Guruprasad: ಲವ್‌ ಹೋಯ್ತು, ಎರಡನೇ ಮದುವೆ ಆಯ್ತು, ಮಗು ಇದೆ; ಇದೆಲ್ಲಾ ನಂಗೆ ಬೇಕಿತ್ತಾ? ಎಂದ ನಿರ್ದೇಶಕ ಗುರುಪ್ರಸಾದ್‌! - Vistara News

South Cinema

Guruprasad: ಲವ್‌ ಹೋಯ್ತು, ಎರಡನೇ ಮದುವೆ ಆಯ್ತು, ಮಗು ಇದೆ; ಇದೆಲ್ಲಾ ನಂಗೆ ಬೇಕಿತ್ತಾ? ಎಂದ ನಿರ್ದೇಶಕ ಗುರುಪ್ರಸಾದ್‌!

ʻಮಠʼ ಸಿನಿಮಾ ಖ್ಯಾತಿಯ ನಿರ್ದೇಶಕ ಗುರುಪ್ರಸಾದ್ (Guruprasad) ಸಿನಿಮಾಗಳ ಬಗ್ಗೆ ಅಪ್‌ಡೇಟ್‌ ನೀಡದೇ ಇದ್ದರೂ ಇದೀಗ ವೈಯಕ್ತಿಕ ಕಾರಣಕ್ಕಾಗಿ ಸಖತ್‌ ಸುದ್ದಿಯಲ್ಲಿದ್ದಾರೆ.

VISTARANEWS.COM


on

Guruprasad
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ʻಮಠʼ ಸಿನಿಮಾ ಖ್ಯಾತಿಯ ನಿರ್ದೇಶಕ ಗುರುಪ್ರಸಾದ್ (Guruprasad) ಸಿನಿಮಾಗಳ ಬಗ್ಗೆ ಅಪ್‌ಡೇಟ್‌ ನೀಡದೇ ಇದ್ದರೂ ಇದೀಗ ವೈಯಕ್ತಿಕ ಕಾರಣಕ್ಕಾಗಿ ಸಖತ್‌ ಸುದ್ದಿಯಲ್ಲಿದ್ದಾರೆ. ಗುರುನಂದ್ ನಟಿಸಿರುವ ‘ರಾಜು ಜೇಮ್ಸ್ ಬಾಂಡ್’ ಸಿನಿಮಾದ ಬೇಕಿತ್ತಾ ಬೇಕಿತ್ತಾ ಹಾಡಿನ ಬಗ್ಗೆ ಮಾತಾಡುವಾಗ ತಮ್ಮ ವಿಚ್ಛೇದನ, ಎರಡನೇ ಮದುವೆ, ಮಗುವಿನ ಬಗ್ಗೆ ರಿವೀಲ್ ಮಾಡಿದ್ದಾರೆ.

‘ಮಠ’, ‘ಎದ್ದೇಳು ಮಂಜುನಾಥ’ ಸಿನಿಮಾಗಳನ್ನು ಗುರುಪ್ರಸಾದ್ ನಿರಂತರವಾಗಿ ಕೊಟ್ಟಿದ್ದರೂ ಸದ್ಯಕ್ಕೆ ಸಿನಿಮಾ ಮಾಡುತ್ತಿಲ್ಲ. ಎರಡು ಸಿನಿಮಾಗಳನ್ನು ಅನೌನ್ಸ್ ಮಾಡಿದ್ದರೂ, ಆ ಸಿನಿಮಾಗಳ ಬಗ್ಗೆ ಸುಳಿವಿಲ್ಲ. ಇತ್ತೀಚೆಗೆ ಗುರುಪ್ರಸಾದ್ ಎರಡನೇ ಮದುವೆ ಬಗ್ಗೆ ಮಾತಾಡಿದ್ದರು. ಮೊದಲ ಪತ್ನಿಗೆ ವಿಚ್ಛೇದನ ನೀಡಿದ್ದು, ಎರಡನೇ ಮದುವೆ ಬಗ್ಗೆ ಮಾತಾಡಿದ್ದಾರೆ. ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸದ್ದು ಮಾಡುತ್ತಿದೆ.

ಗುರುಪ್ರಸಾದ್‌ ಮಾತನಾಡಿ ʻʻನನ್ನ ಜೀವನವನ್ನು ಇಟ್ಟುಕೊಂಡೇ ದೀಪಕ್ ಮಧುವನಹಳ್ಳಿ ಬರೆದಂತೆ ಇದೆ. ಈ ಹಾಡು ನನ್ನ ಬದುಕಿಗೆ ತೀರಾ ಹತ್ತಿರವಾಗಿದೆ. ನನಗೆ ಮೊದಲನೇ ಲವ್ ವಿಫಲ ಆಯ್ತು. ವಿಫಲ ಆಗಿ ಡಿವೋರ್ಸ್ ಕೂಡ ಆಗುತ್ತಿದೆ. ಹಾಗೆ ನೋಡಿದರೆ, ನನ್ನ ಈ ಪರಿಸ್ಥಿತಿಗೆ ಈ ಹಾಡು ಯೋಗ್ಯ ಅಂತ ಅನಿಸುತ್ತದೆ. ಇಷ್ಟು ಆದ್ಮೇಲೆ ಸುಮ್ಮನೆ ಇರಬೇಕಿತ್ತಲ್ವಾ? ಇನ್ನೊಂದು ಮದುವೆಯಾದೆ. ಎರಡು ವರ್ಷದ ಮಗುನೂ ಇದೆ. ಇದೆ ಬೇಕಿತ್ತಾ? ಅನಿಸುತ್ತದೆ ಎಂದು ಗುರುಪ್ರಸಾದ್ ವಿಡಿಯೋದಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: Guruprasad | ಸಿನಿಮಾ ಮಾಡಿ ಕೊಡುವುದಾಗಿ ನಿರ್ಮಾಪಕನಿಗೆ ಟೋಪಿ; ʻಮಠʼ ಖ್ಯಾತಿಯ ನಿರ್ದೇಶಕ ಗುರುಪ್ರಸಾದ್ ಅರೆಸ್ಟ್‌

