Garuda Purana Movie : ವಿಜಯದಶಮಿಗೆ ಬಂತು ಗರುಡ ಪುರಾಣ ಟ್ರೇಲರ್; ಇದು ಸಸ್ಪೆನ್ಸ್‌ ಥ್ರಿಲ್ಲರ್ Vistara News

ಬೆಂಗಳೂರು

Garuda Purana Movie : ವಿಜಯದಶಮಿಗೆ ಬಂತು ಗರುಡ ಪುರಾಣ ಟ್ರೇಲರ್; ಇದು ಸಸ್ಪೆನ್ಸ್‌ ಥ್ರಿಲ್ಲರ್

Garuda purana Movie: ಸಸ್ಪೆನ್ಸ್‌ ಥ್ರಿಲ್ಲರ್‌ ಕಥೆ ಹೊಂದಿರುವ ಗರುಡ ಪುರಾಣ ಚಿತ್ರದ ಟ್ರೇಲರ್‌ ಬಿಡುಗಡೆಯಾಗಿದ್ದು ಸಾಕಷ್ಟು ವೈರಲ್‌ ಆಗಿದೆ. ಚಿತ್ರ ನವೆಂಬರ್‌ ಮೂರಕ್ಕೆ ತೆರೆಗೆ ಬರಲಿದೆ

VISTARANEWS.COM


on

Garuda purana trailor release
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಇದೊಂದು ಸಸ್ಪೆನ್ಸ್‌ ಥ್ರಿಲ್ಲರ್‌ (Suspense Thriller Cinema) ಟ್ರೇಲರ್‌. ಮಿಸ್ಸಿಂಗ್‌ ಕೇಸಿನ ಬೆನ್ನುಹತ್ತುವ, ಕ್ಷಣ ಕ್ಷಣಕ್ಕೂ ಕುತೂಹಲ ಕೆರಳಿಸುವ ದೃಶ್ಯಗಳನ್ನು ಪೋಣಿಸಿದ ಮೈನವಿರೇಳಿಸುವ ಚಿತ್ರಣ: ಇದು ವಿಜಯ ದಶಮಿ (Vijayadashami) ಶುಭದಿನದಂದು ಬಿಡುಗಡೆಯಾದ ಗರುಡ ಪುರಾಣ (Garud purana Movie) ಚಿತ್ರದ ಟೇಲರ್‌ನ ವಿಶೇಷತೆ.

Garuda purana trailor release

27 ಫ್ರೇಮ್ ಕ್ರಿಯೇಷನ್ಸ್ (27 Frame Creations) ಲಾಂಛನದಲ್ಲಿ ಸಿಂಧು ಕೆ.ಎಂ ಮತ್ತು ಬಿ.ಎಲ್ ಯೋಗೇಶ್ ಕುಮಾರ್ ನಿರ್ಮಿಸಿರುವ, ಮಂಜುನಾಥ್ ಬಿ ನಾಗಬಾ (Manjunath B Nagaba) ಕಥೆ, ಚಿತ್ರಕಥೆ ಬರೆದು ಸಂಕಲನ ಮಾಡಿ ನಿರ್ದೇಶಿಸಿರುವ ಗರುಡ ಪುರಾಣ ಚಿತ್ರದ ಟ್ರೇಲರ್‌ನ್ನು ಅಶ್ವಿನಿ ಪುನೀತ್ ರಾಜಕುಮಾರ್ ಅವರು ಬಿಡುಗಡೆ ಮಾಡಿದರು.

Garuda purana trailor release

ಚಿತ್ರದ ಟ್ರೇಲರ್ ಈಗಾಗಲೇ ಸಾಕಷ್ಟು ಕುತೂಹಲ ಮೂಡಿಸಿದ್ದು, ನವೆಂಬರ್ 3ರಂದು ಚಿತ್ರ ತೆರೆಗೆ ಬರಲಿದೆ. ಜನಪ್ರಿಯ ಕಾಂತಾರ ಸೇರಿದಂತೆ ಅನೇಕ ಚಿತ್ರಗಳಿಗೆ ಆನ್ ಲೈನ್ ಎಡಿಟರ್ ಆಗಿ ಕಾರ್ಯನಿರ್ವಹಿಸಿರುವ ಮಂಜುನಾಥ್ ಬಿ ನಾಗಬಾ ಈ ಚಿತ್ರದ ಮೂಲಕ ನಿರ್ದೇಶಕರಾಗಿ ಚಿತ್ರರಂಗ ಪ್ರವೇಶಿಸಿದ್ದಾರೆ.

Garuda purana trailor release

ಚಿತ್ರದ ಒಂದು ಭಾಗಕ್ಕೆ ಗರುಡ ಪುರಾಣದ ಕೆಲವು ಅಂಶಗಳು ಹೊಂದಿಕೆಯಾಗುತ್ತದೆ. ಹಾಗಾಗಿ “ಗರುಡ ಪುರಾಣ” ಚಿತ್ರಕ್ಕೆ ಶೀರ್ಷಿಕೆ ಇಡಲಾಗಿದೆ ಎಂದು ಚಿತ್ರ ತಂಡ ಹೇಳಿದೆ.

Garuda purana trailor release

“ಗರುಡ ಪುರಾಣ” ಚಿತ್ರದ ನಾಯಕನಾಗಿ ಮಂಜುನಾಥ್ ಬಿ ನಾಗಬಾ ನಟಿಸಿದ್ದಾರೆ, ದಿಶಾ ಶೆಟ್ಟಿ ನಾಯಕಿಯಾಗಿ ಅಭಿನಯಿಸಿದ್ದಾರೆ. “ಭಜರಂಗಿ” ಖ್ಯಾತಿಯ ಚೆಲುವರಾಜು, ಸಂತೋಷ್ ಕರ್ಕಿ, ಕೆಂಚಣ್ಣ, ರಾಜಕುಮಾರ್, ಮಹೇಂದ್ರ ಗೌಡ ಮುಂತಾದವರು ತಾರಾಬಳಗದಲ್ಲಿದ್ದಾರೆ.

Garuda purana trailor release

ಪುನೀತ್ ಆರ್ಯ ಈ ಚಿತ್ರದ ಹಾಡುಗಳನ್ನು ಬರೆದಿದ್ದು, ರಾಕೇಶ್ ಆಚಾರ್ಯ ಸಂಗೀತ ನೀಡಿದ್ದಾರೆ. ಸುನೀಲ್ ನರಸಿಂಹಮೂರ್ತಿ “ಗರುಡ ಪುರಾಣ” ಚಿತ್ರದ ಛಾಯಾಗ್ರಾಹಕರಾಗಿದ್ದಾರೆ. ಟ್ರೇಲರ್‌ನ್ನು ಕೆಳಗಿನ ಲಿಂಕ್‌ನಲ್ಲಿ ನೋಡಿ.

ಟ್ರೇಲರ್‌ ಬಿಡುಗಡೆ ಕಾರ್ಯಕ್ರಮದಲ್ಲಿ ಮಾಜಿ ಶಾಸಕರಾದ ರಾಜು ಗೌಡ, ತಿಪ್ಪರಾಜು, ಡಿಎಸ್‌. ಮ್ಯಾಕ್ಸ್‌ನ ದಯಾನಂದ್‌, ನಿವೃತ್ತ ಪೊಲೀಸ್‌ ಅಧಿಕಾರಿ ಶ್ರೀನಿವಾಸ್‌ ಕೂಚಣ್ಣ, ನಟ ಮಣಿಕಂಠ ಮೊದಲಾದವರು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು.

ಗರುಡ ಪುರಾಣ ಹೆಸರು ಯಾಕೆ? ಈ ಸಿನಿಮಾಕ್ಕೆ ಗರುಡ ಪುರಾಣ ಎಂದು ಯಾಕೆ ಹೆಸರಿಡಲಾಗಿದೆ ಎಂಬ ಪ್ರಶ್ನೆಗೆ ಉತ್ತರಿಸಿರುವ ನಿರ್ದೇಶಕ, ಮಂಜುನಾಥ್‌ ಬಿ. ನಾಗಬಾ ಅವರು, ತಪ್ಪು ಮಾಡಿದವರು ಶಿಕ್ಷೆ ಅನುಭವಿಸಲೇಬೇಕು ಎಂಬ ಅಂಶ ಚಿತ್ರದಲ್ಲಿರುವುದರಿಂದ ಅದಕ್ಕೆ ಕನೆಕ್ಟ್‌ ಆಗಿ ಗರುಡ ಪುರಾಣ ಎಂದು ಹೆಸರು ಇಡಲಾಗಿದೆ.

