Ismart ಜೋಡಿ | ಶೋ ಮೂಲಕ ರಂಜಿಸಲು ಬರುತ್ತಿದ್ದಾರೆ ಗೋಲ್ಡನ್‌ ಸ್ಟಾರ್‌ ಗಣೇಶ್‌ - Vistara News

ಕಿರುತೆರೆ

Ismart ಜೋಡಿ | ಶೋ ಮೂಲಕ ರಂಜಿಸಲು ಬರುತ್ತಿದ್ದಾರೆ ಗೋಲ್ಡನ್‌ ಸ್ಟಾರ್‌ ಗಣೇಶ್‌

Ismart ಜೋಡಿ: ಗೋಲ್ಡನ್‌ ಸ್ಟಾರ್‌ ಗಣೇಶ್‌ ಮತ್ತೆ ರಿಯಾಲಿಟಿ ಶೋ ಮೂಲಕ ಕಿರುತೆರೆಗೆ ಬರಲಿದ್ದಾರೆ. ಸಾಕಷ್ಟು ಸಿನಿಮಾಗಳಲ್ಲಿ ಬ್ಯುಸಿ ಆಗಿದ್ದಾರೆ ಗಣೇಶ್‌.

VISTARANEWS.COM


on

Ismart ಜೋಡಿ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಂಜನೆಗೆ ಮತ್ತೊಂದು ಹೆಸರು ರಿಯಾಲಿಟಿ ಶೋಗಳು. ಕಿರುತೆರೆ ಹಾಗೂ ಬೆಳ್ಳಿ ತೆರೆಯ ಗೋಲ್ಡನ್‌ ಸ್ಟಾರ್‌ ಗಣೇಶ್ ಈ ಬಾರಿ Ismart ಜೋಡಿ ಎಂಬ ರಿಯಾಲಿಟಿ ಶೋ ನಿರೂಪಣೆ ಮಾಡಲಿದ್ದಾರೆ. ಇದಕ್ಕಾಗಿ ರಾಕ್‌ಲೈನ್‌ ಸ್ಟುಡಿಯೋದಲ್ಲಿ ಅದ್ಧೂರಿ ವೆಚ್ಚದಲ್ಲಿ ಸೆಟ್ ಹಾಕಲಾಗಿದೆ. ಇಸ್ಮಾರ್ಟ್ ಜೋಡಿ ಕಾರ್ಯಕ್ರಮದ ಶೀರ್ಷಿಕೆ ಗೀತೆಯನ್ನು ಆಲ್‌ ಓಕೆ ಅಲೋಕ್ ಕಂಪೋಸ್ ಮಾಡಿ ಹಾಡಿದ್ದಾರೆ.

ಇಸ್ಮಾರ್ಟ್‌ ಜೋಡಿಯಲ್ಲಿ ರೊಮ್ಯಾಂಟಿಕ್ ತಾರಾ ಜೋಡಿಗಳನ್ನು ಕರೆಸಲಿದ್ದು, ಕನ್ನಡಿಗರ ಮುಂದೆ ರಂಜಿಸಿ, ಕುಣಿಸಿ, ನಗಿಸಲು ಸಜ್ಜಾಗಲಾಗಿದೆ. ಒಟ್ಟಾರೆ ವಾರಾಂತ್ಯದಲ್ಲಿ ಕನ್ನಡಿಗರಿಗೆ ಭರಪೂರ ಮನರಂಜನೆಯ ಇಸ್ಮಾರ್ಟ್ ಜೋಡಿ ಜು.16ರಿಂದ ಪ್ರತಿ ಶನಿವಾರ ಮತ್ತು ಭಾನುವಾರ ರಾತ್ರಿ 9ಕ್ಕೆ ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗಲಿದೆ.

ದನ್ನೂ ಓದಿ Golden Star Ganesh Birthday| ನಾವಾಡದ ಮಾತೆಲ್ಲವ ಮಳೆಯಾಗಿ ಸುರಿಸಿದ ಹುಡುಗ!

ಗಣೇಶ್‌ ಹಿರಿತೆರೆಯಲ್ಲಿ ನಾಯಕರಾಗಿ ನಟಿಸಿ ಜನಪ್ರಿಯತೆ ಗಳಿಸುತ್ತಿರುವುದು ಮಾತ್ರವಲ್ಲದೇ ಸಿನಿಮಾ ನಿರ್ಮಾಣವನ್ನೂ ಮಾಡುತ್ತಿದ್ದಾರೆ. ಜತೆಗೆ ಕಿರುತೆರೆಯಲ್ಲಿ ಸೂಪರ್‌ಮಿನಿಟ್‌, ಗೋಲ್ಡನ್‌ ಗ್ಯಾಂಗ್‌ ಹೀಗೆ ಸೂಪರ್‌ ಹಿಟ್‌ ರಿಯಾಲಿಟಿ ಶೋಗಳಿಗೆ ನಿರೂಪಣೆ ಮಾಡುವ ಮೂಲಕ ಮಿಂಚುತ್ತಿದ್ದಾರೆ.

