Site icon Vistara News

Hoysala Movie: ಡಾಲಿ ಧನಂಜಯ್‌ ಅಭಿನಯದ ʻಹೊಯ್ಸಳʼ ಸಿನಿಮಾದ ಟ್ರೈಲರ್‌ ದಿನಾಂಕ ಪ್ರಕಟ

Hoysala Movie Trailer Date Announced

ಬೆಂಗಳೂರು: ಡಾಲಿ ಧನಂಜಯ್‌ ಅಭಿನಯದ ಬಹು ನಿರೀಕ್ಷಿತ ಹೊಯ್ಸಳ ಸಿನಿಮಾದ (Hoysala Movie) ಹಾಡು ಬಿಡುಗಡೆಯಾದ ಬೆನ್ನಲ್ಲೇ ಮತ್ತೆ ಅಭಿಮಾನಿಗಳಿಗೆ ಸಿಹಿಸುದ್ದಿಯನ್ನು ನೀಡಿದ್ದಾರೆ ಡಾಲಿ. ಈ ಸಿನಿಮಾದ ಟ್ರೈಲರ್‌ ಬಿಡುಗಡೆಗೆ ದಿನಾಂಕ ನಿಗದಿ ಆಗಿದೆ. ಮಾರ್ಚ್​ 20ರ ಸಂಜೆ 7.29ಕ್ಕೆ ‘ಹೊಯ್ಸಳ’ ಟ್ರೈಲರ್‌​ ರಿಲೀಸ್ (Hoysala Movie Trailer)​ ಆಗಲಿದೆ.

ಬಡವ ರಾಸ್ಕಲ್‌ನಲ್ಲಿ ಉಡುಪಿ ಹೋಟೆಲು ಹಾಡಿನಿಂದ ತಮ್ಮ ಜೋಡಿಯ ಮೋಡಿ ಮಾಡಿದ್ದ ಧನಂಜಯ ಹಾಗೂ ಅಮೃತಾ ಐಯ್ಯಂಗಾರ್ ಒಟ್ಟಿಗೆ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾದಲ್ಲಿ ಡಾಲಿ ಧನಂಜಯ್​ ಅವರು ಗುರುದೇವ್​ ಹೊಯ್ಸಳ ಎಂಬ ಪಾತ್ರ ಮಾಡುತ್ತಿದ್ದಾರೆ. ಈಗಾಗಲೇ ಬಿಡುಗಡೆ ಆಗಿರುವ ಟೀಸರ್ ಮತ್ತು ಹಾಡು ನೋಡಿ ಫ್ಯಾನ್ಸ್​ ಫಿದಾ ಆಗಿದ್ದಾರೆ. ಪೋಸ್ಟರ್​ಗಳಲ್ಲಿ ಡಾಲಿ ಧನಂಜಯ್​ ಅವರ ಗೆಟಪ್​ ಗಮನ ಸೆಳೆದಿದೆ. ಡಾಲಿ ಧನಂಜಯ್​ರ 25ನೇ ಸಿನಿಮಾ ಹೊಯ್ಸಳ ಮಾರ್ಚ್‌ 30 ರಂದು ತೆರೆಮೇಲೆ ಅಪ್ಪಳಿಸಲಿದೆ.

ಇದನ್ನೂ ಓದಿ: Hoysala Movie: ಡಾಲಿ ಧನಂಜಯ್‌ ಅಭಿನಯದ ಹೊಯ್ಸಳ ಸಿನಿಮಾದ ಮೆಲೋಡಿ ಲವ್ ಸಾಂಗ್ ಔಟ್‌

ಈ ಹಿಂದೆ ಟೀಸರ್‌ (Hoysala Movie Teaser) ಬಿಡುಗಡೆಯಾಗಿದ್ದು, ಜನರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿತ್ತು. ನಿಷ್ಠ ಹಾಗೂ ಖಡಕ್‌ ಪೊಲೀಸ್‌ ಅಧಿಕಾರಿ ಪಾತ್ರದಲ್ಲಿ ಡಾಲಿ ಧನಂಜಯ್‌ ಅವರು ನಟಿಸಿದ್ದು, ಟೀಸರ್‌ ರಿಲೀಸ್‌ ಆದ ಕೆಲವೇ ಗಂಟೆಯಲ್ಲಿ 14 ಲಕ್ಷಕ್ಕೂ ಅಧಿಕ ಜನ ವೀಕ್ಷಿಸಿದ್ದಾರೆ. ಮೊದಲ ಹಾಡಿಗೆ ಸಂಗೀತ ನೀಡಿರುವುದು ಅಜನೀಶ್ ಲೋಕನಾಥ್. ಹಾಡನ್ನು ಹಾಡಿರುವುದು ನಕಾಶ್‌ ಅಜೀಜ್. ಹೊಂಬಾಳೆ ಸಂಸ್ಥೆಯ ವಿಜಯ್‌ ಕಿರಗಂದೂರ್‌ ಅರ್ಪಿಸುವ, ಕೆ.ಆರ್‌.ಜಿ. ಸ್ಟುಡಿಯೋಸ್‌ ನಿರ್ಮಾಣ ಸಂಸ್ಥೆಯ ಬ್ಯಾನರ್‌ ಅಡಿಯಲ್ಲಿ ಕಾರ್ತಿಕ್‌ ಹಾಗೂ ಯೋಗಿ ಜಿ. ರಾಜ್‌ ಅವರು ಚಿತ್ರ ನಿರ್ಮಿಸಿದ್ದಾರೆ. ಕಾರ್ತಿಕ್‌ ಎಸ್‌. ಚಿತ್ರದ ಛಾಯಾಗ್ರಾಹಕರಾದರೆ, ಅಜನೀಶ್‌ ಲೋಕನಾಥ್‌ ಸಂಗೀತ ನಿರ್ದೇಶನವಿದೆ. ನವೀನ್‌ ಶಂಕರ್‌, ಅವಿನಾಶ್‌ ಸೇರಿ ಹಲವು ನಟರು ಸಿನಿಮಾದ ಭಾಗವಾಗಿದ್ದಾರೆ.

Exit mobile version