ನಾಯಕಿ ದಿಶಾ ಶೆಟ್ಟಿ, ಭಜರಂಗಿ ಖ್ಯಾತಿಯ ಚೆಲುವರಾಜು, ಸಂತೋಷ್‌ ಕರ್ಕಿ, ಕೆಂಚಣ್ಣ, ರಾಜ್‌ ಕುಮಾರ್‌, ಮಹೇಂದ್ರ ಗೌಡ ತಮ್ಮ ಪಾತ್ರಗಳ ಕುರಿತು ಮಾತನಾಡಿದರು. ಸಂಗೀತ ನಿರ್ದೇಶಕ ರಾಕೇಶ್‌ ಆಚಾರ್ಯ ಹಾಡುಗಳ ಬಗ್ಗೆ ಮತ್ತು ಸುನಿಲ್‌ ನರಸಿಂಹ ಮೂರ್ತಿ ಛಾಯಾಗ್ರಹಣದ ಬಗ್ಗೆ ಮಾಹಿತಿ ನೀಡಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಉಡುಪಿ

Karnataka Weather : ಬಟ್ಟೆ ತೊಳೆಯೋಕೆ ವೀಕೆಂಡ್‌ವರೆಗೂ ಕಾಯ್ಬೇಡಿ; ಇನ್ನೊಂದು ವಾರ ಭಾರಿ ಮಳೆ!

karnataka Weather Forecast : ಎರಡು ದಿನಗಳ ಕಾಲ ಬ್ರೇಕ್‌ ಕೊಟ್ಟಿದ್ದ ಮಳೆರಾಯ (Rain News) ಮತ್ತೆ ಸಕ್ರಿಯಗೊಂಡಿದ್ದಾನೆ. ದಕ್ಷಿಣ ಒಳನಾಡಲ್ಲಿ ಭಾರಿ ಮಳೆ ಸೂಚನೆ ಇದ್ದು, ಕರಾವಳಿಯಲ್ಲಿ ಒಣಹವೆ ಮುಂದುವರಿಯಲಿದೆ.

VISTARANEWS.COM


on

By

Heavy Rain warning In karnataka
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಡಿ.8ರ ಶುಕ್ರವಾರ ಸಂಜೆಯಿಂದಲೇ ಹಲವೆಡೆ ಮಳೆಯಾಗುವ ಸೂಚನೆ (Karnataka Weather Forecast) ಇದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗಲಿದ್ದು, ಮಲೆನಾಡು ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ (Rain News) ಸಾಧ್ಯತೆಯಿದೆ. ಕರಾವಳಿ ಜಿಲ್ಲೆಗಳಲ್ಲಿ ಒಣ ಹವೆ (Dry weather) ಮೇಲುಗೈ ಸಾಧಿಸಲಿದೆ.

ರಾಮನಗರ-ಮಂಡ್ಯದಲ್ಲಿ ಭಾರಿ ಮಳೆ

ದಕ್ಷಿಣ ಒಳನಾಡಿನ ರಾಮನಗರ, ಮಂಡ್ಯ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆ ಸಾಧ್ಯತೆ ಇದೆ. ಉಳಿದಂತೆ ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಮೈಸೂರು ಮತ್ತು ಚಾಮರಾಜನಗರದಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಲಿದೆ. ಉಳಿದೆಡೆ ಮೋಡ ಕವಿದ ವಾತಾವರಣವಿರಲಿದೆ.

ಇನ್ನು ಉತ್ತರ ಒಳನಾಡಿನ ಕೊಪ್ಪಳ ಜಿಲ್ಲೆಯಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದ್ದು, ಉಳಿದ ಭಾಗಗಳಲ್ಲಿ ಒಣಹವೆ ಇರಲಿದೆ. ಜತೆಗೆ ಮಲೆನಾಡಿನ ಹಾಸನ, ಕೊಡಗು ಜಿಲ್ಲೆಗಳಲ್ಲಿ ಮಳೆ ನಿರೀಕ್ಷೆ ಇದ್ದು, ಗುಡುಗು ಸಾಥ್‌ ನೀಡಲಿದೆ. ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ. ಕರಾವಳಿ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲೂ ಶುಷ್ಕ ವಾತಾವರಣ ಇರಲಿದೆ.

ಇದನ್ನೂ ಓದಿ: Wedding Fashion: ಮದುಮಗನ ಆರತಕ್ಷತೆಯ ಗ್ರ್ಯಾಂಡ್‌ ಔಟ್‌ಫಿಟ್‌ ಆಯ್ಕೆಗೆ ಇಲ್ಲಿದೆ 5 ಸಿಂಪಲ್‌ ಸೂತ್ರ

ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.

ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್‌)
ಬೆಂಗಳೂರು ನಗರ: 30 ಡಿ.ಸೆ -19 ಡಿ.ಸೆ
ಮಂಗಳೂರು: 34 ಡಿ.ಸೆ – 23 ಡಿ.ಸೆ
ಚಿತ್ರದುರ್ಗ: 32 ಡಿ.ಸೆ – 17 ಡಿ.ಸೆ
ಗದಗ: 30 ಡಿ.ಸೆ – 18 ಡಿ.ಸೆ
ಹೊನ್ನಾವರ: 34 ಡಿ.ಸೆ- 23 ಡಿ.ಸೆ
ಕಲಬುರಗಿ: 26 ಡಿ.ಸೆ – 21 ಡಿ.ಸೆ
ಬೆಳಗಾವಿ: 30 ಡಿ.ಸೆ – 17 ಡಿ.ಸೆ
ಕಾರವಾರ: 35 ಡಿ.ಸೆ – 22 ಡಿ.ಸೆ

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Continue Reading

ಕರ್ನಾಟಕ

VISTARA TOP 10 NEWS : ಮೌಲ್ವಿ ಐಸಿಸ್‌ ಸಂಪರ್ಕ ನಿಜವೇ? ಹಳೆಪಿಂಚಣಿ ಮರುಜಾರಿ ಖಚಿತವೇ? ಇತರ ಪ್ರಮುಖ ಸುದ್ದಿ

VISTARA TOP 10 NEWS :ಮೌಲ್ವಿ ತನ್ವೀರ್‌ ಪೀರಾ ಅವರ ಬಗ್ಗೆ NIA ತನಿಖೆಗೆ ಒತ್ತಡ ಹೆಚ್ಚಾಗಿದೆ. ರಾಜ್ಯದಲ್ಲಿ ಹಳೆ ಪಿಂಚಣಿ ಮರುಜಾರಿ ಚಿಂತನೆಗೆ ಭರವಸೆ ಸಿಕ್ಕಿದೆ.. ಹೀಗೆ ಪ್ರಮುಖ ಸುದ್ದಿಗಳ ಸುತ್ತು ನೋಟ ಇಲ್ಲಿದೆ.

VISTARANEWS.COM


on

Vistara Top 10 News 7-12
Koo

1.ತನ್ವೀರ್‌ ಪೀರಾ ಐಸಿಸ್‌ ಸಂಬಂಧ: ಪರ ವಿರೋಧ ಚರ್ಚೆ ತಾರಕಕ್ಕೆ, NIA ತನಿಖೆಗೆ ಸವಾಲು
ವಿಜಯಪುರ ಮೂಲದ ಮೌಲ್ವಿ, ಸೂಫಿ ಸಂತರೆಂದು ಹೇಳಲಾಗುವ ತನ್ವೀರ್‌ ಪೀರಾ ಅವರಿಗೆ ಐಸಿಸ್‌ ಸಂಪರ್ಕವಿದೆ ಎಂಬ ಬಸನಗೌಡ ಪಾಟೀಲ್‌ ಯತ್ನಾಳ್‌ ಆರೋಪದ ವಿರುದ್ಧ ಕಾಂಗ್ರೆಸ್‌ ಸಿಡಿದೆದ್ದಿದೆ. ಸ್ವತಃ ಸಿಎಂ ಸಿದ್ದರಾಮಯ್ಯ ಕೂಡಾ ಧ್ವನಿ ಎತ್ತಿದ್ದಾರೆ. ಈ ನಡುವೆ ತನ್ವೀರ್‌ ಪೀರಾ ಅವರು ಸಾರೇ ಜಹಾಂ ಸೇ ಅಚ್ಛಾ ಹಾಡಿನ ವಿಡಿಯೊ ಮೂಲಕ ತನ್ನ ದೇಶಭಕ್ತಿ ಪ್ರದರ್ಶನ ಮಾಡಿದ್ದಾರೆ.

