Nisha Narasappa: ನಿಶಾ ದೊಡ್ಡ ಫ್ರಾಡ್, ನನ್ನ ಇನ್‌ಸ್ಟಾಗ್ರಾಮ್‌ ಹ್ಯಾಕ್ ಮಾಡಿದ್ದಳು ಎಂದ ಹರ್ಷಿತಾ! Vistara News

ಸಿನಿಮಾ

Nisha Narasappa: ನಿಶಾ ದೊಡ್ಡ ಫ್ರಾಡ್, ನನ್ನ ಇನ್‌ಸ್ಟಾಗ್ರಾಮ್‌ ಹ್ಯಾಕ್ ಮಾಡಿದ್ದಳು ಎಂದ ಹರ್ಷಿತಾ!

Nisha Narasappa: ವಂಶಿಕಾಳ ತಾಯಿ ಯಶಸ್ವಿನಿ ಹಾಗೂ ಎರಡು ವರ್ಷ ತನ್ನ ಜತೆಯಲ್ಲೇ ಇದ್ದ ಹರ್ಷಿತಾ ಹುಡುಗಿ ವಿರುದ್ಧ ಹಲವು ಆರೋಪಗಳನ್ನು ಮಾಡಿದ್ದಾರೆ. ಇದೀಗ ನಿಶಾ ಆರೋಪಗಳಿಗೆ ಹರ್ಷಿತಾ ವಿಸ್ತಾರ ನ್ಯೂಸ್ ಜತೆ ಮಾತನಾಡಿದ್ದಾರೆ.

VISTARANEWS.COM


on

Harshita Nisha Narasappa
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಮಾಸ್ಟರ್‌ ಆನಂದ್‌ ಪತ್ರಿ ವಂಶಿಕಾ ಹೆಸರಲ್ಲಿ ಹಲವು ಪೋಷಕರಿಗೆ ಮೋಸ ಮಾಡಿದ್ದಾರೆ ಎಂಬ ಆರೋಪ ಹೊತ್ತಿದ್ದ ಪ್ರೊಡಕ್ಷನ್ ಕಂಪನಿಯೊಂದರ ಓನರ್ ನಿಶಾ ನರಸಪ್ಪ (Nisha Narasappa) ಜುಲೈ 29ರಂದು ಪತ್ರಿಕಾಗೋಷ್ಠಿ ಕರೆದು ಪ್ರಕರಣದ ಕುರಿತು ಮಾತನಾಡಿದ್ದರು. ವಂಶಿಕಾಳ ತಾಯಿ ಯಶಸ್ವಿನಿ ಹಾಗೂ ಎರಡು ವರ್ಷ ತನ್ನ ಜತೆಯಲ್ಲೇ ಇದ್ದ ಹರ್ಷಿತಾ ಹುಡುಗಿ ವಿರುದ್ಧ ಹಲವು ಆರೋಪಗಳನ್ನು ಮಾಡಿದ್ದರು. ಇದರ ಬೆನ್ನಲ್ಲೇ ಇದೀಗ ನಿಶಾ ಆರೋಪಗಳಿಗೆ ಹರ್ಷಿತಾ ವಿಸ್ತಾರ ನ್ಯೂಸ್ ಜತೆ ಮಾತನಾಡಿದ್ದಾರೆ.

ಈ ಬಗ್ಗೆ ಹರ್ಷಿತಾ ಮಾತನಾಡಿ ʻʻನಿಶಾ ಅವರ ಇನ್‌ಸ್ಟಾಗ್ರಾಮ್‌ನಲ್ಲಿ ನಾನು ನಾನು ಲಾಗ್ ಇನ್ ಆಗಿಲ್ಲ. ಲಾಗ್ ಇನ್ ಆದರೂ ಮೂರನೇ ವ್ಯಕ್ತಿಗೆ ಗೊತ್ತಾಗುತ್ತದೆ. ನನ್ನ ಸ್ಯಾಮ್ ಸಂಗ್ ಫೋನ್ ಅವರ ಅಣ್ಣನಿಗೆ ಇಷ್ಟ ಆಗಿತ್ತು. ಹಾಗಾಗಿ ಅವರಿಗೆ ಕೊಟ್ಟೆ. ಆಗ ನಿಶಾ ಐಫೋನ್ ನನಗೆ ಕೊಟ್ಟಿದ್ದು. ಅವರ ಐಫೋನ್ ಕೊಡುವಾಗ ಎಲ್ಲಾ ಫ್ಲಾಶ್ ಮಾಡಿ ಕೊಟ್ಟಿದ್ದರು. ನಿಶಾ ದೊಡ್ಡ ಫ್ರಾಡ್. ಕಂಟೆಸ್ಟ್ ಮಾಡುತಿದ್ದ ಪೋಷಕರಿಗೆ ನನ್ನ ಕಾಂಟ್ಯಾಕ್ಟ್‌ ಇರಲಿಲ್ಲ. 4-5 ತಿಂಗಳು ಮಾತ್ರ ನಿಶಾ ಕಂಪನಿನಲ್ಲಿ ಕೆಲಸ ಮಾಡಿದ್ದು. ನಿಶಾ ಅವರಿಗೆ ಬರಬರುತ್ತಾ ದುಡ್ಡಿನ ಆಸೆ ಹೆಚ್ಚಾಯ್ತು. ನನ್ನ ಇನ್‌ಸ್ಟಾಗ್ರಾಮ್‌ ಹ್ಯಾಕ್ ಮಾಡಿದ್ದರು. ನನ್ನ ಮೇಲಿನ ಆರೋಪಗಳಿಗೆ ದಾಖಲೆ ಕೊಡಲಿ. ಅವರ ಬ್ಯುಸಿನೆಸ್ ನಾನು ನೋಡಿಕೊಳ್ಳುತ್ತಿರಲಿಲ್ಲ. ಯಶಸ್ವಿನಿ ಅವರಿಗೆ ನಾನು ಪರಿಚಯವಿಲ್ಲ. ಆಕೆಗೆ ಎನು ದ್ವೇಷ ಇದೆ ನನ್ನ ಮೇಲೆ ಗೊತ್ತಿಲ್ಲʼʼಎಂದು ಹೇಳಿಕೆ ನೀಡಿದರು.

ಇದನ್ನೂ ಓದಿ: Nisha Narasappa : ಮಾಸ್ಟರ್​ ಆನಂದ್ ಪತ್ನಿಯ ವಿರುದ್ಧ ಹಲವು ಆರೋಪಗಳನ್ನು ಮಾಡಿದ ನಿಶಾ ನರಸಪ್ಪ

ನಿಶಾ ಆರೋಪವೇನು?

ಪ್ರೊಡಕ್ಷನ್ ಕಂಪನಿಯೊಂದ ಓನರ್‌ ಆಗಿರುವ ನಿಶಾ ನರಸಪ್ಪ (Nisha Narasappa) ಜುಲೈ 29ರಂದು ಪತ್ರಿಕಾಗೋಷ್ಠಿ ಕರೆದು ಪ್ರಕರಣದ ಕುರಿತು ಮಾತನಾಡಿದ್ದರು. ಈ ವೇಳೆ ಅವರು ವಂಶಿಕಾಳ ತಾಯಿ ಯಶಸ್ವಿನಿ ವಿರುದ್ಧ ಹಲವು ಆರೋಪಗಳನ್ನು ಮಾಡಿದ್ದಾರೆ. ʻʻನನ್ನ ವಿರುದ್ಧ ಷಡ್ಯಂತ್ರ ರೂಪಿಸಿ ದೂರು ದಾಖಲಿಸಿದ್ದಾರೆ. ಇದರಲ್ಲಿ ಮಾಸ್ಟರ್ ಆನಂದ್​ ಪತ್ನಿ ಯಶಸ್ವಿನಿ ಅವರ ಕೈವಾಡವೂ ಇದೆ. ಕಂಪನಿಗೆ ಹರ್ಷಿತಾ ಅಂತ ಒಂದು ಹುಡುಗಿಯನ್ನು ಕೆಲಸಕ್ಕೆ ತಗೊಂಡೆ. ಆಕೆಯ ಫ್ಯಾಮಿಲಿ ನನಗೆ ಪರಿಚಯವಿತ್ತು. ಆಕೆ ಎರಡು ವರ್ಷ ನನ್ನ ಜತೆಯೇ ಇದ್ದಳು. ನನ್ನ ಎಲ್ಲ ಬ್ಯಾಂಕ್ ಡಿಟೇಲ್ಸ್​ ಆಕೆಗೆ ಗೊತ್ತಿತ್ತು. ಬಳಿಕ ಆಕೆ ನನ್ನ ಕಂಪನಿಯಲ್ಲಿ ಶೇರ್ ಕೇಳಿದ್ರು, ನಾನು ಒಪ್ಪಲಿಲ್ಲ. ಆಗ ಅವರ ಐಫೋನ್​​ನಲ್ಲಿ ನನ್ನ ಇನ್​ಸ್ಟಾಗ್ರಾಂ ಖಾತೆ ಓಪನ್​ ಮಾಡಿದ್ರು. ಕೇಳಿದ್ದಕ್ಕೆ ಕೆಲಸವೇ ಬಿಟ್ಟಳುʼʼ ಎಂದು ನಿಶಾ ಹೇಳಿದ್ದರು.

