ಬೆಂಗಳೂರು: ರಾಮೇನಹಳ್ಳಿ ಜಗನ್ನಾಥ್ ನಿರ್ದೇಶನದಲ್ಲಿ ಬಹು ನಿರೀಕ್ಷೆ ಮೂಡಿಸಿರುವ ‘ಹೊಂದಿಸಿ ಬರೆಯಿರಿ'(Hondisi Bareyiri) ಸಿನಿಮಾ ಬಿಡುಗಡೆಗೆ ರೆಡಿಯಾಗಿದೆ. ನವೆಂಬರ್ 18ಕ್ಕೆ ಸಿನಿಮಾ ರಾಜ್ಯಾದ್ಯಂತ ತೆರೆ ಕಾಣಲಿದೆ. ಈ ಹಿಂದೆಯಷ್ಟೇ ‘ಬೆಳಕಲಿ ಕಾಣದ ಇರುಳಿಗುʼ ಹಾಡು ಬಿಡುಗಡೆಗೊಂಡು ಮೆಚ್ಚುಗೆಗೆ ಪಾತ್ರವಾಗಿತ್ತು.
ಪರಿಸ್ಥಿತಿಗಳೊಂದಿಗೆ ಹೊಂದಿಕೊಂಡು ಸಾಗುವ ಬದುಕಿನ ಪಯಣವೇ ಜೀವನ ಎನ್ನುವ ಎಳೆಯನ್ನು ಮೂಲವಾಗಿಟ್ಟುಕೊಂಡು ಅದರ ಸುತ್ತ ಹೆಣೆಯಲಾದ ಕಥಾಹಂದರವೇ ‘ಹೊಂದಿಸಿ ಬರೆಯಿರಿ’. ಚಿತ್ರದಲ್ಲಿ ಪ್ರವೀಣ್ ತೇಜ್, ಐಶಾನಿ ಶೆಟ್ಟಿ, ಸಂಯುಕ್ತ ಹೊರನಾಡು, ಶ್ರೀ ಮಹದೇವ್, ಭಾವನಾ ರಾವ್, ನವೀನ್ ಶಂಕರ್, ಅರ್ಚನಾ ಜೋಯಿಸ್ ಚಿತ್ರದ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದಾರೆ.
ಚಿತ್ರದಲ್ಲಿ ಐವರು ಸ್ನೇಹಿತರ ಬದುಕಿನ ಒಂದೊಂದು ಕಥೆಯಿದೆ. ಭಾವನಾತ್ಮಕ ಜರ್ನಿಯೂ ಇದೆ. ಚಿತ್ರದಲ್ಲಿ ಎಂಟು ಹಾಡುಗಳಿದ್ದು, ಈಗಾಗಲೇ ಒಂದು ಹಾಡು ಬಿಡುಗಡೆಯಾಗಿ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. ಅಕ್ಟೋಬರ್‌ನಲ್ಲಿ ಟ್ರೈಲರ್ ರಿಲೀಸ್ ಮಾಡಲು ಚಿತ್ರತಂಡ ಪ್ಲ್ಯಾನ್ ಮಾಡಿಕೊಂಡಿದೆ. ಇದು ಜಗನ್ನಾಥ್ ನಿರ್ದೇಶನದ ಮೊದಲ ಸಿನಿಮಾ. ಚಿತ್ರಕ್ಕೆ ಕಥೆ ಬರೆದು ನಿರ್ದೇಶನ ಮಾಡುವುದರ ಜತೆಗೆ ನಿರ್ಮಾಣವನ್ನೂ ಅವರೇ ಮಾಡಿದ್ದಾರೆ.
ಇದನ್ನೂ ಓದಿ | ಕೃಷ್ಣ ಜನ್ಮಾಷ್ಟಮಿ ದಿನ ಅವಳಿ ಮಕ್ಕಳನ್ನು ಪರಿಚಯಿಸಿದ ಸ್ಯಾಂಡಲ್‌ವುಡ್ ಕ್ವೀನ್ ಅಮೂಲ್ಯ
ಟಗರು ಖ್ಯಾತಿಯ ಮಾಸ್ತಿ, ಪೊಗರು ಖ್ಯಾತಿಯ ಪ್ರಶಾಂತ್ ರಾಜಪ್ಪ ಹಾಗೂ ಜಗನ್ನಾಥ್ ಈ ಚಿತ್ರಕ್ಕೆ ಸಂಭಾಷಣೆ ಬರೆದಿದ್ದಾರೆ. ‘ಗುಳ್ಟು’ ಚಿತ್ರಕ್ಕೆ ಸಿನಿಮಾಟೋಗ್ರಫಿ ಮಾಡಿದ್ದ ಶಾಂತಿ ಸಾಗರ್ ಈ ಚಿತ್ರಕ್ಕೆ ಕ್ಯಾಮೆರಾ ಹಿಡಿದಿದ್ದಾರೆ.
ಕೆ ಕಲ್ಯಾಣ್, ಹೃದಯಶಿವ ಹಾಗೂ ನಿರ್ದೇಶಕ ರಾಮೇನಹಳ್ಳಿ ಜಗನ್ನಾಥ್ ಹಾಡುಗಳನ್ನು ಬರೆದಿದ್ದಾರೆ. ದೊಡ್ಡ ತಾರಾಬಳಗವೇ ನಟಿಸಿರುವ “ಹೊಂದಿಸಿ ಬರೆಯಿರಿʼ ಸಿನಿಮಾವನ್ನು “ಸಂಡೇ ಸಿನಿಮಾಸ್ “ಬ್ಯಾನರ್‌ನಡಿ ರಾಮೇನಹಳ್ಳಿ ಜಗನ್ನಾಥ್ ಹಾಗೂ ಅವರ ಸ್ನೇಹಿತರು ನಿರ್ಮಾಣ ಮಾಡಿದ್ದಾರೆ. ಸುನೀಲ್ ಪುರಾಣಿಕ್, ಪ್ರವೀಣ್ ಡಿ ರಾವ್ , ಧರ್ಮೇಂದ್ರ ಅರಸ್, ನಂಜುಂಡೇ ಗೌಡ, ಸುಧಾ ನರಸಿಂಹರಾಜು ಒಳಗೊಂಡ ದೊಡ್ಡ ತಾರಾಬಳಗ ಚಿತ್ರದಲ್ಲಿದೆ.
ಇದನ್ನೂ ಓದಿ | Kannada Teaser | ಒಂದೇ ದಿನದಲ್ಲಿ ಧೂಳೆಬ್ಬಿಸಿದ ಸ್ಯಾಂಡಲ್‌ವುಡ್ ಟೀಸರ್‌ಗಳಿವು; ಇದು ಕನ್ನಡದ ಹವಾ