ಬೇಕಿತ್ತಾ ಬೇಕಿತ್ತಾ? ‘ಫಸ್ಟ್ Rank ರಾಜು’ ಖ್ಯಾತಿಯ ಗುರುನಂದನ್ ನಟಿಸುತ್ತಿರುವ ಹೊಸ ಸಿನಿಮಾ ‘ರಾಜು ಜೇಮ್ಸ್ ಬಾಂಡ್’. ಈ ಸಿನಿಮಾದ ಮೊದಲ ಹಾಡು ಬೇಕಿತ್ತಾ ಬೇಕಿತ್ತಾ ಇತ್ತೀಚೆಗಷ್ಟೇ ರಿಲೀಸ್ ಆಗಿದೆ. ಟಗರು ಖ್ಯಾತಿಯ ಅಥೋನಿ ದಾಸನ್ ಹಾಡಿದ್ದು, ಅನೂಪ್ ಸೀಳಿನ್ ಟ್ಯೂನ್ ಹಾಕಿ, ನಿರ್ದೆಶಕ ದೀಪಕ್ ಮಧುವನಹಳ್ಳಿ ಸಾಹಿತ್ಯ ಬರೆದಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಕರ್ನಾಟಕ

Kalki 2898 AD: ʼಕಲ್ಕಿ 2898 ADʼ ಚಿತ್ರದ ಭೈರವ ಆಂಥಮ್‌ ರಿಲೀಸ್‌!

Kalki 2898 AD: ಪ್ರಭಾಸ್‌, ಅಮಿತಾಭ್ ಬಚ್ಚನ್, ಕಮಲ್ ಹಾಸನ್, ದೀಪಿಕಾ ಪಡುಕೋಣೆ ಮತ್ತು ದಿಶಾ ಪಟಾನಿ ನಟಿಸಿರುವ ‘ಕಲ್ಕಿ 2898 AD’ ಚಿತ್ರದ ಟ್ರೈಲರ್ ಬಿಡುಗಡೆಯ ಬಳಿಕ ಇದೀಗ ಇದೇ ಚಿತ್ರದ ಭೈರವ ಆಂಥಮ್‌ ಬಿಡುಗಡೆಯಾಗಿದೆ. ವೈಜಯಂತಿ ಮೂವೀಸ್‌ ಯೂಟ್ಯೂಬ್‌ ಚಾನಲ್‌ನಲ್ಲಿ ಹಾಡು ರಿಲೀಸ್‌ ಆಗಿದೆ. ನಟ ಪ್ರಭಾಸ್‌ ನಟಿಸಿರುವ ಈ ಚಿತ್ರದ ಹಾಡಿಗೆ ಮೊದಲ ಸಲ ಪಂಜಾಬಿ ಗಾಯಕ ದಿಲ್ಜಿತ್‌ ದೋಸಾಂಜ್‌ ಧ್ವನಿ ನೀಡಿದ್ದಾರೆ. ಸಂತೋಷ್‌ ನಾರಾಯಣನ್‌ ಈ ಹಾಡಿಗೆ ಸಂಗೀತ ನೀಡಿದ್ದಾರೆ.

VISTARANEWS.COM


on

Kalki 2898 AD Movie Bhairava Anthem Released
Koo

ಬೆಂಗಳೂರು: ಪ್ರಭಾಸ್‌, ಅಮಿತಾಭ್ ಬಚ್ಚನ್, ಕಮಲ್ ಹಾಸನ್, ದೀಪಿಕಾ ಪಡುಕೋಣೆ ಮತ್ತು ದಿಶಾ ಪಟಾನಿ ನಟಿಸಿರುವ ‘ಕಲ್ಕಿ 2898 AD’ ಚಿತ್ರದ ಟ್ರೈಲರ್ ಬಿಡುಗಡೆಯ ಬಳಿಕ ಇದೀಗ ಇದೇ ಚಿತ್ರದ ಭೈರವ ಆಂಥಮ್‌ ಬಿಡುಗಡೆಯಾಗಿದೆ. ವೈಜಯಂತಿ ಮೂವೀಸ್‌ ಯೂಟ್ಯೂಬ್‌ ಚಾನಲ್‌ನಲ್ಲಿ ಹಾಡು ರಿಲೀಸ್‌ ಆಗಿದೆ. ನಟ ಪ್ರಭಾಸ್‌ ನಟಿಸಿರುವ ಈ ಚಿತ್ರದ ಹಾಡಿಗೆ ಮೊದಲ ಸಲ ಪಂಜಾಬಿ ಗಾಯಕ ದಿಲ್ಜಿತ್‌ ದೋಸಾಂಜ್‌ ಧ್ವನಿ ನೀಡಿದ್ದಾರೆ. ಸಂತೋಷ್‌ ನಾರಾಯಣನ್‌ ಈ ಹಾಡಿಗೆ ಸಂಗೀತ ನೀಡಿದ್ದಾರೆ.

ಪಕ್ಕಾ ಮಾಸ್‌ ಅವತಾರದಲ್ಲಿ ನಟ ಪ್ರಭಾಸ್‌ ಈ ಹಾಡಿನಲ್ಲಿ ಎದುರಾಗಿದ್ದಾರೆ. ತಲೆಗೆ ಟರ್ಬನ್‌ ಧರಿಸಿ ಮತ್ತು ಪಂಚೆಯಲ್ಲಿ ಮಿಂಚಿದ್ದಾರೆ. ಈಗಾಗಲೇ ಟ್ರೇಲರ್‌ ಮೂಲಕ ಎಲ್ಲರ ಗಮನ ಸೆಳೆದ ಈ ಸಿನಿಮಾ, ಇದೀಗ ಭೈರವ ಆಂಥಮ್‌ ಮೂಲಕ ಕಿಕ್‌ ಹೆಚ್ಚಿಸುತ್ತಿದೆ. ತೆಲುಗು ಮಾತ್ರವಲ್ಲದೆ ಹಿಂದಿ, ತಮಿಳು, ಮಲಯಾಳಂ, ಕನ್ನಡ ಮತ್ತು ಇಂಗ್ಲಿಷ್ ಸೇರಿದಂತೆ ಬಹು ಭಾಷೆಗಳಲ್ಲಿ ಈ ಸಿನಿಮಾ ಬಿಡುಗಡೆಯಾಗಲಿದೆ.