ಇದನ್ನೂ ಓದಿ: Nisha Narasapa: ಬಾಲನಟಿ ವಂಶಿಕಾ ಹೆಸರು ಬಳಸಿ ಫೈನಾನ್ಶಿಯರುಗಳಿಗೂ ಧೋಖಾ ಮಾಡಿದ ನಿಶಾ!

ʻʻಹರ್ಷಿತಾ ಕೆಲಸ ಬಿಟ್ಟ ಬಳಿಕ ಆಕೆ ತೊಂದರೆ ಮಾಡಲು ಶುರು ಮಾಡಿದಳು. ಅದಕ್ಕೆ ಯಶಸ್ವಿನಿಯ ನೆರವೂ ಇದೆ. ನನ್ನ ಕ್ಲೈಂಟ್​ಗಳು ಮನೆ ಹತ್ತಿರ ಬಂದು ಗಲಾಟೆ ಮಾಡಲು ಶುರು ಮಾಡಿದರು. ಅವರನ್ನು ಹರ್ಷಿತಾ ಕಳಿಸುತ್ತಿದ್ದಳು. ಎನ್ ಎನ್ ಪ್ರೊಡಕ್ಷನ್ ಯಾರ ದುಡ್ಡು ಉಳಿಸಿಕೊಂಡಿಲ್ಲ. ಎಲ್ಲಾ ದುಡ್ಡು ಸೆಟಲ್ಮೆಂಟ್ ಮಾಡಿದ್ದೀವಿ. ನಾವು ಕ್ಯಾಶ್ ವ್ಯವಹಾರ ಮಾಡಲ್ಲ. ಆದರೂ ನನ್ನ ಮೇಲೆ ಆರೋಪಗಳನ್ನು ಹೊರಿಸಿದರುʼʼ ಎಂದು ನಿಶಾ ಹೇಳಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಕರ್ನಾಟಕ

BBK SEASON 10: ಬಿಗ್ ಬಾಸ್‌ ಮನೆಯಿಂದ ಹೊರ ಬಂದ್ರಾ ಡ್ರೋನ್ ಪ್ರತಾಪ್, ಸಂಗೀತಾ?

BBK SEASON 10: ಬಿಗ್ ಬಾಸ್ ಗೆಲ್ಲುವ ನೆಚ್ಚಿನ ಸ್ಪರ್ಧಿಗಳಾಗಿರುವ ಡ್ರೋನ್ ಪ್ರತಾಪ್ ಮತ್ತು ಸಂಗೀತಾ ಬಿಗ್‌ ಬಾಸ್ ಮನೆಯಿಂದ ಹೊರ ಬಂದಿದ್ದಾರೆಂದು ಹೇಳಲಾಗುತ್ತಿದೆ.

VISTARANEWS.COM


on

BBK SEASON 10, Is Drone Pratap and Sangita out of big boss house?
Koo

ಬೆಂಗಳೂರು: ಈ ಬಾರಿ ಬಿಗ್‌ ಬಾಸ್ (BBK SEASON 10) ಸ್ಪರ್ಧೆ ಗೆಲ್ಲುವ ನೆಚ್ಚಿನ ಸ್ಪರ್ಧಿಗಳಾಗಿರುವ ಡ್ರೋನ್ ಪ್ರತಾಪ್ (Drone Pratap) ಮತ್ತು ನಟಿ ಸಂಗೀತಾ (Sangita) ಅವರು ಬಿಗ್‌ಬಾಸ್ ಮನೆಯಿಂದ ಹೊರ ಬಂದಿದ್ದಾರೆಂದು ಹೇಳಲಾಗುತ್ತಿದೆ(Out of Big Boss House). ಆದರೆ, ಇದರಲ್ಲಿ ಟ್ವಿಸ್ಟ್ ಇದ್ದು, ಟಾಸ್ಕ್‌ ಮಾಡುವಾಗ ಪ್ರಜ್ಞೆ ತಪ್ಪಿ ಬಿದ್ದಿದ್ದರಿಂದ ಅವರನ್ನು ಮನೆಯಿಂದ ಹೊರಗೆ ತಂದು, ಆಸ್ಪತ್ರೆ ದಾಖಲಿಸಲಾಗಿತ್ತು. ಬೆಂಗಳೂರಿನ ಖಾಸಗಿ ಆಸ್ಪೆತ್ರೆಯಲ್ಲಿ ಚಿಕಿತ್ಸೆ (Bengaluru Hospital) ಪಡೆಯುತ್ತಾರೆಂದು ಮೂಲಗಳು ತಿಳಿಸಿವೆ.

ಬಿಗ್‌ ಬಾಸ್ ನೀಡಿದ ಟಾಸ್ಕ್ ಮಾಡುವಾಗ ಸಂಗೀತಾ ಮತ್ತು ಡ್ರೋನ್ ಪ್ರತಾಪ್ ಅವರು ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ. ತೀವ್ರ ಉಸಿರಾಟ ತೊಂದರೆಯಿಂದ ಬಳಲುತ್ತಿದ್ದ ಅವರನ್ನು ಕೂಡಲೇ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಆದರೆ, ಅವರ ಪರಿಸ್ಥಿತಿ ಯಾವ ರೀತಿ ಇದೆ, ಅವರು ಮತ್ತೆ ವಾಪಸ್ ಬಿಗ್‌ಬಾಸ್ ಮನೆಗೆ ಹೋಗುತ್ತಾರೆಯೇ ಅಥವಾ ಇಲ್ಲವೇ ಎಂಬ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಒಟ್ಟಾರೆಯಾಗಿ ಈ ಘಟನೆ ಕುರಿತು ಇನ್ನಷ್ಟೇ ಹೆಚ್ಚಿನ ಮಾಹಿತಿಗಳು ದೊರೆಯಬೇಕಿದೆ.

ಅವಿನಾಶ್‌ ಈಗ ಮಾವುತನಾ ಮೇಕೆಯಾ? ಏನಯ್ಯ ನಿನ್ನ ಕಥೆ ಹೀಗಾಗೋಯ್ತು!

ರಕ್ಕಸ-ಗಂಧರ್ವರ (BBK SEASON 10) ನಡುವಿನ ಗುದ್ದಾಟ ತಾರಕಕ್ಕೆ ಏರಿರುವ ಹೊತ್ತಿನಲ್ಲಿಯೇ ನಡುನಡುವೆ ನಗೆಬುಗ್ಗೆಯುಕ್ಕಿಸುವಂಥಹ ಕಾಮಿಡಿ ಸನ್ನಿವೇಶಗಳಿಗೂ ಬಿಗ್‌ಬಾಸ್ ಸಾಕ್ಷಿಯಾಗುತ್ತಿದೆ. ಇಂಥದ್ದೊಂದು ಕಾಮಿಡಿ ದೃಶ್ಯದ ಝಲಕ್‌ ಜಿಯೋ ಸಿನಿಮಾ ಬಿಡುಗಡೆ ಮಾಡಿರುವ ಪ್ರೋಮೊದಲ್ಲಿ ಕಾಣಿಸಿಕೊಂಡಿದೆ.

