South Cinema
Kabzaa Movie: ಕಬ್ಜ ಮೊದಲ ದಿನದ ಬಾಕ್ಸ್ ಆಫೀಸ್ ಕಲೆಕ್ಷನ್ ಎಷ್ಟು?
ಮಾರ್ಚ್ 17ರಂದು ಬೆಳಗ್ಗೆ 9 (Kabzaa Movie)ಗಂಟೆಯಿಂದಲೇ ಸಿನಿಮಾ ಪ್ರದರ್ಶನ ಕಂಡಿತು. ಮಾರ್ಚ್ 18, 19 ವೀಕೆಂಡ್ ಇರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಪ್ರೇಕ್ಷಕರು ಚಿತ್ರಮಂದಿರಕ್ಕೆ ಬರುವ ನಿರೀಕ್ಷೆ ಇದೆ. ಮಾರ್ಚ್ 22ರಂದು ಯುಗಾದಿ ಹಬ್ಬದ ಪ್ರಯುಕ್ತ ಸಿನಿರಸಿಕರು ಭಾರಿ ಸಂಖ್ಯೆಯಲ್ಲಿ ಬರುವ ನಿರೀಕ್ಷೆ ಇದೆ.
ಬೆಂಗಳೂರು: ರಿಯಲ್ ಸ್ಟಾರ್ ಉಪೇಂದ್ರ, ಕಿಚ್ಚ ಸುದೀಪ್ ಹಾಗೂ ಹ್ಯಾಟ್ರಿಕ್ ಹೀರೊ ಶಿವರಾಜ್‌ಕುಮಾರ್ ಅಭಿನಯದ ಕಬ್ಜ ಸಿನಿಮಾ (Kabzaa Movie) ವಿಶ್ವಾದ್ಯಂತ ಮಾರ್ಚ್ 17ರಂದು ಬಿಡುಗಡೆಯಾಗಿದೆ. ಕರ್ನಾಟಕದಲ್ಲಿ 26 ಕೋಟಿ ರೂ. ವಿಶ್ವಾದ್ಯಂತ 54 ಕೋಟಿ ರೂ. ಗಳಿಕೆ ಮಾಡಿದೆ ಎಂದು ತಂಡ ಹೇಳಿಕೊಂಡಿದೆ. ಹಿಂದಿ ಭಾಷೆಯಲ್ಲಿ 12ಕೋಟಿ ರೂ. ತೆಲುಗುವಿನಲ್ಲಿ 7ಕೋಟಿ ರೂ. ತಮಿಳಿನಲ್ಲಿ 5 ಕೋಟಿ ರೂ. ಹಾಗೂ ಮಲಯಾಳಂನಲ್ಲಿ 3 ಕೋಟಿ ರೂ. ಕಲೆಕ್ಷನ್ ಮಾಡಿದೆ ಎಂದು ಅಧಿಕೃತವಾಗಿ ಹೇಳಿಕೊಂಡಿದೆ.
ಮಾರ್ಚ್ 17ರಂದು ಬೆಳಗ್ಗೆ 9 ಗಂಟೆಯಿಂದಲೇ ಸಿನಿಮಾ ಪ್ರದರ್ಶನ ಕಂಡಿತು. ಮಾರ್ಚ್ 18, 19 ವೀಕೆಂಡ್ ಇರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಪ್ರೇಕ್ಷಕರು ಚಿತ್ರಮಂದಿರಕ್ಕೆ ಬರುವ ನಿರೀಕ್ಷೆ ಇದೆ. ಮಾರ್ಚ್ 22 ಯುಗಾದಿ ಹಬ್ಬದ ಪ್ರಯುಕ್ತ ಸಿನಿರಸಿಕರು ಭಾರಿ ಸಂಖ್ಯೆಯಲ್ಲಿ ಬರುವ ನಿರೀಕ್ಷೆ ಇದೆ.