ಪ್ರೀತಮ್ ಗುಬ್ಬಿ ನಿರ್ದೇಶನದ ‘ಬಾನದಾರಿಯಲ್ಲಿ’ ಸಿನಿಮಾದ ಶೂಟಿಂಗ್‌ನಲ್ಲಿ ಸದ್ಯ ಗಣೇಶ್ ಭಾಗಿಯಾಗಿದ್ದಾರೆ. ಇಲ್ಲಿ ಅವರೊಂದಿಗೆ ನಾಯಕಿರಾಗಿ ರುಕ್ಮಿಣಿ ವಸಂತ್ ಮತ್ತು ರೀಷ್ಮಾ ನಾಣಯ್ಯ ಕಾಣಿಸಿಕೊಳ್ಳಲಿದ್ದಾರೆ. ಜತೆಗೆ ʻತ್ರಿಬಲ್‌ ರೈಡಿಂಗ್‌ʼ ಸಿನಿಮಾ ಬಿಡುಗಡೆಗೆ ಸಜ್ಜಾಗಿದ್ದು, ದಿನಾಂಕವಷ್ಟೇ ಘೋಷಣೆಗೆ ಬಾಕಿ ಇದೆ.

ಇದನ್ನೂ ಓದಿ | Golden Star | ಜನುಮದಿನದ ಹಿನ್ನೆಲೆಯಲ್ಲಿ ಅಭಿಮಾನಿಗಳಲ್ಲಿ ಕ್ಷಮೆ ಕೇಳಿದ್ದೇಕೆ ಗಣೇಶ್‌?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕಿರುತೆರೆ

Neha Gowda: ಮೊದಲ ಮಗುವಿನ ನಿರೀಕ್ಷೆಯಲ್ಲಿ ಗೊಂಬೆ-ಚಂದನ್‌ ದಂಪತಿ

Neha Gowda: 2018ರಂದು ಬೆಂಗಳೂರಿನಲ್ಲಿ ಚಂದನ್ ಮತ್ತು ನೇಹಾ ಗೌಡ ಮದುವೆಯಾಗಿದ್ದರು.ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ನಟಿ ನೇಹಾ ಹಾಗೂ ನಟ ಚಂದನ್​, ಸೋಶಿಯಲ್ ಮೀಡಿಯಾದಲ್ಲಿ ಗುಡ್ ನ್ಯೂಸ್ ಹಂಚಿಕೊಂಡಿದ್ದಾರೆ.ಬಿಗ್‌ ಬಾಸ್‌ ಕನ್ನಡ ಸೀಸನ್‌ 9ರಲ್ಲಿ ಸ್ಪರ್ಧಿಸಿದ್ದರು ನೇಹಾ, ಕನ್ನಡದ ಜತೆಗೆ ತೆಲುಗು, ತಮಿಳು ಭಾಷೆಗಳಲ್ಲೂ ನೇಹಾ ಕೆಲಸ ಮಾಡಿದ್ದಾರೆ. ಪತಿ ಚಂದನ್ ಜತೆ ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗುವ ರಾಜ-ರಾಣಿ ರಿಯಾಲಿಟಿ ಶೋನಲ್ಲೂ ಭಾಗವಹಿಸಿ ಗೆದ್ದಿದ್ದರು

VISTARANEWS.COM


on

Neha Gowda is pregnant the actress shared the good news
Koo

ಮದುವೆಯಾದ 6 ವರ್ಷಗಳ ಬಳಿಕ ಸಿಹಿ ಸುದ್ದಿ ಕೊಟ್ಟಿದ್ದಾರೆ ಲಕ್ಷ್ಮೀ ಬಾರಮ್ಮ ಖ್ಯಾತಿಯ ಗೊಂಬೆ (Neha Gowda) ನೇಹಾ ಹಾಗೂ ಚಂದನ್‌ ದಂಪತಿ.

ನೇಹಾ ಗೌಡ – ಚಂದನ್ ಗೌಡ ದಂಪತಿ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ನೇಹಾ ಗೌಡ – ಚಂದನ್ ಗೌಡ ದಂಪತಿ ಪೋಷಕರಾಗಿ ಬಡ್ತಿ ಪಡೆಯುತ್ತಿದ್ದಾರೆ.

2018ರಂದು ಬೆಂಗಳೂರಿನಲ್ಲಿ ಚಂದನ್ ಮತ್ತು ನೇಹಾ ಗೌಡ ಮದುವೆಯಾಗಿದ್ದರು.ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ನಟಿ ನೇಹಾ ಹಾಗೂ ನಟ ಚಂದನ್​, ಸೋಶಿಯಲ್ ಮೀಡಿಯಾದಲ್ಲಿ ಗುಡ್ ನ್ಯೂಸ್ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: Neha Murder Case: ನೇಹಾ ನಿವಾಸಕ್ಕೆ ಜೆ.ಪಿ.ನಡ್ಡಾ, ರಾಧಾ ಮೋಹನ್ ದಾಸ್ ಭೇಟಿ; ಕುಟುಂಬಸ್ಥರಿಗೆ ಸಾಂತ್ವನ

ʻʻನಮ್ಮ ಕುಟುಂಬಕ್ಕೆ ಹೊಸ ಜೀವನವನ್ನು ಸ್ವಾಗತಿಸಲು ತಯಾರಾಗಿದ್ದೇವೆ. ನಮ್ಮ ಹೃದಯವು ಸಂತೋಷ ಮತ್ತು ನಿರೀಕ್ಷೆಯಿಂದ ತುಂಬಿ ತುಳುಕುತ್ತಿದೆ. ನಿಮ್ಮಲ್ಲಿ ಹಲವರು ಊಹಿಸಿದ್ದೀರಿ. ಹೌದು, ನೀವು ಹೇಳಿದ್ದು ಸರಿ! ನಮ್ಮ ಕುಟುಂಬ ಎರಡರಿಂದ ಮೂರಕ್ಕೆ ಬೆಳೆಯುತ್ತಿದೆ. ನಿದ್ದೆಯಿಲ್ಲದ ರಾತ್ರಿಗಳು, ಅಂತ್ಯವಿಲ್ಲದ ನಗು ಮತ್ತು ಮಿತಿಯಿಲ್ಲದ ಪ್ರೀತಿಯಿಂದ ತುಂಬಿರುವ ಈ ಹೊಸ ಅಧ್ಯಾಯಕ್ಕಾಗಿ ಕಾಯುತ್ತಿದ್ದೇವೆʼʼಎಂದು ಬರೆದುಕೊಂಡಿದ್ದಾರೆ ನೇಹಾ ದಂಪತಿ.

ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗ್ತಿದ್ದ ಲಕ್ಷ್ಮಿ ಬಾರಮ್ಮ ಸೀರಿಯಲ್​ನಲ್ಲಿ ಗೊಂಬೆ ಪಾತ್ರದಲ್ಲಿ ನೇಹಾ ಅವರನ್ನು ಜನ ತುಂಬಾ ಇಷ್ಟಪಟ್ಟಿದ್ದರು. ‘ಸ್ವಾತಿ ಚುನುಕುಲು’ ಧಾರಾವಾಹಿ. ಅಷ್ಟೇ ಅಲ್ಲದೆ ‘ದೀಪವೂ ನಿನ್ನದೇ, ಗಾಳಿಯೂ ನಿನ್ನದೇ, ಕಲ್ಯಾಣ ಪರಿಸು’ ಧಾರಾವಾಹಿಯಲ್ಲಿ ನಟಿಸುತ್ತಿದ್ದರು.

ಬಿಗ್‌ ಬಾಸ್‌ ಕನ್ನಡ ಸೀಸನ್‌ 9ರಲ್ಲಿ ಸ್ಪರ್ಧಿಸಿದ್ದರು ನೇಹಾ, ಕನ್ನಡದ ಜತೆಗೆ ತೆಲುಗು, ತಮಿಳು ಭಾಷೆಗಳಲ್ಲೂ ನೇಹಾ ಕೆಲಸ ಮಾಡಿದ್ದಾರೆ. ಪತಿ ಚಂದನ್ ಜತೆ ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗುವ ರಾಜ-ರಾಣಿ ರಿಯಾಲಿಟಿ ಶೋನಲ್ಲೂ ಭಾಗವಹಿಸಿ ಗೆದ್ದಿದ್ದರು.

Continue Reading

ಕಿರುತೆರೆ

Kannada Serials TRP: ಟಾಪ್‌ 5ನಲ್ಲಿಲ್ಲ ಕಲರ್ಸ್‌ ಕನ್ನಡ ಧಾರಾವಾಹಿಗಳು: ಟ್ರ್ಯಾಕ್‌ಗೆ ಮರಳಿದ ʻಶ್ರಾವಣಿ ಸುಬ್ರಮಣ್ಯʼ!

Kannada Serials TRP: ʻಪುಟ್ಟಕನ ಮಕ್ಕಳುʼ ಧಾರಾವಾಹಿಯಲ್ಲಿ ಪುಟ್ಟಕ್ಕ ಮಗಳು ಸಹನಾ ಎಪಿಸೋಡ್‌ ಪ್ರಸಾರವಾಗುತ್ತಿರುವುದರಿಂದ ಭರ್ಜರಿ ಟಿಆರ್‌ಪಿ ಪಡೆದುಕೊಳ್ಳುತ್ತಿದೆ. ಕಳೆದ ಕೆಲ ವಾರಗಳಿಂದ ‘ಪುಟ್ಟಕ್ಕನ ಮಕ್ಕಳು’ (Puttakkana Makkalu) ಧಾರಾವಾಹಿ ಮೊದಲ ಸ್ಥಾನ ಕಾಪಾಡಿಕೊಂಡು ಬರುತ್ತಿದೆ.ಈ ಮೊದಲು ‘ಲಕ್ಷ್ಮೀ ನಿವಾಸ’ ಧಾರಾವಾಹಿ ಮೊದಲ ಸ್ಥಾನದಲ್ಲಿ ಇರುತ್ತಿತ್ತು. ಆ ಧಾರಾವಾಹಿಯನ್ನು ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಹಿಂದಿಕ್ಕಿದೆ. ಈ ಧಾರಾವಾಹಿಗೆ ಆರಂಭದಲ್ಲಿ ಎಷ್ಟು ಟಿಆರ್​ಪಿ ಬರುತ್ತಿತ್ತೋ ಅಷ್ಟು ಟಿಆರ್​ಪಿ ಈಗ ಸಿಗುತ್ತಿಲ್ಲ. ಈ ಕಾರಣಕ್ಕೆ ಧಾರಾವಾಹಿ ಮೊದಲ ಸ್ಥಾನದಿಂದ ಎರಡನೇ ಸ್ಥಾನಕ್ಕೆ ಕುಸಿದಿದೆ.