ಸಂಬಂಧಿತ ವರದಿ 1. ಸಿಎಂ ಜತೆ ಐಸಿಸ್‌ ಸಂಪರ್ಕಿತ ಮೌಲ್ವಿ; ಎನ್‌ಐಎ ತನಿಖೆಗೆ ಬೊಮ್ಮಾಯಿ ಆಗ್ರಹ
ಸಂಬಂಧಿತ ವರದಿ 2: ಮೌಲ್ವಿ ಬಗ್ಗೆ ಕೇಂದ್ರದಿಂದ ತನಿಖೆ ನಡೆಸಿ ಪ್ರೂವ್‌ ಮಾಡಲಿ; ಯತ್ನಾಳ್‌ಗೆ ಸಿಎಂ ಸವಾಲ್‌
ಸಂಬಂಧಿತ ವರದಿ 3: ಸಾರೇ ಜಹಾಂ ಸೇ ಅಚ್ಛಾ ಹಾಡಿನ ಮೂಲಕ ತಿರುಗೇಟು ನೀಡಿದ ತನ್ವೀರ್‌ ಪೀರಾ
ಸಂಬಂಧಿತ ವರದಿ 4: ತನ್ವೀರ್‌ ಪೀರಾ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮೋದಿಯೇ ಭಾಗವಹಿಸಿದ್ದರು!?

2. ಚೀನಾದಿಂದ ಬಂದೇ ಬಿಟ್ಟಿತು ನ್ಯುಮೋನಿಯಾ ಸೋಂಕು, ದಿಲ್ಲಿಯಲ್ಲಿ 7 ಮಂದಿಗೆ ಪಾಸಿಟಿವ್‌
ಕೋವಿಡ್ ಬಳಿಕ ಚೀನಾದಲ್ಲಿ ಕೋಲಾಹಲ ಸೃಷ್ಟಿಸಿರುವ ನ್ಯುಮೋನಿಯಾ ರೀತಿಯ ಸೋಂಕು (Pneumonia Outbreak) ಇದೀಗ ಭಾರತಕ್ಕೂ ಹರಡಿರುವುದು ಖಚಿತವಾಗಿದೆ. ದೆಹಲಿಯ ಏಮ್ಸ್ (AIIMS Delhi) ಆಸ್ಪತ್ರೆಯಲ್ಲಿ ಇದರ 7 ಪ್ರಕರಣ ಪತ್ತೆಯಾಗಿದೆ. ಪೂರ್ಣ ವರದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ

3. ರಾಜ್ಯದಲ್ಲಿ ಹಳೇ ಪಿಂಚಣಿ ಶೀಘ್ರ ಜಾರಿ? 10 ದಿನದಲ್ಲಿ ಸಮಿತಿ ಪುನಾರಚನೆ: ಕೃಷ್ಣ ಬೈರೇಗೌಡ
ರಾಜ್ಯದಲ್ಲಿ ಹಳೇ ಪಿಂಚಣಿ ಪದ್ಧತಿಯನ್ನೇ (Old Pension Scheme) ಮರು ಜಾರಿಗೆ ಆಗ್ರಹಿಸುತ್ತಿರುವ ಸರ್ಕಾರಿ ನೌಕರರಿಗೆ ಈ ಬಾರಿ ರಾಜ್ಯ ಸರ್ಕಾರದಿಂದ ಗುಡ್‌ ನ್ಯೂಸ್‌ ಸಿಗಲಿದೆಯೇ? ಹೌದು ಎನ್ನುತ್ತಾರೆ ಸಚಿವ ಕೃಷ್ಣ ಭೈರೇಗೌಡ. ಈ ಸಂಬಂಧ ಇರುವ ಸಮಿತಿಯನ್ನು 10 ದಿನದೊಳಗೆ ಪುನಾರಚನೆ ಮಾಡುವುದಾಗಿ ಅವರು ಹೇಳಿದ್ದಾರೆ. ಪೂರ್ಣ ವರದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ

4. 2000 ರೂ. ನೋಟು ಬದಲಾವಣೆ ದಂಧೆ; ವಿಸ್ತಾರ ನ್ಯೂಸ್‌ನಲ್ಲಿ ಬಯಲು
2000 ರೂ. ನೋಟುಗಳನ್ನು ಬದಲಾಯಿಸಲು ಜನ ಸಾಮಾನ್ಯರಿಗೆ ಇನ್ನೂ ಅವಕಾಶವಿದೆ. ಹೀಗಾಗಿ ಜನಸಾಮಾನ್ಯರನ್ನು ಬಳಸಿಕೊಂಡು ವಿನಿಮಯ ಮಾಡುವ ದಂಧೆಯೊಂದು ಹುಟ್ಟಿಕೊಂಡಿದೆ. ಇದನ್ನು ವಿಸ್ತಾರ ನ್ಯೂಸ್‌ ಬಯಲಿಗೆಳೆದಿದೆ. ಪೂರ್ಣ ವರದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ

5.ಇನ್ನು ಮುಂದೆ ಮೋದಿಯನ್ನೂ ಯಾರೂ ಹೀಗೆ ಕರೆಯುವಂತಿಲ್ಲ!
ತಮ್ಮನ್ನು ಮೋದಿಜಿ(modiji), ಆದರಣೀಯ ಮೋದಿಜಿ(aadarniya modiji), ಶ್ರೀ ಮೋದಿಜಿ(Shri Modiji) ಎಂದು ಕರೆಯಬಾರದು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಬಿಜೆಪಿ ಸಂಸದರಿಗೆ ತಿಳಿಸಿದ್ದಾರೆ. ದಿಲ್ಲಿಯಲ್ಲಿ ಆಯೋಜಿಸಲಾಗಿದ್ದ ಭಾರತೀಯ ಜನತಾ ಪಾರ್ಟಿಯ (Bharatiya Janata Party) ಸಂಸದೀಯ ಸಭೆಯಲ್ಲಿ ಅವರು ಈ ಮನವಿ ಮಾಡಿಕೊಂಡಿದ್ದಾರೆಂದು ತಿಳಿದು ಬಂದಿದೆ. ಪೂರ್ಣ ವರದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ

6. ಮತ್ತೆ ನಂದಿನಿ ಹಾಲಿನ ದರ ಏರಿಕೆ? ಯಾವಾಗ? ಎಷ್ಟು ಮಾಡಬಹುದು?
ಕಳೆದ ಆಗಸ್ಟ್‌ನಲ್ಲಿ ನಂದಿನಿ ಹಾಲಿನ (Nandini Milk) ಹಾಗೂ ಮೊಸರಿನ ದರ ಸೇರಿದಂತೆ ಇನ್ನಿತರ ಉತ್ಪನ್ನಗಳ ದರವನ್ನು ಏರಿಸಲಾಗಿತ್ತು. ಇದು ಜನಸಾಮಾನ್ಯರ ಜೇಬಿಗೆ ಹೊರೆಯಾಗಿ ಪರಿಣಮಿಸಿತ್ತು. ಇದೀಗ ಮತ್ತೆ ನಂದಿನಿ ಹಾಲಿನ ದರ ಏರಿಕೆ ಮಾಡುವ ಬಗ್ಗೆ ಕೆಎಂಎಫ್‌ (KMF) ಚಿಂತನೆ ನಡೆಸಿದೆ ಎನ್ನಲಾಗಿದೆ. ಆದರೆ, ಇದಕ್ಕೆ ಸರ್ಕಾರ ಒಪ್ಪುತ್ತದೆಯೇ? ಒಪ್ಪಿದರೂ ಎಷ್ಟು ರೂಪಾಯಿ ಏರಿಕೆ ಆಗಲಿದೆ ಎಂಬುದು ಮಾತ್ರ ಇನ್ನೂ ನಿರ್ಧಾರ ಆಗಿಲ್ಲ. ಪೂರ್ಣ ವರದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ

7. ಲಕ್ಷ ಕೋಟಿ ರೂ. ತೆರಿಗೆ ವಂಚಿಸಿ ಚೀನಾಗೆ ಸಾಗಿಸಿದ ವಿವೊ ಕಂಪನಿ! ಹೇಗೆ ಸಾಧ್ಯವಾಯ್ತು?
2014 ಮತ್ತು 2021ರ ನಡುವೆ ಭಾರತದಿಂದ ಹೊರಗೆ ₹1 ಲಕ್ಷ ಕೋಟಿ ಹಣವನ್ನು ರವಾನೆ ಮಾಡಲು ಶೆಲ್ ಕಂಪನಿಗಳನ್ನು ಬಳಸಲಾಗಿದೆ ಎಂದು ಆರೋಪಿಸಿ ಜಾರಿ ನಿರ್ದೇಶನಾಲಯ (ED probe) ಚೀನಾದ ಫೋನ್ ತಯಾರಕ ವಿವೋ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದೆ. ಪೂರ್ಣ ವರದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ

8. ನಾಳೆಯಿಂದ ಅಂಡರ್‌ 19 ಏಷ್ಯಾ ಕಪ್‌; ಭಾರತ-ಪಾಕ್‌ ಮುಖಾಮುಖಿ ಯಾವಾಗ?
ದುಬೈ (Dubai) ಆತಿಥ್ಯನಲ್ಲಿ ನಡೆಯುವ ಪುರುಷರ ಅಂಡರ್​-19 ಏಷ್ಯಾಕಪ್ (ACC Men’s U19 Asia Cup 2023) ಟೂರ್ನಿಯ ಪಂದ್ಯಾವಳಿಗಳು ಡಿಸೆಂಬರ್ 8 ರಿಂದ ಆರಂಭಗೊಳ್ಳಲಿದೆ. ಟೂರ್ನಿ ಡಿಸೆಂಬರ್ 17 ರವರೆಗೆ ನಡೆಯಲಿದೆ. ಡಿ.8ರ ಉದ್ಘಾಟನ ಪಂದ್ಯದಲ್ಲಿ ಭಾರತ ಅಫಘಾನಿಸ್ತಾನ​ ವಿರುದ್ಧ ಅಭಿಯಾನ ಆರಂಭಿಸಲಿದೆ. ಪಾಕಿಸ್ತಾನ ವಿರುದ್ಧ ಭಾರತ ಡಿ.10 ರಂದು ಕಣಕಿಳಿಯಲಿದೆ. ಪೂರ್ಣ ವರದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ

ಈ ಸುದ್ದಿಯನ್ನೂ ಓದಿ: ಕಿಂಗ್‌ ಕೊಹ್ಲಿ ಕೈಬಿಟ್ಟ ಬಿಸಿಸಿಐ; ಟಿ20 ವಿಶ್ವಕಪ್‌ಗೆ ನೂತನ ಆಟಗಾರನ ಆಯ್ಕೆ

9. ನೋವು ವಿವಾರಕ ಮೆಫ್ಟಾಲ್‌ ಮಾತ್ರೆ ಸೇವನೆಯಿಂದ ಗಂಭೀರ ಪರಿಣಾಮ!
ಮೆಫ್ಟಾಲ್ (Meftal) ಬ್ರ್ಯಾಂಡ್‌ ಹೆಸರಿನಲ್ಲಿ ಜನಪ್ರಿಯವಾಗಿ ಮಾರಾಟವಾಗುವ, ಸಾಮಾನ್ಯವಾಗಿ ಬಳಸುವ ನೋವು ನಿವಾರಕ (Painkiller) ಔಷಧ, ಮಾತ್ರೆಯ ಬಳಕೆಯ ಬಗ್ಗೆ ಇಂಡಿಯನ್ ಫಾರ್ಮಾಕೊಪೊಯಿಯಾ ಕಮಿಷನ್ (Indian Pharmacopoeia Commission-IPC) ಎಚ್ಚರಿಕೆ ನೀಡಿದೆ. ಪೂರ್ಣ ವರದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ

10. ಗಂಡನ ಮೇಲಿನ ಸಿಟ್ಟಿಗೆ ಫೇಕ್‌ ಬಾಂಬ್‌ ಇಟ್ಟಳು! ಇದರ ಹಿಂದಿತ್ತು love ಕಹಾನಿ
ಗಂಡ-ಹೆಂಡತಿ ಜಗಳ ಉಂಡು ಮಲಗುವ ತನಕ ಇರದೇ ಅದು ಸೇಡಾಗಿ ಮುಂದುವರಿದ ಪರಿಣಾಮ ಠಾಣೆ ಮೆಟ್ಟಿಲೇರುವಂತೆ ಮಾಡಿದೆ. ಮೊಬೈಲ್‌ ಹೊಡೆದು ಹಾಕಿದ ಸಿಟ್ಟಿಗೆ ಪತ್ನಿಯೊಬ್ಬಳು ಪ್ರಿಯಕರನ ಮಾತು ಕೇಳಿ ಆರ್‌ಡಿಎಕ್ಸ್‌ ಬಾಂಬ್‌ ಸ್ಫೋಟಿಸುವುದಾಗಿ (Bomb Threat) ಸಂದೇಶ ರವಾನೆ ಮಾಡಿ ಜೈಲುಪಾಲಾಗಿದ್ದಾಳೆ. ಪೂರ್ಣ ವರದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ

Continue Reading

ಕರ್ನಾಟಕ

Lakshmi Hebbalkar : ನಾನು ನಿಮ್ಮಅಕ್ಕ, ಎಂದಿಗೂ ಜತೆಗಿರ್ತೇನೆ; ಹೆಬ್ಬಾಳ್ಕರ್‌ ಮಾತಿಗೆ ಕರಗಿದ ಪ್ರತಿಭಟನೆ

Lakshmi Hebbalkar : ವಿಕಲಚೇತನರ ಬೇಡಿಕೆಗಳನ್ನು ಮುಂದಿನ ಬಜೆಟ್‌ ನಲ್ಲಿ ಈಡೇರಿಸಲು ಪ್ರಯತ್ನಿಸುವುದಾಗಿ ಲಕ್ಷ್ಮೀ ಹೆಬ್ಬಾಳ್ಕರ್‌ ಅವರು ಭರವಸೆ ನೀಡಿದರು. ಈ ಮೂಲಕ ಪ್ರತಿಭಟನೆ ಹಿಂಪಡೆಯಲಾಯಿತು.

VISTARANEWS.COM


on

Lakshmi hebbalkar
Koo

ಬೆಳಗಾವಿ: ವಿಕಲ ಚೇತನರ (Handicapped) ಹಾಗೂ ವಿವಿಧೋದ್ದೇಶ ಮತ್ತು ಗ್ರಾಮೀಣ ಪುನರ್ವಸತಿ ಹಾಗೂ ನಗರ ಪುನರ್ವಸತಿ ಕಾರ್ಯಕರ್ತರ ಒಕ್ಕೂಟದ ಬೇಡಿಕೆಗಳನ್ನು ಸಾಧ್ಯವಾದಷ್ಟು ಮುಂದಿನ ಬಜೆಟ್‌ನಲ್ಲಿ ಈಡೇರಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ (Lakshmi Hebbalkar) ಭರವಸೆ ನೀಡಿದ್ದಾರೆ. ಬೆಳಗಾವಿ ಸುವರ್ಣಸೌಧದ ಬಳಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದವರನ್ನು ಭೇಟಿಯಾದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಪ್ರತಿಭಟನಾಕಾರರ ಅಹವಾಲು ಆಲಿಸಿದರು.

ʻʻನಿಮ್ಮ ಸಹೋದರಿಯಾಗಿ ನಿಮ್ಮ ಜೊತೆ ನಾನಿರುತ್ತೇನೆ. ನಿಮ್ಮ ಬೇಡಿಕೆಗಳನ್ನು ಈಡೆರಿಸಲು ಸತತವಾಗಿ ಪ್ರಯತ್ನಿಸುತ್ತೇನೆ. ನಿಮ್ಮ ಬೆಡಿಕೆಗಳನ್ನು ಮುಖ್ಯಮಂತ್ರಿಗಳ ಗಮನಕ್ಕೆ ತರುತ್ತೇನೆ. 2024ರ ಬಜೆಟ್ ನಲ್ಲಿ ನಿಮ್ಮ ಬೇಡಿಕೆಗಳಲ್ಲಿ ಕನಿಷ್ಠ 2-3 ಬೇಡಿಕೆ ಈಡೇರಿಸಲು ಯತ್ನಿಸುತ್ತೇನೆ. ಕೇವಲ ಭಾಷಣಕ್ಕೆ ಸೀಮಿತವಾಗದೇ ನಿಜವಾದ ಕಾಳಜಿಯಿಂದ ಒಡಹುಟ್ಟಿದವರು ಎಂದು ತಿಳಿದು ಕೆಲಸ ಮಾಡುತ್ತೇನೆʼʼ ಎಂದು ಭರವಸೆ ನೀಡಿದರು.

