Site icon Vistara News

Salaar Movie: ದೀಪಾವಳಿಗೆ ಡಬಲ್‌ ಗುಡ್‌ನ್ಯೂಸ್‌ ಹಂಚಿಕೊಂಡ ಹೊಂಬಾಳೆ ಫಿಲ್ಮ್ಸ್‌!

Hombale Films shared double good news for Diwali

ಬೆಂಗಳೂರು: ಪ್ರಭಾಸ್ ಅವರ `ಸಲಾರ್’ (Salaar Movie) ಸಿನಿಮಾ ಬಹುನಿರೀಕ್ಷಿತ ಚಿತ್ರಗಳಲ್ಲಿ ಒಂದಾಗಿದೆ. ರಿಲೀಸ್‌ ಡೇಟ್‌ ಅನೌನ್ಸ್‌ ಆಗಿದ್ದಾಗಿನಿಂದಲೂ ಅಪ್‌ಡೇಟ್‌ಗಾಗಿ ಕಾಯುತ್ತಿದ್ದಾರೆ ಫ್ಯಾನ್ಸ್‌. ಚಿತ್ರದ ಬಗ್ಗೆ ಅಭಿಮಾನಿಗಳು ಮತ್ತು ಪ್ರೇಕ್ಷಕರಲ್ಲಿ ನಿರೀಕ್ಷೆ ಗಗನಕ್ಕೇರಿದ್ದು, ದೀಪಾವಳಿಗೆ ಗುಡ್‌ ನ್ಯೂಸ್‌ ಹಂಚಿಕೊಂಡಿದೆ ಹೊಂಬಾಳೆ. ಡಿಸೆಂಬರ್ 1ರಂದು ‘ಸಲಾರ್’ ಸಿನಿಮಾದ ಟ್ರೇಲರ್‌ ರಿಲೀಸ್‌ ಆದರೆ, ‘ಸಲಾರ್’ ಸಿನಿಮಾದ ಕರ್ನಾಟಕದ ಹಂಚಿಕೆಯನ್ನು ತಾವೇ ಮಾಡುವುದಾಗಿ ಹೊಂಬಾಳೆ ಫಿಲ್ಮ್ಸ್ ಹೇಳಿದೆ.

‘ಸಲಾರ್ ಸೀಸ್​ಫೈರ್ ಟ್ರೇಲರ್ ಡಿಸೆಂಬರ್ 1ರ ಸಂಜೆ 7:19ಕ್ಕೆ ರಿಲೀಸ್ ಆಗಲಿದೆ’ ಎಂದು ಹೊಂಬಾಳೆ ಫಿಲ್ಮ್ಸ್ ಟ್ವೀಟ್ ಮಾಡಿದೆ. ʻʻಹಾಗೇ ಕರುನಾಡಿನಾದ್ಯಂತ ವಿತರಣೆಯ ಹೊಣೆ ನಮ್ಮದು. ಅತ್ಯಮೋಘ ಅನುಭವ ನೀಡುವ ಭರವಸೆಯೊಂದಿಗೆ ನಿಮ್ಮ ಮುಂದೆ ಬರುತ್ತಿದೆ ‘ಸಲಾರ್‌’!ʼʼಎಂದೂ ಹೊಂಬಾಳೆ ಫಿಲ್ಮ್ಸ್‌ ಟ್ವೀಟ್‌ ಹಂಚಿಕೊಂಡಿದೆ.

ಇದನ್ನೂ ಓದಿ: Salaar Movie: ಪ್ರಭಾಸ್ ಜತೆ ಐಟಂ ಸಾಂಗ್‌ಗೆ ಸೊಂಟ ಬಳುಕಿಸುತ್ತಿದ್ದಾರೆ ಗದರ್ 2 ನಟಿ?

ಶಾರುಖ್ ಖಾನ್ ಅವರ ಡಂಕಿ ಸಿನಿಮಾ ಕೂಡ ಅಂದೇ ರಿಲೀಸ್‌ ಆಗುತ್ತಿದ್ದು, ಬಾಕ್ಸ್‌ ಆಫೀಸ್‌ನಲ್ಲಿ ಕ್ಲಾಶ್‌ ಆಗೋದಂತೂ ಗ್ಯಾರಂಟಿ ಎಂದಂತಾಗಿದೆ.ಕೆಜಿಎಫ್’ ಖ್ಯಾತಿಯ ಪ್ರಶಾಂತ್ ನೀಲ್ ನಿರ್ದೇಶನದ ಈ ಚಿತ್ರ 2023ರ ಬಹು ನಿರೀಕ್ಷಿತ ಚಿತ್ರಗಳಲ್ಲಿ ಒಂದಾಗಿದೆ. ಸಲಾರ್’ ಟೀಸರ್ ಈಗಾಗಲೇ ಬಿಡುಗಡೆಗೊಂಡಿದ್ದು. ಸೂಪರ್ ಹಿಟ್ ಆಗಿದೆ. 100 ಮಿಲಿಯನ್‌ಗೂ ಅಧಿಕ ವ್ಯೂಸ್ ಸಾಧಿಸಿದೆ. ಆದರೂ ಕೂಡ ಟೀಸರ್ ಬಗ್ಗೆ ಕೆಲವು ಅಭಿಮಾನಿಗಳು ಬೇಸರ ವ್ಯಕ್ತಪಡಿಸಿದ್ದರು. ಪ್ರಭಾಸ್‌ ಲುಕ್ ರಿವೀಲ್ ಮಾಡಿಲ್ಲ ಎಂದಿದ್ದರು. ಇನ್ನು ʼಸಲಾರ್‌ʼ ಸಿನಿಮಾದ ವಿತರಣೆಯ ಹಕ್ಕನ್ನು ಪ್ರತ್ಯಾಂಗೀರ್‌ ಸಿನಿಮಾಸ್‌ ಪಡೆದುಕೊಂಡಿದೆ.

Exit mobile version