ಬೆಂಗಳೂರು: ಬಿಗ್ ಬಾಸ್ OTT 2 (Elvish Yadav ) ವಿಜೇತ ಮತ್ತು ಯೂಟ್ಯೂಬರ್ ಎಲ್ವಿಶ್ ಯಾದವ್ (Elvish Yadav ) ಅವರನ್ನು ನೋಯ್ಡಾ ಪೊಲೀಸರು ಹಾವಿನ ವಿಷ ಬಳಸಿದ ಪ್ರಕರಣದಲ್ಲಿ ಮಾ.17ರಂದು ಬಂಧಿಸಿದ್ದರು. ಬಂಧನವಾದ ಕೆಲವೇ ಗಂಟೆಗಳಲ್ಲಿ ರೇವ್ ಪಾರ್ಟಿಗಳಿಗೆ ಹಾವಿನ ವಿಷವನ್ನು ಬಳಸಿರುವುದಾಗಿ ಒಪ್ಪಿಕೊಂಡಿದ್ದಾನೆ ಎಂದು ವರದಿಯಾಗಿದೆ. ಹಾವಿನ ವಿಷವನ್ನು ಪಾರ್ಟಿಗಳಿಗೆ ಸರಬರಾಜು ಮಾಡುತ್ತಿದ್ದ ಆರೋಪ ಎಲ್ವಿಶ್ ಯಾದವ್ ಮೇಲಿತ್ತು. ಸೋಮವಾರ, ಎಲ್ವಿಶ್ ತನ್ನ ಅಪರಾಧಗಳನ್ನು ಒಪ್ಪಿಕೊಂಡಿದ್ದಾನೆ ಎಂದು ವರದಿಯಾಗಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ವರ್ಷ ಬಂಧಿತರಾದ ವ್ಯಕ್ತಿಗಳು ತಮಗೆ ತಿಳಿದಿದ್ದಾರೆ ಎಂದೂ ಅವರು ತಿಳಿಸಿದ್ದಾರೆ ಎಂದು ವರದಿಯಾಗಿದೆ.
ತಪ್ಪೊಪ್ಪಿಗೆಯ ನಂತರ, ಎಲ್ವಿಶ್ ಈಗ ನಾರ್ಕೋಟಿಕ್ ಡ್ರಗ್ಸ್ ಮತ್ತು ಸೈಕೋಟ್ರೋಪಿಕ್ ಸಬ್ಸ್ಟೆನ್ಸ್ ಆಕ್ಟ್ ಅಡಿಯಲ್ಲಿ ಆರೋಪಗಳನ್ನು ಎದುರಿಸುತ್ತಿದ್ದಾರೆ. ಈ ಕಾನೂನಿನಡಿಯಲ್ಲಿ ಜಾಮೀನು ಪಡೆಯುವುದು ತುಂಬ ಕಷ್ಟಕರವಾಗಿದೆ ಎಂದು ವರದಿಯಾಗಿದೆ.
ಇದನ್ನೂ ಓದಿ: Elvish Yadav: ʻಬಿಗ್ ಬಾಸ್ ಹಿಂದಿ ಒಟಿಟಿ 2ʼ ವಿನ್ನರ್ ಅರೆಸ್ಟ್
ಏನಿದು ಪ್ರಕರಣ?
ರೇವ್ ಪಾರ್ಟಿಯಲ್ಲಿ ಹಾವಿನ ವಿಷ ಬಳಸಿದ ಆರೋಪದ ಮೇಲೆ ಯೂಟ್ಯೂಬರ್, ಬಿಗ್ ಬಾಸ್ OTT2 ವಿಜೇತ ಎಲ್ವಿಶ್ ಯಾದವ್ (Elvish Yadav) ವಿರುದ್ಧ ಕೇಸ್ ದಾಖಲಿಸಲಾಗಿತ್ತು. ಇವರ ಗ್ಯಾಂಗ್‌ನ ಐವರು ಸದಸ್ಯರನ್ನು ನೋಯ್ಡಾದಲ್ಲಿ ಬಂಧಿಸಲಾಗಿತ್ತು. ಸೆಕ್ಟರ್ 51ರ ಬ್ಯಾಂಕ್ವೆಟ್ ಹಾಲ್‌ನಲ್ಲಿ ಹಾವಿನ ವಿಷ ಲಭ್ಯವಿತ್ತು ಎಂದು ಪೊಲೀಸರು ತಿಳಿಸಿದ್ದರು. ಬಂಧಿತರನ್ನು ಆಗ್ನೇಯ ದೆಹಲಿಯ ಬದರ್‌ಪುರದ ಮೊಹರ್‌ಬಂದ್ ಗ್ರಾಮದ ನಿವಾಸಿಗಳಾದ ರಾಹುಲ್(32), ತೀತುನಾಥ್ (45), ಜೈಕರನ್ (50), ನಾರಾಯಣ್ (50) ಮತ್ತು ರವಿನಾಥ್ (45) ಎಂದು ಗುರುತಿಸಲಾಗಿತ್ತು.
