Site icon Vistara News

Kabzaa Movie: ಕಬ್ಜ ಮೊದಲ ದಿನದ ಬಾಕ್ಸ್ ಆಫೀಸ್ ಕಲೆಕ್ಷನ್ ಎಷ್ಟು?

Kannada Movie Kabzaa streaming on amazon prime ott

ಬೆಂಗಳೂರು: ರಿಯಲ್‌ ಸ್ಟಾರ್‌ ಉಪೇಂದ್ರ, ಕಿಚ್ಚ ಸುದೀಪ್‌ ಹಾಗೂ ಹ್ಯಾಟ್ರಿಕ್‌ ಹೀರೊ ಶಿವರಾಜ್‌ಕುಮಾರ್‌ ಅಭಿನಯದ ಕಬ್ಜ ಸಿನಿಮಾ (Kabzaa Movie) ವಿಶ್ವಾದ್ಯಂತ ಮಾರ್ಚ್‌ 17ರಂದು ಬಿಡುಗಡೆಯಾಗಿದೆ. ಕರ್ನಾಟಕದಲ್ಲಿ 26 ಕೋಟಿ ರೂ. ವಿಶ್ವಾದ್ಯಂತ 54 ಕೋಟಿ ರೂ. ಗಳಿಕೆ ಮಾಡಿದೆ ಎಂದು ತಂಡ ಹೇಳಿಕೊಂಡಿದೆ. ಹಿಂದಿ ಭಾಷೆಯಲ್ಲಿ 12ಕೋಟಿ ರೂ. ತೆಲುಗುವಿನಲ್ಲಿ 7ಕೋಟಿ ರೂ. ತಮಿಳಿನಲ್ಲಿ 5 ಕೋಟಿ ರೂ. ಹಾಗೂ ಮಲಯಾಳಂನಲ್ಲಿ 3 ಕೋಟಿ ರೂ. ಕಲೆಕ್ಷನ್‌ ಮಾಡಿದೆ ಎಂದು ಅಧಿಕೃತವಾಗಿ ಹೇಳಿಕೊಂಡಿದೆ.

ಮಾರ್ಚ್‌ 17ರಂದು ಬೆಳಗ್ಗೆ 9 ಗಂಟೆಯಿಂದಲೇ ಸಿನಿಮಾ ಪ್ರದರ್ಶನ ಕಂಡಿತು. ಮಾರ್ಚ್ 18, 19 ವೀಕೆಂಡ್ ಇರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಪ್ರೇಕ್ಷಕರು ಚಿತ್ರಮಂದಿರಕ್ಕೆ ಬರುವ ನಿರೀಕ್ಷೆ ಇದೆ. ಮಾರ್ಚ್‌ 22 ಯುಗಾದಿ ಹಬ್ಬದ ಪ್ರಯುಕ್ತ ಸಿನಿರಸಿಕರು ಭಾರಿ ಸಂಖ್ಯೆಯಲ್ಲಿ ಬರುವ ನಿರೀಕ್ಷೆ ಇದೆ.

ಇದನ್ನೂ ಓದಿ: Kabzaa Movie: ವಿಶ್ವಾದ್ಯಂತ ಕಬ್ಜ ರಿಲೀಸ್‌: ಸಿನಿಮಾ ನೋಡಿ ಇನ್ನೊಂದು ಕೆಜಿಎಫ್‌ ಅಂದ್ರು ನೆಟ್ಟಿಗರು, ಇಲ್ಲಿದೆ ಟ್ವೀಟ್‌ ವಿಮರ್ಶೆ!

ಕೆಜಿಎಫ್, ಕಾಂತಾರ ಸಿನಿಮಾಗಳಂತೆಯೇ ಕಬ್ಜ ಕೂಡ ನಿರೀಕ್ಷೆ ಹುಟ್ಟಿಸಿರುವ ಸಿನಿಮಾವಾಗಿದೆ. ಶ್ರೀಯಾ ಶರಣ್​, ಕಬೀರ್ ದುಹಾನ್​ ಸಿಂಗ್​, ಪ್ರಮೋದ್​ ಶೆಟ್ಟಿ, ನವಾಬ್​ ಷಾ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

ಚಿತ್ರದ ವಿತರಣಾ ಹಕ್ಕನ್ನು ಲೈಕಾ ಪ್ರೊಡಕ್ಷನ್‌ ಸಂಸ್ಥೆ ಹಲವಾರು ಕೋಟಿ ರೂ. ಕೊಟ್ಟು ಖರೀದಿಸಿದೆ. ‘ಕೆಜಿಎಫ್’ ಖ್ಯಾತಿಯ ಸಂಗೀತ ನಿರ್ದೇಶಕ ರವಿ ಬಸ್ರೂರು ಸಂಗೀತ ಸಂಯೋಜಿಸಿದ್ದಾರೆ. ಎಜೆ ಶೆಟ್ಟಿ ಅವರು ಛಾಯಾಗ್ರಹಣ ಕೆಲಸ ಮಾಡಿದ್ದರೆ, ‘ಕೆಜಿಎಫ್’ ಖ್ಯಾತಿಯ ಶಿವಕುಮಾರ್ ಕಲಾ ನಿರ್ದೇಶನ ಮಾಡಿದ್ದಾರೆ.

Exit mobile version