Site icon Vistara News

Actress Leelavathi: ಲೀಲಾವತಿ ಅಂತಿಮ ದರ್ಶನ ಪಡೆದ ಸೊಸೆ, ಮೊಮ್ಮಗ

Grandson, daughter-in-law of Actress Leelavathi

ಬೆಂಗಳೂರು: ನಟಿ ಲೀಲಾವತಿ (Actress Leelavathi) ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಇಂದು ಮುಂಜಾನೆ 5 ಗಂಟೆಯಿಂದ ನೆಲಮಂಗಲದಲ್ಲಿ ಆರಂಭವಾಗಿದ್ದು, ಸಾವಿರಾರು ಜನ ಸೇರಿ ದರ್ಶನ ಪಡೆದರು. ಕೆಲವೇ ಕ್ಷಣಗಳಲ್ಲಿ ರವೀಂದ್ರ ಕಲಾಕ್ಷೇತ್ರಕ್ಕೆ ಪಾರ್ಥಿವ ಶರೀರವನ್ನು ಕೊಂಡೊಯ್ಯಲಾಯಿತು. ಲೀಲಾವತಿ ಅವರ ಅಂತಿಮ ದರ್ಶನ ಪಡೆಯಲು ಚೆನ್ನೈನಿಂದ ಲೀಲಾವತಿ ಅವರ ಸೊಸೆ, ಅಂದರೆ ವಿನೋದ್ ರಾಜ್ ಅವರ ಪತ್ನಿ ಅನು ಮತ್ತು ಲೀಲಾವತಿ (Leelavati) ಮೊಮ್ಮಗ ಯುವರಾಜ್ (Yuvraj) ಆಗಮಿಸಿದ್ದಾರೆ.

ಈ ಮುಂಚೆ ವಿನೋದ್‌ ರಾಜ್‌ ಅವರ ಮದುವೆ ವಿಚಾರ ಸಾಕಷ್ಟು ಸದ್ದು ಮಾಡಿತ್ತು. ವಿನೋದ್‌ ರಾಜ್‌ ಅವರಿಗೆ ಈಗಾಗಲೇ ಮದುವೆಯಾಗಿದೆ ಮತ್ತು ಎದೆಯೆತ್ತರಕ್ಕೆ ಬೆಳೆದಿರುವ ಒಬ್ಬ ಮಗನೂ ಇದ್ದಾನೆ ಎಂದು ಸೋಷಿಯಲ್‌ ಮೀಡಿಯಾದಲ್ಲಿ ನಿರ್ದೇಶಕ ಪ್ರಕಾಶ್‌ ರಾಜ್‌ ಮೆಹು ಪೋಸ್ಟ್‌ ಹಂಚಿಕೊಂಡಿದ್ದರು. ಇದು ಸಾಕಷ್ಟು ವಿವಾದಕ್ಕೂ ಕಾರಣವಾಗಿತ್ತು. ಇದಾದ ಬಳಿಕ ವಿನೋದ್ ರಾಜ್ ಮದುವೆ ವಿಚಾರವನ್ನು ಸ್ವತಃ ಲೀಲಾವತಿ ಮತ್ತು ವಿನೋದ್ ರಾಜ್ ಕೂಡ ಒಪ್ಪಿಕೊಂಡಿದ್ದರು.

ಇದನ್ನೂ ಓದಿ: Actress Leelavathi: 500 ರೂ. ಸಂಭಾವನೆ ಇದ್ದಾಗಲೇ 50 ಸಾವಿರ ರೂ. ಪಡೆಯುತ್ತಿದ್ದ ಲೀಲಾವತಿ!

ನಿರ್ದೇಶಕ ಪ್ರಕಾಶ್‌ ರಾಜ್‌ ಮೆಹು ಹಳೆಯ ಪೋಸ್ಟ್‌

ಅಂತ್ಯಕ್ರಿಯೆ ಎಲ್ಲಿ?

ಮಧ್ಯಾಹ್ನ 2 ಗಂಟೆಯ ವರೆಗೂ ರವೀಂದ್ರ ಕಲಾಕ್ಷೇತ್ರದಲ್ಲಿ ಚಿತ್ರರಂಗದ ಕಲಾವಿದರು ಹಾಗೂ ರಾಜಕೀಯ ಮುಖಂಡರು ಲೀಲಾವತಿ ಅವರ ಅಂತಿಮ ದರ್ಶನ ಪಡೆದುಕೊಳ್ಳಲಿದ್ದಾರೆ. 2 ಗಂಟೆಯ ನಂತರ ಸೋಲದೇವನಹಳ್ಳಿಯ ತೋಟದ ಮನೆಗೆ ಲೀಲಾವತಿಯವರ ಪಾರ್ಥಿವ ಶರೀರವನ್ನು ಕೊಂಡೊಯ್ದು, ಅಲ್ಲಿ ಅಂತಿಮ ವಿಧಿವಿಧಾನಗಳನ್ನು ಪೂರೈಸಿ ಕುಟುಂಬಸ್ಥರು ಅಂತ್ಯ ಸಂಸ್ಕಾರ ಮಾಡಲಿದ್ದಾರೆ.

ಬೆಳಿಗ್ಗೆ 11 ಗಂಟೆಗೆ ಸಿಎಂ ಸಿದ್ದರಾಮಯ್ಯ ಅಂತಿಮ ನಮನ ಸಲ್ಲಿಸಲಿದ್ದಾರೆ. ಸೋಲದೇವನಹಳ್ಳಿಯಲ್ಲಿರುವ ಫಾರ್ಮ್​​ಹೌಸ್​ನಲ್ಲಿ ಬಂಟರ ಸಂಪ್ರದಾಯದಂತೆ ಮಧ್ಯಾಹ್ನ 3:30ಕ್ಕೆ ಅಂತಿಮ ಸಂಸ್ಕಾರ ನಡೆಯಲಿದೆ.

ನೆಲಮಂಗಲದ ಅತೀ ದೊಡ್ಡ ಕ್ರೀಡಾಂಗಣವಾದ ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಬಿಗಿ ಪೊಲೀಸ್ ಬಂದೋಬಸ್ತ್ ಹಾಕಲಾಗಿತ್ತು.

ಕಾರ್ಯಕ್ರಮ ಮುಂದೂಡಿಕೆ
ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಇಂದು ಏರ್ಪಡಿಸಲಾಗಿದ್ದ ʼಕರ್ನಾಟಕ ಸಂಭ್ರಮ-50 ಜಾನಪದ ಜಾತ್ರೆʼಯನ್ನು ಲೀಲಾವತಿ ಅಂತಿಮ ದರ್ಶನದ ಹಿನ್ನೆಲೆಯಲ್ಲಿ ನಾಳೆಗೆ ಮುಂದೂಡಿಕೆ ಮಾಡಲಾಗಿದೆ.

Exit mobile version