ಫೆಬ್ರುವರಿಯಲ್ಲಿ ವಿಕಲಚೇತನರ ಒಕ್ಕೂಟದ ಪ್ರಮುಖ ಪದಾಧಿಕಾರಿಗಳನ್ನು ಮುಖ್ಯಮಂತ್ರಿಗಳ ಬಳಿ ಕರೆದೊಯ್ದು ಬೇಡಿಕೆಗಳನ್ನು ಮಂಡಿಸಲು ಅವಕಾಶವನ್ನು ಮಾಡಿಕೊಡುತ್ತೇನೆ. ಹಾಗಾಗಿ ಪ್ರತಿಭಟನೆಯನ್ನು ಹಿಂದಕ್ಕೆ ಪಡೆಯಿರಿ ಎಂದು ಸಚಿವರು ವಿನಂತಿಸಿದರು. ಸಚಿವರ ಭರವಸೆಯ ಹಿನ್ನೆಲೆಯಲ್ಲಿ ಪ್ರತಿಭಟನೆಯನ್ನು ಹಿಂದಕ್ಕೆ ಪಡೆಯಲು ನೌಕರರು ಸಮ್ಮತಿಸಿದರು.

Lakshmi hebbalkar protest

ಮುಖ್ಯಮಂತ್ರಿಗಳಿಗೆ ಧನ್ಯವಾದ ಸಲ್ಲಿಸಿದ ಸಚಿವೆ

ಆರ್ಥಿಕ ಇಲಾಖೆಯ ಒಪ್ಪಿಗೆ ಪಡೆದು ಬೆಂಗಳೂರಿನ ಹಂಸಧ್ವನಿ ಕಿವುಡ ಮತ್ತು ಮೂಕ ಮಕ್ಕಳ ಶಾಲೆಯನ್ನು ವಸತಿಯುತ ಶಾಲೆಯನ್ನಾಗಿ ಪರಿವರ್ತಿಸಲು ಶೀಘ್ರದಲ್ಲಿಯೇ ಕ್ರಮ ಕೈಗೊಳ್ಳಲಾಗುವದೆಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ವಿಧಾನ ಪರಿಷತ್ ನಲ್ಲಿ‌ ಮಂಗಳವಾರ ಭರವಸೆ ನೀಡಿದರು.

ನಿಯಮ 72 ರ ಅಡಿಯಲ್ಲಿ ಕೆ.ಎ.ತಿಪ್ಪೇಸ್ವಾಮಿ ಪ್ರಶ್ನೆಗೆ ಸಚಿವರು ಉತ್ತರ ನೀಡುತ್ತಿದ್ದರು. ವಸತಿ ಶಾಲೆಯನ್ನಾಗಿ ಪರಿವರ್ತಿಸಲು ಈಗಾಗಲೇ ಮಂಜೂರಾಗಿರುವ 20 ಹುದ್ದೆಗಳೊಂದಿಗೆ ಹೆಚ್ಚುವರಿಯಾಗಿ 12 ಹುದ್ದೆಗಳ ಅವಶ್ಯಕತೆ ಇದೆ. ಈ ಹಿನ್ನೆಲೆಯಲ್ಲಿ ಪರಿಸ್ಕೃತ ಪ್ರಸ್ತಾವನೆ ಸ್ವೀಕೃತವಾಗಿದ್ದು, ಆರ್ಥಿಕ ಇಲಾಖೆಯಿಂದ ಮಂಜೂರಾತಿ ಹಾಗೂ ನಿಯಮನುಸಾರ ಭರ್ತಿ ಮಾಡಿದ ನಂತರ ವಸತಿಯುತ ಶಲೆಯನ್ನಾಗಿ ಪರಿವರ್ತಿಸಲು ಕ್ರಮ ವಹಿಸಲಾಗುತ್ತದೆ ಎಂದು ಸಚಿವರು ತಿಳಿಸಿದರು.

ಇದನ್ನೂ ಓದಿ: Assembly Session : ಬರ ಸಂತ್ರಸ್ತ ರೈತರ 2 ಲಕ್ಷ ರೂ.ವರೆಗಿನ ಕೃಷಿ ಸಾಲ ಮನ್ನಾ; HDK ಆಗ್ರಹ

ನಮ್ಮ ಇಲಾಖೆ ಸೇವೆ ಮಾಡುವ ಇಲಾಖೆ, ದುರ್ಬಲರ ಜೀವನಕ್ಕೆ ಅಡಿಪಾಯ ಮಾಡುವ ಇಲಾಖೆ. ಸಮಾಜದ ಕಾಳಜಿ ಇಟ್ಟುಕೊಂಡು ಇಂತಹ ಇಲಾಖೆ ನಿಭಾಯಿಸಲು ಮುಖ್ಯಮಂತ್ರಿಗಳು ಅವಕಾಶ ಕೊಟ್ಟಿದ್ದಾರೆ ಅದಕ್ಕಾಗಿ ಅವರಿಗೆ ಧನ್ಯವಾದ ತಿಳಿಸುತ್ತೇನೆ ಜೊತೆಗೆ ಈ ಚಿಂತನ ಚಾವಡಿಯಲ್ಲಿ ಹಲವಾರು ಸದಸ್ಯರು ಉತ್ತಮ ಸಲಹೆಗಳನ್ನು ಕೊಟ್ಟಿದ್ದಾರೆ. ಅಧಿಕಾರಿಗಳೊಂದಿಗೆ ಚರ್ಚಿಸಿ, ಆದಷ್ಟು ಶೀಘ್ರ ಸಮಗ್ರ ಅಧ್ಯಯನ ಮಾಡಿ ಮುಖ್ಯಮಂತ್ರಿಗಳೊಂದಿಗೂ ಚರ್ಚಿಸಿ, ಉತ್ತಮ ನಿರ್ಧಾರ ಮಾಡುತ್ತೇನೆ ಎಂದು ಸಚಿವರು ತಿಳಿಸಿದರು.

Continue Reading

ಕರ್ನಾಟಕ

Assembly Session : ಬರ ಸಂತ್ರಸ್ತ ರೈತರ 2 ಲಕ್ಷ ರೂ.ವರೆಗಿನ ಕೃಷಿ ಸಾಲ ಮನ್ನಾ; HDK ಆಗ್ರಹ

Assembly Session : ರಾಜ್ಯ ಸರ್ಕಾರ ಬರದಿಂದ ಕಂಗೆಟ್ಟಿರುವ ರೈತರ 2 ಲಕ್ಷ ರೂವರೆಗಿನ ಸಾಲವನ್ನು ರಕ್ಷಣವೇ ಮನ್ನಾ ಮಾಡಬೇಕು ಎಂದು ವಿಧಾನಸಭೆಯಲ್ಲಿ ಆಗ್ರಹಿಸಿದರು.

VISTARANEWS.COM


on

Assembly session Drought HD Kumaraswamy
Koo

ಬೆಳಗಾವಿ: ತೀವ್ರ ಬರದಿಂದ ಕಂಗೆಟ್ಟಿರುವ ರೈತರ 2 ಲಕ್ಷ ರೂಪಾಯಿ ವರೆಗಿನ ಕೃಷಿ ಸಾಲ ಮನ್ನಾ (Agriculture loan wiver) ಮಾಡಬೇಕು ಹಾಗೂ ರಾಜ್ಯ ಕೃಷಿ ವಲಯವನ್ನು ಬರದ ಸಂಕಷ್ಟದಿಂದ (Drought problem) ಪಾರು ಮಾಡಲು ತಕ್ಷಣವೇ 10,000 ಕೋಟಿ ರೂಪಾಯಿ ಬಿಡುಗಡೆ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ (HD Kumaraswamy) ಅವರು ರಾಜ್ಯ ಸರಕಾರವನ್ನು ಒತ್ತಾಯ ಮಾಡಿದರು. ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ವಿಧಾನಸಭೆ ಕಲಾಪದಲ್ಲಿ (Assembly session) ಬರದ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಈ ಸರಕಾರಕ್ಕೆ ಪ್ರಚಾರದ ಮೇಲೆ ಇರುವ ಹುಚ್ಚು ರೈತರ ಬಗ್ಗೆ ಇಲ್ಲ ಎಂದು ಎಚ್.ಡಿ.ಕುಮಾರಸ್ವಾಮಿ ಅವರು ಗಂಭೀರ ಆರೋಪ ಮಾಡಿದರು.