“ಆನೆಯನ್ನು ಪಳಗಿಸುವ ಮಾವುತನಾಗುತ್ತೇನೆ’ ಎಂದು ಹೇಳಿಕೊಂಡೇ ಅವಿನಾಶ್‌ ಶೆಟ್ಟಿ ಮನೆಯೊಳಗೆ ಬಂದಿದ್ದರು. ಮನೆಯೊಳಗೂ ಹಲವು ಸದಸ್ಯರು ಅವರನ್ನು ಮಾವುತ ಎಂದೇ ಕರೆಯುತ್ತಿದ್ದಾರೆ. ಆದರೆ ಈ ಗಂಧರ್ವ-ರಕ್ಕಸರ ಗುದ್ದಾಟದಲ್ಲಿ ಈ ಮಾವುತ ಮೇಕೆಯಾಗಿದ್ದಾನೆ.

ತುಕಾಲಿ ಸಂತೋಷ್ ಮತ್ತು ವರ್ತೂರು ಅವರು ‘ನೀನು ಮಾವುತನಾ? ಮೇಕೆಯಾ?’ ಎಂದು ಕೇಳಿದಾಗ ಅವಿನಾಶ್‌, ‘ನಾನು ಮೇಕೆಯಾಗುವುದಿಲ್ಲ’ ಎಂದು ಗಂಧರ್ವರ ಶೈಲಿಯಲ್ಲಿಯೇ ಉತ್ತರಿಸಿದ್ದಾರೆ ಅವಿನಾಶ್. ಆದರೆ ಅದರ ಮರುಕ್ಷಣವೇ ಅವರು ಮೇಕೆಯ ಗೆಟಪ್‌ನಲ್ಲಿ ಮ್ಯಾ… ಎಂದು ಕೂಗುತ್ತ ಓಡಾಡುವ ದೃಶ್ಯಗಳೂ ಇವೆ.

ವರ್ತೂರು ಸಂತೋಷ್, ಅವಿನಾಶ್ ಒಳಗಡೆ ರೋಷದ ಕಿಚ್ಚನ್ನು ಹೊತ್ತಿಸಲು ಇನ್ನಿಲ್ಲದಂತೆ ಪ್ರಯತ್ನಿಸುತ್ತಿದ್ದಾರೆ. ‘ನೀವು ವೀರನಾಗಬೇಕು’ ಎಂದು ಮೋಟಿವೇಷನಲ್ ಸ್ಪೀಚ್ ಕೂಡ ಕೊಟ್ಟಿದ್ದಾರೆ! ಇದರಿಂದ ಸ್ಫೂರ್ತಿಗೊಂಡ ಅವಿನಾಶ್‌, ‘ವೀರನಾ… ಧೀರನಾ…’ ಎಂದು ಹೇಳುತ್ತ ಎದ್ದುನಿಂತಿದ್ದಾರೆ. ಎದುರಾಳಿ ತಂಡದ ಸದಸ್ಯನನ್ನು ವಶಪಡಿಸಿಕೊಳ್ಳುವ ಪ್ರಯತ್ನ ನಡೆಸುತ್ತಿದ್ದಾರೆಯೇ ವರ್ತೂರು? ಇದಕ್ಕೆ ಅವಿನಾಶ್ ಮರುಳಾಗುತ್ತಾರಾ?ಎಂಬುದು ಇಂದಿನ ಸಂಚಿಕೆಯಲ್ಲಿ ಗೊತ್ತಾಗಲಿದೆ.

ಬಿಗ್‌ ಬಾಸ್‌ ಮನೆಯಲ್ಲಿ ಅವಿನಾಶ್‌ ಅವರು ಮೊದ ಮೊದಲು ಸ್ಟ್ರಾಂಗ್‌ ಆಗಿಯೇ ಇದ್ದರು. ಇನ್ನು ವಿನಯ್‌ ಕೂಡ ಅವಿನಾಶ್‌ ಅವರಿಗೆ ಗೋಳು ಕೊಡುತ್ತಲೇ ಇದ್ದಾರೆ. ಕಳೆದ ಸಂಚಿಕೆಯಲ್ಲಿ ವಿನಯ್‌ ಅವರು ಅವಿನಾಶ್‌ಗೆ ʻʻನಾನು ಮಾವುತ ಅಲ್ಲ. ಹುಚ್ಚು ಕುದುರೆʼʼ ಎಂದು ಹೇಳಿಸಿದರು. ಇದಕ್ಕೂ ಮುಂಚೆ ವಿನಯ್‌ ಅವರು ಮನೆಮಂದಿ ಜತೆಗೆ ಅವಿನಾಶ್‌ ಕುರುತು ತುಂಬಾ ಕೀಳಾಗಿ ಮಾತನಾಡಿದ್ದೂ ಇದೆ. ಆಗಾಗ ವರ್ತೂರ್‌ ಹಾಗೂ ತುಕಾಲಿ ಅವಿನಾಶ್‌ ಅವರಿಗೆ ವಿನಯ್‌ ವಿರುದ್ಧ ತಿರುಗಿ ಬೀಳುವಂತೆ ಪ್ರಚೋದನೆಯನ್ನು ಕೊಟ್ಟಿದ್ದೂ ಇದೆ. ಅವಿನಾಶ್‌ ಕೂಡ ಈ ಬಗ್ಗೆ ತುಕಾಲಿ ಜತೆ ʻʻಪದೇ ಪದೇ ಮಾವುತ ಎಂದು ಹೇಳಬೇಡಿʼʼಎಂದಿದ್ದರು.

ಈ ಸುದ್ದಿಯನ್ನೂ ಓದಿ: Bigg Boss Telugu 7: ಬಿಗ್‌ ಬಾಸ್‌ ತೆಲುಗು ವೇದಿಕೆಯಲ್ಲಿ ಕನ್ನಡ ಮಾತನಾಡಿದ ಆಶಿಕಾ ರಂಗನಾಥ್‌!

Continue Reading

ಕ್ರೀಡೆ

ಬೆಂಗಳೂರು ಬುಲ್ಸ್​ಗೆ ಫುಲ್ ಚಾರ್ಜ್​ ಮಾಡಲು ಬರಲಿದ್ದಾರೆ ಕಿಚ್ಚ ಸುದೀಪ್

ಕನ್ನಡಿಗರ ನೆಚ್ಚಿನ ತಂಡ ಬೆಂಗಳೂರು ಬುಲ್ಸ್​ಗೆ ಬೆಂಬಲ ಸೂಚಿಸಲು ಚಿತ್ರನಟ ಕಿಚ್ಚ ಸುದೀಪ್ ನಾಳಿನ ಪಂದ್ಯದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

VISTARANEWS.COM


on

bengaluru bulls kiccha sudeep
Koo

ಬೆಂಗಳೂರು: ಪ್ರಸಕ್ತ ಸಾಗುತ್ತಿರುವ ಪ್ರೊ ಕಬಡ್ಡಿ ಲೀಗ್‌(pro kabaddi) 10ನೇ ಆವೃತ್ತಿಯ ಬೆಂಗಳೂರು ಚರಣದ ಪಂದ್ಯಗಳು ನಾಳೆಯಿಂದ(ಡಿ.8) ಆರಂಭಗೊಳ್ಳಲಿದೆ. ಆತಿಥೇಯ ಬೆಂಗಳೂರು ಬುಲ್ಸ್(bengaluru bulls)​ ತಂಡ ನಾಳೆ ನಡೆಯುವ ಪಂದ್ಯದಲ್ಲಿ ದಬಾಂಗ್​ ಡೆಲ್ಲಿ ವಿರುದ್ಧ ಸೆಣಸಾಟ ನಡೆಸಲಿದೆ. ಕನ್ನಡಿಗರ ನೆಚ್ಚಿನ ತಂಡಕ್ಕೆ ಬೆಂಬಲ ಸೂಚಿಸಲು ಚಿತ್ರನಟ ಕಿಚ್ಚ ಸುದೀಪ್(kiccha sudeep) ಹಾಜರ್​ ಆಗಲಿದ್ದಾರೆ.

