ಸಿನಿಮಾ
Window Seat Trailer: ಭೂಮಿನೂ ರೌಂಡು, ಕಾಲಾನೂ ರೌಂಡು, ಎಲ್ಲೇ ಸುತ್ತಿದ್ರೂ ಇನ್ನೆಲ್ಲಿಗೆ ಬರ್ಬೇಕು?!
ನಿರೂಪಕಿ ಶೀತಲ್ ಶೆಟ್ಟಿಯವರ ಚೊಚ್ಚಲ ಸಿನಿಮಾ ವಿಂಡೋ ಸೀಟ್‌ನ ಟ್ರೇಲರ್ ಬಿಡುಗಡೆಯಾಗಿದೆ. ಟ್ರೇಲರ್ ಹೇಗಿದೆ, ಇದನ್ನು ವೀಕ್ಷಿಸಿದವರು ಏನೆನ್ನುತ್ತಿದ್ದಾರೆ ಎಂಬ ಮಾಹಿತಿ ಇಲ್ಲಿದೆ
ಬೆಂಗಳೂರು : ಬಿಗ್ ಬಾಸ್ ಖ್ಯಾತಿಯ ಶೀತಲ್ ಶೆಟ್ಟಿ ನಿರ್ದೇಶನದ ಸಿನಿಮಾ ʼವಿಂಡೋ ಸೀಟ್ʼನ ಟ್ರೇಲರ್ ಬಿಡುಗಡೆಯಾಗಿದೆ. ಆನಂದ್ ಆಡಿಯೋ ಯೂಟ್ಯೂಬ್ ಚಾನಲ್‌ನಲ್ಲಿ ಬಿಡುಗಡೆ ಮಾಡಲಾಗಿದೆ.
ನಿರೂಪಕಿಯಾಗಿ ಹೆಸರು ಮಾಡಿರುವ ಶೀತಲ್ ಶೆಟ್ಟಿಯವರ ಚೊಚ್ಚಲ ಚಿತ್ರ ಇದಾಗಿದ್ದು, ಈ ಟ್ರೇಲಗ್‌ಗೆ ಅವರೇ ಹಿನ್ನಲೆ ಧ್ವನಿ ನೀಡಿರುವುದು ವಿಶೇಷವಾಗಿದೆ. ಟ್ರೇಲರ್‌ನ ಬ್ಯಾಕ್‌ಗ್ರೌಂಡ್ ಮ್ಯೂಸಿಕ್ ಪಾಶ್ಚಿಮಾತ್ಯ ಸಂಗೀತ ಶೈಲಿಯಲ್ಲಿದ್ದು, ಇದು ಸ್ಯಾಂಡಲ್‌ವುಡ್‌ನ ಹೊಸ ಪ್ರಯತ್ನ ಎಂದು ಈ ಟ್ರೇಲರ್ ವೀಕ್ಷಿಸಿದವರು ಕಾಮೆಂಟ್ ಬಾಕ್ಸ್‌ನಲ್ಲಿ ಅಭಿಪ್ರಾಯ ಬರೆದಿದ್ದಾರೆ.
ಈ ಟ್ರೇಲರ್ ಮಳೆಯ ದೃಶ್ಯದೊಂದಿಗೆ ಆರಂಭವಾಗಲಿದ್ದು, ಅಲ್ಲಲ್ಲಿ ಕೇಳಿ ಬರುವ ಸಂಭಾಷಣೆಗಳು ಸಿನಿಮಾದ ಬಗ್ಗೆ ಕುತೂಹಲ ಮೂಡಿಸುತ್ತವೆ. ನಿರೂಪ್ ಭಂಡಾರಿ ಈ ಸಿನಿಮಾದ ನಾಯಕನಾಗಿದ್ದು, ಟ್ರೇಲರ್‌ನಲ್ಲಿ ಕಾಣಿಸಿಕೊಳ್ಳುವ ಅವರು ಸಿನಿಮಾದ ಬಗ್ಗೆ ಕುತೂಹಲ ಹೆಚ್ಚಿಸುವುದರಲ್ಲಿ ಯಶಸ್ವಿಯಾಗಿದ್ದಾರೆ.
ಇದನ್ನೂ ಓದಿ | Vikrant Rona Movie: ‘ರಾ ರಾ ರಕ್ಕಮ್ಮ’ ಸಾಂಗ್ ರಿಲೀಸ್
ಕುತೂಹಲಕಾರಿ ಕತೆಯನ್ನು ಹೊಂದಿರುವ ಈ ಸಿನಿಮಾದಲ್ಲಿ ನಾಯಕ ನಿರೂಪ್ ಭಂಡಾರಿ ಮಾತ್ರವಲ್ಲದೆ, ಸಂಜನಾ ಆನಂದ್, ಬಡವ ರಾಸ್ಕಲ್ ಖ್ಯಾತಿಯ ಅಮೃತ ಮುಖ್ಯಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ. ಸೂರಜ್, ರವಿಶಂಕರ್, ಮಧುಸೂಧನ್ ರಾವ್ ಸೇರಿದಂತೆ ಹಲವು ಕಲಾವಿದರ ದಂಡು ಚಿತ್ರದಲ್ಲಿದೆ. ʼಕೆಎಸ್ ಕೆ ಶೋ ರೀಲ್ʼ ಬ್ಯಾನರ್ ನಡಿ ಮೂಡಿಬರುತ್ತಿರುವ ಈ ಚಿತ್ರವನ್ನು ಜಾಕ್ ಮಂಜಿ ನಿರ್ಮಿಸಿದ್ದಾರೆ.
