾರ್‌ ಅಲ್ಲು ಅರ್ಜುನ್‌ (Allu Arjun) ನಟನೆಯ ಬಹುನಿರೀಕ್ಷಿತ ಪುಷ್ಪ 2 (Pushpa 2) ಸಿನಿಮಾದ ಬಿಡುಗಡೆಯನ್ನು ಐದು ತಿಂಗಳು ಮುಂದೂಡಲಾಗಿದೆ. ಪುಷ್ಪ 2 ಸಿನಿಮಾವನ್ನು ಆಗಸ್ಟ್‌ 5ರ ಬದಲಾಗಿ ಇದೇ ವರ್ಷದ ಡಿಸೆಂಬರ್‌ 6ರಂದು ಬಿಡುಗಡೆ ಮಾಡಲು ಚಿತ್ರತಂಡವು ತೀರ್ಮಾನಿಸಿದೆ. ಈ ಕುರಿತು ಅಲ್ಲು ಅರ್ಜುನ್‌ ಅವರೇ ಎಕ್ಸ್‌ ಸಾಮಾಜಿಕ ಜಾಲತಾಣದಲ್ಲಿ ಸ್ಪಷ್ಟನೆ ನೀಡಿದ್ದಾರೆ. ಇದರಿಂದಾಗಿ ಅಲ್ಲು ಅರ್ಜುನ್‌ ಅಭಿಮಾನಿಗಳಿಗೆ ತುಸು ಬೇಸರ ಉಂಟಾದಂತಾಗಿದೆ.

ಸಿನಿಮಾ ಮುಂದೂಡಿಕೆ ಏಕೆ?

ಅಲ್ಲು ಅರ್ಜುನ್‌ ವಿಧಾನಸಭೆ ಚುನಾವಣೆ ವೇಳೆ ನಂದಿಯಾಲ ವಿಧಾನಸಭೆ ಕ್ಷೇತ್ರದಲ್ಲಿ ವೈಎಸ್‌ಆರ್‌ಸಿಪಿ ಅಭ್ಯರ್ಥಿ ಪರ ಪ್ರಚಾರ ಮಾಡಿದ್ದರು. ಇದರಿಂದಾಗಿ ಮೆಗಾ ಸ್ಟಾರ್‌ ಕುಟುಂಬದ ಪವನ್‌ ಕಲ್ಯಾಣ್‌ ಅವರ ಅಭಿಮಾನಿಗಳ ಆಕ್ರೋಶಕ್ಕೆ ಅಲ್ಲು ಅರ್ಜುನ್‌ ಗುರಿಯಾಗಿದ್ದಾರೆ. ಅಲ್ಲದೆ, ಪುಷ್ಟ 2 ಸಿನಿಮಾವನ್ನು ನಾವು ವೀಕ್ಷಿಸುವುದಿಲ್ಲ, ಬಾಯ್ಕಾಟ್‌ ಮಾಡುತ್ತೇವೆ ಎಂಬುದಾಗಿ ಪವರ್‌ ಸ್ಟಾರ್‌ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾಗಾಗಿಯೇ, ಸಿನಿಮಾ ಬಿಡುಗಡೆ ದಿನಾಂಕವನ್ನು ಮುಂದೂಡಲಾಗಿದೆ ಎಂದು ತಿಳಿದುಬಂದಿದೆ.