ಕಿಚ್ಚ ಸುದೀಪ್​ ಅವರು ಬುಲ್ಸ್​ ಪಂದ್ಯ ವೀಕ್ಷಣೆಗೆ ಬರುತ್ತಿರುವ ವಿಚಾರವನ್ನು ಸ್ಟಾರ್​ಸ್ಪೋರ್ಟ್ಸ್​ ಕನ್ನಡ ತನ್ನ ಅಧಿಕೃತ ಸಾಮಾಜಿಕ ಜಾಲತಾಣಗಳ ಖಾತೆಯಲ್ಲಿ ಖಚಿತಪಡಿಸಿದೆ. ಟಿಟ್ವರ್​ ಎಕ್ಸ್​ ಖಾತೆಯಲ್ಲಿ ಬುಲ್ಸ್​ ತಂಡದ ಜೆರ್ಸಿಯಲ್ಲಿರು ಸುದೀಪ್​ ಅವರ ಫೋಟೊ ಹಂಚಿಕೊಂಡು ‘ಅಖಾಡಕ್ಕೆ ಕಿಚ್ಚೇರಿಸಲು ಖುದ್ದು ಕಿಚ್ಚನೇ ಬರಲಿದ್ದಾರೆ.’ ಎಂದು ಬರೆದುಕೊಂಡಿದೆ. ಹಿಂದಿನ ಕಲವು ಆವೃತ್ತಿಯಲ್ಲೂ ಸುದೀಪ್​ ಅವರು ಬುಲ್ಸ್​ ಪಂದ್ಯಕ್ಕೆ ಆಗಮಿಸಿ ಬೆಂಬಲ ಸೂಚಿಸಿದ್ದರು.

ಗೆಲುವಿನ ಖಾತೆ ತೆರೆಯದ ಬುಲ್ಸ್​

10ನೇ ಆವೃತ್ತಿಯಲ್ಲಿ ಬೆಂಗಳೂರು ಬುಲ್ಸ್​ ತಂಡ ಈವರೆಗೆ 2 ಪಂದ್ಯಗಳನ್ನು ಆಡಿದ್ದು. ಆಡಿದ 2ರಲ್ಲೂ ಸೋಲು ಕಂಡಿದೆ. ಇದೀಗ ತವರಿನಲ್ಲಿ ತಮ್ಮ ಮೂರನೇ ಪಂದ್ಯದಲ್ಲಿ ಗೆಲುವಿನ ಖಾತೆ ತೆರೆಯಲಿದೆಯಾ ಎಂದು ಕಾದು ನೋಡಬೇಕಿದೆ. ಸುದೀಪ್​ ಕೂಡ ಆಟಗಾರರಿಗೆ ಆತ್ಮವಿಶ್ವಾಸ ತುಂಬಲಿದ್ದಾರೆ. ಒಟ್ಟಾರೆ ತವರಿನಲ್ಲಿ ಗೂಳಿಗಳು ಘರ್ಜನೆ ನಡೆಸಲು ಎಲ್ಲ ಸಿದ್ಧತೆ ನಡಸಿದ್ದಾರೆ.

ತಂಡದ ಸ್ಟಾರ್ ಆಟಗಾರರಾದ ಭರತ್​ ಕುಮಾರ್​, ವಿಕಾಸ್​ ಕಂಡೋಲ, ಸುರ್ಜಿತ್​ ಸಿಂಗ್​, ಅಭಿಷೇಕ್​ ಸಿಂಗ್​ ಅವರು ಉತ್ಕೃಷ್ಟ ಮಟ್ಟದ ಆಟ ತೋರ್ಪಡಿಸುವಲ್ಲಿ ಯಶಸ್ವಿಯಾದರೆ ತಂಡಕ್ಕೆ ಗೆಲುವು ಕಟ್ಟಿಟ್ಟ ಬುತ್ತಿ ಎನ್ನಲಡ್ಡಿಯಿಲ್ಲ. ಡೆಲ್ಲಿ ಕೂಡ ಬಲಿಷ್ಠ ಪಡೆಯಾಗಿದೆ. ಎಕ್ಸ್​ಪ್ರೆಸ್​ ಖ್ಯಾತಿಯ ನವೀನ್​ ಕುಮಾರ್​, ವಿಶಾಲ್​ ಭಾರದ್ವಾಜ್​, ಅಶು ಮಲಿಕ್​ ಇವರನ್ನೆಲ್ಲ ಕಟ್ಟಿಹಾಕಬೇಕು.

ಇದನ್ನೂ ಓದಿ Pro Kabaddi: ಗೆಲುವಿನ ನಗೆ ಬೀರಿದ ಪಾಟ್ನಾ ಪೈರೇಟ್ಸ್‌, ಯುಪಿ ಯೋಧಾಸ್

‘ಭಾರತದ ಪ್ರತಿ ಉಸಿರಲ್ಲೂ ಕಬಡ್ಡಿ’ ಎನ್ನುವ ಕ್ಯಾಂಪೇನ್ ಸ್ಥಳೀಯ ಕಬಡ್ಡಿ ಅಭಿಮಾನಿಗಳಿಗಾಗಿಯೇ ರೂಪಿಸಿದ ಕಾರ್ಯಕ್ರಮವಾಗಿತ್ತು. ಈ ಕ್ಯಾಂಪೇನ್​ನ ಪೋಸ್ಟರ್​ನಲ್ಲಿ ಕಿಚ್ಚ ಸುದೀಪ್​ ಕೂಡ ಕಾಣಿಸಿಕೊಂಡಿದ್ದರು.

ಕನ್ನಡಿಗರ ಪ್ರತಿ ಉಸಿರಲ್ಲೂ ಕಬಡ್ಡಿ ಜೀವಂತ

“ಕಬಡ್ಡಿಯಲ್ಲಿನ ಶಕ್ತಿ, ಧೈರ್ಯ, ದೃಢತೆ ಮತ್ತು ಸಂಪೂರ್ಣ ಉತ್ಸಾಹದ ಸಂಯೋಜನೆಯು ನನ್ನೊಂದಿಗೆ ಆಳವಾಗಿ ಅನುರಣಿಸುತ್ತದೆ. ನಮ್ಮ ರಾಷ್ಟ್ರದ ಚೈತನ್ಯವನ್ನು ಪ್ರತಿಬಿಂಬಿಸುತ್ತದೆ. ಶಕ್ತಿ ಮತ್ತು ದೃಢತೆಗೆ ಸಮಾನಾರ್ಥಕವಾದ ಗೂಳಿಗಳ ಸದ್ಗುಣಗಳಿಂದ ಸ್ಫೂರ್ತಿಯನ್ನು ಪಡೆಯುತ್ತಿದ್ದೇನೆ, ನಾನು ‘ಕನ್ನಡಿಗರ ಪ್ರತಿ ಉಸಿರಲ್ಲೂ ಕಬಡ್ಡಿ’ಯನ್ನು ಜೀವಂತವಾಗಿಸುವಲ್ಲಿ ಉತ್ಸುಕನಾಗಿದ್ದೇನೆ. ಈ ಭಾವನೆಯು ಕರ್ನಾಟಕದ ಚೈತನ್ಯವನ್ನು ಪ್ರತಿಬಿಂಬಿಸುವುದಲ್ಲದೆ, ಕನ್ನಡಿಗರ ಸಮುದಾಯದ ಅಚಲ ಬೆಂಬಲ ಮತ್ತು ಅದಮ್ಯ ಚೇತನಕ್ಕೆ ಗೌರವ ಸಲ್ಲಿಸುತ್ತದೆ. ನಮ್ಮ ಗೂಳಿಗಳ ಬೆಂಬಲಕ್ಕೆ ಕನ್ನಡಿಗರು ಕೈಜೋಡಿಸಿ ಎಂದು ಟೂರ್ನಿ ಆರಂಭಕ್ಕೂ ಮುನ್ನ ಕಿಚ್ಚ ಹೇಳಿದ್ದರು.