ಕೆಜಿಎಫ್, ಕಾಂತಾರ ಸಿನಿಮಾಗಳಂತೆಯೇ ಕಬ್ಜ ಕೂಡ ನಿರೀಕ್ಷೆ ಹುಟ್ಟಿಸಿರುವ ಸಿನಿಮಾವಾಗಿದೆ. ಶ್ರೀಯಾ ಶರಣ್, ಕಬೀರ್ ದುಹಾನ್ ಸಿಂಗ್, ಪ್ರಮೋದ್ ಶೆಟ್ಟಿ, ನವಾಬ್ ಷಾ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.
ಚಿತ್ರದ ವಿತರಣಾ ಹಕ್ಕನ್ನು ಲೈಕಾ ಪ್ರೊಡಕ್ಷನ್ ಸಂಸ್ಥೆ ಹಲವಾರು ಕೋಟಿ ರೂ. ಕೊಟ್ಟು ಖರೀದಿಸಿದೆ. ‘ಕೆಜಿಎಫ್’ ಖ್ಯಾತಿಯ ಸಂಗೀತ ನಿರ್ದೇಶಕ ರವಿ ಬಸ್ರೂರು ಸಂಗೀತ ಸಂಯೋಜಿಸಿದ್ದಾರೆ. ಎಜೆ ಶೆಟ್ಟಿ ಅವರು ಛಾಯಾಗ್ರಹಣ ಕೆಲಸ ಮಾಡಿದ್ದರೆ, ‘ಕೆಜಿಎಫ್’ ಖ್ಯಾತಿಯ ಶಿವಕುಮಾರ್ ಕಲಾ ನಿರ್ದೇಶನ ಮಾಡಿದ್ದಾರೆ.
South Cinema
Ponniyin Selvan: ‘ಪೊನ್ನಿಯನ್ ಸೆಲ್ವನ್-2’ ಟ್ರೈಲರ್ ಔಟ್
ಚೆನ್ನೈನಲ್ಲಿ (Ponniyin Selvan) ಮಾರ್ಚ್ 29ರಂದು ಸಂಜೆ ಅದ್ಧೂರಿಯಾಗಿ ಟ್ರೈಲರ್ ಹಾಗೂ ಆಡಿಯೋ ಲಾಂಚ್ ಕಾರ್ಯಕ್ರಮ ಜರುಗಿತು. ವಿಶೇಷ ಅತಿಥಿಯಾಗಿ ಆಗಮಿಸಿದ್ದ ಕಮಲ್ ಹಾಸನ್ ಕಾರ್ಯಕ್ರಮಕ್ಕೆ ಮತ್ತಷ್ಟು ಮೆರಗು ನೀಡಿದರು.
ಬೆಂಗಳೂರು: ಖ್ಯಾತ ನಿರ್ದೇಶಕ ಮಣಿರತ್ನಂ ಕನಸಿನ ಕೂಸು ಐತಿಹಾಸಿಕ ದೃಶ್ಯಕಾವ್ಯ ಪೊನ್ನಿಯನ್ ಸೆಲ್ವನ್-2 (Ponniyin Selvan) ಸಿನಿಮಾದ ಟ್ರೈಲರ್ ರಿಲೀಸ್ ಆಗಿದೆ. ಚೆನ್ನೈನಲ್ಲಿ ಮಾರ್ಚ್ 29ರಂದು ಸಂಜೆ ಅದ್ಧೂರಿಯಾಗಿ ಟ್ರೈಲರ್ ಹಾಗೂ ಆಡಿಯೋ ಲಾಂಚ್ ಕಾರ್ಯಕ್ರಮ ಜರುಗಿತು. ವಿಶೇಷ ಅತಿಥಿಯಾಗಿ ಆಗಮಿಸಿದ್ದ ಕಮಲ್ ಹಾಸನ್ ಕಾರ್ಯಕ್ರಮಕ್ಕೆ ಮತ್ತಷ್ಟು ಮೆರಗು ನೀಡಿದರು. ಟ್ರೈಲರ್ ಲಾಂಚ್ ಮಾಡಿ ಇಡೀ ತಂಡಕ್ಕೆ ಶುಭ ಹಾರೈಸಿದರು. ಮಣಿರತ್ನಂ, ಕಾರ್ತಿ, ಐಶ್ವರ್ಯ ರೈ, ವಿಕ್ರಮ್, ತ್ರಿಯ, ಜಯಂರವಿ, ಪ್ರಕಾಶ್ ರೈ, ಶರತ್ ಕುಮಾರ್ ಸೇರಿದಂತೆ ಹಲವು ಸೂಪರ್ ಸ್ಟಾರ್ಸ್‌ಗಳು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
ಕಲ್ಕಿ ಕೃಷ್ಣಮೂರ್ತಿ ಬರೆದ ಪೊನ್ನಿಯನ್ ಸೆಲ್ವನ್ ಕಾದಂಬರಿ ಆಧಾರಿಸಿ ನಿರ್ದೇಶಕ ಮಣಿರತ್ನಂ ಎರಡು ಭಾಗದಲ್ಲಿ ಚಿತ್ರ ತಯಾರಿಸಿದ್ದರು. ಕಳೆದ ವರ್ಷ ರಿಲೀಸ್ ಆಗಿದ್ದ ಮೊದಲ ಭಾಗಕ್ಕೆ ಭರ್ಜರಿ ರೆಸ್ಪಾನ್ಸ್ ಸಿಕ್ಕಿತ್ತು. ಪೊನ್ನಿಯನ್ ಸೆಲ್ವನ್ 500 ಕೋಟಿ ರೂ. ಬಾಚಿ ಬಾಕ್ಸಾಫೀಸ್ ಶೇಕ್ ಮಾಡಿತ್ತು. ಲೈಕಾ ಪ್ರೊಡಕ್ಷನ್ ಜತೆಗೂಡಿ ಮಣಿರತ್ನಂ ನಿರ್ಮಿಸಿ ನಿರ್ದೇಶಿಸಿರುವ ಪೊನ್ನಿಯಯನ್ ಸೆಲ್ವನ್-2 ಸೀಕ್ವೆಲ್ ಟ್ರೈಲರ್ ರಿಲೀಸ್ ಆಗಿದ್ದು, ನಿರೀಕ್ಷೆ ನೂರ್ಮಡಿಗೊಳಿಸಿದೆ.
ಚೋಳ ಸಾಮ್ರಾಜ್ಯದ ಗದ್ದುಗೆಗಾಗಿ ನಡೆಯುವ ಹೋರಾಟ, ಪಾಂಡ್ಯ ರಾಜರ ಕುತಂತ್ರ, ಚೋಳ ಸಾಮ್ರಾಜ್ಯ ನಾಶಪಡಿಸಲು ನಂದಿನಿ ಮಾಡುವ ಶಪಥ, ಕರಿಕಾಲನ್ ವೀರಾವೇಶದ ಹೋರಾಟ, ನಂದಿನಿ ಕರಿಕಾಲನ್ ಮುಖಾಮುಖಿಯಾಗುವ ಸನ್ನಿವೇಶ..ಅದ್ಧೂರಿ ಮೇಕಿಂಗ್, ಬೃಹತ್ ಸೆಟ್‌ಗಳು ಟ್ರೈಲರ್‌ನಲ್ಲಿ ಝಗಮಗಿಸಿವೆ. ಕನ್ನಡ ಸೇರಿದಂತೆ ಐದು ಭಾಷೆಯಲ್ಲಿಯೂ ಪೊನ್ನಿಯನ್ ಸೆಲ್ವನ್-2 ಮೊದಲ ನೋಟ ರಿಲೀಸ್ ಆಗಿದ್ದು, ಭಾರೀ ಮೆಚ್ಚುಗೆಗೆ ಪಡೆದುಕೊಂಡಿದೆ. ಆಸ್ಕರ್ ವಿಜೇತ ಎ ಆರ್ ರೆಹಮಾನ್ ಸಂಗೀತ ಸಿನಿಮಾಕ್ಕಿದೆ.
ಇದನ್ನೂ ಓದಿ: Kamal Haasan: ನಿರ್ದೇಶಕ ಮಣಿರತ್ನಂ ಬಗ್ಗೆ ಅನೇಕರಿಗೆ ಅಸೂಯೆ! ನಟ ಕಮಲ್ ಹಾಸನ್ ಹೀಗೆ ಹೇಳಿದ್ದೇಕೆ?
