Site icon Vistara News

Hope Movie | ಸ್ನೂಕರ್ ಪಟುವಿನ ಸಿನಿ ಕನಸು ಜುಲೈ 8ರಂದು ಬೆಳ್ಳಿತೆರೆಗೆ

Hope Movie

ಬೆಂಗಳೂರು : ಸ್ಯಾಂಡಲ್‌ವುಡ್‌ನಲ್ಲಿ ಸಾಲು ಸಾಲು ಚಿತ್ರಗಳು ತೆರೆಗೆ ಬರಲು ಸಜ್ಜಾಗಿವೆ. ಅದರಲ್ಲಿ ಚಿತ್ರರಂಗದಿಂದ ಒಂದಷ್ಟು ಗ್ಯಾಪ್ ತೆಗೆದುಕೊಂಡಿದ್ದ ಶ್ವೇತಾ ಶ್ರೀವಾಸ್ತವ್ ಅವರ ಹೋಪ್ ಸಿನಿಮಾ ಸಹ ಒಂದಾಗಿದೆ.

ಒಂದಷ್ಟು ‌ನಿರೀಕ್ಷೆಗಳ ನಡುವೆ ಬಿಡುಗಡೆಗೆ ಸಜ್ಜಾಗಿರುವ ಹೋಪ್ ಟ್ರೈಲರ್‌ ಮೂಲಕವೇ ಕುತೂಹಲವನ್ನು ಹುಟ್ಟುಹಾಕಿದೆ. ಪ್ರಾಮಾಣಿಕ ಅಧಿಕಾರಿ ವರ್ಗಾವಣೆ ಮತ್ತು ಅದರ ಸುತ್ತ ನಡೆಯುವ ರಾಜಕೀಯ ಆಟ, ಕಾನೂನು ಹೋರಾಟದ ಕಥಾಹಂದರವನ್ನು ಈ ಚಿತ್ರದಲ್ಲಿ ಕಟ್ಟಿಕೊಡಲಾಗಿದೆ.

ಇದನ್ನೂ ಓದಿ | ಚಾರ್ಲಿ ಸಿನಿಮಾ ನೋಡಿ ಥಿಯೇಟರ್‌ನಿಂದ ಹೊರ ಬಂದವರಿಗೆ ಶಾಕ್!

ಸುಮಲತಾ ಅಂಬರೀಷ್, ಪ್ರಮೋದ್ ಶೆಟ್ಟಿ, ಗೋಪಾಲ ಪಾಂಡೆ, ಪ್ರಕಾಶ್ ಬೆಳವಾಡಿ, ಸಿರಿ ಸೇರಿದಂತೆ ಅನೇಕ ಕಲಾವಿದರು ಚಿತ್ರದಲ್ಲಿದ್ದಾರೆ. ಖ್ಯಾತ ಸ್ನೂಕರ್ ಆಟಗಾರ್ತಿ ವರ್ಷ ಸಂಜೀವ್ ಹೋಪ್ ಸಿನಿಮಾಗೆ ಕಥೆ ಬರೆದು ನಿರ್ಮಾಣ ಮಾಡಿದ್ದಾರೆ.

ಈ ಹಿಂದೆ ಜಲ್ವಂತ ಸಿನಿಮಾ ನಿರ್ದೇಶಿಸಿದ ಅಂಬರೀಶ್ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದು, ಎಸ್.ಹಲ್ಲೇಶ್ ಛಾಯಾಗ್ರಹಣ ಮಾಡಿದ್ದು, ರಿತ್ವಿಕ್ ಮುರಳೀಧರ್ ಸಂಗೀತ ನೀಡಿದ್ದಾರೆ. ಮಹಿಳಾ ಪ್ರಧಾನ ಸಿನಿಮಾವಾಗಿರುವ ಹೋಪ್ ಇದೇ ಜುಲೈ 8ರಂದು ಬೆಳ್ಳಿತೆರೆಗೆ ಬರಲಿದೆ.

ಇದನ್ನೂ ಓದಿ | Dollu Teaser| ಅಂತಾರಾಷ್ಟ್ರೀಯ ಖ್ಯಾತಿ ಪಡೆದ ಡೊಳ್ಳು ಸಿನಿಮಾ ಟೀಸರ್‌ ಔಟ್‌

Exit mobile version