ಬೆಂಗಳೂರು: ರಾಮೇನಹಳ್ಳಿ ಜಗನ್ನಾಥ್ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ʻಹೊಂದಿಸಿ ಬರೆಯಿರಿ’ (Hondisi Bareyiri ) ಸಿನಿಮಾ ಸಾಕಷ್ಟು ವಿಶೇಷತೆಗಳಿಂದ ಗಮನ ಸೆಳೆಯುತ್ತಿದೆ. ʻಬೆಳಕಲಿ ಕಾಣದ ಇರುಳಿಗುʼ ಹಾಡು ಬಿಡುಗಡೆಗೊಂಡಿದ್ದು, ಮೆಲೋಡಿ ಸಾಂಗ್ ಎಂದು ಕಮೆಂಟ್ ಮೂಲಕ ಜನರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.
ರಾಮೇನಹಳ್ಳಿ ಜಗನ್ನಾಥ್ ಅರ್ಥಪೂರ್ಣ ಪದಪುಂಜಗಳನ್ನು ಪೋಣಿಸಿ ರಚಿಸಿರುವ ಹಾಡಿಗೆ ಜೋ ಕೋಸ್ಟ ಅದ್ಭುತ ಸಂಗೀತ ನೀಡುವುದರ ಜತೆ ಹಾಡಿಗೆ ಧ್ವನಿಯಾಗಿದ್ದಾರೆ. ʻಗುಳ್ಟುʼ ಖ್ಯಾತಿಯ ನವೀನ್ ಹಾಗೂ ಕೆಜಿಎಫ್ ಸಿನಿಮಾದಲ್ಲಿ ರಾಕಿಭಾಯ್ ಅಮ್ಮನಾಗಿ ನಟಿಸಿದ್ದ ಅರ್ಚನಾ ಜೋಯಿಸ್ ಕೆ.ಜಿ.ಎಫ್ ನಂತರ ಹೊಂದಿಸಿ ಬರೆಯಿರಿ ಚಿತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಪರಿಸ್ಥಿತಿಗಳನ್ನು ಹೊಂದಿಕೊಂಡು ಸಾಗುವ ಬದುಕಿನ ಪಯಣದ ಹೊಂದಿಸಿ ಬರೆಯಿರಿ ಸಿನಿಮಾದಲ್ಲಿ ಏಳು ಯುವಕ-ಯುವತಿಯರ ಒಂದೊಂದು ಕಥೆ, ಪ್ರೀತಿ ತುಂಬಿದೆ.
ಇದನ್ನೂ ಓದಿ | Love 360 | ಲವ್ 360 ಸಿನಿಮಾ ಟ್ರೈಲರ್ ರಿಲೀಸ್, ಹ್ಯಾಟ್ರಿಕ್ ಹೀರೋ ಮೆಚ್ಚುಗೆ
ಈಗಾಗಲೇ ಹೊಂದಿಸಿ ಬರೆಯಿರಿ ಸಿನಿಮಾದ ಶೂಟಿಂಗ್ ಆಗಿದ್ದು, ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿವೆ. ಟಗರು ಖ್ಯಾತಿಯ ಮಾಸ್ತಿ, ಪೊಗರು ಖ್ಯಾತಿಯ ಪ್ರಶಾಂತ್ ರಾಜಪ್ಪ ಹಾಗೂ ಜಗನ್ನಾಥ್ ಸೇರಿದಂತೆ ಮೂವರು ಈ ಚಿತ್ರಕ್ಕೆ ಸಂಭಾಷಣೆ ಬರೆದಿದ್ದಾರೆ. ‘ಗುಳ್ಟು’ ಚಿತ್ರಕ್ಕೆ ಸಿನಿಮಾಟೋಗ್ರಫಿ ಮಾಡಿದ್ದ ಶಾಂತಿ ಸಾಗರ್ ಈ ಚಿತ್ರಕ್ಕೆ ಕ್ಯಾಮೆರಾ ಹಿಡಿದಿದ್ದಾರೆ.
ಕೆ ಕಲ್ಯಾಣ್, ಹೃದಯಶಿವ ಹಾಗೂ ನಿರ್ದೇಶಕ ರಾಮೇನಹಳ್ಳಿ ಜಗನ್ನಾಥ್ ಹಾಡುಗಳಿಗೆ ಸಾಹಿತ್ಯ ಬರೆದಿದ್ದಾರೆ. ದೊಡ್ಡ ತಾರಾಬಳಗವೇ ನಟಿಸಿರುವ “ಹೊಂದಿಸಿ ಬರೆಯಿರಿʼ ಸಿನಿಮಾವನ್ನು “ಸಂಡೇ ಸಿನಿಮಾಸ್ “ಬ್ಯಾನರ್‌ನಡಿ ರಾಮೇನಹಳ್ಳಿ ಜಗನ್ನಾಥ್ ಹಾಗೂ ಅವರ ಸ್ನೇಹಿತರು ನಿರ್ಮಾಣ ಮಾಡಿದ್ದಾರೆ.
ಚೂರಿಕಟ್ಟೆ ಖ್ಯಾತಿಯ ಪ್ರವೀಣ್, ಐಶಾನಿ ಶೆಟ್ಟಿ, ಸಂಯುಕ್ತ ಹೊರನಾಡು, ಗಜಾನನ ಅಂಡ್ ಗ್ಯಾಂಗ್ ಖ್ಯಾತಿಯ ಶ್ರೀಮಹಾದೇವ್, ಗಾಳಿಪಟ ಚಿತ್ರ ಖ್ಯಾತಿಯ ಭಾವನಾ ರಾವ್ ಹೀಗೆ ಹಲವು ಪ್ರತಿಭೆಗಳು ಸಿನಿಮಾದಲ್ಲಿವೆ.
ಇದನ್ನೂ ಓದಿ | Liger | ಲೈಗರ್ ಸಿನಿಮಾದ ಥೀಮ್ ಸಾಂಗ್ ರಿಲೀಸ್: ಸಖತ್ ಮಾಸ್ ಸಾಂಗ್ ಎಂದ ಫ್ಯಾನ್ಸ್