ಅರ್ಜುನ್ ಜನ್ಯ ಸಂಗೀತ ನಿರ್ದೇಶನ ಮಾಡಿದ್ದು, ವೀರೇಶ್ ಶಿವಮೂರ್ತಿ ಅವರ ಸಂಭಾಷಣೆ ಚಿತ್ರಕ್ಕಿದೆ. ಜುಲೈ 1 ರಂದು ಚಿತ್ರ ರಿಲೀಸ್ ಮಾಡುವುದಾಗಿ ಚಿತ್ರತಂಡ ಹೇಳಿಕೊಂಡಿದೆ. ಈ ಹಿಂದೆ ಚಿತ್ರತಂಡ ಲೆರಿಕಲ್ ವಿಡಿಯೋ ರಿಲೀಸ್ ಮಾಡಿದ್ದು, ಇದಕ್ಕೆ ವೀಕ್ಷಕರು ವ್ಯಾಪಕ ಮೆಚ್ಚುಗೆ ವ್ಯಕ್ತಪಡಿಸಿದ್ದರು.
ನಿರೂಪ್ ಮತ್ತೆ ಕಮ್‌ಬ್ಯಾಕ್
ರಂಗಿತರಂಗ, ರಾಜರತ್ನ, ಅಮರ್ ಹಾಗೂ ಆದಿ ಲಕ್ಷ್ಮೀ ಪುರಾಣ ಸೇರಿದಂತೆ ಹಲವು ಚಿತ್ರಗಳಲ್ಲಿ ನಟಿಸಿದ್ದ ನಿರೂಪ್ ಈ ಚಿತ್ರದ ಮೂಲಕ ಬಹಳ ದಿನಗಳ ನಂತರ ಮತ್ತೆ ತೆರೆಯ ಮೇಲೆ ಕಾಣಿಸಿಕೊಳ್ಳಲಿದ್ದಾರೆ. ರಂಗೀ ತರಂಗ ಅವರಿಗೆ ಬಹಳ ಹೆಸರು ತಂದುಕೊಟ್ಟಿತ್ತು. ನಿರೂಪ್ ಸದ್ಯ ವಿಕ್ರಾಂತ್ ರೋಣಾ ಎಂಬ ಮತ್ತೊಂದು ಚಿತ್ರದಲ್ಲಿಯೂ ಅಭಿನಯಿಸುತ್ತಿದ್ದಾರೆ.
ವಿಕ್ರಾಂತ್ ರೋಣ ಚಿತ್ರತಂಡ ಇತ್ತೀಚೆಗೆ ನಿರೂಪ್ ಹುಟ್ಟುಹಬ್ಬದ ಸಂದರ್ಭದಲ್ಲಿ ಚಿತ್ರದ ಪೋಸ್ಟರ್ ಬಿಡುಗಡೆ ಮಾಡಿ, ಪಾತ್ರದ ಹೆಸರು ರಿವೀಲ್ ಮಾಡಿತ್ತು. ಸಂಜಯ್ ಗಾಂಭೀರ್ ಎಂಬುದು ಪಾತ್ರದ ಹೆಸರಾಗಿದ್ದು, ನಿರೂಪ್ ಈ ಚಿತ್ರದಲ್ಲಿ ಬೇಟೆಗಾರನಾಗಿರುವ ಸುಳಿವು ಸಿಕ್ಕಿತ್ತು.
ಇದನ್ನೂ ಓದಿ | ಕಿಚ್ಚ ಸುದೀಪ್ V/S ಅಜಯ್ ದೇವಗನ್: ʼThank Godʼ ಸಿನಿಮಾ ರಿಲೀಸ್ ಡೇಟ್ ಮುಂದಕ್ಕೆ, ವಿಕ್ರಾಂತ್ ರೋಣ ಫಿಕ್ಸ್
South Cinema
Kannada New Movie: ʻಗರಡಿʼ ಟೈಟಲ್ ಟ್ರ್ಯಾಕ್‌ಗೆ ಅಭಿಮಾನಿಗಳು ಫಿದಾ; ನವೆಂಬರ್ 10ರಂದು ತೆರೆಗೆ!
Kannada New Movie: ಹರಿಕೃಷ್ಣ ಅವರ ಜತೆಗೆ ಸಾಕಷ್ಟು ಪ್ರತಿಭಾವಂತ ಗಾಯಕರು ಸಹ ಈ ಹಾಡಿಗೆ ಧ್ವನಿಯಾಗಿದ್ದಾರೆ. ಇತ್ತೀಚೆಗೆ ನಡೆದ ಈ ಹಾಡಿನ ಬಿಡುಗಡೆ ಸಮಾರಂಭದಲ್ಲಿ ಚಿತ್ರತಂಡದ ಸದಸ್ಯರು ಚಿತ್ರದ ಬಗ್ಗೆ ಹೆಚ್ಚಿನ ಮಾಹಿತಿ ನೀಡಿದರು.
ಬೆಂಗಳೂರು: ವನಜಾ ಬಿ.ಸಿ ಪಾಟೀಲ್ ನಿರ್ಮಾಣದ ಹಾಗೂ ಯೋಗರಾಜ್ ಭಟ್ ನಿರ್ದೇಶನದ ‘ಗರಡಿ’ (Garadi Movie) ಚಿತ್ರದ (Kannada New Movie) ಟೈಟಲ್ ಟ್ರ್ಯಾಕ್ ಇತ್ತೀಚೆಗೆ ‘ಸರೆಗಮ ಕನ್ನಡ’ ಯೂಟ್ಯೂಬ್ ಚಾನಲ್ ಮೂಲಕ ಬಿಡುಗಡೆಯಾಗಿದೆ. ಯೋಗರಾಜ್ ಭಟ್ ಅವರು ಬರೆದಿರುವ ‘ಲೋಕಾನೆ ಗರಡಿ.. ಬಾಳೇ ಅಖಾಡ” ಎಂಬ ಅದ್ಭುತ ಹಾಗೂ ಅರ್ಥಗರ್ಭಿತ ಗೀತೆಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಚಿತ್ರಕ್ಕೆ ಸಂಗೀತ ಸಂಯೋಜಿಸಿರುವ ವಿ.ಹರಿಕೃಷ್ಣ ಅವರೇ ಮುಖ್ಯ ಗಾಯಕರಾಗಿ ಹಾಡನ್ನು ಹಾಡಿದ್ದಾರೆ. ಹರಿಕೃಷ್ಣ ಅವರ ಜತೆಗೆ ಸಾಕಷ್ಟು ಪ್ರತಿಭಾವಂತ ಗಾಯಕರು ಸಹ ಈ ಹಾಡಿಗೆ ಧ್ವನಿಯಾಗಿದ್ದಾರೆ. ಇತ್ತೀಚೆಗೆ ನಡೆದ ಈ ಹಾಡಿನ ಬಿಡುಗಡೆ ಸಮಾರಂಭದಲ್ಲಿ ಚಿತ್ರತಂಡದ ಸದಸ್ಯರು ಚಿತ್ರದ ಬಗ್ಗೆ ಹೆಚ್ಚಿನ ಮಾಹಿತಿ ನೀಡಿದರು.
