Site icon Vistara News

Actor Nani: ʻಹಾಯ್ ನಾನ್ನʼ ಟೀಸರ್ ರಿಲೀಸ್‌; ಅಪ್ಪ ಮಗಳ ಬಾಂಧವ್ಯದ ಜತೆಗೊಂದು ಪ್ರೀತಿಯ ಪಯಣ!

Hi Nanna teaser

ಬೆಂಗಳೂರು: ನ್ಯಾಚುರಲ್ ಸ್ಟಾರ್ ನಾನಿ (Actor Nani) ನಟಿಸುತ್ತಿರುವ 30ನೇ ಸಿನಿಮಾ ಹಾಯ್ ನಾನ್ನ ಇತ್ತೀಚೆಗಷ್ಟೇ ಬಿಡುಗಡೆಯಾಗಿದ್ದ ಈ ಚಿತ್ರದ ಹಾಡು ಭಾರೀ ಸದ್ದು ಮಾಡಿತ್ತು. ಇದೀಗ ಟೀಸರ್ ಅನಾವರಣಗೊಂಡಿದೆ. ತಂದೆ ಮತ್ತು ಮಗಳ ಬಾಂಧವ್ಯದ ಜತೆಗೆ ಪ್ರೀತಿ ಕಥಾಹಂದರವೇ ಟೀಸರ್ ಹೈಲೆಟ್. ತಾಯಿ ಇಲ್ಲದ ಮಗಳಿಗೆ ಅಪ್ಪನೇ ಸರ್ವಸ್ವ. ಅಪ್ಪನಿಗೆ ಮಗಳ ಜೀವ. ಈ ಚೆಂದದ ಕುಟುಂಬಕ್ಕೆ ಎಂಟ್ರಿಯಾಗುವ ನಾಯಕಿ. ಆ ನಂತರ ಏನಾಗುತ್ತದೆ ಎನ್ನುವುದೇ ಒನ್‌ ಲೈನ್‌ ಸ್ಟೋರಿ.

ಹಾಯ್ ನಾನ್ನ ಸಿನಿಮಾಗೆ ಯುವ ನಿರ್ದೇಶಕ ಶೌರ್ಯುವ್ ಆಕ್ಷನ್ ಕಟ್ ಹೇಳಿದ್ದು, ನಿರ್ದೇಶಕನಾಗಿ ಇದು ಇವರ ಮೊದಲ ಚಿತ್ರವಾಗಿದೆ. ಎಮೋಶನಲ್ ಫ್ಯಾಮಿಲಿ ಎಂಟರ್‌ಟೈನ್ಮೆಂಟ್ ಸಬ್ಜೆಕ್ಟ್ ಒಳಗೊಂಡ ಈ ಚಿತ್ರ ಅಪ್ಪ-ಮಗಳ ಬಾಂಧವ್ಯದ ಸುತ್ತ ಹೆಣೆಯಲಾದ ವಿಭಿನ್ನ ಕಥಾಹಂದರವನ್ನು ಒಳಗೊಂಡಿದೆ. ನಾನಿ ಜೋಡಿಯಾಗಿ ‘ಸೀತಾ ರಾಮಂ’ ಖ್ಯಾತಿಯ ಮೃಣಾಲ್ ಠಾಕೂರ್ ತೆರೆ ಹಂಚಿಕೊಳ್ಳುತ್ತಿದ್ದಾರೆ. ಅಪ್ಪನಾಗಿ ನಾನಿ ಹಾಗೂ ಮಗಳಾಗಿ ಬೇಬಿ ಕಿಯಾರಾ ಖಾನ್ ನಟಿಸಿದ್ದಾರೆ.

ಇದನ್ನೂ ಓದಿ: Actor Nani: ನ್ಯಾಚುರಲ್ ಸ್ಟಾರ್ ನಾನಿ ಸಿನಿಮಾಗೆ ಕಿಚ್ಚ ಸುದೀಪ್‌ ಸಾಥ್‌!

ಮೋಹನ್ ಚೆರುಕುರಿ, ಮೂರ್ತಿ ಕಲಗಾರ, ಡಾ. ವಿಜೇಂದ್ರ ರೆಡ್ಡಿ ಅವರು ‘ವೈರ ಎಂಟರ್ಟೇನ್ಮೆಂಟ್’ ಬ್ಯಾನರ್ ಮೂಲಕ ಈ ಸಿನಿಮಾಗೆ ಬಂಡವಾಳ ಹೂಡುತ್ತಿದ್ದಾರೆ. ಸಾನೂ ಜಾನ್ ವರ್ಗೀಸ್ ಅವರ ಛಾಯಾಗ್ರಹಣ ಈ ಚಿತ್ರಕ್ಕೆ ಇರಲಿದೆ. ‘ಹೃದಯಂ’ ಖ್ಯಾತಿಯ ಹೇಶಮ್ ಅಬ್ದುಲ್ ವಹಾಬ್ ಅವರು ಸಂಗೀತ ನಿರ್ದೇಶನ ಮಾಡುತ್ತಿರುವುದು ವಿಶೇಷ. ಸಂಕಲನದ ಜವಾಬ್ದಾರಿಯನ್ನು ಪ್ರವೀಣ್ ಆಂಥೋನಿ ಅವರು ನಿಭಾಯಿಸುತ್ತಿದ್ದಾರೆ. ಡಿಸೆಂಬರ್ 7ಕ್ಕೆ ಪಂಚ ಭಾಷೆಯಲ್ಲಿ ಚಿತ್ರ ಬಿಡುಗಡೆಯಾಗಲಿದೆ.

Exit mobile version