ಇದನ್ನೂ ಓದಿ: Job Recruitment: ಕರ್ನಾಟಕ ಗ್ರಾಮೀಣ ಬ್ಯಾಂಕ್‌ನಲ್ಲಿ 586 ಹುದ್ದೆಗಳಿಗೆ ಅರ್ಜಿ ಆಹ್ವಾನ

ಈ ವರ್ಷದ ಅತೀ ನಿರೀಕ್ಷಿತ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ‘ಕಲ್ಕಿ 2898 AD’ ಚಿತ್ರದಲ್ಲಿ ಅಮಿತಾಭ್‍ ಬಚ್ಚನ್, ಕಮಲ್ ಹಾಸನ್, ಪ್ರಭಾಸ್,‍ ದೀಪಿಕಾ ಪಡುಕೋಣೆ, ದಿಶಾ ಪಠಾಣಿ ಮುಂತಾದವರು ನಟಿಸಿದ್ದಾರೆ. ವೈಜಯಂತಿ ಮೂವೀಸ್ ಬ್ಯಾನರ್‌ನಡಿ ಅಶ್ವಿನಿ ದತ್‍ ನಿರ್ಮಿಸಿರುವ ಈ ಚಿತ್ರವನ್ನು ನಾಗ್‍ ಅಶ್ವಿನ್‍ ನಿರ್ದೇಶನ ಮಾಡಿದ್ದಾರೆ. ‘ಕಲ್ಕಿ 2898 AD’ ಚಿತ್ರವು ಜಗತ್ತಿನಾದ್ಯಂತ ಜೂನ್‍ 27ರಂದು ಬಿಡುಗಡೆ ಆಗಲಿದೆ.

Continue Reading

ಸ್ಯಾಂಡಲ್ ವುಡ್

Rakshit Shetty: ʻಏಕಂʼ ವೆಬ್ ಸಿರೀಸ್​ ರಿಲೀಸ್‌ ಡೇಟ್‌ ಅನೌನ್ಸ್‌ ಮಾಡಿದ ಸಿಂಪಲ್‌ ಸ್ಟಾರ್‌ ರಕ್ಷಿತ್ ಶೆಟ್ಟಿ!

Rakshit Shetty: ರಿಚರ್ಡ್ ಆ್ಯಂಟನಿ’ ಸಿನಿಮಾ ಸೇರಿದಂತೆ ರಕ್ಷಿತ್ ಹಲವು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ನಟನೆ, ನಿರ್ದೇಶನ ಮತ್ತು ನಿರ್ಮಾಣ ಅಂತ ನಟ ತೊಡಗಿಸಿಕೊಂಡಿದ್ದಾರೆ. ರಕ್ಷಿತ್ ಶೆಟ್ಟಿ (Rakshit Shetty) ತಮ್ಮ ನಿರ್ಮಾಣ ಸಂಸ್ಥೆಯಿಂದ ಒಟಿಟಿ ಫ್ಲಾರ್ಟ್ ಫಾರಂಗೆ 8 ಎಪಿಸೋಡ್‌ಗಳ ‘ಏಕಂ’ ವೆಬ್ ಸಿರೀಸ್ ನಿರ್ಮಾಣ ಮಾಡಿದ್ದಾರೆ.

VISTARANEWS.COM


on

Rakshit Shetty Ekam web series release date announce
Koo

ಬೆಂಗಳೂರು: ರಕ್ಷಿತ್ ಶೆಟ್ಟಿ (Rakshit Shetty) ತಮ್ಮ ನಿರ್ಮಾಣ ಸಂಸ್ಥೆಯಿಂದ ಒಟಿಟಿ ಫ್ಲಾರ್ಟ್ ಫಾರಂಗೆ 8 ಎಪಿಸೋಡ್‌ಗಳ ‘ಏಕಂ’ ವೆಬ್ ಸಿರೀಸ್ ನಿರ್ಮಾಣ ಮಾಡಿದ್ದಾರೆ. ಅವರೇ ನಿರ್ದೇಶನ ಕೂಡ ಮಾಡಿದ್ದಾರೆ ಎನ್ನಲಾಗಿದೆ. ಇದೀಗ ಈ ವೆಬ್‌ ಸಿರೀಸ್‌ ಜುಲೈ 13ರಂದು ರಿಲೀಸ್‌ ಆಗುತ್ತಿದೆ. ಈ ಬಗ್ಗೆ ರಕ್ಷಿತ್‌ ಶೆಟ್ಟಿ ಪೋಸ್ಟ್‌ ಮಾಡಿದ್ದು ಹೀಗೆ.  

ʻʻ2020 ಜನವರಿ. ಅಥವಾ ಫೆಬ್ರವರಿಯೇ? ನೆನಪು ಮಬ್ಬಾಗಿದೆ! ಇರಲಿ. ಪರಂವಃ ಹಾಗು ಜರ್ನಿಮ್ಯಾನ್‌
ಫಿಲಂಸ್‌ ಒಟ್ಟಿಗೆ “ಏಕಂ” ಮಾಡಲು ಹೊರಟಿದ್ದು ಅಂದು. ಏನೋ ಹೊಸತೊಂದನ್ನು ಮಾಡುವ
ಉತ್ಸಾಹ ನಮ್ಮಲ್ಲಿ. ಕನ್ನಡದಲ್ಲೊಂದು ವೆಬ್‌ ಸೀರೀಸ್‌ ಹೊರ ಬರಲು ಇದೆ ಸೂಕ್ತ ಸಮಯ
ಎಂದೆನಿಸಿತ್ತು. ಆದರೆ ಅದೇ ಸಮಯಕ್ಕೆ ಕೋವಿಡ್‌ ವಕ್ಕರಿಸಿತು! ಜಗತ್ತೇ ತಲೆ ಕೆಳಗಾದ ಸಮಯ.
ನಮ್ಮಲ್ಲೂ ಆತಂಕ, ಅನಿಶ್ಚಿತತೆ. ಆದರೂ ಹಿಂದೆ ಸರಿಯದೆ ಮುನ್ನುಗ್ಗಿದೆವು.

ಅಕ್ಟೋಬರ್‌ 2021. “ಏಕಂ”ನ ಫೈನಲ್‌ ಕಟ್‌ ನೋಡಿದೆ. ಖುಷಿ ಆಯಿತು. ಹೆಮ್ಮೆ ಎನಿಸಿತು.
ಇದನ್ನ ಜಗತ್ತಿಗೆ ತೋರಿಸಬೇಕೆನಿಸಿತು. ಅದಾಗಿ ಇಂದಿಗೆ ಬರೋಬ್ಬರಿ ಎರಡೂವರೆ ವರ್ಷಗಳು! “ಏಕಂ”
ಅನ್ನು ಹೊರ ತರಲು ಪಟ್ಟ ಶ್ರಮ ಅಷ್ಟಿಷ್ಟಲ್ಲ! ಎಲ್ಲೆಡೆ ನಿರಾಸೆ. ಅದೇ ನೆಪ. ಅದೇ ಸಬೂಬು| ಯಾವುದೇ
ಕೃತಿಯ ಅರ್ಹತೆಯನ್ನ ನಿರ್ಧರಿಸುವ ಅವಕಾಶ, ಹಾಗು ಹಕ್ಕು. ಪ್ರೇಕ್ಷಕರಿಗಿರಬೇಕು ಎ೦ದು ನಾನು
ಭಾವಿಸುತ್ತೇನೆ.