ಬರ ಪರಿಸ್ಥಿತಿ ನಿರ್ವಹಣೆ ಬಗ್ಗೆ ಸರಕಾರದ ಅಸಡ್ಡೆ, ನಿರ್ಲಕ್ಷ್ಯ ನನಗೆ ಅಚ್ಚರಿ, ಕಳವಳ ತಂದಿದೆ. ಕಳೆದ ಆರು ತಿಂಗಳಿನಿಂದ ಕೇವಲ ಗ್ಯಾರಂಟಿಗಳ ಬಗ್ಗೆಯೇ ಕೆಲಸ ಮಾಡುತ್ತಿರುವ ಈ ಸರಕಾರ, ಆರ್ಥಿಕ ಹೊರೆಯನ್ನು ತನ್ನ ಮೇಲೆ ಎಳೆದುಕೊಂಡು ರೈತರಿಗೆ ಪ್ರತಿಯೊಂದಕ್ಕೂ ಬರೆ ಎಳೆಯುತ್ತದೆ. ಬೆಳೆನಾಶದಿಂದ ಅತೀವ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಸರಕಾರ ಸಾಲಮನ್ನಾ ಮೂಲಕ ಸಹಾಯಕ್ಕೆ ಬರಬೇಕು ಎಂದು ಅವರು ಒತ್ತಾಯ ಮಾಡಿದರು.

2001ರಿಂದ ಇಲ್ಲಿಯ ತನಕ ರಾಜ್ಯದಲ್ಲಿ ಬರಗಾಲ ಎದುರಿಸಿದ್ದೇವೆ. ಭಾರೀ ಪ್ರವಾಹ ಸಮಸ್ಯೆಯನ್ನು ಎದುರಿಸಿದ್ದೇವೆ. ಹೊಸ ಸರಕಾರ ಕಾಂಗ್ರೆಸ್ ನಾಯಕತ್ವದಲ್ಲಿ ಬಂದಿದೆ. ಗ್ಯಾರಂಟಿಗಳ ಅನುಷ್ಠಾನಕ್ಕೆ ತರುವ ಭರದಲ್ಲಿ ಉಳಿದ ಕಾರ್ಯಗಳ ಕಡಗಣನೆ ಮಾಡಲಾಗಿದೆ. ಗ್ಯಾರಂಟಿಗಳ ಜಾರಿಗೆ ಹೆಚ್ಚು ಸಮಯ ಕೊಟ್ಟು ಆರ್ಥಿಕ ಹೊರೆ ಅವರೇ ತಂದು ಕೊಂಡಿದ್ದಾರೆ. ಮುಂಗಾರು ಪ್ರಾರಂಭ ಆಗಿದೆ ಅಂತ ರೈತರು ಬಿತ್ತನೆ ಮಾಡಿದ್ದರು. ನಂತರ ಮಳೆ ಕೈ ಕೊಟ್ಟಿದೆ. ಆಗಸ್ಟ್ ತಿಂಗಳಿನಿಂದಲೇ ಈ ವರ್ಷ ಬರಗಾಲದ ಛಾಯೆ ಮೂಡಿದೆ ಎಂದು ಅವರು ಇಡೀ ಬರದ ಚಿತ್ರಣವನ್ನು ಬಿಡಿಸಿಟ್ಟರು.

ಹಣ ಸಾಲದು ಎಂದ ಮಾಜಿ ಸಿಎಂ ಕುಮಾರಸ್ವಾಮಿ

ಜಿಲ್ಲಾಧಿಕಾರಿಗಳ ಪಿಡಿಓ ಅಕೌಂಟ್ ನಲ್ಲಿ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಲು 800 ಕೋಟಿ ರೂಪಾಯಿ ಇಡಲಾಗಿದೆ. ಕೇಂದ್ರ ಸರಕಾರಕ್ಕೆ ಬರಪೀಡಿತ 216 ತಾಲೂಕುಗಳ ನಷ್ಟದ ಬಗ್ಗೆ ಕೇಂದ್ರಕ್ಕೆ ಮಾಹಿತಿ ಕೊಟ್ಟಿದೆ ಸರಕಾರ. ಸರಕಾರ ಕೊಟ್ಟಿರುವ ಅಂದಾಜಿನ ಪ್ರಕಾರ ರೈತರು ಅನುಭವಿಸಿರುವ ಬೆಳೆ ನಷ್ಟದ 10% ಬೆಳೆ ನಷ್ಟಕ್ಕೂ ಪರಿಹಾರ ಕೊಡಲು ಆಗುವುದಿಲ್ಲ. ಹೀಗಾಗಿ ರೈತರು ಸರಕಾರದಿಂದ ನೆರವು ಬಯಸುತ್ತಿದ್ದಾರೆ ಎಂದರು ಮಾಜಿ ಮುಖ್ಯಮಂತ್ರಿಗಳು.

ಇವರು ಹಣಕಾಸು ತಜ್ಞರು. ಸಾಕಷ್ಟು ಅನುಭವ ಇರುವವರು. ಹದಿನಾಲ್ಕು ಬಜೆಟ್ ಮಂಡಿಸಿರುವವರು ಎಂದು ಮಾತಿನಲ್ಲಿಯೇ ಸಿಎಂ ಸಿದ್ದರಾಮಯ್ಯ ಅವರನ್ನು ಕುಟುಕಿದ ಅವರು; ಇನ್ನೊಬ್ಬರು ಇದ್ದಾರೆ. ‘ಬೈ ಬರ್ತ್ ಫಾರ್ಮರ್, ಬೈ ಪ್ರೊಫೆಷನ್ ಬಿಸ್ನೆಸ್ ಮ್ಯಾನ್, ಬೈ ಪ್ಯಾಷನ್ ಪೊಲಿಟಿಷಿಯನ್ ‘ ಎಂದು ಅನೇಕ ಬಾರಿ ಹೇಳಿದ್ದಾರೆ. ಇಷ್ಟೊಂದು ಅನುಭವ ಇರುವವರು ಇದ್ದರೂ ಹೀಗ್ಯಾಕೆ ಆಗುತ್ತಿದೆ ಎಂದು ಅವರು ಸಿಎಂ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ವಿರುದ್ಧ ಟೀಕಾಪ್ರಹಾರ ನಡೆಸಿದರು.

‌ ಕೊಬ್ಬರಿ ಖರೀದಿ ಕೇಂದ್ರ ಪುನಾರಂಭ ಮಾಡಲು ಆಗ್ರಹ

ಕೊಬ್ಬರಿ ಬೆಳೆಗಾರರ ಸಂಕಷ್ಟವನ್ನು ಸದನದಲ್ಲಿ ಎಳೆಎಳೆಯಾಗಿ ಬಿಡಿಸಿಟ್ಟ ಕುಮಾರಸ್ವಾಮಿ ಅವರು; ರೈತರನ್ನು ಉಳಿಸಲು ಕೂಡಲೇ ಕೊಬರಿ ಖರೀದಿ ಕೇಂದ್ರಗಳನ್ನು ಮರು ಆರಂಭ ಮಾಡಬೇಕು ಎಂದು ಆಗ್ರಹಪಡಿಸಿದರು.

ಕೊಬ್ಬರಿ ಬೆಲೆ ಹಿಂದೆ ಕ್ವಿಂಟಾಲ್ ಗೆ 18,000 ರೂಪಾಯಿ ಬೆಲೆ ಇತ್ತು, ಈಗ 7,500 ರೂಪಾಯಿಗೆ ಬಂದಿದೆ, ತೆಂಗು ಬೆಳೆಗಾರರು ಸಂಕಷ್ಟದಲ್ಲಿದ್ದಾರೆ, ನಾಫೆಡ್ ಗೆ ಎಷ್ಟ್ ಪತ್ರ ಬರೆದರೂ ಉಪಯೋಗ ಇಲ್ಲದಾಗಿದೆ. ಕೇಂದ್ರದ ಅಧಿಕಾರಿಗಳ ಜತೆ ಕೂಡ ಮಾತನಾಡಿದ್ದೇನೆ ಎಂದು ಅವರು ಬೇಸರ ವ್ಯಕ್ತಪಡಿಸಿದರು.