VISTARANEWS.COM


on

Kannada Serials TRP Colors Kannada serials not in top 5 Shravani Subramanya is back on track
Koo

ಬೆಂಗಳೂರು: ಪ್ರತಿ ಬಾರಿ ಜೀ ಕನ್ನಡ ವಾಹಿನಿ ಧಾರಾವಾಹಿಯ (Kannada Serials TRP) ʻಲಕ್ಷ್ಮೀ ನಿವಾಸʼ ಟಿಆರ್‌ಪಿಯಲ್ಲಿ ಮೊದಲ ಸ್ಥಾನ ಪಡೆದುಕೊಳ್ಳುತ್ತಿತ್ತು. ಆದರೆ ʻಪುಟ್ಟಕನ ಮಕ್ಕಳುʼ ಧಾರಾವಾಹಿಯಲ್ಲಿ ಪುಟ್ಟಕ್ಕ ಮಗಳು ಸಹನಾ ಎಪಿಸೋಡ್‌ ಪ್ರಸಾರವಾಗುತ್ತಿರುವುದರಿಂದ ಭರ್ಜರಿ ಟಿಆರ್‌ಪಿ ಪಡೆದುಕೊಳ್ಳುತ್ತಿದೆ. ಕಳೆದ ಕೆಲ ವಾರಗಳಿಂದ ‘ಪುಟ್ಟಕ್ಕನ ಮಕ್ಕಳು’ (Puttakkana Makkalu) ಧಾರಾವಾಹಿ ಮೊದಲ ಸ್ಥಾನ ಕಾಪಾಡಿಕೊಂಡು ಬರುತ್ತಿದೆ.

‘ಪುಟ್ಟಕ್ಕನ ಮಕ್ಕಳು’

ಈ ವಾರ ಪುಟ್ಟಕ್ಕನ ಮಕ್ಕಳು ಧಾರಾವಾಹಿ ಮೊದಲ ಸ್ಥಾನ ಪಡೆದುಕೊಂಡಿದೆ. ಪುಟ್ಟಕ್ಕನ ಮಕ್ಕಳು’ ಧಾರಾವಾಹಿಯಲ್ಲಿ ಪುಟ್ಟಕ್ಕ ಕುಟುಂಬ ಸಹನಾ ತೀರಿ ಹೋಗಿದ್ದಾಳೆ ಎಂದು ಎಲ್ಲರೂ ಅಂದುಕೊಂಡಿದ್ದಾರೆ. ಆದರೆ ಸಹನಾ ಏನನ್ನಾದರೂ ಸಾಧಿಸಬೇಕೆಂಬ ಛಲ ಹೊತ್ತಿದ್ದಾಳೆ. ಹೀಗಾಗಿ ಈ ಕಥೆ ಹಲವು ಟ್ವಿಸ್ಟ್ ಪಡೆದು ಸಾಗುತ್ತಿರುವುದರಿಂದ ಪ್ರೇಕ್ಷಕರು ಕೂಡ ಧಾರಾವಾಹಿಯನ್ನು ಮೆಚ್ಚಿಕೊಳ್ಳುತ್ತಿದ್ದಾರೆ. ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ (puttakkana makkalu Serial) ಶುರುವಾಗಿ ಎರಡು ವರ್ಷಗಳು ಸಂದಿವೆ. ಉಮಾಶ್ರೀ, ಸಂಜನಾ ಬುರ್ಲಿ, ಧನುಷ್ ಎನ್​ಎಸ್ ಮೊದಲಾದವರು ಈ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ. ಜೀ ವಾಹಿನಿಯಲ್ಲಿ ಪ್ರಸಾರ ಕಾಣುತ್ತಿದೆ.

‘ಲಕ್ಷ್ಮೀ ನಿವಾಸ’ ಧಾರಾವಾಹಿ

ಸಾಯಿ ನಿರ್ಮಲ ಪ್ರೊಡಕ್ಷನ್‌ ಸಂಸ್ಥೆಯ ನಿರ್ಮಾಣ, ಆದರ್ಶ್ ಉಮೇಶ್ ಹೆಗಡೆ ನಿರ್ದೇಶನ ಈ ಧಾರಾವಾಹಿಗೆ (lakshmi nivasa kannada serial) ಇದೆ. ಕಿರುತೆರೆಯಲ್ಲಿ ಈ ಹಿಂದೆ ಹೀರೊ ಹೀರೋಯಿನ್‌ಗಳಾಗಿ‌ ಮಿಂಚಿದ್ದ ಹಲವು ಅನುಭವಿ ಕಲಾವಿದರು ಈ ಧಾರಾವಾಹಿಯ ಮುಖ್ಯಭೂಮಿಕೆಯಲ್ಲಿದ್ದಾರೆ. ಆರಂಭದಲ್ಲಿ ಒಳ್ಳೆಯ ಟಿಆರ್‌ಪಿಯನ್ನು ಪಡೆದುಕೊಂಡಿತ್ತು. ಪುಟ್ಟಕ್ಕನ ಮಕ್ಕಳು ಧಾರಾವಾಹಿಯಿಂದಾಗಿ ಈಗ ಟಿಆರ್‌ಪಿ ಅಂಕದಲ್ಲಿ ಕುಸಿತ ಕಂಡಿದೆ. ಜೀ ವಾಹಿನಿಯಲ್ಲಿ ಪ್ರಸಾರ ಕಾಣುತ್ತಿದೆ.ಎರಡನೇ ಸ್ಥಾನದಲ್ಲಿ ಈ ಬಾರಿ ‘ಲಕ್ಷ್ಮೀ ನಿವಾಸ’ ಧಾರಾವಾಹಿ ಇದೆ. ಈ ಮೊದಲು ‘ಲಕ್ಷ್ಮೀ ನಿವಾಸ’ ಧಾರಾವಾಹಿ ಮೊದಲ ಸ್ಥಾನದಲ್ಲಿ ಇರುತ್ತಿತ್ತು. ಆ ಧಾರಾವಾಹಿಯನ್ನು ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಹಿಂದಿಕ್ಕಿದೆ. ಈ ಧಾರಾವಾಹಿಗೆ ಆರಂಭದಲ್ಲಿ ಎಷ್ಟು ಟಿಆರ್​ಪಿ ಬರುತ್ತಿತ್ತೋ ಅಷ್ಟು ಟಿಆರ್​ಪಿ ಈಗ ಸಿಗುತ್ತಿಲ್ಲ. ಈ ಕಾರಣಕ್ಕೆ ಧಾರಾವಾಹಿ ಮೊದಲ ಸ್ಥಾನದಿಂದ ಎರಡನೇ ಸ್ಥಾನಕ್ಕೆ ಕುಸಿದಿದೆ.

ಇದನ್ನೂ ಓದಿ: Kannada Serials TRP: ಟಾಪ್‌ 3ರಲ್ಲಿ ಇವೆ ಎರಡು ಧಾರಾವಾಹಿಗಳು; ʻಪುಟ್ಟಕ್ಕನ ಮಕ್ಕಳುʼ ಸೀರಿಯಲ್‌ನದ್ದೇ ಪಾರುಪತ್ಯ!

ಶ್ರಾವಣಿ ಸುಬ್ರಮಣ್ಯ

ಕೆಲವು ದಿನಗಳ ಹಿಂದೆಯಷ್ಟೇ ಜೀ ಕನ್ನಡ ಧಾರಾವಾಹಿಯಲ್ಲಿ ಶ್ರಾವಣಿ ಸುಬ್ರಮಣ್ಯ ಪ್ರಸಾರ ಕಾಣುತ್ತಿದೆ. ಇದು ಈಗ ಮೂರನೇ ಸ್ಥಾನದಲ್ಲಿದೆ. ಸೀತಾ ರಾಮ ಧಾರಾವಾಹಿ ಹಿಂದಿಕ್ಕಿ ಮುಂದೆ ಸಾಗುತ್ತಿದೆ. ಈ ಮೊದಲು ಪ್ರಸಾರ ಕಾಣುತ್ತಿದ್ದ ಬೇಡಿಕೆಯ ಧಾರಾವಾಹಿಗಳ ಟಿಆರ್​ಪಿಯನ್ನು ಈ ಧಾರಾವಾಹಿ ಹಿಂದಿಕ್ಕಿದೆ. ಮನೆಯಲ್ಲಿ ಸಿರಿವಂತಿಕೆಯ ತುಂಬಿದ್ದರೂ ಅಪ್ಪನ ಪ್ರೀತಿಗಾಗಿ ಹಾತೊರೆಯುವ ಮಗಳು ಒಂದೆಡೆಯಾದರೆ ಮನೆಯಲ್ಲಿ ಬಡತನವಿದ್ದರೂ ಪ್ರೀತಿಯಲ್ಲಿ ಶ್ರೀಮಂತರಾಗಿರುವ ಮಧ್ಯಮ ವರ್ಗದ ಕುಟುಂಬದ ಕಥೆಯ ಜತೆ ಎರಡು ಹೃದಯಗಳ ಕಥೆಯನ್ನು ಶ್ರಾವಣಿ ಸುಬ್ರಹ್ಮಣ್ಯ ಮೂಲಕ ಚಾನೆಲ್‌ ಪ್ರೇಕ್ಷಕರ ಮುಂದಿಟ್ಟಿದೆ. ಹಿರಿಯ ಕಲಾವಿದರಾದ ಮೋಹನ್‌ ಮತ್ತು ಬಾಲರಾಜ್‌ , ಕಿರುತೆರೆಯ ಖ್ಯಾತ ಕಲಾವಿದೆಯೆರಾದ ಅಪೂರ್ವ ಮತ್ತು ಸ್ನೇಹ ಇವರು ಜೊತೆ ಯುವ ಕಲಾವಿದರು ಈ ಧಾರಾವಾಹಿಯಲ್ಲಿ ಕಾಣಿಸಿಕೊಂಡಿದ್ದಾರೆ.

ಅಮೃತಧಾರೆ

ಅಮೃತಧಾರೆ’ ಧಾರಾವಾಹಿ ಸಾಕಷ್ಟು (amrithadhare serial kannada) ಟ್ವಿಸ್ಟ್​ಗಳನ್ನು ಪಡೆದು ಸಾಗುತ್ತಿದೆ. ಭೂಮಿಕಾ ಮತ್ತು ಗೌತಮ್‌ ಹನಿಮೂನ್‌ ಹಾಳು ಮಾಡಿದ್ದಾಳೆ ಶಕುಂತಲಾ. ಇದೀಗ ಅಜ್ಜಿ ಮೊಮ್ಮಗ ಗೌತಮ್‌ ಸಂಸಾರ ಶುರು ಮಾಡುವಂತೆ ಒಂದಲ್ಲ ಒಂದು ಪ್ಲ್ಯಾನ್‌ ಮಾಡುತ್ತಿದ್ದಾರೆ. ಮಲ್ಲಿಗೆ ಎಷ್ಟೋ ಶಕುಂತಲಾ ತೊಂದರೆ ಕೊಟ್ಟರೂ ಮಹಿಮಾ ಕಾವಲಾಗಿ ನಿಂತಿದ್ದಳು. ಈಗ ಧಾರಾವಾಹಿ ನಾಲ್ಕನೇ ಸ್ಥಾನದಲ್ಲಿದೆ. ಛಾಯಾ ಸಿಂಗ್ ಹಾಗೂ ರಾಜೇಶ್ ನಟರಂಗ ಅವರ ಕಾಂಬಿನೇಷನ್ ಜನರಿಗೆ ಇಷ್ಟ ಆಗಿದೆ. ಈ ಧಾರಾವಾಹಿ ಉತ್ತಮ ಟಿಆರ್​ಪಿ (Kannada Serials TRP) ಪಡೆದುಕೊಳ್ಳುತ್ತಿದೆ. ನಟರಂಗ, ಛಾಯಾ ಸಿಂಗ್, ಸಾರಾ ಅಣ್ಣಯ್ಯ ಮೊದಲಾದವರು ನಟಿಸುತ್ತಿದ್ದಾರೆ.

