Site icon Vistara News

Ester Noronha: ನಾಳೆ ತೆರೆಗೆ ಬರಲಿದೆ ಎಸ್ತರ್ ನರೋನ್ಹಾ ಹೊಸ ಕನಸು ‘ದಿ ವೆಕೆಂಟ್ ಹೌಸ್’ ರಿಲೀಸ್

Ester Noronha the venkat House cinema

ಬೆಂಗಳೂರು: ಬಹುಭಾಷಾ ನಟಿ ಎಸ್ತರ್ ನರೋನ್ಹಾ ನಿರ್ದೇಶಿಸಿ ನಟಿಸಿರುವ ʻದಿ ವೆಕೆಂಟ್ ಹೌಸ್ʼ ಸಿನಿಮಾ ನಾಳೆ ರಾಜ್ಯಾದ್ಯಂತ ತೆರೆಕಾಣಲಿದೆ. ಈಗಾಗಲೇ ಚಿತ್ರದ ಟ್ರೈಲರ್‌ ಹಾಗೂ ಹಾಡುಗಳು ಭಾರೀ ಸದ್ದು ಮಾಡಿದ್ದು, ಪ್ರೇಕ್ಷಕರ ಗಮನಸೆಳೆದಿವೆ. ‘ನಾವಿಕ’, ‘ಅತಿರಥ’, ‘ನುಗ್ಗೇಕಾಯಿ’, ‘ಲೋಕಲ್ ಟ್ರೈನ್’, ‘ಲಂಕೆ’ ಇನಾಮ್ದಾರ್ ಸೇರಿದಂತೆ ಹಲವು ಕನ್ನಡ ಸಿನಿಮಾಗಳಲ್ಲಿ ನಟಿಸಿರುವ ಈ ಬ್ಯೂಟಿ ‘ದಿ ವೆಕೆಂಟ್ ಹೌಸ್’ ಸಿನಿಮಾ ನಿರ್ದೇಶಿಸಿ, ನಟಿಸಿರುವುದರ ಜತೆಗೆ ಸಂಗೀತ ನಿರ್ದೇಶನ, ನಿರ್ಮಾಣ ಜವಾಬ್ದಾರಿಯನ್ನು ಕೂಡ ಅಚ್ಚುಕಟ್ಟಾಗಿ ನಿಭಾಯಿಸಿದ್ದಾರೆ. ನರೋನ್ಹಾ ಹೊಸ ಕನಸ್ಸಿಗೆ ಬರೋಬ್ಬರಿ 75 ಥಿಯೇಟರ್‌ನಲ್ಲಿ ಬಿಡುಗಡೆಯಾಗಲಿದೆ.

‘ದಿ ವೆಕೆಂಟ್ ಹೌಸ್’ ಸಿನಿಮಾ ಕನ್ನಡ ಹಾಗೂ ಕೊಂಕಣಿ ಭಾಷೆಯಲ್ಲಿ ಮೂಡಿಬಂದಿದೆ. ಚಿತ್ರಕ್ಕೆ ನರೇಂದ್ರ ಗೌಡ ಛಾಯಾಗ್ರಹಣವಿದ್ದರೆ, ವಿಜಯ್ ರಾಜ್ ಸಂಕಲನವಿದೆ. ‘ದಿ ವೆಕೆಂಟ್ ಹೌಸ್’ ಸಿನಿಮಾವನ್ನು ಬಹುತೇಕ ಮಂಗಳೂರಿನಲ್ಲಿ ಚಿತ್ರೀಕರಣ ಮಾಡಲಾಗಿದೆ. ಖಾಲಿ ಮನೆಯ ಸುತ್ತ ನಡೆಯುವ ಘಟನೆ ಆಧರಿತ ಸಿನಿಮಾ ಮಾಡಲಾಗಿದೆ.

ಎಸ್ತರ್‌ ನರೋನ್ಹಾ ಮಂಗಳೂರಿನವರಾದರು. ಆದರೆ ಬೆಳೆದಿದ್ದೆಲ್ಲ ಮುಂಬೈನಲ್ಲಿ. ಕನ್ನಡ ಸಿನಿಮಾ ‘ಉಸಿರಿಗಿಂತ ನೀನೇ ಹತ್ತಿರ’ ಎಂಬ ಸಿನಿಮಾ ಮೂಲಕ ಸ್ಯಾಂಡಲ್‌ವುಡ್‌ಗೆ ಪ್ರವೇಶ ಮಾಡಿದ್ದಾರೆ. ಬಾಲಿವುಡ್‌ನ ಖ್ಯಾತ ನಟ ಅನುಪಮ್ ಖೇರ್ ನಟನಾ ಶಾಲೆಯಲ್ಲಿ ತರಬೇತಿ ಪಡೆದು ಹಿಂದಿ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದ ಎಸ್ತರ್ ಬಳಿಕ ತೆಲುಗು, ತುಳು ಸಿನಿಮಾಗಳಲ್ಲೂ ನಟಿಸಿದ್ದಾರೆ.

ಇದನ್ನೂ ಓದಿ: Ester Noronha: ನಟಿ ಎಸ್ತರ್ ನರೋನ್ಹಾ ಈಗ ನಿರ್ದೇಶಕಿ; ನ.17ಕ್ಕೆ ‘ದಿ ವೆಕೆಂಟ್ ಹೌಸ್’ ಚಿತ್ರ ರಿಲೀಸ್

ಇಷ್ಟು ವರ್ಷದ ನಟನೆ ಅನುಭವವನ್ನು ಧಾರೆ ಎರೆದು ದಿ ವೆಕೆಂಟ್ ಹೌಸ್ ಸಿನಿಮಾ ನಿರ್ದೇಶಿಸಿ ನಟಿಸಿ ತಮ್ಮದೇ ಜಾನೆಟ್ ನೊರೊನ್ಹಾ ಪ್ರೊಡಕ್ಷನ್ಸ್ ನಿರ್ಮಾಣ ಕೂಡ ಮಾಡಿದ್ದಾರೆ. ನಾಯಕಿಯಾಗಿ ಗೆದ್ದಿರುವ ಈ ಬ್ಯೂಟಿ ನಿರ್ದೇಶಕಿಯಾಗಿಯೂ ಸ್ಯಾಂಡಲ್ ವುಡ್ ನಲ್ಲಿ ನೆಲೆ ನಿಲ್ಲುವಂತಾಗಲಿ. ಅಂದಹಾಗೇ ದಿ ವೆಕೆಂಟ್ ಹೌಸ್ ಸಿನಿಮಾವನ್ನು ಚಂದನ್ ಫಿಲ್ಮಂಸ್ ರಾಜ್ಯಾದ್ಯಂತ ಬಿಡುಗಡೆ ಮಾಡಲಿದೆ.

Exit mobile version