Site icon Vistara News

Hostel Hudugaru Bekagiddare: ಭಾರಿ ಕಲೆಕ್ಷನ್‌ನತ್ತ ʻಹಾಸ್ಟೆಲ್‌ ಹುಡುಗರುʼ ಸಿನಿಮಾ!

Hostel Hudugaru Bekagiddare Poster

ಬೆಂಗಳೂರು: ವಿವಾದಗಳ ಬೆನ್ನಲ್ಲೇ ಹಾಸ್ಟೆಲ್‌ ಹುಡುಗರು ಸಿನಿಮಾ (Hostel Hudugaru Bekagiddare) ಗ್ರ್ಯಾಂಡ್‌ ಓಪ್‌ನಿಂಗ್‌ ಪಡೆದುಕೊಂಡಿದೆ. ರಾಜ್ಯಾದ್ಯಂತ 150 ಸ್ಕ್ರೀನ್‌ಗಳಲ್ಲಿ ಸಿನಿಮಾ ರಿಲೀಸ್ ಆಗಿತ್ತು. ಮೊದಲ ದಿನವೇ ಸಿನಿಮಾ 90 ಲಕ್ಷ ರೂ.ಗೂ ಹೆಚ್ಚು ಕಲೆಕ್ಷನ್ ಮಾಡಿದೆ ಎಂದು ವರದಿಯಾಗಿದೆ. 2ನೇ ದಿನ ಹಾಸ್ಟೆಲ್‌ ಹುಡುಗರು ಬೇಕಾಗಿದ್ದಾರೆ ಸಿನಿಮಾ 1 ಕೋಟಿ 80 ಲಕ್ಷರೂ.ವರೆಗೆ ಗಳಿಕೆ ಕಂಡಿದೆ ಎನ್ನಲಾಗುತ್ತಿದೆ. ಮೊದಲ ದಿನಕ್ಕಿಂತ 2ನೇ ದಿನ ರೆಸ್ಪಾನ್ಸ್ ಅದ್ಭುತವಾಗಿತ್ತು. ಒಟ್ಟು 1 ಲಕ್ಷಕ್ಕೂ ಅಧಿಕ ಟಿಕೆಟ್‌ಗಳು ಮಾರಾಟ ಆಗಿರುವ ಅಂದಾಜಿದೆ. ರಮ್ಯಾ, ರಿಷಬ್ ಶೆಟ್ಟಿ ಮೊದಲಾದವರು ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಬಹುತೇಕ ಹೊಸ ಪ್ರತಿಭೆಗಳು ಸಿನಿಮಾದಲ್ಲಿ ನಟಿಸಿದ್ದಾರೆ ಮತ್ತು ಕೆಲಸ ಮಾಡಿದ್ದಾರೆ

ಭಾನುವಾರ (ಜು.23) ದೊಡ್ಡಮಟ್ಟದಲ್ಲಿ ಕಲೆಕ್ಷನ್ ನಿರೀಕ್ಷೆ ಮಾಡಲಾಗುತ್ತಿದೆ. 3ನೇ ದಿನ 3 ಕೋಟಿ ಗಡಿ ದಾಟುವ ಲೆಕ್ಕಾಚಾರ ಇದೆ. ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಚಿತ್ರಕ್ಕೂ ಪೈರೆಸಿ ಕಾಟ ಶುರುವಾಗಿದೆ. ಚಿತ್ರದ ಥಿಯೇಟರ್ ಪ್ರಿಂಟ್ ಲೀಕ್ ಆಗಿದೆ ಎನ್ನಲಾಗುತ್ತಿದೆ.

ರಿಷಬ್ ಶೆಟ್ಟಿ, ಪವನ್ ಕುಮಾರ್, ಶೈನ್ ಶೆಟ್ಟಿ ಹಾಗೂ ದಿಗಂತ್ ಕೂಡ ಸ್ಪೆಷಲ್ ರೋಲ್‌ನಲ್ಲಿ ನಟಿಸಿದ್ದಾರೆ. ಪುನೀತ್ ರಾಜ್ ಕುಮಾರ್, ರಕ್ಷಿತ್ ಶೆಟ್ಟಿ, ಸುದೀಪ್ ಸಾಥ್ ಕೊಟ್ಟಿರುವ ಈ ಸಿನಿಮಾಗೆ ನಿತಿನ್ ಕೃಷ್ಣಮೂರ್ತಿ ಅವರ ನಿರ್ದೇಶನವಿದೆ.

ಇದನ್ನೂ ಓದಿ: Hostel Hudugaru Bekagiddare: ನ್ಯಾಯವಾಗಿ ಸಿನಿಮಾ ಮಾಡಿದ್ರೆ ಹಿಟ್ ಪಕ್ಕಾ ಎಂದ ಶಿವಣ್ಣ

ಪ್ರಜ್ವಲ್ ಬಿಪಿ, ವರುಣ್ ಕುಮಾರ್ ಗೌಡ, ನಿತಿನ್ ಕೃಷ್ಣಮೂರ್ತಿ, ಅರವಿಂದ್ ಕಶ್ಯಪ್ ಹಾಗೂ ಇನ್ನಿತರರು ಜತೆಗೆ ಸೇರಿ ಹಾಸ್ಟೆಲ್‌ ಹುಡುಗರು ಬೇಕಾಗಿದ್ದಾರೆ ಸಿನಿಮಾವನ್ನು ನಿರ್ಮಿಸಿದ್ದಾರೆ. ಚಿತ್ರದ ಹಾಡುಗಳಿಗೆ ಅಜನೀಶ್‌ ಲೋಕನಾಥ್‌ ಸಂಗೀತ ನೀಡಿದ್ದಾರೆ. ರಕ್ಷಿತ್ ಶೆಟ್ಟಿ ತಮ್ಮದೇ ಪರಂವಃ ಪಿಕ್ಚರ್ಸ್ ಮೂಲಕ ಪ್ರಸ್ತುತಪಡಿಸಿದೆ.

Exit mobile version