“ಗರಡಿ” ಎಂದರೆ ಒಂದು ಊರನ್ನು ಕಾಯುವ ಪೊಲೀಸ್ ಠಾಣೆ ಇದ್ದ ಹಾಗೆ ಎಂದು ಮಾತು ಆರಂಭಿಸಿದ ನಿರ್ದೇಶಕ ಯೋಗರಾಜ್ ಭಟ್, ʻʻಹಿಂದೆ ಒಂದು ಊರಿನ ರಕ್ಷಣೆಗೆ “ಗರಡಿ” ಬಹು ಮುಖ್ಯವಾಗಿತ್ತು. ಊರಿನವರು ಸಹ ಗರಡಿ ಮನೆಯ ಕುಸ್ತಿಪಟುಗಳನ್ನು ತಮ್ಮ ಮನೆಯವರಂತೆಯೇ ನೋಡಿಕೊಳ್ಳುತ್ತಿದ್ದರು. ಅಂತಹ “ಗರಡಿ” ಸುತ್ತ ನಮ್ಮ ಚಿತ್ರದ ಕಥೆ ಸಾಗುತ್ತದೆ. ಗರಡಿ ಮನೆಯ ಯಜಮಾನನಾಗಿ ಬಿ.ಸಿ.ಪಾಟೀಲ್ ಅಭಿನಯಿಸಿದ್ದಾರೆ. ಅವರ ಶಿಷ್ಯನಾಗಿ ಸೂರ್ಯ ಅಭಿನಯಿಸಿದ್ದಾರೆ. ಇದು ಒಂದು ರೀತಿ ದ್ರೋಣಾಚಾರ್ಯ ಹಾಗೂ ಏಕಲವ್ಯನ ಕಥೆ ಎನ್ನಬಹುದು. ಇನ್ನು ಇಂದು ಬಿಡುಗಡೆಯಾಗಿರುವ ಹಾಡನ್ನು ಹರಿಕೃಷ್ಣ ಅದ್ಭುತವಾಗಿ ಸಂಯೋಜಿಸಿ ಹಾಡಿದ್ದಾರೆ. ಚಿತ್ರ ನವೆಂಬರ್ 10ರಂದು ಬಿಡುಗಡೆಯಾಗುತ್ತಿದೆ. ಎಲ್ಲರೂ ನೋಡಿ ಹಾರೈಸಿʼʼ ಎಂದರು.
ಇದನ್ನೂ ಓದಿ: Kannada New Movie: `ಸೋಮು ಸೌಂಡ್ ಇಂಜಿನಿಯರ್’ ಸಿನಿಮಾದ ಫಸ್ಟ್ ಸಾಂಗ್ ಔಟ್!
“ಗರಡಿ” ಚಿತ್ರ ಆರಂಭವಾಗಿ ಈ ನವೆಂಬರ್ 14ಕ್ಕೆ ಎರಡು ವರ್ಷಗಳಾಗುತ್ತದೆ. ನನ್ನ ಹುಟ್ಟುಹಬ್ಬಕ್ಕೆ ಈ ಚಿತ್ರ ಆರಂಭವಾಗಿತ್ತು. ದರ್ಶನ್ ಅವರು ಶೀರ್ಷಿಕೆ ಅನಾವರಣ ಮಾಡಿದ್ದರು. ಈ ಬಾರಿಯ ಹುಟ್ಟುಹಬ್ಬದ ಸಂದರ್ಭದಲ್ಲಿ (ನವೆಂಬರ್ 10) ಚಿತ್ರ ಬಿಡುಗಡೆಯಾಗುತ್ತದೆ. ಯೋಗರಾಜ್ ಭಟ್ ಅವರು ಬಹಳ ಶ್ರಮವಹಿಸಿ ಚಿತ್ರವನ್ನು ಉತ್ತಮವಾಗಿ ನಿರ್ದೇಶನ ಮಾಡಿದ್ದಾರೆ. ನಾನು ಈಗಾಗಲೇ ಚಿತ್ರವನ್ನು ಸಾಕಷ್ಟು ಸಲ ನೋಡಿ ಖುಷಿ ಪಟ್ಟಿದ್ದೇನೆ. ನಿಮಗೂ ಚಿತ್ರ ಹಿಡಿಸಲಿದೆʼʼ ಎಂದರು ಹಿರಿಯ ನಟ ಬಿ.ಸಿ.ಪಾಟೀಲ್.
ʻʻಈ ಚಿತ್ರದಲ್ಲೂ ನನ್ನ ಹೆಸರು ಸೂರ್ಯ ಅಂತ. ಎಲ್ಲರೂ “ಗರಡಿ ಸೂರಿ” ಅಂತ ಕರೆಯುತ್ತಿರುತ್ತಾರೆ. ಈ ಚಿತ್ರದಲ್ಲಿ ನನಗೆ ಅವಕಾಶ ಸಿಗಲು ದರ್ಶನ್ ಅವರು ಕಾರಣ. ಅವರು ಸಹ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಇನ್ನು ಬಿಡುಗಡೆಯಾಗಿರುವ ಟೈಟಲ್ ಸಾಂಗ್‌ನಲ್ಲಿ ನಾನು ಸಖತ್ ಡ್ಯಾನ್ಸ್ ಮಾಡಿದ್ದೇನೆ. ಯೋಗರಾಜ್ ಭಟ್ ಅವರ ಸಾಹಿತ್ಯ ಹಾಗೂ ಹರಿಕೃಷ್ಣ ಅವರ ಸಂಗೀತದಲ್ಲಿ ಹಾಡು ಅದ್ಭುತವಾಗಿ ಮೂಡಿಬಂದಿದೆʼʼ ಎನ್ನುತ್ತಾರೆ ನಾಯಕ ಸೂರ್ಯ.