ಇದನ್ನೂ ಓದಿ: Rakshit Shetty: ಸಿಂಪಲ್‌ ಸ್ಟಾರ್‌ಗೆ ಇಂದು ಜನುಮದಿನದ ಸಂಭ್ರಮ; ರಕ್ಷಿತ್‌  ಸಿನಿ ಜರ್ನಿ ಹೀಗಿತ್ತು!

ಹಾಗಾಗಿ, “ಏಕಂ” ಅನ್ನು ನಾವು ನಮ್ಮದೇ ಆದ ವೇದಿಕೆಯಲ್ಲಿ ನಿಮ್ಮ ಮುಂದೆ ತರಲು ನಿಶ್ಚಯಿಸಿದ್ದೇವೆ.
‘ಏಕಂ” ನಿಮಗೆ ಇಷ್ಟವಾಗಬಹುದು. ಇಷ್ಟವಾಗದೇ ಇರಬಹುದು. ಆದರೆ ಈ ಪ್ರಯತ್ನವನ್ನು
ನಿರ್ಲಕ್ಷಿಸುವಂತಿಲ್ಲ ಎ೦ಬುದನ್ನು ನಾನು ಬಲವಾಗಿ. ನಂಬಿದ್ದೇನೆ. “ಏಕಂ” ಒಂದು ಶ್ಲಾಘನೀಯ ಪ್ರಯತ್ನ.
ಇದನ್ನು ನಾವು ಎಷ್ಟು ಪ್ರೀತಿಯಿಂದ ಮಾಡಿದ್ದೇವೋ, ಅಷ್ಟೇ ಪ್ರೀತಿಯಿಂದ ನೀವು ನಮ್ಮ ಈ ಪ್ರಯತ್ನವನ್ನ
ಸ್ವೀಕರಿಸುತ್ತೀರಿ ಎಂದು ಆಶಿಸುತ್ತೇನೆʼʼಎಂದು ರಕ್ಷಿತ್‌ ಶೆಟ್ಟಿ ಹೇಳಿಕೊಂಡಿದ್ದಾರೆ. ಇನ್ನು ಪೋಸ್ಟರ್‌ ಮಾಹಿತಿ ಪ್ರಕಾರ ಈ ಸಿರೀಸ್‌ ಜುಲೈ 13ರಂದು www.ekamtheseries.comನಲ್ಲಿ ರಿಲೀಸ್‌ ಆಗಲಿದೆ.

ರಿಚರ್ಡ್ ಆ್ಯಂಟನಿ’ ಸಿನಿಮಾ ಸೇರಿದಂತೆ ರಕ್ಷಿತ್ ಹಲವು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ನಟನೆ, ನಿರ್ದೇಶನ ಮತ್ತು ನಿರ್ಮಾಣ ಅಂತ ನಟ ತೊಡಗಿಸಿಕೊಂಡಿದ್ದಾರೆ.

ರಕ್ಷಿತ್ ಶೆಟ್ಟಿ ನಟನೆಯ ‘ಸಪ್ತ ಸಾಗರದಾಚೆ ಎಲ್ಲೋ’ ಪಾರ್ಟ್ ʻಎʼ ಹಾಗೂ ʻಬಿʼ ಕಳೆದ ವರ್ಷ ರಿಲೀಸ್ ಆಗಿತ್ತು. ಇದೀಗ ರಿಚರ್ಡ್​ ಆಂಟನಿ ಹಾಗೂ ‘ಪುಣ್ಯಕೋಟಿ ಸಿನಿಮಾಗಳನ್ನು ರಕ್ಷಿತ್‌ ನಿರ್ದೇಶನ ಮಾಡುತ್ತಿದ್ದಾರೆ. ನನ್ನ ಮುಂದಿನ ಎರಡು ಸಿನಿಮಾಗಳಿಗೆ (ʻರಿಚರ್ಡ್​ ಆಂಟನಿ’ ಹಾಗೂ ‘ಪುಣ್ಯಕೋಟಿ’) ಪರಶುರಾಮ ಹಾಗೂ ಆತನ ಕೊಡಲಿಯೇ ಸ್ಫೂರ್ತಿ. ಈ ಕಥೆ ಜತೆ ಹೀಗಾಗಲೇ 4 ವರ್ಷ ಕಳೆದಿದ್ದೇನೆ. ಇನ್ನೂ ನಾಲ್ಕು ವರ್ಷ ಕಳೆಯೋದು ಇದೆ ಅನಿಸುತ್ತಿದೆ ಎಂದು ರಕ್ಷಿತ್ ಶೆಟ್ಟಿ ಈ ಹಿಂದೆ ಹೇಳಿಕೊಂಡಿದ್ದರು.

ರಿಚರ್ಡ್‌ ಆಂಟನಿ ಜತೆಗೆ ರಕ್ಷಿತ್‌ ಶೆಟ್ಟಿ ಹಲವು ಯೋಜನೆಗಳನ್ನು ಹೊಂದಿದ್ದಾರೆ. ಈ ಬಗ್ಗೆ ಈ ಹಿಂದೆ ಅವರು ಟ್ವೀಟ್‌ ಹಂಚಿಕೊಂಡಿದ್ದರು. ʻʻಸಪ್ತ ಸಾಗರದಾಚೆ ಎಲ್ಲೋ ನಂತರ ನನ್ನ ಲೈನ್ ಅಪ್‌ಗಳು ಸಾಕಷ್ಟು ಸ್ಪಷ್ಟವಾಗಿವೆ. ಅಂದರೆ ರಿಚರ್ಡ್​ ಆಂಟನಿ, ಪುಣ್ಯ ಕೋಟಿ 1 (PK 1), ಪುಣ್ಯ ಕೋಟಿ 2 (PK 2), (RA), PK 1 ಮತ್ತು 2,ಮಿಡ್ನೈಟ್ ಟು ಮೋಕ್ಷ (M2M) ಇವುಗಳು ನನಗೆ ನಿದ್ದೆಯಿಲ್ಲದ ರಾತ್ರಿಗಳನ್ನು ನೀಡುವ ನಾಲ್ಕು ಚಲನಚಿತ್ರಗಳಾಗಿವೆ. ಆದರೆ ಕಿರಿಕ್‌ ಪಾರ್ಟಿ 2 (KP2) ಗಾಗಿ ನಾನು ವಿಭಿನ್ನ ಯೋಜನೆಗಳನ್ನು ಹೊಂದಿದ್ದೇನೆʼʼ ಎಂದಿದ್ದರು.