ಮತ್ತೊಂದಿಷ್ಟು ಮೂಲಗಳ ಪ್ರಕಾರ, ನಿರ್ದೇಶಕ ಸುಕುಮಾರ್ ಇನ್ನೂ ಚಿತ್ರದ ಶೂಟಿಂಗ್ ಮತ್ತು ಪೋಸ್ಟ್ ಪ್ರೊಡಕ್ಷನ್ ಹಂತದ ಕೆಲಸಗಳಲ್ಲಿ ನಿರತರಾಗಿರುವುದರಿಂದ ಸಿನಿಮಾ ಬಿಡುಗಡೆಯ ದಿನಾಂಕವನ್ನು ಮುಂದೂಡಲಾಗಿದೆ ಎಂದು ಹೇಳಲಾಗುತ್ತಿದೆ. ಇನ್ನೂ ಒಂದು ತಿಂಗಳ ಶೂಟಿಂಗ್ ಬಾಕಿಯಿದ್ದು ಜುಲೈ ವೇಳೆಗೆ ಚಿತ್ರೀಕರಣ ಪೂರ್ಣಗೊಳಿಸುವ ಗುರಿಯನ್ನು ಸುಕುಮಾರ್ ಹೊಂದಿದ್ದಾರೆ ಎನ್ನಲಾಗಿದೆ. ಅಗಸ್ಟ್ 15 ರಂದು ಅಕ್ಷಯ್ ಕುಮಾರ್ ಅವರ ‘ಖೇಲ್ ಖೇಲ್ ಮೇ’ ಕೂಡ ಬಿಡುಗಡೆಗೊಳ್ಳುತ್ತಿದೆ. ಈ ಮೊದಲು, ‘ಖೇಲ್ ಖೇಲ್ ಮೇ’ ಸೆಪ್ಟೆಂಬರ್ 6 ರಂದು ಅದ್ಧೂರಿಯಾಗಿ ಬಿಡುಗಡೆ ಮಾಡಲು ನಿರ್ಧರಿಸಲಾಗಿತ್ತು.

2021ರಲ್ಲಿ ತೆರೆಕಂಡು ಬಾಕ್ಸ್‌ ಆಫೀಸ್‌ನಲ್ಲಿ ಮ್ಯಾಜಿಕ್‌ ಮಾಡುದ್ದ ಪ್ಯಾನ್‌ ಇಂಡಿಯಾ ಸಿನಿಮಾ ʼಪುಷ್ಪʼದ ಮುಂದುವರಿದ ಭಾಗ ಇದು. ಸುಕುಮಾರ್ ನಿರ್ದೇಶನದ ‘ಪುಷ್ಪ 2’ ಚಿತ್ರದ ಮೊದಲ ಹಾಡು ಈಗಾಗಲೇ ರಿಲೀಸ್‌ ಆಗಿ ಧೂಳೆಬ್ಬಿಸುತ್ತಿದೆ. ಅದರಲ್ಲಿಯೂ ಯೂಟ್ಯೂಬ್‌ನಲ್ಲಿ ದಾಖಲೆಯ ವೀಕ್ಷಣೆ ಕಂಡಿದೆ. ʻಪುಷ್ಪ ಪುಷ್ಪʼ ಎಂದು ಶುರುವಾಗುವ ಹಾಡಿಗೆ ರಾಕ್ ಸ್ಟಾರ್ ದೇವಿಶ್ರೀ ಪ್ರಸಾದ್ ಸಂಗೀತ ನೀಡಿದ್ದು, ಇದರಲ್ಲಿನ ಹುಕ್ ಸ್ಟೆಪ್ ವೈರಲ್‌ ಆಗಿದೆ. ಎರಡನೇ ಹಾಡು ಕೂಡ ಔಟ್‌ ಆಗಿದ್ದು, ಅಲ್ಲು ಅರ್ಜುನ್‌ ಜತೆ ರಶ್ಮಿಕಾ ಹೆಜ್ಜೆ ಹಾಕಿದ್ದಾರೆ. ಹಾಡು ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ಲಕ್ಷಾಂತರ ವೀಕ್ಷಣೆ ಪಡೆದುಕೊಂಡಿದೆ.

ಇದನ್ನೂ ಓದಿ: Pushpa 2: ʼಪುಷ್ಪ 2ʼ ಸಿನಿಮಾ ತಂಡದಿಂದ ಅಲ್ಲು ಅರ್ಜುನ್‌ ಫ್ಯಾನ್ಸ್‌ಗೆ ಗುಡ್‌ನ್ಯೂಸ್‌; ಎರಡನೇ ಹಾಡು ರಿಲೀಸ್‌ಗೆ ಮುಹೂರ್ತ ಫಿಕ್ಸ್‌

