Site icon Vistara News

Actor Nani: ನ್ಯಾಚುರಲ್ ಸ್ಟಾರ್ ನಾನಿ ಸಿನಿಮಾಗೆ ಕಿಚ್ಚ ಸುದೀಪ್‌ ಸಾಥ್‌!

Hi Nanna second single

ಬೆಂಗಳೂರು: ದಸರಾ ಸಿನಿಮಾ ಬ್ಲಾಕ್ ಬಸ್ಟರ್ ಹಿಟ್ ಬಳಿಕ ನ್ಯಾಚುರಲ್ ಸ್ಟಾರ್ ನಾನಿ (Actor Nani) ನಟಿಸುತ್ತಿರುವ 30ನೇ ಸಿನಿಮಾ ʻಹಾಯ್ ನಾನ್ನʼ (Hi Nanna cinema) ಟೀಸರ್ ಹಾಗೂ ಒಂದು ಹಾಡಿನ ಮೂಲಕ ನಿರೀಕ್ಷೆ ಹೆಚ್ಚಿಸಿರುವ ʻಹಾಯ್ ನಾನ್ನʼ ಸಿನಿಮಾದ ಎರಡನೇ ಹಾಡು ಬಿಡುಗಡೆಯಾಗಿದೆ. ಈ ಹಿಂದೆ ರಿಲೀಸ್ ಆಗಿದ್ದ ವಿವರಣೆ ಬೇಕಿಲ್ಲ ಎಂಬ ಹಾಡು ಭರ್ಜರಿ ರೆಸ್ಪಾನ್ಸ್ ಸಿಕ್ಕಿತ್ತು. ಇದೀಗ ಮಗಳಲ್ಲ ನೀ ನನ್ನ ಅಮ್ಮ ಎಂಬ ಕನ್ನಡದ ಹಾಡನ್ನು ಕಿಚ್ಚ ಸುದೀಪ್ ರಿಲೀಸ್ ಮಾಡಿ ನಾನಿ ಚಿತ್ರತಂಡಕ್ಕೆ ಸಾಥ್ ಕೊಟ್ಟಿದ್ದಾರೆ.

ಮಗಳಲ್ಲ ನೀ ನನ್ನ ಅಮ್ಮ ಹಾಡು ಅಪ್ಪ ಮಗಳ ನಡುವಿನ ಬಾಂಧವ್ಯದ ಗೀತೆಯಾಗಿದೆ. ಅಪ್ಪನಾಗಿ ನಾನಿ ಹಾಗೂ ಮಗಳಾಗಿ ಬೇಬಿ ಕಿಯಾರಾ ಖಾನ್ ನಟಿಸಿದ್ದಾರೆ. ಕವಿರಾಜ್ ಸಾಹಿತ್ಯ ಬರೆದಿರುವ ಹಾಡಿಗೆ ಹೃದಯ್ ಸಿನಿಮಾ ಖ್ಯಾತಿಯ ಹೇಶಮ್ ಅಬ್ದುಲ್ ವಹಾಬ್ ಹಾಡಿಗೆ ಟ್ಯೂನ್ ಹಾಕಿ ಹಾಡಿಗೆ ಧ್ವನಿಯಾಗಿದ್ದಾರೆ.

ಹಾಯ್ ನಾನ್ನ ಸಿನಿಮಾಗೆ ಯುವ ನಿರ್ದೇಶಕ ಶೌರ್ಯುವ್ ಆಕ್ಷನ್ ಕಟ್ ಹೇಳಿದ್ದು, ನಿರ್ದೇಶಕನಾಗಿ ಇದು ಇವರ ಮೊದಲ ಚಿತ್ರವಾಗಿದೆ. ಎಮೋಶನಲ್ ಫ್ಯಾಮಿಲಿ ಎಂಟರ್‌ಟೈನ್ಮೆಂಟ್ ಸಬ್ಜೆಕ್ಟ್ ಒಳಗೊಂಡ ಈ ಚಿತ್ರ ಅಪ್ಪ-ಮಗಳ ಬಾಂಧವ್ಯದ ಸುತ್ತ ಹೆಣೆಯಲಾದ ವಿಭಿನ್ನ ಕಥಾಹಂದರವನ್ನು ಒಳಗೊಂಡಿದೆ. ನಾನಿ ಜೋಡಿಯಾಗಿ ‘ಸೀತಾ ರಾಮಂ’ ಖ್ಯಾತಿಯ ಮೃಣಾಲ್ ಠಾಕೂರ್ ತೆರೆ ಹಂಚಿಕೊಳ್ಳುತ್ತಿದ್ದಾರೆ.

ಇದನ್ನೂ ಓದಿ: Actor Nani: ಒಟಿಟಿಗೆ ಬರಲಿದೆ ನಾನಿ ನಟನೆಯ ʻದಸರಾʼ ಸಿನಿಮಾ

ಕಿಚ್ಚ ಸುದೀಪ್‌ ಟ್ವೀಟ್‌

ವೈರ ಎಂಟರ್‌ಟೈನ್ಮೆಂಟ್ಸ್ ಬ್ಯಾನರ್‌ನಡಿ ಮೋಹನ್ ಚೆರುಕುರಿ, ಡಾ.ವಿಜೇಂದ್ರ ರೆಡ್ಡಿ ಹಾಗೂ ಮೂರ್ತಿ ಕಲಗಾರ ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದಾರೆ. ಸಾನು ಜಾನ್ ವರ್ಗೀಸ್ ISC ಕ್ಯಾಮೆರಾ ವರ್ಕ್ ಚಿತ್ರಕ್ಕಿರಲಿದ್ದು, ಪ್ರವೀಣ್ ಆಂಥೋನಿ ಸಂಕಲನ ಚಿತ್ರಕ್ಕಿರಲಿದೆ. ಈ ಚಿತ್ರದಲ್ಲಿ ಮೃಣಾಲ್ ಠಾಕೂರ್, ಶ್ರುತಿ ಹಾಸನ್, ನಾನಿ ಮೊದಲಾದವರು ನಟಿಸಿದ್ದಾರೆ. 

Exit mobile version