Site icon Vistara News

Hombale Films | ಅಧಿಕೃತ ಪೋಸ್ಟ್‌ ಮೂಲಕ ಕೊನೆಗೂ ಸೀಕ್ರೆಟ್‌ ರಿವೀಲ್‌ ಮಾಡಿದ ಹೊಂಬಾಳೆ ಫಿಲ್ಮ್ಸ್‌!

Hombale Films

ಬೆಂಗಳೂರು: ಭಾರತಿಯ ಚಿತ್ರರಂಗದಲ್ಲಿ ಅತ್ಯುತ್ತಮ ಸಿನಿಮಾಗಳನ್ನು ನೀಡಿದ ಹೊಂಬಾಳೆ ಫಿಲ್ಮ್ಸ್‌ (Hombale Films) ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ಮುಂದಿನ ಐದು ವರ್ಷಗಳಲ್ಲಿ ಚಿತ್ರೋದ್ಯಮಕ್ಕೆ 3000 ಕೋಟಿ ರೂ. ಬಂಡವಾಳ ಹೂಡಲಿದೆ. ಈ ವಿಚಾರವಾಗಿ ವಿಜಯ ಕಿರಗಂದೂರು ತಮ್ಮ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಅಧಿಕೃತವಾಗಿ ಪೋಸ್ಟ್ ಮಾಡಿದ್ದಾರೆ. ಅದರ ಜತೆ ಉತ್ತಮ ಬಜೆಟ್‌ನಲ್ಲಿ ಹಲವು ಚಿತ್ರಗಳನ್ನು ನಿರ್ಮಾಣ ಮಾಡುತ್ತಿದೆ.

ʻಕೆಜಿಎಫ್- 1’ ಮತ್ತು ‘ಕೆಜಿಎಫ್ -2’ ಚಿತ್ರಗಳ ಮೂಲಕ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಎಲ್ಲರೂ ಕನ್ನಡದತ್ತ ತಿರುಗಿ ನೋಡುವಂತೆ ಮಾಡಿದ್ದು ಹೊಂಬಾಳೆ ಫಿಲ್ಮ್ಸ್‌. ಈಗ ಅದೇ ಸಂಸ್ಥೆಯಿಂದ ನಿರ್ಮಾಣವಾಗಿರುವ ‘ಕಾಂತಾರ’ ಚಿತ್ರವನ್ನು ಮನೆ ಮಂದಿಯೆಲ್ಲ ನೋಡಿ ಇಷ್ಟಪಟ್ಟಿದ್ದಾರೆ. ಹೊಂಬಾಳೆ ಫಿಲ್ಮ್ಸ್‌ ಮೊದಲಿನಿಂದಲೂ ಕಥೆಗೆ ವಿಶೇಷವಾದ ಪ್ರಾಮುಖ್ಯತೆ ನೀಡುತ್ತಾ ಬಂದಿದ್ದು, ಈಗಾಗಲೇ ‘ಯುವರತ್ನ’, ‘ಕೆಜಿಎಫ್’ ಮುಂತಾದ ಚಿತ್ರಗಳ ಮೂಲಕ ಸಾಬೀತುಪಡಿಸಿದೆ.

ಇದನ್ನೂ ಓದಿ | Keerthy Suresh | ತಮಿಳಿಗೆ ಹೊಂಬಾಳೆ ಫಿಲ್ಮ್ಸ್‌: ಕೀರ್ತಿ ಸುರೇಶ್ ಅಭಿನಯದಲ್ಲಿ ‘ರಘು ತಾತಾ’ ಚಿತ್ರ ನಿರ್ಮಾಣ ಶುರು