`ಪೊನ್ನಿಯನ್ ಸೆಲ್ವನ್-2’ ಟ್ರೈಲರ್ ಔಟ್
ಟ್ರೈಲರ್ ಮೂಲಕ ಪ್ರಚಾರ ಕಾರ್ಯಕ್ಕೆ ಕಿಕ್ ಸ್ಟಾರ್ಟ್ ಕೊಟ್ಟಿರುವ ಮಣಿರತ್ನಂ ತಂಡ ಕಟ್ಟಿಕೊಂಡು ಹೊರರಾಜ್ಯಗಳಲ್ಲಿಯೂ ಪ್ರಮೋಷನ್ ಶುರು ಮಾಡಲು ಸಜ್ಜಾಗಿದ್ದಾರೆ. ಪ್ಯಾನ್ ಇಂಡಿಯಾ ಸಿನಿಮಾವಾಗಿರುವ ಪೊನ್ನಿಯನ್ ಸೆಲ್ವನ್-2 ಏಪ್ರಿಲ್ 28ಕ್ಕೆ ವರ್ಲ್ಡ್ ವೈಡ್ ತೆರೆಗೆ ಬರುತ್ತಿದೆ. ಐಶ್ವರ್ಯಾ ರೈ, ತ್ರಿಷಾ, ಕಾರ್ತಿ, ವಿಕ್ರಂ, ಪ್ರಕಾಶ್ ರೈ, ಶರತ್ ಕುಮಾರ್, ಜಯಂರವಿ, ಐಶ್ವರ್ಯ ಲಕ್ಷ್ಮೀ, ಶೋಭಿತಾ ಧುಲಿಪಾಲ, ಪ್ರಭು ಸೇರಿದಂತೆ ಬಹುದೊಡ್ಡ ತಾರಾಗಣ ಚಿತ್ರದಲ್ಲಿದೆ.
South Cinema
Kajal Aggarwal: ಹೊಸ ಫೋಟೊಶೂಟ್‌ನಲ್ಲಿ ಮಿಂಚಿದ ಕಾಜಲ್ ಅಗರ್ವಾಲ್
ನಟಿ ಕಾಜಲ್ ಅಗರ್ವಾಲ್ (Kajal Aggarwal) ಹೊಸ ಫೋಟೊಶೂಟ್‌ನಲ್ಲಿ ಮಿಂಚಿದ್ದಾರೆ. ಸುಂದರವಾದ ಹಸಿರು ಹೂವಿನ ಪ್ರಿಂಟೆಡ್ ಬಟ್ಟೆಗಳಿಂದ ಕಂಗೊಳಿಸಿದ್ದಾರೆ.
ನಟಿ ಕಾಜಲ್ ಅಗರ್ವಾಲ್ ಹೊಸ ಫೋಟೊಶೂಟ್‌ನಲ್ಲಿ ಮಿಂಚಿದ್ದಾರೆ. ಸುಂದರವಾದ ಹಸಿರು ಹೂವಿನ ಪ್ರಿಂಟೆಡ್ ಬಟ್ಟೆಗಳಿಂದ ಕಂಗೊಳಿಸಿದ್ದಾರೆ.
ಕಾಜಲ್‌ನ ಬ್ರೇಲೆಟ್ ಮತ್ತು ಪ್ಯಾಂಟ್‌ಗಳು ಸೊಗಸಾದ ಕಪ್ಪು ಮತ್ತು ಬಿಳಿ ಪ್ರಿಂಟೆಡ್ ಒಳಗೊಂಡಿದೆ.
ಈ ಸರಳವಾದ ಉಡುಗೆಗೆ ಸೊಗಸಾದ ಕೇಶವಿನ್ಯಾಸ, ಮೇಕ್ಅಪ್ ಸಿಂಪಲ್ ಆಗಿ ಕಾಣುತ್ತಿದ್ದು, ಅವರ ಅಭಿಮಾನಿಗಳು ಕಮೆಂಟ್ ಮೂಲಕ ಸಂತಸ ಹೊರಹಾಕಿದ್ದಾರೆ.