Continue Reading

ಬಾಲಿವುಡ್

The Kapil Sharma Show: 6 ವರ್ಷದ ಮುನಿಸು ಮರೆತು ಒಟ್ಟಿಗೆ ಪಾರ್ಟಿ ಮಾಡಿದ ಕಪಿಲ್‌ ಶರ್ಮಾ, ಸುನಿಲ್‌ ಗ್ರೋವರ್!

The Kapil Sharma Show ಅರ್ಚನಾ ಪುರಾನ್ ಸಿಂಗ್ ಅವರು ನೆಟ್‌ಫ್ಲಿಕ್ಸ್ ಆಯೋಜಿಸಿದ ಪಾರ್ಟಿಯ ಕೆಲವು ಫೋಟೊಗಳನ್ನು ಹಂಚಿಕೊಂಡಿದ್ದಾರೆ. ಕಪಿಲ್‌ ಶರ್ಮಾ (Kapil Sharma) ಹಾಗೂ ಸುನಿಲ್‌ ಗ್ರೋವರ್‌ ಅಭಿಮಾನಿಗಳು ಇಬ್ಬರೂ ಒಟ್ಟಿಗೆ ಇರುವುದನ್ನು ಕಂಡು ಸಂತೋಷಪಟ್ಟಿದ್ದಾರೆ. “ಇದೊಂದು ಸುಂದರ ಪುನರ್ಮಿಲನʼʼಎಂದು ಫ್ಯಾನ್ಸ್‌ ಕಮೆಂಟ್‌ ಮಾಡಿದ್ದಾರೆ.

VISTARANEWS.COM


on

Kapil Sharma and Sunil Grover
Koo

ಬೆಂಗಳೂರು: ಹಾಸ್ಯ, ಮನರಂಜನೆಯ ರಸದೌತಣ ನೀಡುವ ದಿ ಕಪಿಲ್‌ ಶರ್ಮಾ ಶೋ (The Kapil Sharma Show) ಮೂಲಕ ದೇಶದ ಮನೆಮಾತಾಗಿರುವ ಕಪಿಲ್‌ ಶರ್ಮಾ (Kapil Sharma) ಹಾಗೂ ಸುನಿಲ್‌ ಗ್ರೋವರ್‌ (Sunil Grover) ಮತ್ತೆ ಒಂದಾಗಿದ್ದಾರೆ. ಹೌದು, ಆರು ವರ್ಷದ ಮುನಿಸು, ವದಂತಿ, ಸ್ಪಷ್ಟನೆ ಬಳಿಕ ಇಬ್ಬರೂ ಒಂದಾಗಿದ್ದಾರೆ. ನೆಟ್‌ಫ್ಲಿಕ್ಸ್‌ ಕಾಮಿಡಿ ಶೋ (Netflix Show) ಪ್ರೋಮೊ ಬಿಡುಗಡೆ ಮಾಡಿರುವ ಕಪಿಲ್‌ ಶರ್ಮಾ, ಸುನಿಲ್‌ ಗ್ರೋವರ್‌ ಜತೆ ಕಾಣಿಸಿಕೊಂಡಿದ್ದಾರೆ. ಆ ಮೂಲಕ ಆರು ವರ್ಷದ ಬಳಿಕ ಇಬ್ಬರು ಹಾಸ್ಯ ಕಲಾವಿದರು ಮುನಿಸು ಮರೆತು ಒಂದಾದಂತಾಗಿದೆ. ಕಪಿಲ್ ಮತ್ತು ಸುನೀಲ್ ಇತ್ತೀಚೆಗೆ ಪಾರ್ಟಿಯಲ್ಲಿ ಒಟ್ಟಿಗೆ ಕಾಣಿಸಿಕೊಂಡಿದ್ದಾರೆ.

ಅರ್ಚನಾ ಪುರಾನ್ ಸಿಂಗ್ ಅವರು ನೆಟ್‌ಫ್ಲಿಕ್ಸ್ ಆಯೋಜಿಸಿದ ಪಾರ್ಟಿಯ ಕೆಲವು ಫೋಟೊಗಳನ್ನು ಹಂಚಿಕೊಂಡಿದ್ದಾರೆ. ಕಪಿಲ್‌ ಶರ್ಮಾ (Kapil Sharma) ಹಾಗೂ ಸುನಿಲ್‌ ಗ್ರೋವರ್‌ ಅಭಿಮಾನಿಗಳು ಇಬ್ಬರೂ ಒಟ್ಟಿಗೆ ಇರುವುದನ್ನು ಕಂಡು ಸಂತೋಷಪಟ್ಟಿದ್ದಾರೆ. “ಇದೊಂದು ಸುಂದರ ಪುನರ್ಮಿಲನʼʼಎಂದು ಫ್ಯಾನ್ಸ್‌ ಕಮೆಂಟ್‌ ಮಾಡಿದ್ದಾರೆ.

ಈ ಹಿಂದೆ ಬಿಡುಗಡೆಯಾಗಿದ್ದ ಪ್ರೋಮೊದಲ್ಲಿ ಮೊದಲು ಕಪಿಲ್‌ ಶರ್ಮಾ ಕಾಣಿಸಿಕೊಂಡಿದ್ದರು. “ಹಾಯ್‌ ಗೆಳೆಯರೆ, ನಾನು ಕಪಿಲ್‌ ಶರ್ಮಾ. ಶೀಘ್ರದಲ್ಲೇ ಹೊಸ ಶೋ ಹೊತ್ತು ನಿಮ್ಮೆದುರು ಬರುತ್ತೇನೆ” ಎಂದು ಕಪಿಲ್‌ ಶರ್ಮಾ ಹೇಳುತ್ತಾರೆ. ಆಗ ಸುನಿಲ್‌ ಗ್ರೋವರ್‌, “ನಾನು ಕೂಡ ನೆಟ್‌ಫ್ಲಿಕ್ಸ್‌ನಲ್ಲಿ ಕಾಣಿಸಿಕೊಳ್ಳುತ್ತಿದ್ದೇನೆ” ಎಂದಿದ್ದರು. ಆಗ ಕಪಿಲ್‌ ಶರ್ಮಾ, “ಸರಿ ಹಾಗಾದರೆ, ಇಬ್ಬರೂ ಬರೋಣ, 190ಕ್ಕೂ ಅಧಿಕ ದೇಶಗಳಿಗೆ ಬರೋಣ” ಎಂದಿದ್ದರು. ಹಾಗೆಯೇ ಇಬ್ಬರ ನಡುವಿನ ಸಂಭಾಷಣೆ ಮುಂದುವರಿಯುತ್ತದೆ.

ಇದನ್ನೂ ಓದಿ: Kapil Sharma: 6 ವರ್ಷದ ಮುನಿಸು ಮರೆತು ಒಂದಾದ ಕಪಿಲ್‌ ಶರ್ಮಾ, ಸುನಿಲ್‌ ಗ್ರೋವರ್;‌ ಬರ್ತಿದೆ ಶೋ!

