Site icon Vistara News

Kannada New Movie: ‘ಹೊಂದಿಸಿ ಬರೆಯಿರಿ’ ಟ್ರೈಲರ್‌ ಬಿಡುಗಡೆಗೊಳಿಸಿದ ಅಶ್ವಿನಿ ಪುನೀತ್ ರಾಜ್ ಕುಮಾರ್

Kannada New Movie hondisi bareyiri trailer out

ಬೆಂಗಳೂರು: ರಾಮೇನಹಳ್ಳಿ ಜಗನ್ನಾಥ್ ಚೊಚ್ಚಲ ನಿರ್ದೇಶನದಲ್ಲಿ (Kannada New Movie) ಫೆಬ್ರವರಿ 10ರಂದು ಬಿಡುಗಡೆಯಾಗುತ್ತಿರುವ ‘ಹೊಂದಿಸಿ ಬರೆಯಿರಿ’ ಚಿತ್ರದ ಟ್ರೈಲರ್‌ ಬಿಡುಗಡೆಯಾಗಿದೆ. ಅಶ್ವಿನಿ ಪುನೀತ್ ರಾಜ್ ಕುಮಾರ್ ಚಿತ್ರದ ಟ್ರೈಲರ್‌ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ. ಪ್ರವೀಣ್ ತೇಜ್, ಭಾವನಾ ರಾವ್, ಸಂಯುಕ್ತ ಹೊರನಾಡು, ಐಶಾನಿ ಶೆಟ್ಟಿ, ನವೀನ್ ಶಂಕರ್, ಶ್ರೀ ಮಹದೇವ್, ಅರ್ಚನಾ ಜೋಯಿಸ್, ಅನಿರುದ್ಧ್ ಆಚಾರ್ಯ ಒಳಗೊಂಡ ಕಲಾವಿದರ ಮುಖ್ಯ ಭೂಮಿಕೆ ಈ ಚಿತ್ರದಲ್ಲಿದೆ.

ನಿರ್ದೇಶಕ ರಾಮೇನಹಳ್ಳಿ ಜಗನ್ನಾಥ್ ಮಾತನಾಡಿ ‘ಹೊಂದಿಸಿ ಬರೆಯಿರಿ’ ಎಂದಾಗ ನೆನಪಾಗುವುದು ಬಾಲ್ಯ. ಪರಿಸ್ಥಿತಿಗಳೊಂದಿಗೆ ಹೊಂದಿಕೊಂಡು ಹೋಗಬೇಕು, ಬದುಕು ಬಂದಂತೆ ಸ್ವೀಕರಿಸಿ ಎನ್ನುವುದು ಈ ಚಿತ್ರದ ಆಶಯ. ಐದು ಜನ ಸ್ನೇಹಿತರ ಹನ್ನೆರಡು ವರ್ಷದ ಜರ್ನಿ ಈ ಚಿತ್ರದಲ್ಲಿದೆ. ಕಾಲೇಜು, ಕಾಲೇಜು ನಂತರದ ದಿನಗಳು, ಮದುವೆ ಈ ಜರ್ನಿಯನ್ನು ಒಳಗೊಂಡಿದೆ. ತುಂಬಾ ಜನಕ್ಕೆ ಈ ಸಿನಿಮಾ ಕನೆಕ್ಟ್ ಆಗುತ್ತೆ. ಈ ಚಿತ್ರದ ಟೈಟಲ್ ನೀಡಿದ್ದು ಮಾಸ್ತಿ ಸರ್. ನನಗೆ ಈ ಚಿತ್ರ ಹೊಸತು. ಇಲ್ಲಿ ನಟಸಿರುವರೆಲ್ಲ ಅನುಭವಿಗಳು. ಸಾಕಷ್ಟು ತಯಾರಿ ಮಾಡಿಕೊಂಡು ಈ ಸಿನಿಮಾ ಕೆಲಸ ಆರಂಭಿಸಿದ್ದೇವೆ. ಫೆಬ್ರವರಿ10ರಂದು ಸಿನಿಮಾ ಬಿಡುಗಡೆಯಾಗುತ್ತಿದೆ ಎಲ್ಲರೂ ಸಿನಿಮಾ ನೋಡಿ ಪ್ರೋತ್ಸಾಹ ನೀಡಿʼʼ ಎಂದರು.

