Site icon Vistara News

Salaar Movie: ಪ್ರಭಾಸ್ ಜತೆ ಐಟಂ ಸಾಂಗ್‌ಗೆ ಸೊಂಟ ಬಳುಕಿಸುತ್ತಿದ್ದಾರೆ ಗದರ್ 2 ನಟಿ?

Gadar 2 Simrat Kaur

ಬೆಂಗಳೂರು: ಪ್ರಶಾಂತ್ ನೀಲ್ ನಿರ್ದೇಶನ ಮತ್ತು ಪ್ರಭಾಸ್ ನಾಯಕನಾಗಿ ನಟಿಸಿರುವ ಸಲಾರ್: ಭಾಗ 1 ಟ್ರೈಲರ್ ಡಿಸೆಂಬರ್ 1ರಂದು ಬಿಡುಗಡೆಯಾಗಲಿದೆ (Salaar Movie) ಎಂದು ಹೊಂಬಾಳೆ ಫಿಲ್ಮ್ಸ್ ತಿಳಿಸಿದೆ. ಜುಲೈನಲ್ಲಿ ಸಲಾರ್ ಟೀಸರ್ ಬಿಡುಗಡೆಯಾದ ನಂತರ, ಅಭಿಮಾನಿಗಳು ಚಿತ್ರದ ಟ್ರೈಲರ್‌ಗಾಗಿ ಕಾಯುತ್ತಿದ್ದಾರೆ. ಪೃಥ್ವಿರಾಜ್ ಸುಕುಮಾರನ್, ಶ್ರುತಿ ಹಾಸನ್ ಮತ್ತು ಜಗಪತಿ ಬಾಬು ಕೂಡ ಸಲಾರ್‌ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಡಿಸೆಂಬರ್ 22ರಂದು ವಿಶ್ವಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ವ್ಯಾಪಾರ ವಿಶ್ಲೇಷಕ ರಮೇಶ್ ಬಾಲಾ ಪ್ರಕಾರ, ಗದರ್ 2 ಖ್ಯಾತಿಯ ನಟಿ ಸಿಮ್ರತ್ ಕೌರ್ ಅವರು ಪ್ರಭಾಸ್ ಅವರ ಸಲಾರ್‌ನಲ್ಲಿ ಐಟಂ ಸಾಂಗ್‌ಗೆ ಸೊಂಟ ಬಳುಕಿಸಲಿದ್ದಾರೆ ಎಂದು ವರದಿಯಾಗಿದೆ.

ಸಿಮ್ರತ್ ಚಿತ್ರದ ಸ್ಪೆಷಲ್ ಸಾಂಗ್ ಶೂಟಿಂಗ್ ಶುರುವಾಗಿದ್ದು, ಮುಂದಿನ ಕೆಲ ದಿನಗಳ ಕಾಲ ರಾಮೋಜಿ ಫಿಲಂ ಸಿಟಿಯಲ್ಲಿ ಚಿತ್ರೀಕರಣ ನಡೆಯಲಿದೆ ಎಂದು ವರದಿಯಾಗಿದೆ. ಬಹಳ ದಿನಗಳಿಂದ ಪ್ರಭಾಸ್ ಮೊಣಕಾಲು ನೋವಿನಿಂದ ಬಳಲುತ್ತಿದ್ದರು. ಶಸ್ತ್ರ ಚಿಕಿತ್ಸೆ ಮಾಡಿಸಿಕೊಳ್ಳುವ ನಿರ್ಧಾರಕ್ಕೆ ಬಂದಿದ್ದರು. ‘ಸಲಾರ್’ ಶೂಟಿಂಗ್ ವೇಳೆ ನೋವು ಹೆಚ್ಚಾಗಿತ್ತು. ಹೀಗಾಗಿ ಈ ಹಾಡು ಶೂಟ್‌ ಮಾಡಲು ಸಾದ್ಯವಾಗಿರಲಿಲ್ಲ ಎಂದು ವರದಿಯಾಗಿದೆ.

ಈ ಹಿಂದೆ, ಸಲಾರ್: ಭಾಗ 1ರ ಟ್ರೈಲರ್ ನವೆಂಬರ್ ಅಂತ್ಯದಲ್ಲಿ ಅಥವಾ ಡಿಸೆಂಬರ್ ಆರಂಭದಲ್ಲಿ ಬಿಡುಗಡೆಯಾಗಲಿದೆ ಎಂದು ವರದಿಯಾಗಿತ್ತು. ಮುಂಬೈ ಬೆಡಗಿ ಸಿಮ್ರತ್‌ ತೆಲುಗು, ಹಿಂದಿ ಸಿನಿಮಾಗಳಲ್ಲಿ ನಟಿಸಿದ್ದಾರೆ. ಸೂಪರ್ ಹಿಟ್ ‘ಗದರ್-2’ ಚಿತ್ರದಲ್ಲೂ ಆಕೆ ಮಿಂಚಿದ್ದರು. ‘ಸಲಾರ್’ ಮಲಯಾಳಂ ವಿತರಣೆ ಹಕ್ಕು ಪೃಥ್ವಿರಾಜ್ ಸುಕುಮಾರ್ ಪಡೆದುಕೊಂಡಿದ್ದಾರೆ. ಹಿಂದಿ ವರ್ಷನ್ ಎಎ ಫಿಲ್ಮ್ಸ್ ಪಾಲಾಗಿದೆ.