ಇದೇ ವೇಳೆ ವಿಡಿಯೊ ಫ್ರೇಮ್‌ನಲ್ಲಿ ಹಾಸ್ಯ ಕಲಾವಿದರಾದ ರಾಜೀವ್‌, ಕಿಕು, ಕೃಷ್ಣಾ ಹಾಗೂ ನಟಿ ಅರ್ಚನಾ ಪೂರನ್‌ ಸಿಂಗ್‌ ಅವರು ಕೂಡ ಕಾಣಿಸಿಕೊಂಡಿದ್ದಾರೆ. ಇದರೊಂದಿಗೆ, ಕಾಮಿಡಿ ನೈಟ್ಸ್‌ ವಿತ್‌ ಕಪಿಲ್‌, ದಿ ಕಪಿಲ್‌ ಶರ್ಮಾ ಶೋ ಮೂಲಕವೇ ದೇಶದ ಮನೆಮಾತಾಗಿರುವ ಕಲಾವಿದರು ನೆಟ್‌ಫ್ಲಿಕ್ಸ್‌ ಶೋನಲ್ಲಿ ಮತ್ತೆ ಒಟ್ಟಿಗೆ ಕಾಣಿಸಿಕೊಳ್ಳುತ್ತಿದ್ದಾರೆ. ಅದರಲ್ಲೂ, ಕಪಿಲ್‌ ಶರ್ಮಾ ಹಾಗೂ ಸುನಿಲ್‌ ಗ್ರೋವರ್‌ ಅವರು ಒಂದಾಗಿರುವುದು ಅಭಿಮಾನಿಗಳಲ್ಲಿ ಸಂತಸ ಮೂಡಿಸಿದೆ. ದಿ ಕಪಿಲ್‌ ಶರ್ಮಾ ಶೋನಲ್ಲಿ ಸುನೀಲ್‌ ಗ್ರೋವರ್‌ ಅವರು ಮಾಡುತ್ತಿದ್ದ “ಡಾ ಮಶೂರ್‌ ಗುಲಾಟಿ” ಪಾತ್ರವು ಮನೆಮಾತಾಗಿತ್ತು.

ಇಬ್ಬರ ಮಧ್ಯೆ ಏಕೆ ಜಗಳ?

ಕಪಿಲ್‌ ಶರ್ಮಾ ಹಾಗೂ ಸುನಿಲ್‌ ಗ್ರೋವರ್‌ ಅವರ ಮಧ್ಯೆ 2017ರಲ್ಲಿ ಭಿನ್ನಾಭಿಪ್ರಾಯ ಮೂಡಿತ್ತು. ಆಸ್ಟ್ರೇಲಿಯಾದಲ್ಲಿ ಶೋ ಮುಗಿಸಿ, ಮುಂಬೈಗೆ ಆಗಮಿಸುವಾಗ ವಿಮಾನದಲ್ಲಿಯೇ ಕಪಿಲ್‌ ಶರ್ಮಾ ಅವರು ಸುನಿಲ್‌ ಗ್ರೋವರ್‌ ಅವರಿಗೆ ಬೈದಿದ್ದರು. ಇದಾದ ಬಳಿಕ ಇಬ್ಬರೂ ವಾಗ್ವಾದ ನಡೆಸಿದ್ದರು ಎಂಬ ಮಾತುಗಳು ಕೇಳಿಬಂದಿದ್ದವು. ನಂತರ ಸುನಿಲ್‌ ಗ್ರೋವರ್‌ ಅವರು ದಿ ಕಪಿಲ್‌ ಶರ್ಮಾ ಶೋ ತೊರೆದಿದ್ದರು. ಜಗಳದ ಕುರಿತು ಸ್ಪಷ್ಟನೆ ನೀಡಿದ್ದ ಕಪಿಲ್‌ ಶರ್ಮಾ, “ನಾನು ಎಂದಿಗೂ ಸುನಿಲ್‌ ಗ್ರೋವರ್‌ ಜತೆ ಜಗಳ ಆಡಿಲ್ಲ, ಬೈದಿಲ್ಲ. ನಾನು ಅದ್ಭುತ ವ್ಯಕ್ತಿಗಳ ಜತೆ ಕೆಲಸ ಮಾಡಲು ಬಯಸುತ್ತೇನೆ. ಅವರಲ್ಲಿ ಸುನಿಲ್‌ ಗ್ರೋವರ್‌ ಕೂಡ ಒಬ್ಬರು” ಎಂದು ಹೇಳಿದ್ದರು.

Continue Reading

South Cinema

The Nandi Awards: ನಂದಿ ಫಿಲ್ಮ್‌ ಅವಾರ್ಡ್; ಅತ್ಯುತ್ತಮ ನಟ, ನಿರ್ದೇಶಕ ಪ್ರಶಸ್ತಿ ಪಡೆದ ರಿಷಬ್ ಶೆಟ್ಟಿ

The Nandi Awards: ಇದು ಮೊದಲ ನಂದಿ ಫಿಲಂ ಅವಾರ್ಡ್ ಆಗಿದ್ದು ಅದ್ಧೂರಿಯಾಗಿ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ.ಈ ಪ್ರಶಸ್ತಿ ಪ್ರದಾನ ಸಮಾರಂಭ ಬೆಂಗಳೂರಿನ ಒರಿಯನ್ ಮಾಲ್‌ನಲ್ಲಿ ನಿನ್ನೆ ಜರುಗಿದೆ.

VISTARANEWS.COM


on

Nandi Film Award Rishabh Shetty
Koo

ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ಮೊದಲ ಬಾರಿಗೆ ʼನಂದಿʼ ಚಲನಚಿತ್ರ ಪ್ರಶಸ್ತಿ ಪ್ರಾರಂಭವಾಗಿದೆ. ಈ ಪ್ರಶಸ್ತಿ ಪ್ರದಾನ ಸಮಾರಂಭ ಬೆಂಗಳೂರಿನ ಒರಿಯನ್ ಮಾಲ್‌ನಲ್ಲಿ ಬುಧವಾರ ನಡೆದಿದೆ. ಕನ್ನಡದ್ದೇ ಆದ ಸ್ವಂತ ಪ್ರಶಸ್ತಿ ನೀಡುವ ವೇದಿಕೆ, ಆ ಮೂಲಕ ನಮ್ಮ ಪ್ರತಿಭೆಗಳನ್ನು ನಾವೇ ಗುರುತಿಸಿ ಬೆನ್ನು ತಟ್ಟುವ ಪ್ರಯತ್ನ ಮಾಡಬೇಕಿದೆ. ಇದನ್ನೆಲ್ಲಾ ಮನಗಂಡು, ಚರ್ಚಿಸಿ ಮಂಡಳಿ ನಂದಿ ಪ್ರಶಸ್ತಿ ನೀಡಿದೆ.

ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ನಟ ರವಿಚಂದ್ರನ್, ರಿಷಬ್ ಶೆಟ್ಟಿ, ಧ್ರುವ ಸರ್ಜಾ ಇನ್ನೂ ಹಲವು ತಾರೆಯರು ಭಾಗಿಯಾಗಿದ್ದಾರೆ. ಜತೆಗೆ ಹಿರಿಯ ನಟ ಶ್ರೀನಾಥ್, ನಟಿ ಪ್ರೇಮ, ವಿನೋದ್ ರಾಜ್, ಅನು ಪ್ರಭಾಕರ್, ಉಮಾಶ್ರೀ ಇನ್ನೂ ಹಲವು ನಟ-ನಟಿಯರು ಸಹ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಇದು ಮೊದಲ ನಂದಿ ಫಿಲಂ ಅವಾರ್ಡ್ ಆಗಿದ್ದು ಅದ್ಧೂರಿಯಾಗಿ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗಿಯಾಗಿದ್ದ ನಟ ರವಿಚಂದ್ರನ್ ಮಾತನಾಡಿ, ‘ನಂದಿ ಪ್ರಶಸ್ತಿ ನೀಡುತ್ತಿರುವುದು ಬಹಳ ಖುಷಿಯಾಗಿದೆ. ಪ್ರಶಸ್ತಿ ಬಹಳ ಭಾರವಾಗಿದೆ ಅದು ನನಗೆ ಖುಷಿ ಕೊಟ್ಟಿತು, ನನ್ನಂತಹ ಶಿವ ಭಕ್ತನಿಂದ ನಂದಿ ಪ್ರಶಸ್ತಿ ಕೊಡಿಸುತ್ತಿದ್ದೀರ. ಎಲ್ಲರ ಮನೆಗಳಿಗೂ ನಂದಿ ಸೇರುತ್ತದೆ ಎಂಬುದು ನನಗೆ ಖುಷಿ’ ಎಂದರು. ನಟ ಶ್ರೀನಾಥ್ ಅವರಿಗೆ ಜೀವನಮಾನ ಸಾಧನೆಗೆ ಲೈಫ್ ಟೈಮ್ ಅಚೀವ್‌ಮೆಂಟ್‌ ಅವಾರ್ಡ್ ನೀಡಲಾಯ್ತು.