ನಾಯಕಿ ಸೋನಲ್ ಮೊಂಥೆರೋ, ಚಿತ್ರದಲ್ಲಿ ನಟಿಸಿರುವ ಸುಜಯ್, ಧರ್ಮಣ್ಣ, ರಾಘು, ಛಾಯಾಗ್ರಾಹಕ ನಿರಂಜನ್ ಬಾಬು, ನೃತ್ಯ ನಿರ್ದೇಶಕ ಧನಂಜಯ ಚಿತ್ರದ ಕುರಿತು ಮಾತನಾಡಿದರು. ನಿರ್ಮಾಪಕಿ ವನಜಾ ಪಾಟೀಲ್ ಎಲ್ಲರಿಗೂ ಧನ್ಯವಾದ ತಿಳಿಸಿದರು. ಕಾರ್ಯಕಾರಿ ನಿರ್ಮಾಪಕಿ ಸೃಷ್ಟಿ ಪಾಟೀಲ್ “ಗರಡಿ” ಚಿತ್ರ ಸಾಗಿ ಬಂದ ಬಗ್ಗೆ ವಿವರಣೆ ನೀಡಿದರು.
South Cinema
Rakhi Sawant: ರಾಖಿ ಸಾವಂತ್ ಬಯೋಪಿಕ್‌ಗೆ ರಿಷಬ್ ಶೆಟ್ಟಿ ನಿರ್ದೇಶನ; ನಟಿಯ ಹೊಸ ಆಸೆ ಪೂರೈಸ್ತಾರಾ ಶೆಟ್ರು?
Rakhi Sawant: ತನ್ನ ಜೀವನ ಚರಿತ್ರೆಯನ್ನು ಕಾಂತಾರ ನಟ, ನಿರ್ದೇಶಕ ರಿಷಬ್ ಶೆಟ್ಟಿ (Rishab Shetty) ನಿರ್ದೇಶನ ಮಾಡಬೇಕು ಎಂಬ ಆಸೆಯನ್ನು ವ್ಯಕ್ತಪಡಿಸಿದ್ದಾರೆ ರಾಖಿ ಸಾವಂತ್.
ಬೆಂಗಳೂರು: ರಾಖಿ ಸಾವಂತ್ (Rakhi Sawant) ಆಗಾಗ ವೈಯಕ್ತಿಕ ವಿಚಾರಗಳಲ್ಲಿ ಸುದ್ದಿಯಾಗುತ್ತಲೇ ಇರುತ್ತಾರೆ. ಹೆಚ್ಚಾಗಿ ಮಾಜಿ ಪತಿ ಆದಿಲ್ ಖಾನ್ ದುರಾನಿ (Adil Khan Durrani ) ಕುರಿತ ವಿಚಾರಗಳಿಗೆ ಸೌಂಡ್ ಮಾಡುತ್ತಲೇ ಇರುತ್ತಾರೆ. ಆದರೀಗ ನಟಿ ತಮ್ಮ ಬಯೋಪಿಕ್ ಬಗ್ಗೆ ಆಸೆಯನ್ನ ವ್ಯಕ್ತಪಡಿಸಿದ್ದಾರೆ. ತನ್ನ ಜೀವನ ಚರಿತ್ರೆಯನ್ನು ಕಾಂತಾರ ನಟ, ನಿರ್ದೇಶಕ ರಿಷಬ್ ಶೆಟ್ಟಿ (Rishab Shetty) ನಿರ್ದೇಶನ ಮಾಡಬೇಕು ಎಂಬ ಆಸೆಯನ್ನು ವ್ಯಕ್ತಪಡಿಸಿದ್ದಾರೆ ರಾಖಿ ಸಾವಂತ್.
ಕೆಲವು ದಿನಗಳ ಹಿಂದೆ ರಾಖಿ ಸಾವಂತ್ ಅವರ ಮಾಜಿ ಪತಿ ಆದಿಲ್ ಖಾನ್ ಮನೆ ಮುಂದೆ ಬುಲ್ಡೋಜರ್ ತಂದು ಹೈಡ್ರಾಮಾ ಮಾಡಿದ್ದರು. ಮದುವೆ ಬಳಿಕ ತಾವು ಇಸ್ಲಾಂ ಧರ್ಮಕ್ಕೆ ಮತಾಂತರ ಆಗಿರುವುದಾಗಿ ಈಗಾಗಲೇ ರಾಖಿ ಸಾವಂತ್ ಹೇಳಿದ್ದಾರೆ. ಅವರು ಫಾತಿಮಾ ಎಂದು ಹೆಸರು ಬದಲಾಯಿಸಿಕೊಂಡಿದ್ದಾರೆ. ಮೆಕ್ಕಾ ಮದೀನಾಗೂ ಅವರು ಹೋಗಿ ಬಂದಿದ್ದಾರೆ. ಆಗಾಗ ತಮ್ಮ ಹೊಸ ಅವತಾರಗಳಿಂದ ಮಾಧ್ಯಮದ ಮುಂದೆ ಅದೆಷ್ಟೋ ಬಾರಿ ಅತ್ತಿದ್ದೂ ಇದೆ. ಇದೀಗ ರಾಖಿ ಸಾವಂತ್ ಜೀವನ ಕಥೆ ಸಿನಿಮಾವಾಗುತ್ತಿದೆಯಂತೆ. ತಮ್ಮ ಪಾತ್ರವನ್ನು ವಿದ್ಯಾ ಬಾಲನ್ ಮಾಡಿದರೆ ಉತ್ತಮ ಎಂದು ರಾಖಿ ಸಾವಂತ್ ಅಭಿಪ್ರಾಯಪಟ್ಟಿದ್ದಾರೆ. ಅಷ್ಟೇ ಅಲ್ಲದೇ ಕಾಂತಾರ ಖ್ಯಾತಿಯ ರಿಷಬ್ ಶೆಟ್ಟಿ ನಿರ್ದೇಶನ ಮಾಡಬೇಕು ಎಂಬ ಆಸೆಯನ್ನು ವ್ಯಕ್ತಪಡಿಸಿದ್ದಾರೆ. ನನಗೆ ಕಾಂತಾರ ಚಿತ್ರದ ನಿರ್ದೇಶಕ ರಿಷಬ್ ಶೆಟ್ಟಿ ಹೆಚ್ಚು ಇಷ್ಟ’ ಎಂದು ರಾಖಿ ಸಾವಂತ್ ಹೇಳಿದ್ದಾರೆ. ಮೈಸೂರಿನಲ್ಲಿ ಅವರು ಸುದ್ದಿಗೋಷ್ಠಿ ನಡೆಸಿ ಈ ವಿಚಾರ ಹೇಳಿದ್ದಾರೆ.