ಐದು ಭಾಷೆಗಳಲ್ಲಿ ಏಕಕಾಲಕ್ಕೆ ಚಿತ್ರ ನಿರ್ಮಾಣ
ಇದೀಗ ಹೊಂಬಾಳೆ ಐದು ಭಾಷೆಗಳಲ್ಲಿ ಏಕಕಾಲಕ್ಕೆ ಚಿತ್ರ ನಿರ್ಮಾಣ ಮಾಡುತ್ತಿರುವುದು ಕನ್ನಡಿಗರಿಗೆ ಹೆಮ್ಮೆಯ ವಿಷಯವಷ್ಟೇ ಅಲ್ಲ, ಭಾರತೀಯ ಚಿತ್ರರಂಗದಲ್ಲೇ ಹೊಸ ದಾಖಲೆ. ಈಗಾಗಲೇ ಕನ್ನಡದಲ್ಲಿ ನವರಸ ನಾಯಕ ಜಗ್ಗೇಶ್ ಅಭಿನಯದಲ್ಲಿ ಸಂತೋಷ್ ಆನಂದರಾಮ್ ನಿರ್ದೇಶಿಸುತ್ತಿರುವ ‘ರಾಘವೇಂದ್ರ ಸ್ಟೋರ್ಸ್’ ಬಿಡುಗಡೆಯಾಗುವುದಕ್ಕೆ ಸಜ್ಜಾಗಿದೆ. ಶ್ರೀಮುರಳಿ ಅಭಿನಯದಲ್ಲಿ ಡಾ. ಸೂರಿ ನಿರ್ದೇಶಿಸುತ್ತಿರುವ ‘ಬಘೀರ’ ಚಿತ್ರವು ಚಿತ್ರೀಕರಣ ಹಂತದಲ್ಲಿದೆ. ರಕ್ಷಿತ್ ಶೆಟ್ಟಿ ಅಭಿನಯದ ಮತ್ತು ನಿರ್ದೇಶನದ ‘ರಿಚರ್ಡ್ ಆಂಟೋನಿ’ ಹೀಗೆ ಹೊಸ ಚಿತ್ರಗಳು ಸದ್ಯದಲ್ಲೇ ಶುರುವಾಗಲಿವೆ.

ಬೇರೆ ಭಾಷೆಗಳ ಜವಾಬ್ದಾರಿ ಹೊತ್ತ ಹೊಂಬಾಳೆ
ಬೇರೆ ಭಾಷೆಯ ಚಿತ್ರಗಳ ವಿಷಯಕ್ಕೆ ಬಂದರೆ, ತೆಲುಗಿನಲ್ಲಿ ಪ್ರಭಾಸ್ ಅಭಿನಯದ ‘ಸಲಾರ್’ ಚಿತ್ರದ ಚಿತ್ರೀಕರಣ ನಡೆಯುತ್ತಿದ್ದು, 2023ರ ಸೆಪ್ಟೆಂಬರ್‌ನಲ್ಲಿ ಚಿತ್ರ ಬಿಡುಗಡೆಯಾಗಲಿದೆ. ತಮಿಳಿನಲ್ಲಿ ಎರಡು ಚಿತ್ರಗಳನ್ನು ಹೊಂಬಾಳೆ ನಿರ್ಮಿಸುತ್ತಿದೆ. ಈ ಪೈಕಿ ಒಂದು ಚಿತ್ರವನ್ನು ‘ಸೂರರೈ ಪೊಟ್ರು’ ಖ್ಯಾತಿಯ ಸುಧಾ ಕೊಂಗರಾ ನಿರ್ದೇಶನ ಮಾಡಿದರೆ, ಇನ್ನೊಂದು ಚಿತ್ರದ ಘೋಷಣೆ ಶೀಘ್ರದಲ್ಲೇ ಆಗಲಿದೆ. ಮಲಯಾಳಂನಲ್ಲೂ ಹೊಂಬಾಳೆ ಫಿಲ್ಮ್ಸ್‌ ವತಿಯಿಂದ ಎರಡು ಚಿತ್ರ ನಿರ್ಮಾಣವಾಗುತ್ತಿವೆ.

ಫಹಾದ್ ಫಾಸಿಲ್ ಅಭಿನಯದ ‘ಧೂಮಂ’ ಚಿತ್ರದ ಚಿತ್ರೀಕರಣ ಈಗಾಗಲೇ ಪ್ರಾರಂಭವಾಗಿದ್ದರೆ, ಪೃಥ್ವಿರಾಜ್ ಸುಕುಮಾರನ್ ನಟಿಸಿ-ನಿರ್ದೇಶಿಸಲಿರುವ ‘ಟೈಸನ್’ ಚಿತ್ರವು ಮುಂದಿನ ವರ್ಷ ಪ್ರಾರಂಭವಾಗಲಿದೆ. ಹಿಂದಿ ಚಿತ್ರದ ಪ್ರಿ-ಪ್ರೊಡಕ್ಷನ್ ಕೆಲಸಗಳು ನಡೆಯಲಿದ್ದು ಸದ್ಯದಲ್ಲೇ ಅಧಿಕೃತ ಘೋಷಣೆಯಾಗಲಿದೆ.

ಇದನ್ನೂ ಓದಿ | Hombale Films | ಕೆಜಿಎಫ್‌ಗೆ 4 ವರ್ಷಗಳ ಸಂಭ್ರಮ: ಸ್ಪೆಷಲ್‌ ಪೋಸ್ಟ್‌ ಹಂಚಿಕೊಂಡ ಹೊಂಬಾಳೆ ಫಿಲ್ಮ್ಸ್‌!

Exit mobile version