ನೆರೆಯ ಆಂಧ್ರಪ್ರದೇಶ ಮನರಂಜನಾ ಕ್ಷೇತ್ರದ ಸಾಧಕರಿಗೆ ಕೊಡುವ ರಾಜ್ಯ ಪ್ರಶಸ್ತಿಗೂ ನಂದಿ ಅವಾರ್ಡ್ಸ್ ಎಂದೇ ಹೆಸರಿದೆ. ಆದರೆ, ಆ ಪ್ರಶಸ್ತಿಗೂ ಈ ಪ್ರಶಸ್ತಿಗೂ ಸಮಬಂಧವಿಲ್ಲ. ಎರಡು ಬೇರೆ ಬೇರೆ. ಆಂಧ್ರಪ್ರದೇಶದಂತೆ ಕನ್ನಡದ ಪ್ರಶಸ್ತಿಗೂ ನಂದಿ ಅವಾರ್ಡ್ ಎಂದೇ ಕರೆಯಲಾಗುತ್ತಿದೆ. ಇದಕ್ಕೆ ಕಾರಣವೂ ಇದೆ. ನಂದಿ ಎನ್ನುವುದು ಕನ್ನಡದ ಪಾಲಿಗೂ ಒಂದು ಪವರ್‌ಫುಲ್ ಇಮೇಜ್ ಎನಿಸುವ ಲಾಂಛನ. ಆ ಕಾರಣದಿಂದಲೇ ‘ನಂದಿ’ ಎಂಬ ಹೆಸರನ್ನೇ ಕನ್ನಡದ ಪ್ರಶಸ್ತಿಗೂ ಇಡಲಾಗಿದೆ.

Nandi Film Award Rishabh Shetty won the best actor and director award

ಇದನ್ನೂ ಓದಿ: Nandi Award: ಕನ್ನಡಕ್ಕೂ ಬಂತು ತೆಲುಗಿನ ‘ನಂದಿ ಫಿಲ್ಮಂ ಅವಾರ್ಡ್‌’; ಶುಭ ಕೋರಿದ ಸಿಎಂ ಸಿದ್ದರಾಮಯ್ಯ

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ನಿಕಟ ಪೂರ್ವ ಅಧ್ಯಕ್ಷರಾದ ಭಾ.ಮಾ.ಹರೀಶ್, ನಿರ್ಮಾಪಕ ನಿತ್ಯಾನಂದ ಪ್ರಭು, ಪದ್ಮಾವತಿ ಚಂದ್ರಶೇಖರ್ ಹಾಗೂ ಅನಿತಾ ರೆಡ್ಡಿ ಈ ಪ್ರಶಸ್ತಿ ಸಂಸ್ಥಾಪರಾಗಿದ್ದಾರೆ.

ಪ್ರಶಸ್ತಿ ಪಡೆದವರ ಪಟ್ಟಿ

  • ಬೆಸ್ಟ್ ಬಯೋಪಿಕ್ ಅವಾರ್ಡ್: ವಿಜಯಾನಂದ ಫಿಲ್ಮ್
  • ಲೆಜೆಂಡರಿ ಆ್ಯಕ್ಟ್ರೆಸ್ ಅವಾರ್ಡ್‌; ಲೀಲಾವತಿ.
  • ಜೀವಮಾನ ಸಾಧನೆ ಪ್ರಶಸ್ತಿ-ನಟ ಶ್ರೀನಾಥ್ ಹಾಗೂ ಭಾರತಿ ವಿಷ್ಣುವರ್ಧನ್.
  • ಅತ್ಯತ್ತಮ ಡಾಕ್ಯುಮೆಂಟ್ರಿ ಪ್ರಶಸ್ತಿ-ಗಂಧದಗುಡಿ.
  • ಬೆಸ್ಟ್ ಡೆಬ್ಯುಟ್ ಆ್ಯಕ್ಟರ್ ವಿಕ್ರಮ್ ರವಿಚಂದ್ರನ್.
  • ಬೆಸ್ಟ್ ಡೆಬ್ಯುಟ್ ಆ್ಯಕ್ಟ್ರೆಸ್ ರೀಷ್ಮಾ ನಾಣಯ್ಯ.
  • ಬೆಸ್ಟ್ ಕಾಮಿಡಿಯನ್ ರಂಗಾಯಣ ರಘು.
  • ಬೆಸ್ಟ್ ಕಾಮಿಕ್ ರೋಲ್- ಹೇಮಾದತ್.
  • ಬೆಸ್ಟ್ ಸಪೋರ್ಟಿಂಗ್ ರೋಲ್-ವೀಣಾ ಸುಂದರ್.
  • ಬೆಸ್ಟ್ ಕ್ರಿಟಿಕ್ಸ್ ಆ್ಯಕ್ಟರ್-.ಸಂಚಾರಿ ವಿಜಯ್.
  • ಅತ್ಯುತ್ತಮ ಸಂಭಾಷಣೆಕಾರ ಮಾಸ್ತಿ.
  • ಅತ್ಯುತ್ತಮ ಚಿತ್ರ: 777 ಚಾರ್ಲಿ.
  • ʼಅತ್ಯುತ್ತಮ ನಿರ್ದೇಶಕ. ರಿಷಬ್ ಶೆಟ್ಟಿ.
  • ಅತ್ಯುತ್ತಮ ನಟ. ರಿಷಬ್ ಶೆಟ್ಟಿ.
  • ಅತ್ಯುತ್ತಮ ನಟಿ-ಸಪ್ತಮಿ ಗೌಡ
  • ಅತ್ಯುತ್ತಮ ಖಳನಟ-ಡಾಲಿ ಧನಂಜಯ್
  • ಬೆಸ್ಟ್ ಆ್ಯಕ್ಟರ್ ಸಪೋರ್ಟಿಂಗ್ ರೋಲ್-ಲೂಸ್ ಮಾದ ಯೋಗಿ
  • ಬೆಸ್ಟ್ ಕ್ರಿಟಿಕ್ಸ್ ಆ್ಯಕ್ಟರ್ಸ್ಸ್-ಹರಿಪ್ರಿಯಾ-ಅನುಪ್ರಭಾಕರ್
  • ಬೆಸ್ಟ್ ಪ್ರೆಸ್ ಫೋಟೋಗ್ರಾಫರ್-ಕೆ.ಎನ್.ನಾಗೇಶ್ ಕುಮಾರ್
  • ಬೆಸ್ಟ್ ಪಿಆರ್ -ನಾಗೇಂದ್ರ
Continue Reading
Advertisement
Vistara News impact, Governmet to scrap 7 d rule of SCSP and TSP act
ಕರ್ನಾಟಕ5 hours ago

ವಿಸ್ತಾರ ನ್ಯೂಸ್ ಇಂಪ್ಯಾಕ್ಟ್; ಎಸ್ಸಿ, ಎಸ್ಟಿ‌ ಹಣ ಅನ್ಯ ಕಾರ್ಯದ ಬಳಕೆಗೆ ತಡೆ, ಕಾಯ್ದೆ ತಿದ್ದುಪಡಿಗೆ ಸಂಪುಟ ನಿರ್ಧಾರ

WPL Auction 2024
ಕ್ರಿಕೆಟ್5 hours ago

WPL Auction 2024: ವುಮೆನ್ಸ್ ಪ್ರೀಮಿಯರ್ ಲೀಗ್ ಹರಾಜು ಪ್ರಕ್ರಿಯೆಗೆ ಕೇವಲ 2 ದಿನ ಬಾಕಿ

Supreme Court will deliver judgment on Dece 11 about J and K Special Status scrap
ಕೋರ್ಟ್6 hours ago