ಕಮಲ್ ಹಾಸನ್ ನಟನೆಯ ‘ಇಂಡಿಯನ್ 2’ ಸಿನಿಮಾದಲ್ಲಿ ನಟಿ ನಟಿಸುತ್ತಿದ್ದಾರೆ. ಈ ಚಿತ್ರದ ಶೂಟಿಂಗ್ ಈಗಾಗಲೇ ಆರಂಭ ಆಗಿದೆ.
ಕಾಜಲ್ ಅಗರ್ವಾಲ್ ಅವರು ಕೆಲವು ವರ್ಷಗಳ ಹಿಂದೆ ಗೌತಮ್ ಅವರನ್ನು ಮದುವೆ ಆದರು. ದಂಪತಿಗೆ ನೀಲ್ ಹೆಸರಿನ ಮಗು ಇದೆ.
South Cinema
Vijay Sethupathi: ಸಿದ್ದರಾಮಯ್ಯ ಜೀವನಾಧರಿತ ಸಿನಿಮಾ ಪೋಸ್ಟರ್ ಔಟ್: ವಿಜಯ್ ಸೇತುಪತಿ ಗ್ರೀನ್ ಸಿಗ್ನಲ್?
ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ಈಗೀಗ ಹಲವಾರು ಬಯೋಪಿಕ್ ಸಿನಿಮಾಗಳು ಆಗುತ್ತಿವೆ. ಇದೀಗ ಮಾಜಿ ಮುಖ್ಯಮಂತ್ರಿ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಜೀವನಾಧರಿತ (Biopic) ಸಿನಿಮಾ ಆಗುತ್ತಿದೆ. ರಾಜಕೀಯ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಜೀವನ ಚರಿತ್ರೆ ತೆರೆಗೆ ಬರುತ್ತಿದೆ. ಇನ್ನು ವಿಶೇಷ ಅಂದರೆ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಪಾತ್ರವನ್ನು ತಮಿಳು ನಟ ವಿಜಯ್ ಸೇತುಪತಿ (Vijay Sethupathi) ನಿಭಾಯಿಸುತ್ತಿದ್ದಾರೆ ಎಂದು ವರದಿಯಾಗಿದೆ. ಈಗಾಗಲೇ ಸಿನಿಮಾಗಾಗಿ ನಟನನ್ನು ಅಪ್ರೋಚ್ ಮಾಡಲಾಗಿದೆ ಎಂತಲೂ ವರದಿಯಾಗಿದೆ.
ಸಿದ್ದರಾಮಯ್ಯ ಅವರು ಬಯೋಪಿಕ್ ಸಿನಿಮಾಗೆ ಲೀಡರ್ ರಾಮಯ್ಯ’ ಎಂದು ಹೆಸರಿಡಲಾಗಿದೆ. ಮಾ.30ರಂದು ರಾಮನವಮಿಯಂದು ಸಿದ್ದರಾಮಯ್ಯ ಮನೆಯ ಮುಂದೆಯೇ ಚಿತ್ರದ ಪೋಸ್ಟರ್ ಲಾಂಚ್ ಮಾಡಲಾಗಿದೆ. ಇದೀಗ ಈ ಪಾತ್ರಕ್ಕೆ ವಿಜಯ್ ಸೇತುಪತಿ ಅವರು ವಿಜಯ್ ಕೂಡ ಈ ಸಿನಿಮಾಗೆ ಗ್ರೀನ್ ಸಿಗ್ನಲ್ ನೀಡಿದ್ದಾರೆ ಎಂತಲೂ ವೈರಲ್ ಆಗಿದೆ.
ಇದನ್ನೂ ಓದಿ: Tamannaah : `ಸಾಕ್ಷಾತ್ಕಾರ’ದ ನಟಿ ಜಮುನಾ ಬಯೋಪಿಕ್‌ನಲ್ಲಿ ಮಿಲ್ಕಿ ಬ್ಯೂಟಿ?