ಇದನ್ನೂ ಓದಿ: Rakhi Sawant: ನನ್ನ ಸಾವಿಗೆ ರಾಖಿ ಸಾವಂತ್ ಕಾರಣ ಎಂದ ಆದಿಲ್; ಮಾಜಿ ಪತಿಯಿಂದ ಮತ್ತೊಂದು ದೂರು!
ಆದಿಲ್ ಖಾನ್ ದುರಾನಿ ಅವರು ರಾಖಿ ಸಾವಂತ್ ವಿರುದ್ಧ ಹಲವು ಆರೋಪಗಳಿಗೆ ತೆರೆ ಎಳೆದಿದ್ದಾರೆ. ತನ್ನ ಮೇಲೆ ದೈಹಿಕವಾಗಿ ಮತ್ತು ಮಾನಸಿಕವಾಗಿ ಹಲ್ಲೆ ನಡೆಸಿದ್ದಾರೆ. ರಿತೇಶ್ ಜತೆ ಮದುವೆಯಾಗಿರುವಾಗಲೇ ರಾಖಿ ತನ್ನನ್ನು ಮದುವೆಯಾಗಿದ್ದಾಳೆ ಎಂದು ಆದಿಲ್ ಆರೋಪಿಸಿದ್ದಾರೆ. ಅಷ್ಟೇ ಅಲ್ಲದೇ ಮದುವೆಯಾದ ಮೇಲೂ ಆಕೆ ಮೊದಲ ಪತಿ ರಿತೇಶ್ (Ritesh) ಜತೆ ಸಂಬಂಧವನ್ನೂ ಇಟ್ಟುಕೊಂಡಿದ್ದಳು ಎಂದಿದ್ದರು. ನನ್ನದಲ್ಲದ ತಪ್ಪಿಗೆ ನಾನು ಜೈಲು ಅನುಭವಿಸುವಂತಾಯಿತು. ರಾಖಿ ನನ್ನನ್ನು ಟ್ರ್ಯಾಪ್ ಮಾಡಿದಳು ಎಂದೆಲ್ಲಾ ಹೇಳಿದ್ದರು. ಇದಾದ ಬಳಿಕ ರಾಖಿ ಸಾವಂತ್ ಪತ್ರಿಕಾಗೋಷ್ಠಿ ಕರೆದು, ಆದಿಲ್ ವಿರುದ್ಧ ಕಿಡಿ ಕಾರಿ ಪತಿ ಹೇಗೆಲ್ಲ ಮೋಸ ಮಾಡಿದರು ಎಂದು ತಿಳಿಸಿದ್ದರು.
South Cinema
Nirup Bhandari: ಎಡಗೈಯೇ ಅಪಘಾತಕ್ಕೆ ಕಾರಣ ಸಿನಿಮಾದ ವಿಶೇಷ ಪಾತ್ರದಲ್ಲಿ ನಿರೂಪ್ ಭಂಡಾರಿ!
Nirup Bhandari: ದಿಗಂತ್ ಸಿನಿಮಾದಲ್ಲಿ ನಿರೂಪ್ ಭಂಡಾರಿ ಕಾಣಿಸಿಕೊಂಡಿರುವುದು ವಿಶೇಷ. ಈ ಸಿನಿಮಾದಲ್ಲಿ ನಿರೂಪ್ ಅತಿಥಿ ಪಾತ್ರದಲ್ಲಿ ಮಿಂಚಿದ್ದಾರೆ.