Continue Reading

ಸ್ಯಾಂಡಲ್ ವುಡ್

Kannada New Movie: ʻರಾಮರಸ’ಸಿನಿಮಾಗೆ ಬಿಗ್ ಬಾಸ್ ವಿನ್ನರ್ ಕಾರ್ತಿಕ್ ಹೀರೊ ; ಬೆಂಬಲಿಸಿದ ಸುದೀಪ್!

Kannada New Movie: ಬಿಗ್ ಬಾಸ್ ವಿನ್ನರ್ ಕಾರ್ತಿಕ್ ಮಹೇಶ್ “ರಾಮರಸ” ಚಿತ್ರದ ನಾಯಕನಾಗಿ ನಟಿಸುತ್ತಿದ್ದಾರೆ. ಇತ್ತೀಚಿಗೆ ನಡೆದ ಸಮಾರಂಭದಲ್ಲಿ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ನಾಯಕನಟನನ್ನು ಪರಿಚಯಿಸುವ ವಿಶೇಷ ವಿಡಿಯೋ ಬಿಡುಗಡೆ ಮಾಡುವ ಮೂಲಕ “ರಾಮರಸ” ಚಿತ್ರದ ನಾಯಕ ಕಾರ್ತಿಕ್ ಮಹೇಶ್ ಎಂದು ತಿಳಿಸಿದರು.

VISTARANEWS.COM


on

Kannada New Movie RAMARASA Hero Introduction By Kiccha Sudeepa
Koo

ಬೆಂಗಳೂರು: ಗುರುದೇಶಪಾಂಡೆ ಅವರು ನಿರ್ಮಿಸುತ್ತಿರುವ, ‘ಜಟ್ಟ’ ಗಿರಿರಾಜ್‍ ನಿರ್ದೇಶನದ ‘ರಾಮರಸ’ ಚಿತ್ರದಲ್ಲಿ “ಜಿ ಅಕಾಡೆಮಿ”ಯಲ್ಲಿ ನಟನೆ ಕಲಿತಿರುವ ಹದಿನಾರು ಪ್ರತಿಭೆಗಳು ನಟಿಸುತ್ತಿರುವುದು ಗೊತ್ತಿರುವ ವಿಷಯ. ಈ ಹದಿನಾರು ಜನ ಯುವಪ್ರತಿಭೆಗಳೊಂದಿಗೆ ಖ್ಯಾತ ನಟರೊಬ್ಬರು ನಾಯಕನಾಗಿ ನಟಿಸಲಿದ್ದಾರೆ ಎಂದು ತಿಳಿಸಲಾಗಿತ್ತು. ಈಗ “ರಾಮರಸ” ಚಿತ್ರಕ್ಕೆ ನಾಯಕನ‌ ಆಯ್ಕೆಯಾಗಿದೆ. ಬಿಗ್ ಬಾಸ್ ವಿನ್ನರ್ ಕಾರ್ತಿಕ್ ಮಹೇಶ್ “ರಾಮರಸ” ಚಿತ್ರದ ನಾಯಕನಾಗಿ ನಟಿಸುತ್ತಿದ್ದಾರೆ. ಇತ್ತೀಚಿಗೆ ನಡೆದ ಸಮಾರಂಭದಲ್ಲಿ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ನಾಯಕನಟನನ್ನು ಪರಿಚಯಿಸುವ ವಿಶೇಷ ವಿಡಿಯೋ ಬಿಡುಗಡೆ ಮಾಡುವ ಮೂಲಕ “ರಾಮರಸ” ಚಿತ್ರದ ನಾಯಕ ಕಾರ್ತಿಕ್ ಮಹೇಶ್ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸುದೀಪ್‍, ‘ನಾನು ‘ಬಿಗ್‍ ಬಾಸ್‍’ ಕಾರ್ಯಕ್ರಮವನ್ನು ಎಷ್ಟು ವರ್ಷಗಳಿಂದ ನಡೆಸಿಕೊಂಡು ಬರುತ್ತಿದ್ದೇನೆ. ಆದರೆ, ಪ್ರತಿ ಸೀಸನ್‍ನಲ್ಲೂ ಒಬ್ಬ ಹೊಸ ಹೀರೋ ಹುಟ್ಟಿಕೊಳ್ಳುತ್ತಿದ್ದಾನೆ. ‘ಬಿಗ್‍ ಬಾಸ್‍’ ಗೆಲ್ಲುವುದು ಅಷ್ಟು ಸುಲಭವಲ್ಲ. ಕಾರ್ತಿಕ್‍ ಅವರಿಗಂತೂ ಬಹಳಷ್ಟು ಸ್ಪರ್ಧಿಗಳಿದ್ದರು. ಅದು ಅವರಿಗೆ ಗೊತ್ತು. “ಬಿಗ್ ಬಾಸ್” ಗೆದ್ದ ಮೇಲೆ ಕಾರ್ತಿಕ್ ಅವರಿಗೆ ಒಳ್ಳೆಯ ಅವಕಾಶಗಳು ಬರುತ್ತಿದೆ‌. ಕಾರ್ತಿಕ್ ಸರಿಯಾದ ಹಾದಿಯಲ್ಲಿದ್ದಾರೆ. ಪ್ಯಾಷನೇಟ್‍ ಜನರು ಅವರ ಜೊತೆಯಾಗಿದ್ದಾರೆ. ಈ ಅವಕಾಶವನ್ನು ಚೆನ್ನಾಗಿ ಬಳಸಿಕೊಳ್ಳಿ’ ಎಂದು ಹಾರೈಸಿದರು. ನಿರ್ಮಾಪಕ ಗುರು ದೇಶಪಾಂಡೆ ನಿರ್ಮಾಣದ ಶೈಲಿ ಹಾಗೂ ನಿರ್ದೇಶಕ ಗಿರಿರಾಜ್ ಅವರ ಕಾರ್ಯವೈಖರಿಯನ್ನು ಸುದೀಪ್ ಶ್ಲಾಘಿಸಿದರು.