ವಿದೇಶಿ ಪ್ರಜೆಗಳಿಗೂ ಆತಿಥ್ಯ ನೀಡಿದ ರೇವ್ ಪಾರ್ಟಿಗಳಲ್ಲಿ ಭಾಗವಹಿಸಿದ್ದ ಕೆಲವರು ಹಾವಿನ ವಿಷವನ್ನು ತೆಗೆದುಕೊಂಡಿದ್ದಾರೆ ಎಂದು ಆರೋಪಿಸಲಾಗಿತ್ತು. ಆರೋಪಿಯಿಂದ ಐದು ನಾಗರಹಾವು ಸೇರಿದಂತೆ ಒಂಬತ್ತು ಹಾವುಗಳು ಹಾಗೂ ಹಾವಿನ ವಿಷವನ್ನು ವಶಪಡಿಸಿಕೊಳ್ಳಲಾಗಿದ್ದು, ಹಾವುಗಳನ್ನು ಅರಣ್ಯ ಇಲಾಖೆಗೆ ಒಪ್ಪಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದರು. ಆದರೆ ಅಂದು ಎಲ್ವಿಶ್ ಯಾದವ್ ಅವರನ್ನು ಬಂಧಿಸಿರಲಿಲ್ಲ.
ವಿವಿಧ ಸ್ಥಳಗಳಿಂದ ಹಾವುಗಳನ್ನು ಹಿಡಿದು ಅವುಗಳ ವಿಷವನ್ನು ಹೊರತೆಗೆಯುತ್ತಿದ್ದರು, ಎಲ್ವಿಶ್ ಯಾದವ್ ಅವರಿಗೆ ಹೆಚ್ಚಿನ ಬೆಲೆಗೆ ಮಾರಾಟ ಮಾಡಿದ್ದರು. ಪಾರ್ಟಿಗಳಲ್ಲಿ ವಿಷವನ್ನು ಪೂರೈಸಲು ಅವರು ಭಾರಿ ಮೊತ್ತದ ಹಣವನ್ನು ಸಂಗ್ರಹಿಸುತ್ತಿದ್ದರು ಎಂದು ಪೊಲೀಸರು ಈ ಮುಂಚೆ ಹೇಳಿಕೆ ನೀಡಿದ್ದರು.
ಯೂಟ್ಯೂಬರ್ ಮೇಲೆ ಹಲ್ಲೆ ನಡೆಸಿದ್ದ ಎಲ್ವಿಶ್
ಎಲ್ವಿಶ್ ಯಾದವ್ ವಿವಾದಗಳು ಹೊಸದೇನಲ್ಲ. ಕೆಲವು ದಿನಗಳ ಹಿಂದೆಯಷ್ಟೇ ‘ಬಿಗ್ ಬಾಸ್ ಹಿಂದಿ ಒಟಿಟಿ 2’ (Bigg Boss OTT) ಮೂಲಕ ಖ್ಯಾತಿ ಪಡೆದಿದ್ದ ಎಲ್ವಿಶ್ ಯಾದವ್ ಯೂಟ್ಯೂಬರ್ ಸಾಗರ್ ಠಾಕೂರ್ ಮೇಲೆ ಹಲ್ಲೆ ಮಾಡಿದ್ದರು. ಯೂಟ್ಯೂಬರ್ ಸಾಗರ್ ಠಾಕೂರ್ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಗುರುಗ್ರಾಮ್ ಪೊಲೀಸರು ಬಿಗ್ ಬಾಸ್ ವಿಜೇತ ಮತ್ತು ಯೂಟ್ಯೂಬರ್ ಎಲ್ವಿಶ್ ಯಾದವ್ ವಿರುದ್ಧ ಪ್ರಕರಣ ದಾಖಲಿಸಿದ್ದರು.