ಸೀತಾ ರಾಮ

‘ಸೀತಾ ರಾಮ’ ಧಾರಾವಾಹಿಗೆ ಐದನೇ ಸ್ಥಾನ ಸಿಕ್ಕಿದೆ. ಈಗಾಗಲೇ ಸೀತಾ ರಾಮರ ಎಂಗೇಜ್‌ಮೆಂಟ್‌ ಆಗಿದೆ. ಈ ಧಾರಾವಾಹಿ ಟಿಆರ್​ಪಿಯಲ್ಲಿ ಹಿನ್ನಡೆ ಸಾಧಿಸಿದೆ. ಧಾರಾವಾಹಿ ಜೀ ವಾಹಿನಿಯಲ್ಲಿ ಪ್ರಸಾರ ಕಾಣುತ್ತಿದೆ. ‘ಶ್ರಾವಣಿ ಸುಬ್ರಮಣ್ಯ’ ಧಾರಾವಾಹಿ ಈ ಧಾರಾವಾಹಿಯನ್ನು ಹಿಂದಿಕ್ಕಿದೆ. ಈಗ ರಾಮ ಹಾಗೂ ಸೀತೆಯ ಮದುವೆ ನಿಶ್ಚಯ ಆಗಿದೆ. ಮುಂದಿನ ದಿನಗಳಲ್ಲಿ ಈ ಧಾರಾವಾಹಿಯ ಟಿಆರ್​ಪಿಯಲ್ಲಿ ಏರಿಕೆ ಆಗೋ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

Continue Reading

ಕಿರುತೆರೆ

Sujay Hegde: ನಿಶ್ಚಿತಾರ್ಥ ಮಾಡಿಕೊಂಡ ‘ಮನಸಾರೆ’ ಧಾರಾವಾಹಿಯ ನಟ ಸುಜಯ್ ಹೆಗಡೆ

Sujay Hegde: ದೂರದ ಸಂಬಂಧಿ ಆಗಿರುವ ಪ್ರೇರಣಾ ಎನ್ನುವವರನ್ನು ಸುಜಯ್ ಮದುವೆ ಆಗಲಿದ್ದಾರೆ. ಬೆಂಗಳೂರಿನಲ್ಲಿಯೇ ಈ ನಿಶ್ಚಿತಾರ್ಥ ನಡೆದಿದ್ದು, ಕನ್ನಡ ಕಿರುತೆರೆ ಕಲಾವಿದರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

VISTARANEWS.COM


on

Sujay Hegde Manasare actor Engagement with Prerana
Koo

`ಮನಸಾರೆ’, ‘ಮನಸೆಲ್ಲಾ ನೀನೆ’ ಧಾರಾವಾಹಿಯ ಖ್ಯಾತ ನಟ ಸುಜಯ್ ಹೆಗಡೆ ಅವರು ಬೆಂಗಳೂರಿನಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.

ಪ್ರೇರಣಾ (Prerana) ಜತೆ ನಿಶ್ಚಿತಾರ್ಥ ಮಾಡಿಕೊಂಡಿದ್ದು ಆಗಸ್ಟ್‌ನಲ್ಲಿ ಮದುವೆ ನೆರವೇರಲಿದೆ ಎಂದಿದ್ದಾರೆ. ಈ ಮೂಲಕ ಸುಜಯ್ ಬಾಳಿನಲ್ಲಿ ‘ಬಾಳ ಸಂಗಾತಿ’ ಆಗಮನ ಆಗಿದೆ.

ಇದನ್ನೂ ಓದಿ: Shreerastu Shubhamastu Serial: ʻಶ್ರೀರಸ್ತು ಶುಭಮಸ್ತುʼ ಧಾರಾವಾಹಿಯಿಂದ ಹೊರನಡೆದ ನೇತ್ರಾ ಜಾಧವ್: ʻಶಾರ್ವರಿʼ ಪಾತ್ರಕ್ಕೆ ಹೊಸ ಎಂಟ್ರಿ ಯಾರು?