ಸಿನಿಮಾದಲ್ಲಿ ರಾಜಕೀಯ. ಹಾಗೆಯೇ, ಲವ್ ಸ್ಟೋರಿ ಎಳೆಯೂ ಇರಲಿದೆ. ಸಿದ್ದರಾಮಯ್ಯ ಅವರು ಹೇಳಿದ ಕಥೆಗಳ ಜತೆಗೆ ಸಿನಿಮಾವನ್ನು ಕಮರ್ಷಿಯಲ್ ಆಗಿ ಮಾಡಲಾಗುತ್ತಿದೆ. 50 ಕೋಟಿ ರೂ. ಬಜೆಟ್‌ನಲ್ಲಿ ಚಿತ್ರ ಮೂಡಿ ಬರಲಿದೆ ಎಂದು ವರದಿಯಾಗಿದೆ. ಹಯಾತ್ ಫೀರ್ ನಿರ್ಮಾಣದ ಈ ಸಿನಿಮಾಗೆ ಸತ್ಯ ರತ್ನಂ ಈ ಸಿನಿಮಾವನ್ನು ನಿರ್ದೇಶನ ಮಾಡಲಿದ್ದಾರೆ.
South Cinema
Mrunal Thakur: ಆರಂಭದಲ್ಲಿ ನಟನೆಗೆ ನನ್ನ ಕುಟುಂಬ ಬೆಂಬಲಿಸಲಿಲ್ಲ: ಮೃಣಾಲ್ ಠಾಕೂರ್
ಮೃಣಾಲ್ ಠಾಕೂರ್ (Mrunal Thakur) ತಮ್ಮ ಸಿನಿ ಜರ್ನಿ ಕುರಿತು ಮಾತನಾಡಿದ್ದಾರೆ. ವರ್ಧನ್ ಕೇತ್ಕರ್ ಅವರ ಮರ್ಡರ್-ಮಿಸ್ಟರಿ ಗುಮ್ರಾದಲ್ಲಿ ಮೃಣಾಲ್ ಠಾಕೂರ್ ಕಾಣಿಸಿಕೊಳ್ಳುತ್ತಿದ್ದಾರೆ. ಎಪ್ರಿಲ್ 7ರಂದು ಈ ಸಿನಿಮಾ ಬಿಡುಗಡೆಯಾಗುತ್ತಿದೆ.
ಬೆಂಗಳೂರು: ಸೀತಾ ರಾಮಂ ಸಿನಿಮಾ ಖ್ಯಾತಿಯ ಮೃಣಾಲ್ ಠಾಕೂರ್ (Mrunal Thakur) ಮಾರ್ಚ್ 30ರಂದು ನವದೆಹಲಿಯಲ್ಲಿ ರೈಸಿಂಗ್ ಇಂಡಿಯಾ ಶೋದಲ್ಲಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ, ತಾನು ನಟಿಯಾಗುವ ಆರಂಭದಲ್ಲಿ ಕುಟುಂಬವು ಬೆಂಬಲ ನೀಡಲಿಲ್ಲ ಎಂದು ನಟಿ ಬಹಿರಂಗಪಡಿಸಿದರು.
ಮೃಣಾಲ್ ಠಾಕೂರ್ ತಮ್ಮ ಸಿನಿ ಜರ್ನಿ ಕುರಿತು ಮಾತನಾಡಿ ʻʻನಾನು ನನ್ನ ಕುಟುಂಬಕ್ಕೆ ಧನ್ಯವಾದ ಹೇಳಲು ಬಯಸುತ್ತೇನೆ. ಏಕೆಂದರೆ ಆರಂಭದಲ್ಲಿ ನನಗೆ ಅವರ ಬೆಂಬಲವಿರಲಿಲ್ಲ, ಏಕೆಂದರೆ ಅವರು ಮುಂದೆ ಏನಾಗಬಹುದು ಎಂದು ಹೆದರುತ್ತಿದ್ದರು, ಅವರಿಗೆ ಮನರಂಜನಾ ಉದ್ಯಮದ ಬಗ್ಗೆ ಸ್ವಲ್ಪ ಭಯ ಇತ್ತು. ನನಗೆ ಒಳ್ಳೆಯ ಪಾತ್ರಗಳು ಸಿಗುತ್ತವೆಯೋ ಇಲ್ಲವೋ ಎಂಬುದರ ಬಗ್ಗೆ ಕೂಡ. ಮೊದಲಿಗೆ, ನಾನು ದೂರದರ್ಶನದಲ್ಲಿ ನನ್ನ ವೃತ್ತಿಜೀವನವನ್ನು ಪ್ರಾರಂಭಿಸಿದೆ. ತದನಂತರ ನಾನು ಮರಾಠಿ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದೆ.