ಇದನ್ನೂ ಓದಿ: Salaar Movie: ಭಾರತಕ್ಕೆ ಮರಳಿದ ಪ್ರಭಾಸ್‌; ಫ್ಯಾನ್ಸ್‌ ಖುಷ್‌!

ಕೆಜಿಎಫ್’ ಖ್ಯಾತಿಯ ಪ್ರಶಾಂತ್ ನೀಲ್ ನಿರ್ದೇಶನದ ಈ ಚಿತ್ರ 2023ರ ಬಹು ನಿರೀಕ್ಷಿತ ಚಿತ್ರಗಳಲ್ಲಿ ಒಂದಾಗಿದೆ. ಸಲಾರ್’ ಟೀಸರ್ ಈಗಾಗಲೇ ಬಿಡುಗಡೆಗೊಂಡಿದ್ದು. ಸೂಪರ್ ಹಿಟ್ ಆಗಿದೆ. 100 ಮಿಲಿಯನ್‌ಗೂ ಅಧಿಕ ವ್ಯೂಸ್ ಸಾಧಿಸಿದೆ. ಆದರೂ ಕೂಡ ಟೀಸರ್ ಬಗ್ಗೆ ಕೆಲವು ಅಭಿಮಾನಿಗಳು ಬೇಸರ ವ್ಯಕ್ತಪಡಿಸಿದ್ದರು. ಪ್ರಭಾಸ್‌ ಲುಕ್ ರಿವೀಲ್ ಮಾಡಿಲ್ಲ ಎಂದಿದ್ದರು. ಇನ್ನು ʼಸಲಾರ್‌ʼ ಸಿನಿಮಾದ ವಿತರಣೆಯ ಹಕ್ಕನ್ನು ಪ್ರತ್ಯಾಂಗೀರ್‌ ಸಿನಿಮಾಸ್‌ ಪಡೆದುಕೊಂಡಿದೆ.

ಶಾರುಖ್ ಖಾನ್ ಅವರ ಡಂಕಿ ಸಿನಿಮಾ ಕೂಡ ಅಂದೇ ರಿಲೀಸ್‌ ಆಗುತ್ತಿದ್ದು, ಬಾಕ್ಸ್‌ ಆಫೀಸ್‌ನಲ್ಲಿ ಕ್ಲಾಶ್‌ ಆಗೋದಂತೂ ಗ್ಯಾರಂಟಿ ಎಂದಂತಾಗಿದೆ.ಡಂಕಿ ಚಿತ್ರಕ್ಕೆ ಜಿಯೋ ಸ್ಟುಡಿಯೋಸ್, ರೆಡ್ ಚಿಲ್ಲೀಸ್ ಎಂಟರ್‌ಟೈನ್‌ಮೆಂಟ್ ಮತ್ತು ರಾಜ್‌ಕುಮಾರ್ ಹಿರಾನಿ ಫಿಲ್ಮ್ಸ್ ಬೆಂಬಲ ನೀಡಿವೆ. ಚಿತ್ರವನ್ನು ರಾಜ್‌ಕುಮಾರ್ ಹಿರಾನಿ ನಿರ್ದೇಶಿಸಿದ್ದಾರೆ.ಬಾಲಿವುಡ್​ ಹಂಗಾಮಾ’ ವರದಿ ಮಾಡಿರುವ ಪ್ರಕಾರ ಶೂಟಿಂಗ್​ ಮುಗಿಯುವುದಕ್ಕೂ ಮುನ್ನವೇ ‘ಡಂಕಿ’ (Dunki Movie) ಚಿತ್ರದ ಒಟಿಟಿ (Dunki OTT) ಹಕ್ಕುಗಳು ಸೇಲ್​ ಆಗಿವೆ. ಅದು ಕೂಡ ಬರೋಬ್ಬರಿ 155 ಕೋಟಿ ರೂ. ಎಂದು ಹೇಳಲಾಗುತ್ತಿದೆ ನಿರ್ದೇಶಕ ರಾಜ್​ಕುಮಾರ್​ ಹಿರಾನಿ ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ.

Exit mobile version