ಇದನ್ನೂ ಓದಿ: Kannada New Movie | ‘ಹೊಂದಿಸಿ ಬರೆಯಿರಿ’ ತಂಡಕ್ಕೆ ನಿರ್ದೇಶಕ ಯೋಗರಾಜ್ ಭಟ್ ಸಾಥ್: ಲಿರಿಕಲ್ ವಿಡಿಯೊ ರಿಲೀಸ್

ನಟ ನವೀನ್ ಶಂಕರ್ ಮಾತನಾಡಿ ʻʻಈ ಸಿನಿಮಾ ಒಪ್ಪಿಕೊಳ್ಳಲು ಮೂಲ ಕಾರಣ ಈ ಚಿತ್ರದ ಆಶಯ. ಸಂಬಂಧಗಳ ಸುತ್ತ, ಸ್ನೇಹದ ಸುತ್ತ, ಭಾಂದವ್ಯದ ಸುತ್ತ ಈ ಸಿನಿಮಾ ಹೇಳ ಹೊರಟ ವಿಷಯ ಬಹಳ ಇಷ್ಟವಾಯ್ತು. ಸಿನಿಮಾ ಎಲ್ಲರಿಗೂ ಕನೆಕ್ಟ್ ಆಗುತ್ತೆತ್ತದೆ. ನಿರ್ದೇಶಕರು ಈ ಚಿತ್ರವನ್ನು ತುಂಬ ಚೆನ್ನಾಗಿ ಕಟ್ಟಿಕೊಟ್ಟಿದ್ದಾರೆ. ಅವರಿಗೆ ಸಾಹಿತ್ಯದ ಅಭಿರುಚಿ ಇದೆ ಅದೆಲ್ಲವೂ ಸಿನಿಮಾವನ್ನು ಚೆಂದಗೊಳಿಸಿದೆ. ರಂಜಿತ್ ಪಾತ್ರ ಮಾಡಿದ್ದೇನೆ. ತುಂಬಾ ಅನುಭವಿ, ಗಟ್ಟಿತನ ಇರುವ ಹುಡುಗನ ಪಾತ್ರ. ಈ ಸಿನಿಮಾ ಭಾಗವಾಗಿರೋದಕ್ಕೆ ಬಹಳ ಖುಷಿ ಇದೆʼʼ ಎಂದರು.

Kannada New Movie

ಇದನ್ನೂ ಓದಿ: Hondisi Bareyiri | ತೆರೆ ಮೇಲೆ ಬರಲು ಸಜ್ಜಾಗಿದೆ ಹೊಂದಿಸಿ ಬರೆಯಿರಿ ಸಿನಿಮಾ: ರಿಲೀಸ್‌ ಡೇಟ್‌ ಪ್ರಕಟ

ಶಾಂತಿ ಸಾಗರ್ ಎಚ್.ಜಿ ಕ್ಯಾಮೆರಾ ನಿರ್ದೇಶನ, ಜೋ ಕೋಸ್ಟ ಸಂಗೀತ ನಿರ್ದೇಶನ, ಕೆ. ಕಲ್ಯಾಣ್, ಹೃದಯಶಿವ ಹಾಗೂ ನಿರ್ದೇಶಕ ರಾಮೇನಹಳ್ಳಿ ಜಗನ್ನಾಥ್ ಸಾಹಿತ್ಯ ಚಿತ್ರಕ್ಕಿದೆ. ಮಾಸ್ತಿ, ಪ್ರಶಾಂತ್ ರಾಜಪ್ಪ ಹಾಗೂ ನಿರ್ದೇಶಕ ರಾಮೇನಹಳ್ಳಿ ಜಗನ್ನಾಥ್ ಚಿತ್ರಕ್ಕೆ ಸಂಭಾಷಣೆ ಬರೆದಿದ್ದಾರೆ. ‘ಸಂಡೇ ಸಿನಿಮಾಸ್’ ಬ್ಯಾನರ್ ನಡಿ ರಾಮೇನಹಳ್ಳಿ ಜಗನ್ನಾಥ್ ಹಾಗೂ ಸ್ನೇಹಿತರು ಸೇರಿ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ.

Exit mobile version