ಬೆಂಗಳೂರು: ದೂದ್ ಪೇಡ ದಿಗಂತ್ (Actor diganth) ನಟನೆಯ ‘ಎಡಗೈಯೇ ಅಪಘಾತಕ್ಕೆ ಕಾರಣ‘ (edagaiye apaghatakke karana) ಸಿನಿಮಾ ವಿಭಿನ್ನವಾದ ಕಾನ್ಸೆಪ್ಟ್ ಮೂಲಕ ಈಗಾಗಲೇ ಅಭಿಮಾನಿಗಳ ಗಮನ ಸೆಳೆಯುತ್ತಿದೆ. ಇತ್ತೀಚೆಗಷ್ಟೆ ಆಗಸ್ಟ್ 13ರಂದು ‘ವಿಶ್ವ ಎಡಗೈ ದಿನ’ ಎಗಡೈ ಬಳಸುವವರಿಗೆ ಅನುಕೂಲ ಆಗುವ ರೀತಿಯಲ್ಲಿ ಹೊಸ ಬಗೆಯ ಹೆಲ್ಮೆಟ್ ಕೂಡ ಲಾಂಚ್ ಮಾಡಲಾಗಿತ್ತು. ವಿನೂತನ ಸಬ್ಜೆಕ್ಟ್ ಮೂಲಕ ಪ್ರೇಕ್ಷಕರನ್ನು ತನ್ನತ್ತ ಸೆಳೆಯುತ್ತಿರುವ ‘ಎಡಗೈ’ ತಂಡಕ್ಕೆ ಮತ್ತೋರ್ವ ಖ್ಯಾತ ನಟ ಎಂಟ್ರಿ ಕೊಟ್ಟಿದ್ದಾರೆ. ಅದು ಮತ್ಯಾರು ಅಲ್ಲ ‘ರಂಗಿತರಂಗ’ ಖ್ಯಾತಿಯ ನಟ ನಿರೂಪ್ ಭಂಡಾರಿ (Nirup Bhandari). ಮೊದಲ ಬಾರಿಗೆ ನಿರೂಪ್ ಮತ್ತು ದಿಗಂತ್ ಒಂದೇ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಸ್ಟಾರ್ ಕಲಾವಿದರು ಒಟ್ಟಿಗೆ ಸಿನಿಮಾ ಮಾಡುವುದು ತೀರ ಅಪರೂಪವಾಗಿದೆ. ಮಲ್ಟಿಸ್ಟಾರರ್ ಸಿನಿಮಾಗಳಿಗೆ ಖ್ಯಾತ ಕಲಾವಿದರನ್ನು ಸೇರಿಸಿ ಸಿನಿಮಾ ಮಾಡುವುದು ನಿರ್ಮಾಪಕರಿಗೂ ಸಹ ದೊಡ್ಡ ಸವಾಲಾಗಿದೆ. ಹೀಗಿರುವಾಗ ದಿಗಂತ್ ಸಿನಿಮಾದಲ್ಲಿ ನಿರೂಪ್ ಭಂಡಾರಿ ಕಾಣಿಸಿಕೊಂಡಿರುವುದು ವಿಶೇಷ. ಈ ಸಿನಿಮಾದಲ್ಲಿ ನಿರೂಪ್ ಅತಿಥಿ ಪಾತ್ರದಲ್ಲಿ ಮಿಂಚಿದ್ದಾರೆ. ಅಷ್ಟಕ್ಕೂ ಹೀರೊ ಆಗಿ ಅಬ್ಬರಿಸುತ್ತಿದ್ದ ನಿರೂಪ್ ಭಂಡಾರಿ, ದಿಗಂತ್ ಚಿತ್ರದಲ್ಲಿ ವಿಶೇಷ ಪಾತ್ರ ಮಾಡಲು ಕಾರಣ ಸಿನಿಮಾ ಕಥೆ ಮತ್ತು ಕಾನ್ಸೆಪ್ಟ್.
ಕಮರ್ಷಿಯಲ್ ಸಿನಿಮಾಗಳ ಮಧ್ಯೆ ಇಂತದೊಂದು ವಿಭಿನ್ನ ರೀತಿಯ ಕಾನ್ಸೆಪ್ಟ್ ಇರುವ ಚಿತ್ರದ ಕಥೆ ಕೇಳಿ ನಿರೂಪ್ ಇಂಪ್ರೆಸ್ ಆಗಿದ್ದಾರೆ. ‘ಎಡಗೈ ಅಪಘಾತಕ್ಕೆ ಕಾರಣ’ ಚಿತ್ರಕ್ಕೆ ಸಮರ್ಥ್ ಬಿ. ಕಡಕೊಳ್ ನಿರ್ದೇಶನ ಮಾಡುತ್ತಿದ್ದಾರೆ. ಇದು ಅವರ ಮೊದಲ ನಿರ್ದೇಶನದ ಚಿತ್ರ. ಅಂದಹಾಗೆ ಶೀರ್ಷಿಕೆಯೇ ಹೇಳುವಂತೆ ಇದು ಎಡಗೈ ಬಳಸುವವರ ಸಮಸ್ಯೆಗಳ ಸುತ್ತ ಸುತ್ತುವ ಸಿನಿಮಾವಾಗಿದೆ.
ಇದನ್ನೂ ಓದಿ: Edagaiye Apaghatakke Karana: ಎಡಗೈ ಬಳಕೆದಾರರಿಗೆಂದೇ ವಿಶೇಷವಾದ ಹೆಲ್ಮೆಟ್ ಲಾಂಚ್!
ʻಹೈಫನ್ ಪಿಕ್ಚರ್ಸ್ʼ ಬ್ಯಾನರ್’ಅಡಿಯಲ್ಲಿ ‘ಅಂಬಿ ನಿಂಗ್ ವಯಸ್ಸಾಯ್ತೋ’ ಸಿನಿಮಾ ಖ್ಯಾತಿಯ ನಿರ್ದೇಶಕ ಗುರುದತ್ ಗಾಣಿಗ ಮತ್ತು ನಿರ್ದೇಶಕ ಸಮರ್ಥ್ ಬಿ. ಕಡಕೊಳ್ ಜತೆಯಾಗಿ ಈ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದಾರೆ. ಈ ಸಿನಿಮಾದಲ್ಲಿ ದಿಗಂತ್ ಮಂಚಾಲೆ ಅವರಿಗೆ ಜೋಡಿಯಾಗಿ ನಟಿ ಧನು ಹರ್ಷ ಅಭಿನಯಿಸಿದ್ದಾರೆ. ಇನ್ನು ಈ ಸಿನಿಮಾದಲ್ಲಿ ಖ್ಯಾತ ನಟಿಯರಾದ ರಾಧಿಕಾ ನಾರಾಯಣ್ ಮತ್ತು ನಿಧಿ ಸುಬ್ಬಯ್ಯ ಕೂಡ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.
ಸಿನಿಮಾ
Lady Super Star: ʼಜವಾನ್ʼ ನಯನತಾರಾ ಶ್ರೀಮಂತ ನಟಿ! ಆಸ್ತಿ ಮೌಲ್ಯ ಎಷ್ಟು?
Lady super star: ನಯನತಾರಾ ಸದ್ಯ ‘ಜವಾನ್’ ಚಿತ್ರದ ಯಶಸ್ಸಿನಲ್ಲಿ ತೇಲುತ್ತಿದ್ದಾರೆ. ದಕ್ಷಿಣ ಭಾರತದ ಲೇಡಿ ಸೂಪರ್ ಸ್ಟಾರ್ (lady super star) ಆಗಿದ್ದ ಅವರು ಇದೀಗ ಬಾಲಿವುಡ್‌ನಲ್ಲೂ ಮಿಂಚುತ್ತಿದ್ದಾರೆ. ಅವರ ಆಸ್ತಿಯ ಒಟ್ಟು ಮೌಲ್ಯ 200 ಕೋಟಿ ರೂ. (200 crore) ಎಂದು ಅಂದಾಜಿಸಲಾಗಿದೆ.