ಮಾತು ಮುಂದುವರಿಸಿ “ನಾನು ಮಹಾರಾಷ್ಟ್ರದವಳಾಗಿರುವುದರಿಂದ ನನ್ನ ಕುಟುಂಬವು, ಸಿಬ್ಬಂದಿ ಮತ್ತು ತಂಡವನ್ನು ಭೇಟಿಯಾದಾಗ, ಸಿನಿಮಾ ಬಗ್ಗೆ ತಿಳಿದಾಗ, ತುಂಬಾ ಹೆಮ್ಮೆಪಟ್ಟರು. ತದನಂತರ ಲವ್ ಸೋನಿಯಾ ಸಿನಿಮಾಗೆ ಎಂಟ್ರಿ ಕೊಟ್ಟೆ. ಚಿತ್ರ ಬಿಡುಗಡೆಗೂ ಮುನ್ನ ‘ಮೃಣಾಲ್, ಮುಂದಿನ ಸ್ಮಿತಾ ಪಾಟೀಲ್ ನೀವೇ ಎಂಬ ಸುದ್ದಿ ಹರಿದಾಡಿತು. ನನಗೆ ಸ್ಮಿತಾ ಪಾಟೀಲ್ ದೇವತೆ. ನಾನು ಅವರನ್ನು ಆರಾಧಿಸುತ್ತೇನೆ, ನಾನು ಅವರ ಎಲ್ಲಾ ಸಿನಿಮಾಗಳ ಅಧ್ಯಯನ ಮಾಡಿದ್ದೇನೆ. ಹಾಗಾಗಿ ಮರಾಠಿ ಹುಡುಗಿಗೆ ಇದು ತುಂಬಾ ದೊಡ್ಡ ಮೆಚ್ಚುಗೆಯಾಗಿದೆ. ಈಗ ನನ್ನ ಮನೆಯವರು ಹೇಳುತ್ತಾರೆ, ‘ಮೃಣಾಲ್, ನಾವು ನಿನ್ನ ಬಗ್ಗೆ ಹೆಮ್ಮೆಪಡುತ್ತೇವೆ. ನೀನು ಯಾವುದೇ ಸಿನಿಮಾದ ಭಾಗವಾಗಲು ಆರಿಸಿಕೊಂಡರೂ, ಪ್ರೇಕ್ಷಕರು ಅದರಿಂದ ಏನನ್ನಾದರೂ ಕಲಿಯುತ್ತಾರೆ ಎಂಬುದನ್ನು ತಿಳಿದುಕೊಳ್ಳಬೇಕು ಎಂದಿದ್ದರು. ಒಬ್ಬ ನಟಿಯಾಗಿ ಈ ಸಮಾಜವನ್ನು ಉತ್ತಮ ಸ್ಥಳವನ್ನಾಗಿ ಮಾಡಲು ಇದು ನನ್ನ ಸಣ್ಣ ಪ್ರಯತ್ನʼʼಎಂದರು.