ಇದನ್ನೂ ಓದಿ: Actress Nayanathara: ‘ಬಾಹುಬಲಿ’ ಸಿನಿಮಾ ದೃಶ್ಯದ ಮರುಸೃಷ್ಟಿಯಲ್ಲಿ ವಿಘ್ನೇಶ್ ಶಿವನ್ ಪುತ್ರರು!

ನಾಯಕ ಕಾರ್ತಿಕ್‍ ಮಹೇಶ್‍ ಮಾತನಾಡಿ, ʻʻಮೊದಲಿನಿಂದಲೂ ನನಗೆ ಸುದೀಪ್ ಸರ್ ಪ್ರೋತ್ಸಾಹ ನೀಡುತ್ತ ಬಂದಿದ್ದಾರೆ. ಅವರಿಗೆ ಹಾಗೂ ಈ ಚಿತ್ರದಲ್ಲಿ ಅವಕಾಶ ಕೊಟ್ಟ ನಿರ್ಮಾಪಕರಿಗೆ, ನಿರ್ದೇಶಕರಿಗೆ ಧನ್ಯವಾದಗಳು. ಒಳ್ಳೆಯ ತಂಡದೊಂದಿಗೆ ಕೆಲಸ ಮಾಡುತ್ತಿರುವ ಖುಷಿಯಿದೆ. ಸುದೀಪ್ ಅವರ ಮೇಲೆ ನನಗೆ ವಿಶೇಷ ಪ್ರೀತಿ ಹಾಗೂ ಗೌರವ. ಹಾಗಾಗಿ “ಬಿಗ್ ಬಾಸ್” ಫಿನಾಲೆಯಲ್ಲಿ ಅವರು ಕೊಟ್ಟಿದ್ದ ಡ್ರೆಸ್ ಅನ್ನು ಇಂದು ಹಾಕಿಕೊಂಡು ಬಂದಿದ್ದೇನೆʼʼ ಎಂದರು.

ʻʻಪ್ರತಿಯೊಬ್ಬ ನಿರ್ದೇಶಕನಿಗೂ ಗುರು ದೇಶಪಾಂಡೆ ಅವರಂತಹ‌ ನಿರ್ಮಾಪಕರು ಸಿಗಬೇಕು.‌ ಅವರಿಗೆ ಸಿನಿಮಾ ಮೇಲೆ ತುಂಬಾ ಪ್ರೀತಿ. ಅದ್ದೂರಿಯಾಗಿ ಮೂಡಿಬಂದಿರುವ ನಾಯಕನ ಪರಿಚಯದ ವಿಶೇಷ ವಿಡಿಯೋ ಅದಕ್ಕೆ ಸಾಕ್ಷಿ. ಕಾರ್ತಿಕ್ ಮಹೇಶ್ ಅವರು ಈ ಚಿತ್ರದ ನಾಯಕನಾಗಿ ಆಯ್ಕೆಯಾಗಿದ್ದಾರೆ. ಸುದೀಪ್ ಅವರು ನಾಯಕನನ್ನು ಪರಿಚಯಿಸಿದ್ದಾರೆ. ಈ ಸಂದರ್ಭದಲ್ಲಿ ಸುದೀಪ್ ಅವರಿಗೆ ವಿಶೇಷ ಧನ್ಯವಾದ ತಿಳಿಸುತ್ತೇನೆʼʼ ಎಂದರು ನಿರ್ದೇಶಕ ಗಿರಿರಾಜ್.

ಜಿ ಅಕಾಡೆಮಿಯ 16 ಜನ ಹೊಸ ಪ್ರತಿಭೆಗಳಿಗೆ ತರಬೇತಿ ನೀಡಿ ಈ ಚಿತ್ರದಲ್ಲಿ ನಟಿಸಲು ಅವಕಾಶ ನೀಡಲಾಗಿದೆ. ಅವರೊಂದಿಗೆ ಜನಪ್ರಿಯ ನಟರೊಬ್ಬರು ನಾಯಕನಾಗಿ ನಟಿಸಲಿದ್ದಾರೆ ಎಂದು ನಾನು ಮೊದಲು ತಿಳಿಸಿದೆ. “ರಾಮರಸ” ಚಿತ್ರಕ್ಕೆ ಕಾರ್ತಿಕ್ ಮಹೇಶ್ ನಾಯಕನಾಗಿದ್ದಾರೆ. ನಮ್ಮ ಚಿತ್ರದ ನಾಯಕನನ್ನು ಪರಿಚಯಿಸುವ ಟೀಸರ್ ಬಿಡುಗಡೆ ಮಾಡಿಕೊಟ್ಟ ಕಿಚ್ಚ ಸುದೀಪ್ ಅವರಿಗೆ ಅನಂತ ಧನ್ಯವಾದಗಳು ಎಂದರು ನಿರ್ಮಾಪಕ ಗುರು ದೇಶಪಾಂಡೆ.

‘ರಾಮರಸ’ ಚಿತ್ರಕ್ಕೆ ಬಿ.ಜೆ. ಭರತ್ ಸಂಗೀತ, ಎ.ವಿ. ಕೃಷ್ಣಕುಮಾರ್, ಅರ್ಜುನ್‍ ಕಿಟ್ಟು ಸಂಕಲನವಿದೆ. ಮುರಳಿ ಮಾಸ್ಟರ್ ನೃತ್ಯ ನಿರ್ದೇಶನ ಹಾಗೂ ಪುನೀತ್ ಆರ್ಯ ಅವರ ಗೀತರಚನೆಯಿರುವ ಈ‌ ಚಿತ್ರದ ಕಾರ್ಯಕಾರಿ ನಿರ್ಮಾಪಕರು‌ ಸುನೀಲ್ ಹೆಚ್ ಸಿ ಗೌಡ.

Continue Reading

ಕ್ರೈಂ

Actor Darshan: ಅಂದು `ತಗಡು’ ಅಂದಿದ್ದ ದರ್ಶನ್‌ಗೆ ಇಂದು ಉಮಾಪತಿ ಕೌಂಟರ್!