ಚೆನ್ನೈ: ದಕ್ಷಿಣ ಭಾರತದ ಲೇಡಿ ಸೂಪರ್ ಸ್ಟಾರ್ (Lady super star) ನಯನತಾರಾ (Nayanthara) ಸದ್ಯ ‘ಜವಾನ್’ (Jawan) ಹಿಂದಿ ಚಿತ್ರದ ಗೆಲುವಿನ ಗುಂಗಿನಲ್ಲಿದ್ದಾರೆ. ಮೊದಲ ಬಾರಿಗೆ ಬಾಲಿವುಡ್‌ಗೆ (bollywood) ಕಾಲಿಟ್ಟ ಅವರು ಜಾಕ್‌ಪಟ್ ಹೊಡೆದಿದ್ದಾರೆ. ಹಿಂದಿಯ ಮೊದಲ ಚಿತ್ರದಲ್ಲೇ ಸೂಪರ್ ಸ್ಟಾರ್ ಶಾರುಖ್ ಖಾನ್ (Shah Rukh Khan) ಜತೆ ತೆರೆ ಹಂಚಿಕೊಳ್ಳುವ ಅವಕಾಶ ಪಡೆದಿದ್ದ ಅವರು ಅದನ್ನು ಉತ್ತಮವಾಗಿ ಬಳಸಿಕೊಂಡು ಪ್ರೇಕ್ಷಕರ ಮನಸ್ಸು ಗೆದ್ದಿದ್ದಾರೆ. ಸದ್ಯ ನಯನತಾರಾ ವರ್ಚಸ್ಸು ದೇಶಾದ್ಯಂತ ಹರಡಿದೆ.
ದುಬಾರಿ ಸಂಭಾವನೆ ಪಡೆಯುವ ನಾಯಕಿ
ನಯನತಾರಾ ಚಿತ್ರರಂಗಕ್ಕೆ ಕಾಲಿಟ್ಟು 20 ವರ್ಷಗಳೇ ಕಳೆದಿವೆ. ಆದರೆ ಇಂದಿಗೂ ಹಿಂದಿನಷ್ಟೇ ಬೇಡಿಕೆ ಉಳಿಸಿಕೊಂಡಿರುವುದು ಅವರ ವಿಶೇಷತೆ. ದುಬಾರಿ ಅಂಭಾವನೆ ಪಡೆಯುವ ದಕ್ಷಿಣ ಚಿತ್ರರಂಗದ ನಾಯಕಿಯರಲ್ಲಿ ಒಬ್ಬರಾದ ನಯನತಾರಾ ಅವರ ಆಸ್ತಿಯ ಒಟ್ಟು ಮೌಲ್ಯ ಸುಮಾರು 200 ಕೋಟಿ ರೂ. ಮೂಲಗಳ ಪ್ರಕಾರ ಅವರು ಕೋಟ್ಯಾಂತರ ರೂ. ಬೆಲೆಬಾಳುವ 4 ಮನೆಗಳನ್ನು ಹೊಂದಿದ್ದಾರೆ. ಮುಂಬೈ ಮತ್ತು ತಮಿಳುನಾಡಿನಲ್ಲಿ ಈ ಐಷರಾಮಿ ಬಂಗಲೆಗಳಿವೆ ಎನ್ನಲಾಗಿದೆ.
100 ಕೋಟಿ ರೂ. ಮೌಲ್ಯದ ಬಂಗಲೆ
ಇತ್ತೀಚೆಗೆ ನಯನತಾರಾ ತಮ್ಮ ಪತಿ ವಿಘ್ನೇಶ್ ಶಿವನ್ ಜತೆ ಸೇರಿಕೊಂಡು 4BHK ಫ್ಲ್ಯಾಟ್ ಖರೀದಿಸಿದ್ದಾರೆ. ಇದು 100 ಕೋಟಿ ರೂ. ಮೌಲ್ಯ ಹೊಂದಿದೆ ಎಂದು ಅಂದಾಜಿಸಲಾಗಿದೆ. ಇದು ಸಿನಿಮಾ ಹಾಲ್, ಈಜುಕೊಳ, ಅತ್ಯಾಧುನಿಕ ಜಿಮ್ ಅನ್ನು ಒಳಗೊಂಡಿದೆ. ಅದೇ ರೀತಿ ʼಸೂಪರ್ʼ ಹಿರೋಯಿನ್ ಹೈದರಾಬಾದ್‌ನ ಬಂಜಾರಾ ಹಿಲ್ಸ್‌ನಲ್ಲಿ ಸುಮಾರು 30 ಕೋಟಿ ರೂ. ಬೆಲೆ ಬಾಳುವ ಎರಡು ಅಪಾರ್ಟ್ಮೆಂಟ್ ಹೊಂದಿದ್ದಾರೆ.
ಐಷರಾಮಿ ಕಾರುಗಳ ಒಡತಿ
ಇಷ್ಟೇ ಅಲ್ಲದೆ ನಯನತಾರಾ ವಿವಿಧ ರೀತಿಯ ಐಷಾರಾಮಿ ಕಾರುಗಳ ಒಡತಿಯೂ ಹೌದು. 1.76 ಕೋಟಿ ರೂ. ಬೆಲೆಬಾಳುವ BMW 7 ಸೀರಿಸ್‌ನ ಕಾರು, 1 ಕೋಟಿ ರೂ. ಬೆಲೆಯ Mercedes GLS350D ಮತ್ತು BMW 5 ಸೀರಿಸ್ ಕಾರುಗಳನ್ನು ಹೊಂದಿದ್ದಾರೆ. ಜೊತೆಗೆ ಬಾಲಿವುಡ್ ನಟಿಯರಾದ ಶಿಲ್ಪಾ ಶೆಟ್ಟಿ, ಪ್ರಯಾಂಕಾ ಚೋಪ್ರಾ, ಮಾಧುರಿ ದೀಕ್ಷಿತ್ ಅವರಂತೆ ಪ್ರೈವೇಟ್ ಜೆಟ್ ಅನ್ನೂ ಹೊಂದಿದ್ದಾರೆ. ಇದರ ಬೆಲೆ 50 ಕೋಟಿ ರೂ. ಎಂದು ಅಂದಾಜಿಸಲಾಗಿದೆ.