ಆರ್ಟಿಕಲ್ 370 ರದ್ದು ಸಿಂಧುವೇ?; ಡಿ.11ಕ್ಕೆ ಸುಪ್ರೀಂ ಕೋರ್ಟ್ ಅಂತಿಮ ತೀರ್ಪು

Pro Kabaddi
ಕ್ರೀಡೆ6 hours ago

Pro Kabaddi: ಗುಜರಾತ್ ಗೆಲುವಿನ ನಾಗಾಲೋಟಕ್ಕೆ ಬ್ರೇಕ್ ಹಾಕಿದ ಪಾಟ್ನಾ

Is 500 note with star symbol is fake, What Fact Check says?
Fact Check7 hours ago

Fact Check: ಸ್ಟಾರ್ ಗುರುತಿರುವ 500 ರೂಪಾಯಿ ನೋಟು ನಕಲಿಯೇ?

kavya maran
ಐಪಿಎಲ್ 20237 hours ago

ಸ್ಟಾರ್​​ ಆಟಗಾರನ ಖರೀದಿಗೆ ಸ್ಕೆಚ್​ ಹಾಕಿದ ಸಖತ್ ಕ್ಯೂಟ್ ಓನರ್ ಕಾವ್ಯ ಮಾರನ್

Inauguration of Hulleshwar Jnana vikas Center at Yakshi Village
ಶಿವಮೊಗ್ಗ7 hours ago

Shivamogga News: ಯಕ್ಷಿ ಗ್ರಾಮದಲ್ಲಿ ಹುಲ್ಲೇಶ್ವರ ಜ್ಞಾನ ವಿಕಾಸ ಕೇಂದ್ರ ಉದ್ಘಾಟನೆ

14 Medium and Large Irrigation Projects Completed in Kalyana Karnataka says Minister Ramalinga reddy
ಕರ್ನಾಟಕ7 hours ago

ಕಲ್ಯಾಣ ಕರ್ನಾಟಕ ಭಾಗದಲ್ಲಿ 14 ಮಧ್ಯಮ, ಬೃಹತ್ ನೀರಾವರಿ ಯೋಜನೆಗಳು ಪೂರ್ಣ: ರಾಮಲಿಂಗಾರೆಡ್ಡಿ

More than a hundred people from Kiravatti have joined the Congress party
ಉತ್ತರ ಕನ್ನಡ7 hours ago

Uttara Kannada News: ಕಿರವತ್ತಿ ಭಾಗದ 100ಕ್ಕೂ ಹೆಚ್ಚು ಜನ ಕಾಂಗ್ರೆಸ್‌ಗೆ ಸೇರ್ಪಡೆ

Vistara Top 10 News 7-12
ಕರ್ನಾಟಕ8 hours ago

VISTARA TOP 10 NEWS : ಮೌಲ್ವಿ ಐಸಿಸ್‌ ಸಂಪರ್ಕ ನಿಜವೇ? ಹಳೆಪಿಂಚಣಿ ಮರುಜಾರಿ ಖಚಿತವೇ? ಇತರ ಪ್ರಮುಖ ಸುದ್ದಿ

Sharmitha Gowda in bikini
ಕಿರುತೆರೆ2 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ2 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

7th Pay Commission
ನೌಕರರ ಕಾರ್ನರ್1 year ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

Bigg Boss- Saregamapa 20 average TRP
ಕಿರುತೆರೆ2 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ2 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

DCC Bank Recruitment 2023
ಉದ್ಯೋಗ10 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Karnataka bandh Majestic
ಕರ್ನಾಟಕ2 months ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

Kannada Serials
ಕಿರುತೆರೆ2 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Rajendra Singh Gudha
ದೇಶ5 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

kpsc recruitment 2023 pdo recruitment 2023
ಉದ್ಯೋಗ5 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Madhu Bangarappa in Belagavi Winter Session
ಕರ್ನಾಟಕ10 hours ago

Belagavi Winter Session: ಮುಂದಿನ ವರ್ಷ 8ನೇ ತರಗತಿಗೆ ಉಚಿತ ಸೈಕಲ್‌: ಸಚಿವ ಮಧು ಬಂಗಾರಪ್ಪ

Veer Savarkar and Priyank Kharge
ಕರ್ನಾಟಕ11 hours ago

Veer Savarkar: ನನಗೆ ಬಿಟ್ಟರೆ ಇವತ್ತೇ ಸಾವರ್ಕರ್‌ ಫೋಟೊ ತೆಗೆದು ಹಾಕ್ತೇನೆ: ಸಚಿವ ಪ್ರಿಯಾಂಕ್‌ ಖರ್ಗೆ

CM-Siddaramaiah
ಕರ್ನಾಟಕ16 hours ago

CM Siddaramaiah: ಮೌಲ್ವಿ ಬಗ್ಗೆ ಕೇಂದ್ರದಿಂದ ತನಿಖೆ ನಡೆಸಿ ಪ್ರೂವ್‌ ಮಾಡಲಿ; ಯತ್ನಾಳ್‌ಗೆ ಸಿಎಂ ಸವಾಲು

Dina Bhavihsya
ಪ್ರಮುಖ ಸುದ್ದಿ24 hours ago

Dina Bhavishya: ಮದುವೆಗಿದ್ದ ಅಡೆತಡೆಗಳು ಮಾಯ; ಈ ರಾಶಿಯವರಿಗೆ ವಿವಾಹ ಯೋಗ!

R ashok and CM siddaramiah in Karnataka Assembly Session
ಕರ್ನಾಟಕ1 day ago

Belagavi Winter Session: ಮುಸ್ಲಿಮರಿಗೆ 10 ಸಾವಿರ ಕೋಟಿ ಕೊಡ್ತೀರಿ; ರೈತರಿಗೆ 2000 ರು. ಮಾತ್ರವೇ? ಬಿಜೆಪಿ ಕಿಡಿ

CM Siddaramaiah and Tanveer
ಕರ್ನಾಟಕ2 days ago

CM Siddaramaiah: ಸಿಎಂ ಪಕ್ಕ ಐಸಿಸ್‌ ಸಂಪರ್ಕಿತ ಆರೋಪಕ್ಕೆ ಫೋಟೊ ಸಾಕ್ಷಿ ಕೊಟ್ಟ ಯತ್ನಾಳ್!

MLA Basanagouda Patil Yatnal and CM Siddaramaiah
ಕರ್ನಾಟಕ2 days ago

CM Siddaramaiah: ಮುಸ್ಲಿಂ ಸಮಾವೇಶದಲ್ಲಿ ಸಿಎಂ ಪಕ್ಕ ಕುಳಿತಿದ್ದ ಐಸಿಸ್‌ ಸಂಪರ್ಕಿತ; ಸಾಕ್ಷಿ ಕೊಡುವೆನೆಂದ ಯತ್ನಾಳ್‌

We will catch the wild elephant that killed Arjuna
ಕರ್ನಾಟಕ2 days ago

ಕಾರ್ಯಾಚರಣೆ ಸ್ಥಗಿತ; ಅರ್ಜುನನ ಕೊಂದ ಕಾಡಾನೆಯನ್ನು ಹಿಡಿದೇ ತೀರುವೆ-ಮಾವುತನ ಶಪಥ!

Government Job Vistara Exclusive and CM Siddaramaiah
ಉದ್ಯೋಗ2 days ago

Government Job: 2.47 ಲಕ್ಷ ಹುದ್ದೆ ಖಾಲಿ: ಸದನದಲ್ಲಿ ಸದ್ದು ಮಾಡಿದ ವಿಸ್ತಾರ EXCLUSIVE ಸ್ಟೋರಿ

Government Job Vistara Exclusive
ಉದ್ಯೋಗ2 days ago

Government Job : ‘ಖಾಲಿ’ ಸರ್ಕಾರದಲ್ಲಿ ಉದ್ಯೋಗಕ್ಕಿಲ್ಲ ಗ್ಯಾರಂಟಿ; ಭರ್ತಿಯಾಗದ 2.47 ಲಕ್ಷ ಹುದ್ದೆ!

ಟ್ರೆಂಡಿಂಗ್‌