Actor Darshan: ಈ ಹಿಂದೆ ಉಮಾಪತಿ ಅವರು ಕಾಟೇರ ಟೈಟಲ್‌ ನಾನೇ ಕೊಟ್ಟಿದ್ದು ಎಂದು ಹಲವಾರು ಸಂದರ್ಶನಗಳಲ್ಲಿ ಹೇಳಿದ್ದರು. ದರ್ಶನ್‌ ಈ ಬಗ್ಗೆ ಮಾತನಾಡಿ ʻʻತಗಡೇ, ರಾಬರ್ಟ್‌ ಕಥೆ ನಿನಗೆ ಕೊಟ್ಟಿದ್ದು ನಾವು. ಇಂಥ ಒಳ್ಳೆ ಕಥೆ ಮತ್ತೆ ಯಾಕ್‌ ಬಿಟ್ಟೆ ನೀನು?ʼʼ ಎಂದು ವೇದಿಕೆ ಮೇಲೆಯೇ ಉಮಾಪತಿಗೆ ಪ್ರಶ್ನೆ ಮಾಡಿದ್ದರು. ʻಈ ಕಥೆ ನಾನು ಮಾಡಿಸಿದೆ, ಕಥೆ ನಾನು ಕೊಟ್ಟೆ ಎಂದು ಎಂದು ಹೇಳಿಕೊಂಡು ಬಂದಿದ್ದೆಯಲ್ವಾ?ಇಂಥ ಒಳ್ಳೆ ಕಥೆ ಯಾಕೆ ಬಿಟ್ಟೆ ನೀನು. ಅಯ್ಯೋ ತಗಡೇ… ಎಲ್ಲ ಆಧಾರ ಇಟ್ಟುಕೊಂಡೇ ಮಾತನಾಡಬೇಕುʼʼ ಎಂದು ಉಮಾಪತಿಗೆ ನೇರವಾಗಿ ದರ್ಶನ್‌ ಖಡಕ್ ವಾರ್ನಿಂಗ್ ಕೊಟ್ಟಿದ್ದರು.

VISTARANEWS.COM


on

Actor Darshan tagadu word umapathy counter now
Koo

ಬೆಂಗಳೂರು: ʻಕಾಟೇರʼ ಸಿನಿಮಾದ 50ನೇ ದಿನದ ಸಂಭ್ರಮಾಚರಣೆ ಸಂದರ್ಭದಲ್ಲಿ ದರ್ಶನ್‌ (Actor Darshan) ʻರಾಬರ್ಟ್ʼ ಸಿನಿಮಾದ ನಿರ್ಮಾಪಕ ಉಮಾಪತಿಗೆ ‘ತಗಡು’ ಇನ್ನಿತರೆ ಕಠು ಪದಗಳನ್ನು ಬಳಸಿ ನಿಂದಿಸಿದ್ದರು. ಇದಾದ ಬಳಿಕ ನಿರ್ಮಾಪಕ ಉಮಾಪತಿ ಕೂಡ ಬೇಸರದಲ್ಲಿಯೇ ಪ್ರತಿಕ್ರಿಯೆ ನೀಡಿದ್ದರು. ಇದೀಗ ದರ್ಶನ್‌ ಕೊಲೆ ಕೇಸ್‌ನಲ್ಲಿ ಅರೆಸ್ಟ್‌ ಆಗಿದ್ದಾರೆ. ಅಂದು ʻತಗಡುʼ ಅಂದಿದ್ದ ದರ್ಶನ್‌ಗೆ ಇಂದು ಉಮಾಪತಿ ಪರೋಕ್ಷವಾಗಿ ಪೋಸ್ಟ್‌ ಮೂಲಕ ತಿರುಗೇಟು ಕೊಟ್ಟಿದ್ದಾರೆ. “ತಾಳ್ಮೆ ಕೆಲವೊಮ್ಮೆ ಶಕ್ತಿ” ಎಂದು ವಿಡಿಯೊ ಪೋಸ್ಟ್ ಮಾಡಿದ್ದಾರೆ ಉಮಾಪತಿ.

ತಗಡು ಯಾರು ಗೊತಾಯ್ತಾ? ಎಂದು ಪರೋಕ್ಷವಾಗಿ ಕೌಂಟರ್ ಕೊಟ್ಟಿದ್ದಾರೆ ಉಮಾಪತಿ. ಉಮಾಪತಿ ಪರವಾಗಿ ಹಲವು ಮೀಮ್ಸ್ ವೈರಲ್ ಆಗಿದ್ದವು. ಇವುಗಳನ್ನು ರಿಪೋಸ್ಟ್‌ ಮಾಡಿಕೊಳ್ಳುತ್ತಿದ್ದಾರೆ ಉಮಾಪತಿ.

ದರ್ಶನ್‌ ಉಮಾಪತಿಗೆ ವಾರ್ನಿಂಗ್‌ ನೀಡಿದ್ದೇನು?

ಈ ಹಿಂದೆ ಉಮಾಪತಿ ಅವರು ಕಾಟೇರ ಟೈಟಲ್‌ ನಾನೇ ಕೊಟ್ಟಿದ್ದು ಎಂದು ಹಲವಾರು ಸಂದರ್ಶನಗಳಲ್ಲಿ ಹೇಳಿದ್ದರು. ದರ್ಶನ್‌ ಈ ಬಗ್ಗೆ ಮಾತನಾಡಿ ʻʻತಗಡೇ, ರಾಬರ್ಟ್‌ ಕಥೆ ನಿನಗೆ ಕೊಟ್ಟಿದ್ದು ನಾವು. ಇಂಥ ಒಳ್ಳೆ ಕಥೆ ಮತ್ತೆ ಯಾಕ್‌ ಬಿಟ್ಟೆ ನೀನು?ʼʼ ಎಂದು ವೇದಿಕೆ ಮೇಲೆಯೇ ಉಮಾಪತಿಗೆ ಪ್ರಶ್ನೆ ಮಾಡಿದ್ದರು. ʻಈ ಕಥೆ ನಾನು ಮಾಡಿಸಿದೆ, ಕಥೆ ನಾನು ಕೊಟ್ಟೆ ಎಂದು ಎಂದು ಹೇಳಿಕೊಂಡು ಬಂದಿದ್ದೆಯಲ್ವಾ?ಇಂಥ ಒಳ್ಳೆ ಕಥೆ ಯಾಕೆ ಬಿಟ್ಟೆ ನೀನು. ಅಯ್ಯೋ ತಗಡೇ… ಎಲ್ಲ ಆಧಾರ ಇಟ್ಟುಕೊಂಡೇ ಮಾತನಾಡಬೇಕುʼʼ ಎಂದು ಉಮಾಪತಿಗೆ ನೇರವಾಗಿ ದರ್ಶನ್‌ ಖಡಕ್ ವಾರ್ನಿಂಗ್ ಕೊಟ್ಟಿದ್ದರು.