ಇದನ್ನೂ ಓದಿ: Actress Nayanthara: ನಯನತಾರಾ -ವಿಘ್ನೇಶ್ ಶಿವನ್ ಅವಳಿ ಮಕ್ಕಳ ಮೊದಲ ಬರ್ತ್‌ಡೇ; ಕ್ಯೂಟ್ ಫೋಟೊಸ್ ಔಟ್!
ಉದ್ಯಮಿಯೂ ಹೌದು
ನಯನತಾರಾ ಯಶಸ್ವಿ ನಟಿಯ ಜೊತೆಗೆ ಯಶಸ್ವಿ ಉದ್ಯಮಿಯಾಗಿಯೂ ಗುರುತಿಸಿಕೊಂಡಿದ್ದಾರೆ. ದ ಲಿಪ್ ಬಾಮ್ ಕಂಪೆನಿ(The Lip Balm Company) ಮತ್ತು ಯುಎಇ ಮೂಲದ ಎಣ್ಣೆ ಕಂಪೆನಿ ಹೊಂದಿದ್ದಾರೆ. ಮಾತ್ರವಲ್ಲ ವಿಘ್ನೇಶ್ ಶಿವನ್ ಜತೆ ಪ್ರೊಡಕ್ಷನ್ ಹೌಸ್ Rowdy Pictures Bannerನ ಸಹ ಮಾಲಕಿಯಾಗಿದ್ದಾರೆ.
ಸಾವಿರ ಕೋಟಿ ರೂ. ಕ್ಲಬ್ ಸೇರಿದ ʼಜವಾನ್ʼ
ಸದ್ಯ ʼಜವಾನ್ʼ ಚಿತ್ರ ಸಾವಿರ ಕೋಟಿ ರೂ. ಕ್ಲಬ್ ಸೇರಿದೆ. ಈ ಚಿತ್ರ ಈಗಾಗಲೇ ವಿಶ್ವಾದ್ಯಂತ ಸಾವಿರ ಕೋಟಿ ರೂ. ಗಳಿಸಿ ಮುನ್ನುಗ್ಗುತ್ತಿದೆ. ಈ ಚಿತ್ರಕ್ಕಾಗಿ ನಯನತಾರಾ 12-15 ಕೋಟಿ ರೂ. ಪಡೆದಿದ್ದಾರೆ ಎನ್ನಲಾಗಿದೆ. 2003ರಲ್ಲಿ ʼಮನಸಿನಕ್ಕರೆʼ ಮಲೆಯಾಳಂ ಚಿತ್ರದ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟ ಅವರು ಈಗ ಪಂಚ ಭಾಷಾ ತಾರೆಯಾಗಿದ್ದಾರೆ. 2010ರಲ್ಲಿ ʼಸೂಪರ್ʼ ಚಿತ್ರದಲ್ಲಿ ಉಪೇಂದ್ರ ಜತೆ ತೆರೆ ಹಂಚುವ ಮೂಲಕ ಕನ್ನಡಕ್ಕೂ ಕಾಲಿಟ್ಟಿದ್ದರು.
-
ಪ್ರಮುಖ ಸುದ್ದಿ21 hours ago
Iraq Fire Accident: ಮದುವೆ ಮನೆಯಲ್ಲಿ ಅಗ್ನಿ ದುರಂತ; ಮದುಮಕ್ಕಳು ಸೇರಿ 114 ಜನರ ಸಾವು!
-
ಪ್ರಮುಖ ಸುದ್ದಿ11 hours ago
German Shepherd: ಸೀಕ್ರೆಟ್ ಸರ್ವಿಸ್ ಏಜೆಂಟ್ನಿಗೆ ಕಚ್ಚಿದ ಅಮೆರಿಕ ಅಧ್ಯಕ್ಷ ಬೈಡನ್ ಅವರ ‘ಕಮಾಂಡರ್’!
-
ವಿದೇಶ13 hours ago
Most expensive wedding: ಜಗತ್ತಿನ ದುಬಾರಿ ವಿವಾಹ ಯಾವುದು ಗೊತ್ತೆ? ಖರ್ಚಾಗಿದ್ದು ಇಷ್ಟು ಕೋಟಿ ರೂ.
-
ಸುವಚನ39 mins ago
ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ
-
ಕ್ರೈಂ16 hours ago
ಲೈಂಗಿಕ ದೌರ್ಜನ್ಯ; ರಕ್ತಸಿಕ್ತ ಬಾಲಕಿ ಮನೆಮನೆಗೆ ತೆರಳಿ ಗೋಳಾಡಿದರೂ ಸಹಾಯ ಮಾಡದ ನಿರ್ದಯಿಗಳು!
-
ಕರ್ನಾಟಕ13 hours ago
Car Accident: ಮರಕ್ಕೆ ಕಾರು ಡಿಕ್ಕಿ ಹೊಡೆದು ಚಾಲಕ ಸಾವು
-
ದೇಶ13 hours ago
Venus Mission: ಇಸ್ರೋಗೆ ‘ಶುಕ್ರ’ದೆಸೆ; ಚಂದ್ರ, ಸೂರ್ಯನ ಬಳಿಕ ಶುಕ್ರನತ್ತ ಚಿತ್ತ; ಉಡಾವಣೆ ಯಾವಾಗ?
-
ಕ್ರಿಕೆಟ್12 hours ago
IND vs AUS: ಅಂತಿಮ ಪಂದ್ಯದಲ್ಲಿ ತಿರುಗಿ ಬಿದ್ದ ಆಸೀಸ್; ಭಾರತಕ್ಕೆ ಬೃಹತ್ ಮೊತ್ತದ ಗುರಿ