ಸುಜಯ್ ಹೆಗಡೆ ಅವರು ‘ಆಕಾಶ ದೀಪ’, ‘ಗೋಕುಲದಲ್ಲಿ ಸೀತೆ’, ‘ಶನಿ’, ‘ಮನಸಾರೆ’, ‘ಮನಸೆಲ್ಲಾ ನೀನೆ’, ಕಥೆಯೊಂದು ಶುರುವಾಗಿದೆ‘’ ಧಾರಾವಾಹಿಗಳಲ್ಲಿ ನಟಿಸಿದ್ದಾರೆ. ‘ಮಾಣಿಕ್ಯ’, ‘ವಜ್ರಕಾಯ’, ‘ಮಿ ಎಲ್‌ಎಲ್‌ ಬಿ’ ಸಿನಿಮಾಗಳಲ್ಲಿಯೂ ನಟಿಸಿದ್ದಾರೆ

ಮಾಧ್ಯಮವೊಂದಕ್ಕೆ ಸುಜಯ್ ಹೆಗಡೆ ಮಾಹಿತಿ ನೀಡಿ  ‘ನಮ್ಮದು ಪ್ರೇಮ ವಿವಾಹವಲ್ಲ, ಅರೇಂಜ್ಡ್ ಮ್ಯಾರೇಜ್. ನನ್ನ ಪ್ರೇರಣಾ ನಮ್ಮ ಫ್ಯಾಮಿಲಿ ಫ್ರೆಂಡ್‌ʼʼಎಂದು ಹೇಳಿಕೊಂಡಿದ್ದಾರೆ.

ಮೂಲತಃ ಉತ್ತರ ಕನ್ನಡ ಜಿಲ್ಲೆಯವರಾದ ಸುಜಯ್ ಹೆಗಡೆ ಸದ್ಯಕ್ಕೆ ಬೆಂಗಳೂರು ನಿವಾಸಿ.

Continue Reading

ಕಿರುತೆರೆ

Aditi Prabhudeva: ತಾಯಿಯಾದ ಬಳಿಕ ಮತ್ತೆ ಕಿರುತೆರೆಗೆ ಎಂಟ್ರಿ ಕೊಟ್ಟ ಅದಿತಿ ಪ್ರಭುದೇವ!

Aditi Prabhudeva: ವಿಶಿಷ್ಟ ಜೋಡಿಗಳ ಸಮಾಗಮದ ‘ರಾಜ ರಾಣಿ’ (Raja Rani) ಶೋನಲ್ಲಿ ಅದಿತಿ ಪ್ರಭುದೇವ ಜಡ್ಜ್ ಆಗಿ ಎಂಟ್ರಿ ಕೊಡ್ತಿದ್ದಾರೆ. ಸೃಜನ್ ಲೋಕೇಶ್, ಹಿರಿಯ ನಟಿ ತಾರಾ ಜೊತೆ ಅದಿತಿ ಕೂಡ ಜಡ್ಜ್ ಆಗಿ ಸಾಥ್ ನೀಡುತ್ತಿದ್ದಾರೆ.ಸದ್ಯ ರಿಲೀಸ್ ಆಗಿರುವ ‘ರಾಜ ರಾಣಿ’ ಶೋನ ಪ್ರೋಮೋದಲ್ಲಿ ಅದಿತಿ ಸ್ಟೈಲೀಶ್ ಆಗಿ ಎಂಟ್ರಿ ಕೊಟ್ಟಿದ್ದಾರೆ.

VISTARANEWS.COM


on

Aditi Prabhudeva is returning to reality show judge
Koo

ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ‘ರಾಜಾರಾಣಿ’ ರಿಯಾಲಿಟಿ ಶೋ ಈಗಾಗಲೇ ಎರಡು ಸೀಸನ್‌ಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಇದೀಗ ‘ರಾಜ ರಾಣಿ’ ಸೀಸನ್ ಮೂರರಲ್ಲಿ ನಟಿ ಅದಿತಿ ಪ್ರಭುದೇವ (Aditi Prabhudeva) ಕಾಣಿಸಿಕೊಳ್ಳುತ್ತಿದ್ದಾರೆ .

‘ರಾಜರಾಣಿ ಸೀಸನ್ 1’ರಲ್ಲಿ ನಟಿ ನೇಹಾ ಗೌಡ ಹಾಗೂ ಅವರ ಪತಿ ಚಂದನ್ ವಿನ್ನರ್ಸ್ ಆಗಿದ್ದರು. ಅಂತೆಯೇ ಸೀಸನ್ 2 ನಲ್ಲಿ ನಟಿ ಕಾವ್ಯಾ ಮಹದೇವ್ ಹಾಗೂ ಕುಮಾರ್ ದಂಪತಿ ಗೆದ್ದಿದ್ದರು. ಇದರ ಬೆನ್ನಲ್ಲೇ ಇದೀಗ ‘ರಾಜ ರಾಣಿ ರೀಲೋಡೆಡ್’ ಎಂಬ ಶೀರ್ಷಿಕೆ ಅಡಿ ಸೀಸನ್‌ 3 ಬರುತ್ತಿದೆ.

ವಿಶಿಷ್ಟ ಜೋಡಿಗಳ ಸಮಾಗಮದ ‘ರಾಜ ರಾಣಿ’ (Raja Rani) ಶೋನಲ್ಲಿ ಅದಿತಿ ಪ್ರಭುದೇವ ಜಡ್ಜ್ ಆಗಿ ಎಂಟ್ರಿ ಕೊಡ್ತಿದ್ದಾರೆ. ಸೃಜನ್ ಲೋಕೇಶ್, ಹಿರಿಯ ನಟಿ ತಾರಾ ಜೊತೆ ಅದಿತಿ ಕೂಡ ಜಡ್ಜ್ ಆಗಿ ಸಾಥ್ ನೀಡುತ್ತಿದ್ದಾರೆ.

