Site icon Vistara News

Golden Star Ganesh: ಹುಟ್ಟುಹಬ್ಬಕ್ಕೂ ಮುಂಚಿತವಾಗಿ ಗುಡ್‌ ನ್ಯೂಸ್‌ ಕೊಟ್ಟ ಗೋಲ್ಡನ್ ಸ್ಟಾರ್ ಗಣೇಶ್

Golden Star Ganesh

ಬೆಂಗಳೂರು: ಸ್ಯಾಂಡಲ್‌ವುಡ್‌ ನಟ ಗೋಲ್ಡನ್ ಸ್ಟಾರ್ ಗಣೇಶ್‌ಗೆ (Golden Star Ganesh) ಜುಲೈ 2ರಂದು ಜನುಮದಿನದ ಸಂಭ್ರಮ. ಹುಟ್ಟುಹಬ್ಬದ ಮುಂಚಿತವಾಗಿ ಹೊಸ ಸಿನಿಮಾದ ಟೈಟಲ್‌ ಲಾಂಚ್‌ ಆಗಿದೆ. ಗಣೇಶ್ ನಾಯಕರಾಗಿ ನಟಿಸುತ್ತಿರುವ 41 ನೇ ಚಿತ್ರವಿದು‌. ಅದುವೇ ʻಕೃಷ್ಣಂ ಪ್ರಣಯ ಸಖಿ”.ಕನ್ನಡದ ಹಲವು ಜನಪ್ರಿಯ ಚಿತ್ರಗಳನ್ನು ನಿರ್ದೇಶಿಸಿರುವ ಶ್ರೀನಿವಾಸರಾಜು ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ.

ಕೌಟುಂಬಿಕ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಬೆಂಗಳೂರಿನಲ್ಲಿ ಬಿರುಸಿನ ಚಿತ್ರೀಕರಣ ನಡೆಯುತ್ತಿದೆ. ಮುಂದಿನ ದಿನಗಳಲ್ಲಿ ಮೈಸೂರು, ರಾಜಸ್ಥಾನ ಹಾಗೂ ಯುರೋಪ್‌ನಲ್ಲಿ ಚಿತ್ರೀಕರಣ ನಡೆಯಲಿದೆ ಎಂದು ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ. ಜುಲೈ 2, ನಾಯಕ ಗಣೇಶ್ ಅವರ ಹುಟ್ಟುಹಬ್ಬ. ಈ ಸಂದರ್ಭದಲ್ಲಿ ಫಸ್ಟ್ ಲುಕ್ ಬಿಡುಗಡೆ ಮಾಡುವ ಮೂಲಕ ಚಿತ್ರತಂಡ ಗಣೇಶ್ ಅವರಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದೆ.

ತ್ರಿಶೂಲ್ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ಪ್ರಶಾಂತ್ ಜಿ ರುದ್ರಪ್ಪ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಈ ಸಂಸ್ಥೆಯಿಂದ ನಿರ್ಮಾಣವಾಗುತ್ತಿರುವ ಮೂರನೇ ಚಿತ್ರವಿದು. ಅರ್ಜುನ್ ಜನ್ಯ ಈ ಚಿತ್ರದ ಸಂಗೀತ ನಿರ್ದೇಶಕರು.

ಇದನ್ನೂ ಓದಿ: Golden Star Ganesh | ಇಂದು ರಾಜ್ಯಾದ್ಯಂತ ಬಿಡುಗಡೆಗೊಂಡ ʻತ್ರಿಬಲ್‌ ರೈಡಿಂಗ್‌ʼ ಸಿನಿಮಾ

ಗಣೇಶ್ ಅವರಿಗೆ ನಾಯಕಿಯಾಗಿ ಮಾಳವಿಕಾ ನಾಯರ್ ನಟಿಸುತ್ತಿದ್ದಾರೆ. ಸಾಧುಕೋಕಿಲ, ರಂಗಾಯಣ ರಘು, ಶಶಿಕುಮಾರ್, ಶ್ರುತಿ, ಸುಧಾರಾಣಿ, ಶ್ರೀನಿವಾಸಮೂರ್ತಿ, ಶಿವಧ್ವಜ್ ಶೆಟ್ಟಿ, ಬೆನಕ ಗಿರಿ ಮುಂತಾದ ಕಲಾವಿದರು “ಕೃಷ್ಣಂ ಪ್ರಣಯ ಸಖಿ” ಚಿತ್ರದಲ್ಲಿ ನಟಿಸಿದ್ದಾರೆ.

Exit mobile version