ಹಿಂದೆ ಖರೀದಿ ಕೇಂದ್ರಗಳ ಮೂಲಕ ನಾಫೆಡ್ ಪ್ರತಿ ಕ್ವಿಂಟಲ್ ಗೆ 11,750 ರೂಪಾಯಿ ಕೊಟ್ಟು ಕೊಬರಿ ಖರೀದಿ ಮಾಡಿತ್ತು. ಅಂದಾಜು ಒಟ್ಟು 50,000 ಮೆಟ್ರಿಕ್ ಟನ್ ಕೊಬ್ಬರಿ ಖರೀದಿಗೆ 580 ಕೋಟಿ ರೂಪಾಯಿ ವೆಚ್ಚ ಮಾಡಿದೆ. ಕೆಲ ದಿನಗಳ ನಂತರ ಖರೀದಿ ಕೇಂದ್ರಗಳು ಸ್ಥಗಿತವಾದವು. ಕೊಬ್ಬರಿ ದರವೂ 7500 ರೂಪಾಯಿಗೆ ಕುಸಿಯಿತು. ನಾಫೆಡ್ ಅಂದು ಕ್ವಿಂಟಾಲ್ ಕೊಬ್ಬರಿಯನ್ನು 11,750 ರೂಪಾಯಿಗೆ ಖರೀದಿ ಮಾಡಿದ್ದು, ಈಗ ಅದನ್ನು ಖಾಸಗಿ ಎಣ್ಣೆ ಕಂಪನಿಗಳಿಗೆ 7,500 ರೂಪಾಯಿಗೆ ಮಾರಾಟ ಮಾಡುತ್ತಿದೆ. ಅವರಿಗೆ 200 ಕೋಟಿ ನಷ್ಟ ಆಗುತ್ತಿದೆ, ಅದೇನು ದೊಡ್ಡ ವಿಷಯ ಅಲ್ಲ, ಭರಿಸಬಹುದು ಎಂದು ಕುಮಾರಸ್ವಾಮಿ ಅವರು ಪ್ರತಿಪಾದಿಸಿದರು.

ನಾನು ಕೂಡ ತೆಂಗು ಬೆಳೆಗಾರ. ಸುಮಾರು ಒಂದೂವರೆ ಲಕ್ಷದಷ್ಟು ಕೊಬ್ಬರಿಯನ್ನು ಒಂದೂವರೆ ವರ್ಷದಿಂದ ಮಾರಾಟ ಮಾಡಲಾಗದೆ ಹಾಗೆಯೇ ಇಟ್ಟಿದ್ದೇನೆ. ಬೆಳೆಗಾರನಿಗೆ ಎಷ್ಟು ಕಷ್ಟ ಇದೆ ಎಂದು ನನಗೆ ಸ್ವತಃ ಗೊತ್ತು. ಆದರೆ, ಸರಕಾರಗಳ ಚೌಕಾಸಿ ನೋಡಿದರೆ ಬಹಳ ನೋವಾಗುತ್ತದೆ. ಈ ಖರೀದಿ ಯಾವ ಲೆಕ್ಕ? ಇಷ್ಟು ಲಕ್ಷದ ಕೋಟಿ ಬಜೆಟ್ ಮಂಡನೆ ಮಾಡುತ್ತವೆ ಸರಕಾರಗಳು. ರೈತನಿಗೆ ಸಣ್ಣ ಪ್ರಮಾಣದ ಬೆಂಬಲ ಬೆಲೆ ನೀಡುವುದಕ್ಕೆ ಇಷ್ಟು ಮೀನಾಮೇಷ ಏಕೆ? ಎಂದು ಅವರು ಅತೃಪ್ತಿ ವ್ಯಕ್ತಪಡಿಸಿದರು.

ಪ್ರಚಾರದ ಮೇಲೆ ಅಕ್ಕರೆ, ರೈತರ ಬಗ್ಗೆ ಅಸಡ್ಡೆ

ರಾಜ್ಯ ಕಾಂಗ್ರೆಸ್ ಸರಕಾರ ಪ್ರಚಾರಕ್ಕೆ ಕೊಡುವಷ್ಟು ಮಹತ್ವ ರೈತರ ಬಗ್ಗೆ ನೀಡುತ್ತಿಲ್ಲ. ಸಚಿವರೊಬ್ಬರು ಸಿಎಂಗೆ ಪತ್ರ ಬರೆದಿದ್ದಾರೆ, ಪ್ರಚಾರಕ್ಕೆ ಕೊಟ್ಟ ಜಾಹೀರಾತಿನ ಮೊತ್ತ 140 ಕೋಟಿ ರೂಪಾಯಿ ಕೂಡಲೇ ಬಿಡುಗಡೆ ಮಾಡಿ ಎಂದು ಅವರು ಪತ್ರ ಬರೆದಿದ್ದಾರೆ. ಅವರು ರೈತರ ಬಗ್ಗೆ ಇಂಥ ಪತ್ರಗಳನ್ನು ಬರೆದಿದ್ದಾರೆಯೇ? ಎಂದು ಪ್ರಶ್ನಿಸಿದರು ಮಾಜಿ ಮುಖ್ಯಮಂತ್ರಿಗಳು.

ಸಚಿವರಿಗೆ ನಾನು ದೋಷ ಕೊಡುವ ಉದ್ದೇಶದಿಂದ ನಾನು ಈ ಮಾತು ಹೇಳುತ್ತಿಲ್ಲ. ಆದರೆ, ಅವರಿಗೆ ರೈತರಿಗಿಂತ ಪ್ರಚಾರದ ಮೇಲೆ ಮಹತ್ವ ಜಾಸ್ತಿ ಇದ್ದಂತೆ ಕಾಣುತ್ತಿದೆ, ಯಾಕೆ ಹೀಗೆ? ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಗ್ಯಾರಂಟಿ ಕಾರ್ಯಕ್ರಮಗಳಿಗೆ ಕೊಟ್ಟ ಮಹತ್ವ ರೈತರ ನಷ್ಟಗಳಿಗೆ ಯಾಕೆ ಕೊಡಲು ಆಗ್ತಾ ಇಲ್ಲ. ಕೇಂದ್ರದ ವರದಿ ಬಳಿಕ ಬೆಳೆ ಹಾನಿ ಪರಿಹಾರ ಅಂತ ಸಚಿವರು ಹೇಳಿಕೆ ಕೊಟ್ಟಿದ್ದಾರೆ. ಕಲಬುರಗಿ, ರಾಯಚೂರು ಎಲ್ಲಾ ಕಡೆ ಕೈಗೆ ಬರಬೇಕಿದ್ದ ಬೆಳೆ ಹಾಳಾಗಿದೆ. ಪದೇ ಪದೇ ಕೇಂದ್ರದ ಕಡೆ ಬೆರಳು ತೋರಿಸಲಾಗ್ತಿದೆ. ಕೇಂದ್ರದಿಂದ ಮೊದಲನೆ ಕಂತಿನ ಹಣ ಬಂದಿರಬಹುದು. ಕೇಂದ್ರದ ತಂಡ ಬರ ಅಧ್ಯಯನ ಮಾಡುತ್ತಿದ್ದಾಗ ಗದಗ ಜಿಲ್ಲೆಯ ಅಧಿಕಾರಿಗಳು ನಿದ್ದೆ ಮಾಡ್ತಾ ಇದ್ದರು ಎನ್ನುವ ವಿಚಾರ ಜನರ ಆಕ್ರೋಶಕ್ಕೆ ಕಾರಣವಾಗಿತ್ತು. ಆಡಳಿತ ಇಷ್ಟೊಂದು ಜಿಡ್ಡುಗಟ್ಟಿದೆಯೇ? ಎಂದು ಮಾಜಿ ಮುಖ್ಯಮಂತ್ರಿ ಅವರು ಆಕ್ರೋಶ ವ್ಯಕ್ತಪಡಿಸಿದರು.