ಸದ್ಯ ರಿಲೀಸ್ ಆಗಿರುವ ‘ರಾಜ ರಾಣಿ’ ಶೋನ ಪ್ರೋಮೋದಲ್ಲಿ ಅದಿತಿ ಸ್ಟೈಲೀಶ್ ಆಗಿ ಎಂಟ್ರಿ ಕೊಟ್ಟಿದ್ದಾರೆ. ರೆಡ್ ಕಲರ್ ಗೌನ್‌ನಲ್ಲಿ ಮಿಂಚಿದ್ದಾರೆ. ಬಹುದಿನಗಳ ನಂತರ ನೆಚ್ಚಿನ ನಟಿಯನ್ನು ನೋಡಿ ಅಭಿಮಾನಿಗಳು ಖುಷಿಪಡ್ತಿದ್ದಾರೆ. 

Continue Reading
Advertisement
Cow Smuggling
ಕ್ರೈಂ5 mins ago

Cow Smuggling : ಕಂಟೇನರ್‌, ಮಿಲ್ಕ್‌ ವ್ಯಾನ್‌ನಲ್ಲಿತ್ತು 70ಕ್ಕೂ ಹೆಚ್ಚು ಜಾನುವಾರು; ಹಿಂಸೆ ಕೊಟ್ಟವರು ಅರೆಸ್ಟ್‌

Gautam Gambhir
ಕ್ರೀಡೆ28 mins ago

Gautam Gambhir: ಗೌತಮ್​ ಗಂಭೀರ್​ ಭಾರತದ ಮುಂದಿನ ಕೋಚ್​; ಅಧಿಕೃತ ಘೋಷಣೆಯೊಂದೇ ಬಾಕಿ

Rameshwaram Cafe food on Anant Ambani, Radhika Merchant
ಸಿನಿಮಾ30 mins ago

Rameshwaram Cafe: ಅನಂತ್ ಅಂಬಾನಿ ಎರಡನೇ ಪ್ರಿ ವೆಡ್ಡಿಂಗ್‌ನಲ್ಲಿ ಮೇನ್‌ ಮೆನು ರಾಮೇಶ್ವರಂ ಕೆಫೆಯ ಪುಡಿ ಇಡ್ಲಿ ಮತ್ತು ಪುಡಿ ದೋಸೆ!

Family Fighting in Belgavi
ಬೆಳಗಾವಿ33 mins ago

Family Fighting : ಜಮೀನಿನ ವಿಚಾರದಲ್ಲಿ ಕುಟುಂಬಗಳ ಫೈಟ್; ಕುಡುಗೋಲು, ದೊಣ್ಣೆ ಹಿಡಿದು ಮಾರಾಮಾರಿ

Valmiki Corporation Scam
ಕರ್ನಾಟಕ35 mins ago

Valmiki Corporation Scam: ಮೃತ ಅಧೀಕ್ಷಕ ಚಂದ್ರಶೇಖರನ್‌ ಪತ್ನಿ ಅಸ್ವಸ್ಥ; ಆಸ್ಪತ್ರೆಗೆ ದಾಖಲು

prashant kishor
ಪ್ರಮುಖ ಸುದ್ದಿ36 mins ago

Lok Sabha Election 2024: ಈಗಲೂ ಹೇಳ್ತೇನೆ ಕೇಳಿ, ಬಿಜೆಪಿಯೇ ಗೆಲ್ಲೋದು! ಎಕ್ಸಿಟ್ ಪೋಲ್‌ಗೆ ಮೊದಲು ಪ್ರಶಾಂತ್ ಕಿಶೋರ್ ಫೈನಲ್ ಲೆಕ್ಕಾಚಾರ ಹೀಗಿದೆ!

IndiGo Flight
ದೇಶ39 mins ago

IndiGo Flight: ಮತ್ತೊಂದು ಹುಸಿ ಬಾಂಬ್‌ ಕರೆ; ಮುಂಬೈಯಲ್ಲಿ ಇಂಡಿಗೋ ವಿಮಾನದ ತುರ್ತು ಲ್ಯಾಂಡಿಂಗ್‌

bhavani revanna SIT team
ಪ್ರಮುಖ ಸುದ್ದಿ1 hour ago

Bhavani Revanna: ಮಗ ಬಂದ, ಅಮ್ಮ ನಾಪತ್ತೆ! ಮನೆಯಿಂದ ಮಾಯವಾದ ಭವಾನಿ ರೇವಣ್ಣ; ಕಾದು ಕುಳಿತ ಎಸ್‌ಐಟಿ

Valmiki Corporation Scam
ಪ್ರಮುಖ ಸುದ್ದಿ1 hour ago

Valmiki Corporation Scam: ವಾಲ್ಮೀಕಿ ನಿಗಮ ಹಗರಣ ತನಿಖೆಗೆ ಸಿಬಿಐ ಎಂಟ್ರಿ ಫಿಕ್ಸ್; ನಾಗೇಂದ್ರ ವಿರುದ್ಧ ಕ್ರಮಕ್ಕೆ ಖರ್ಗೆ ಸೂಚನೆ

Assault Case
ಬೆಳಗಾವಿ2 hours ago

Assault Case : ಮಾರಾಮಾರಿಯಲ್ಲಿ ತಂದೆ ಕಿವಿ ಕಟ್‌; ಚಾಲಕ ಇಲ್ಲದ್ದಕ್ಕೆ ತಾನೇ ಆಂಬ್ಯುಲೆನ್ಸ್‌ ಓಡಿಸಿ ಆಸ್ಪತ್ರೆಗೆ ಕರೆತಂದ ಮಗ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Assault Case in Shivamogga
ಕ್ರೈಂ2 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ4 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು4 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ5 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ6 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು6 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ7 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ1 week ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 week ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ2 weeks ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

ಟ್ರೆಂಡಿಂಗ್‌