ಇದನ್ನೂ ಓದಿ: Actress Mrunal Thakur : ಮದುವೆಗೆ ಸಿದ್ಧವೆಂದ ಅಭಿಮಾನಿಗೆ ಕ್ಯೂಟ್ ಆಗಿ ಉತ್ತರಿಸಿದ ಮೃಣಾಲ್
ಕೆಲಸದ ಮುಂಭಾಗದಲ್ಲಿ, ವರ್ಧನ್ ಕೇತ್ಕರ್ ಅವರ ಮರ್ಡರ್-ಮಿಸ್ಟರಿ ಗುಮ್ರಾದಲ್ಲಿ ಮೃಣಾಲ್ ಠಾಕೂರ್ ಕಾಣಿಸಿಕೊಳ್ಳುತ್ತಿದ್ದಾರೆ. ಎಪ್ರಿಲ್ 7ರಂದು ಈ ಸಿನಿಮಾ ಬಿಡುಗಡೆಯಾಗುತ್ತಿದೆ. ಆದಿತ್ಯ ರಾಯ್ ಕಪೂರ್, ರೋನಿತ್ ರಾಯ್, ವೇದಿಕಾ ಪಿಂಟೋ, ದೀಪಕ್ ಕಲ್ರಾ ಮತ್ತು ಮೋಹಿತ್ ಆನಂದ್ ರಾಜಿ ಬಹು ತಾರಾಗಣ ಹೊಂದಿದೆ.
-
ಕರ್ನಾಟಕ15 hours ago
High Court order: ತುಮಕೂರು ಗ್ರಾಮಾಂತರ ಜೆಡಿಸ್ ಶಾಸಕ ಗೌರಿಶಂಕರ್ ಶಾಸಕತ್ವದಿಂದ ಅನರ್ಹ: ಕೋರ್ಟ್ ಆದೇಶ
-
ಕ್ರಿಕೆಟ್16 hours ago
IND VS PAK: ಏಕದಿನ ವಿಶ್ವಕಪ್; ತಟಸ್ಥ ತಾಣದಲ್ಲಿ ನಡೆಯಲಿದೆ ಪಾಕಿಸ್ತಾನದ ಪಂದ್ಯಗಳು!
-
ಕರ್ನಾಟಕ12 hours ago
Karnataka BJP: ಸಿದ್ದರಾಮಯ್ಯ ವಿರುದ್ಧ ವಿಜಯೇಂದ್ರ ಸ್ಪರ್ಧೆಗೆ ಬಿಜೆಪಿ ಚಿಂತನೆ: ಖಚಿತಪಡಿಸಿದ ಬಿ.ಎಸ್. ಯಡಿಯೂರಪ್ಪ
-
ಕ್ರಿಕೆಟ್13 hours ago
ICC World Cup 2023: ಭಾರತದಲ್ಲೇ ನಡೆಯಲಿದೆ ವಿಶ್ವ ಕಪ್ ಪಂದ್ಯ; ಐಸಿಸಿ ಸ್ಪಷ್ಟನೆ
-
ಕರ್ನಾಟಕ13 hours ago
Anjanadri Hill: 101 ಕೆಜಿ ಜೋಳದ ಚೀಲ ಹೊತ್ತು ಅಂಜನಾದ್ರಿ ಬೆಟ್ಟ ಹತ್ತಿದ ಹನುಮನ ಭಕ್ತ
-
ಕರ್ನಾಟಕ14 hours ago
Karnataka BJP: ಮುಸ್ಲಿಂ ಬಾಂಧವರಿಗೆ ಬಿಜೆಪಿ ಅನ್ಯಾಯ ಮಾಡಿಲ್ಲ: ಮನವೊಲಿಸುತ್ತೇವೆ ಎಂದ ಬಿ.ಎಸ್. ಯಡಿಯೂರಪ್ಪ
-
ಕ್ರಿಕೆಟ್10 hours ago
IPL 2023: ಗುಜರಾತ್ vs ಚೆನ್ನೈ ಪಂದ್ಯದ ಪಿಚ್ ರಿಪೋರ್ಟ್, ಸಂಭಾವ್ಯ ತಂಡ
-
ದೇಶ14 hours ago
ಸ್ಮೃತಿ ಇರಾನಿಯನ್ನು ಡಾರ್ಲಿಂಗ್ ಎಂದು ಬಿಜೆಪಿ ನಾಯಕ ಟ್ವೀಟ್, ಮಾನಹಾನಿ ನೋಟಿಸ್ ಕಳುಹಿಸಿದ ಕೈ ನಾಯಕ!