Continue Reading
Advertisement
dengue flue
ಆರೋಗ್ಯ8 mins ago

Dengue Fever: ಸೊಳ್ಳೆಗಳಿಂದ ದೂರವಿರಿ! ಹೆಚ್ಚುತ್ತಿರುವ ಡೆಂಗ್ಯೂ ಜ್ವರ, 15 ಸಾವಿರ ಪ್ರಕರಣ ದಾಖಲು

Vistara Editorial, Government should conduct exam without any lapse
ಕರ್ನಾಟಕ29 mins ago

Cabinet Meeting: ಕೃಷಿಕರಲ್ಲದವರಿಂದ ಕೃಷಿ ಭೂಮಿ ಖರೀದಿಗೆ ಖೊಕ್‌, ವಿಧೇಯಕ ವಾಪಸ್ ಪಡೆಯಲು ಸಂಪುಟ ತೀರ್ಮಾನ

Raja Marga Father and Daughter
ಅಂಕಣ42 mins ago

Raja Marga Column : 13 ವರ್ಷದ ನನ್ನ ಮಗಳು ಒಮ್ಮಿಂದೊಮ್ಮೆಗೆ ಮಂಕಾಗಿದ್ದು ಯಾಕೆ?

Hair Care Tips
ಆರೋಗ್ಯ59 mins ago

Hair Care Tips: ಕೂದಲು ಚೆನ್ನಾಗಿರಬೇಕೆಂದರೆ ಯಾವ ಆಹಾರ ಸೇವಿಸಬೇಕು?

Heavy Rain warning In karnataka
ಉಡುಪಿ1 hour ago

Karnataka Weather : ಬಟ್ಟೆ ತೊಳೆಯೋಕೆ ವೀಕೆಂಡ್‌ವರೆಗೂ ಕಾಯ್ಬೇಡಿ; ಇನ್ನೊಂದು ವಾರ ಭಾರಿ ಮಳೆ!

Vistara editorial, Let's take precautions for pneumonia infection
ಆರೋಗ್ಯ2 hours ago

ವಿಸ್ತಾರ ಸಂಪಾದಕೀಯ: ನ್ಯುಮೋನಿಯಾ ಸೋಂಕಿನ ಬಗ್ಗೆ ಈಗಲೇ ಎಚ್ಚರ ವಹಿಸೋಣ

How To Remove Tea Stains From Clothes
ಲೈಫ್‌ಸ್ಟೈಲ್2 hours ago

How To Remove Tea Stains From Clothes: ಬಟ್ಟೆಯ ಮೇಲಿನ ಚಹಾ ಕಲೆಯನ್ನು ತೆಗೆಯುವ ಸುಲಭದ ಉಪಾಯ ಇದು!

Dina Bhavishya
ಪ್ರಮುಖ ಸುದ್ದಿ3 hours ago

Dina Bhavishya: ಇಂದು ಈ ರಾಶಿಯವರು ತುಂಬಾ ಎಚ್ಚರ ವಹಿಸಬೇಕು!

Vistara News impact, Governmet to scrap 7 d rule of SCSP and TSP act
ಕರ್ನಾಟಕ8 hours ago

ವಿಸ್ತಾರ ನ್ಯೂಸ್ ಇಂಪ್ಯಾಕ್ಟ್; ಎಸ್ಸಿ, ಎಸ್ಟಿ‌ ಹಣ ಅನ್ಯ ಕಾರ್ಯದ ಬಳಕೆಗೆ ತಡೆ, ಕಾಯ್ದೆ ತಿದ್ದುಪಡಿಗೆ ಸಂಪುಟ ನಿರ್ಧಾರ

WPL Auction 2024
ಕ್ರಿಕೆಟ್8 hours ago

WPL Auction 2024: ವುಮೆನ್ಸ್ ಪ್ರೀಮಿಯರ್ ಲೀಗ್ ಹರಾಜು ಪ್ರಕ್ರಿಯೆಗೆ ಕೇವಲ 2 ದಿನ ಬಾಕಿ

Sharmitha Gowda in bikini
ಕಿರುತೆರೆ2 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ2 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

7th Pay Commission
ನೌಕರರ ಕಾರ್ನರ್1 year ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

Bigg Boss- Saregamapa 20 average TRP
ಕಿರುತೆರೆ2 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ2 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

DCC Bank Recruitment 2023
ಉದ್ಯೋಗ10 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Karnataka bandh Majestic
ಕರ್ನಾಟಕ2 months ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

Kannada Serials
ಕಿರುತೆರೆ2 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Rajendra Singh Gudha
ದೇಶ5 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

kpsc recruitment 2023 pdo recruitment 2023
ಉದ್ಯೋಗ5 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Dina Bhavishya
ಪ್ರಮುಖ ಸುದ್ದಿ3 hours ago

Dina Bhavishya: ಇಂದು ಈ ರಾಶಿಯವರು ತುಂಬಾ ಎಚ್ಚರ ವಹಿಸಬೇಕು!

Madhu Bangarappa in Belagavi Winter Session
ಕರ್ನಾಟಕ13 hours ago

Belagavi Winter Session: ಮುಂದಿನ ವರ್ಷ 8ನೇ ತರಗತಿಗೆ ಉಚಿತ ಸೈಕಲ್‌: ಸಚಿವ ಮಧು ಬಂಗಾರಪ್ಪ

Veer Savarkar and Priyank Kharge
ಕರ್ನಾಟಕ14 hours ago

Veer Savarkar: ನನಗೆ ಬಿಟ್ಟರೆ ಇವತ್ತೇ ಸಾವರ್ಕರ್‌ ಫೋಟೊ ತೆಗೆದು ಹಾಕ್ತೇನೆ: ಸಚಿವ ಪ್ರಿಯಾಂಕ್‌ ಖರ್ಗೆ

CM-Siddaramaiah
ಕರ್ನಾಟಕ20 hours ago

CM Siddaramaiah: ಮೌಲ್ವಿ ಬಗ್ಗೆ ಕೇಂದ್ರದಿಂದ ತನಿಖೆ ನಡೆಸಿ ಪ್ರೂವ್‌ ಮಾಡಲಿ; ಯತ್ನಾಳ್‌ಗೆ ಸಿಎಂ ಸವಾಲು

Dina Bhavihsya
ಪ್ರಮುಖ ಸುದ್ದಿ1 day ago

Dina Bhavishya: ಮದುವೆಗಿದ್ದ ಅಡೆತಡೆಗಳು ಮಾಯ; ಈ ರಾಶಿಯವರಿಗೆ ವಿವಾಹ ಯೋಗ!

R ashok and CM siddaramiah in Karnataka Assembly Session
ಕರ್ನಾಟಕ1 day ago

Belagavi Winter Session: ಮುಸ್ಲಿಮರಿಗೆ 10 ಸಾವಿರ ಕೋಟಿ ಕೊಡ್ತೀರಿ; ರೈತರಿಗೆ 2000 ರು. ಮಾತ್ರವೇ? ಬಿಜೆಪಿ ಕಿಡಿ

CM Siddaramaiah and Tanveer
ಕರ್ನಾಟಕ2 days ago

CM Siddaramaiah: ಸಿಎಂ ಪಕ್ಕ ಐಸಿಸ್‌ ಸಂಪರ್ಕಿತ ಆರೋಪಕ್ಕೆ ಫೋಟೊ ಸಾಕ್ಷಿ ಕೊಟ್ಟ ಯತ್ನಾಳ್!

MLA Basanagouda Patil Yatnal and CM Siddaramaiah
ಕರ್ನಾಟಕ2 days ago

CM Siddaramaiah: ಮುಸ್ಲಿಂ ಸಮಾವೇಶದಲ್ಲಿ ಸಿಎಂ ಪಕ್ಕ ಕುಳಿತಿದ್ದ ಐಸಿಸ್‌ ಸಂಪರ್ಕಿತ; ಸಾಕ್ಷಿ ಕೊಡುವೆನೆಂದ ಯತ್ನಾಳ್‌

We will catch the wild elephant that killed Arjuna
ಕರ್ನಾಟಕ2 days ago

ಕಾರ್ಯಾಚರಣೆ ಸ್ಥಗಿತ; ಅರ್ಜುನನ ಕೊಂದ ಕಾಡಾನೆಯನ್ನು ಹಿಡಿದೇ ತೀರುವೆ-ಮಾವುತನ ಶಪಥ!

Government Job Vistara Exclusive and CM Siddaramaiah
ಉದ್ಯೋಗ2 days ago

Government Job: 2.47 ಲಕ್ಷ ಹುದ್ದೆ ಖಾಲಿ: ಸದನದಲ್ಲಿ ಸದ್ದು ಮಾಡಿದ ವಿಸ್ತಾರ EXCLUSIVE ಸ್ಟೋರಿ

ಟ್ರೆಂಡಿಂಗ್‌