Continue Reading
Advertisement
How Much Salt Is Too Much
ಆರೋಗ್ಯ11 mins ago

How Much Salt Is Too Much: ಉಪ್ಪು ಅತಿಯಾಗದಿರಲಿ; ದಿನಕ್ಕೆ ನಾವೆಷ್ಟು ಉಪ್ಪು ತಿನ್ನುತ್ತಿದ್ದೇವೆ ಗೊತ್ತಿರಲಿ

T20 World Cup 2024
ಕ್ರೀಡೆ13 mins ago

T20 World Cup 2024: ಸೂಪರ್​-8 ಪಂದ್ಯಕ್ಕೂ ಮುನ್ನ ಭಾರತ ತಂಡಕ್ಕೆ ಆಘಾತ; ಅಭ್ಯಾಸದ ವೇಳೆ ಸ್ಟಾರ್​ ಆಟಗಾರನಿಗೆ ಗಾಯ

Narendra Modi
ದೇಶ24 mins ago

Narendra Modi: ಮೂರನೇ ಬಾರಿ ಪ್ರಧಾನಿ ಪಟ್ಟಕ್ಕೇರಿದ ಬಳಿಕ ಇಂದು ಸ್ವಕ್ಷೇತ್ರ ವಾರಾಣಸಿಗೆ ಮೋದಿ ಮೊದಲ ಭೇಟಿ

Prajwal revanna case
ಪ್ರಮುಖ ಸುದ್ದಿ40 mins ago

Prajwal Revanna Case: ಇಂದು ಪ್ರಜ್ವಲ್ ರೇವಣ್ಣ ಎಸ್ಐಟಿ ಕಸ್ಟಡಿ ಅಂತ್ಯ, ಮತ್ತೊಂದು ಕೇಸ್‌ನಲ್ಲಿ ಅಂದರ್!‌

Team India Coach
ಕ್ರೀಡೆ51 mins ago

Team India Coach: ಜಾಂಟಿ ರೋಡ್ಸ್ ಟೀಮ್​ ಇಂಡಿಯಾದ ಮುಂದಿನ ಫೀಲ್ಡಿಂಗ್​ ಕೋಚ್​

pattanagere shed actor darshan renuka swamy murder
ಕ್ರೈಂ1 hour ago

Actor Darshan: ಆ ಭೀಕರ ಶೆಡ್‌ನಲ್ಲಿ ಇನ್ನೂ ಹಲವರ ರಕ್ತದ ಕಲೆ ಪತ್ತೆ! ಏನ್‌ ನಡೆದಿತ್ತು ಇಲ್ಲಿ?

Beer Side Effect
ಆರೋಗ್ಯ1 hour ago

Beer Side Effect: ಬಿಯರ್‌ ಕುಡಿದರೆ ತೂಕ ಹೆಚ್ಚುತ್ತದೆ ಎನ್ನುವುದು ನಿಜವೇ?

Nuclear Weapon
ದೇಶ1 hour ago

Nuclear Weapon: ಭಾರತದಲ್ಲಿದೆ ಪಾಕಿಸ್ತಾನಕ್ಕಿಂತ ಹೆಚ್ಚಿನ ಪರಮಾಣು ಶಸ್ತ್ರಾಸ್ತ್ರ; ಹೀಗಿದೆ ಹೊಸ ಅಂಕಿ-ಅಂಶ

Neeraj Chopra
ಕ್ರೀಡೆ1 hour ago

Neeraj Chopra: ಇಂದು ಪಾವೊ ನೂರ್ಮಿ ಗೇಮ್ಸ್​ನಲ್ಲಿ ನೀರಜ್ ಚೋಪ್ರಾ ಸ್ಪರ್ಧೆ

Euro 2024
ಕ್ರೀಡೆ2 hours ago

Euro 2024: ಉಕ್ರೇನ್​ಗೆ ಆಘಾತವಿಕ್ಕಿದ ರೊಮೇನಿಯಾ; 3-0 ಗೋಲ್​ ಅಂತರದ ಗೆಲುವು

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Actor Darshan
ಮೈಸೂರು22 hours ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು22 hours ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ2 days ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ2 days ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ2 days ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ3 days ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ4 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು4 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು4 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ4 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

ಟ್ರೆಂಡಿಂಗ್‌