ಇದನ್ನೂ ಓದಿ: Actress Nayanathara: ‘ಬಾಹುಬಲಿ’ ಸಿನಿಮಾ ದೃಶ್ಯದ ಮರುಸೃಷ್ಟಿಯಲ್ಲಿ ವಿಘ್ನೇಶ್ ಶಿವನ್ ಪುತ್ರರು!

ದೇಹ ತೂಕ ವಿದ್ದರೆ ಸಾಲದು ಮಾತು ತೂಕವಿರಬೇಕು

ನಟ ದರ್ಶನ್ ಬಳಸಿದ ಪದ ಬಳಕೆ ಬಗ್ಗೆ ಬಳಿಕ ಉಮಾಪತಿ ಮಾತನಾಡಿ ʻʻಅದು ತಪ್ಪು ಸರ್, ಸಮಸ್ಯೆಗಳು ಎಲ್ಲ ಕಡೆ ಬರುತ್ತದೆ. ಆದರೆ ಅದನ್ನು ಹ್ಯಾಂಡಲ್ ಮಾಡುವ ರೀತಿ ಗೊತ್ತಿರಬೇಕು. ಸಮಾಜದಲ್ಲಿ ತೂಕವಿರುವ ವ್ಯಕ್ತಿ ಘನತೆಯಿಂದ ನಡೆದುಕೊಳ್ಳಬೇಕು. ದೇಹ ತೂಕ ವಿದ್ದರೆ ಸಾಲದು ಮಾತು ತೂಕವಿರಬೇಕು. ನಾನು ತಪ್ಪು ಮಾಡಿದರೂ ತಪ್ಪೆ. ಬೇರೆ ಯಾರಾದರೂ ತಪ್ಪು ಮಾಡಿದರೆ ತಪ್ಪೇ. ನಾವೆಲ್ಲ ಸಿನಿಮಾ ಮುಖಾಂತರ ಮೆಸೆಜ್ ಕೊಡಬೇಕು. ಈ ವಿವಾದಿಂದ ಸಂದೇಶ ಕೊಡುವಂತದ್ದು ಏನಿಲ್ಲʼʼಎಂದಿದ್ದರು.

Continue Reading
Advertisement
Kalki 2898 AD Movie Bhairava Anthem Released
ಕರ್ನಾಟಕ17 mins ago

Kalki 2898 AD: ʼಕಲ್ಕಿ 2898 ADʼ ಚಿತ್ರದ ಭೈರವ ಆಂಥಮ್‌ ರಿಲೀಸ್‌!

Union Minister HD Kumaraswamy visit Shira
ತುಮಕೂರು19 mins ago

Shira News: ಶಿರಾಕ್ಕೆ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಭೇಟಿ

Maharashtra government appoints Marathi teachers to Kannada schools; Ashoka Chandragi wrote a letter to CM Siddaramaiah
ಬೆಳಗಾವಿ20 mins ago

Belagavi News: ಕನ್ನಡ ಶಾಲೆಗಳಿಗೆ ಮರಾಠಿ ಶಿಕ್ಷಕರು! ಮುಖ್ಯಮಂತ್ರಿಗಳೇ ಗಮನ ಹರಿಸಿ

District administration failed to prevent illegal activities in the district MLA Janardhana Reddy alleges
ಕರ್ನಾಟಕ24 mins ago

Koppala News: ಜಿಲ್ಲೆಯಲ್ಲಿ ಕಾನೂನುಬಾಹಿರ ಚಟುವಟಿಕೆ ತಡೆಯುವಲ್ಲಿ ಜಿಲ್ಲಾಡಳಿತ ವಿಫಲ; ಶಾಸಕ ಜನಾರ್ದನ ರೆಡ್ಡಿ ಆರೋಪ

Pushpa 2
ಸಿನಿಮಾ28 mins ago

Pushpa 2: ಪುಷ್ಪ 2 ಸಿನಿಮಾ ಬಿಡುಗಡೆ 5 ತಿಂಗಳು ಮುಂದೂಡಿಕೆ; ಇಲ್ಲಿದೆ ಹೊಸ ಡೇಟ್

HD Kumaraswamy
ಕರ್ನಾಟಕ48 mins ago

HD Kumaraswamy: ಕೊಬ್ಬರಿಗೆ 16-18 ಸಾವಿರ ಬೆಂಬಲ ಬೆಲೆ ಕೊಡಿಸುವೆ: ರೈತರಿಗೆ ಎಚ್‌ಡಿಕೆ ಭರವಸೆ

Narendra Modi
ದೇಶ58 mins ago

ಪೋಪ್‌-ಮೋದಿ ಭೇಟಿಯನ್ನು ಲೇವಡಿ ಮಾಡಲು ಹೋದ ಕಾಂಗ್ರೆಸ್‌ಗೆ ಮುಖಭಂಗ; ಕ್ರೈಸ್ತರ ಕ್ಷಮೆ ಕೇಳಿದ್ದೇಕೆ?

Health Tips Kannada
Latest1 hour ago

Health Tips Kannada: ನೆನಪಿಡಿ, ನಾಲಿಗೆ ಬಯಸುವ ಆಹಾರಗಳನ್ನೆಲ್ಲ ನಿಮ್ಮ ಮಿದುಳು ಬಯಸದು!

Petrol Diesel Price Hike
ಕರ್ನಾಟಕ1 hour ago

Petrol Diesel Price Hike: ಕೇಂದ್ರ ಸರ್ಕಾರ ಹಣ ಕೊಟ್ಟಿದ್ರೆ ತೆರಿಗೆ ಹೆಚ್ಚಿಸುವ ಅಗತ್ಯವೇ ಇರ್ತಿರಲಿಲ್ಲ: ಸಿಎಂ ಸಿದ್ದರಾಮಯ್ಯ

International Yoga Day 2024
Latest2 hours ago

International Yoga Day 2024: ಕುತ್ತಿಗೆ ನೋವಿನ ನಿವಾರಣೆಗೆ ಯಾವ ಆಸನಗಳು ಸೂಕ್ತ?

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Actor Darshan
ಮೈಸೂರು9 hours ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು9 hours ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ1 day ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ1 day ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ1 day ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ2 days ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ3 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು3 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು3 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ3 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

ಟ್ರೆಂಡಿಂಗ್‌