Site icon Vistara News

Goodbye Movie | ಬಹು ದೊಡ್ಡ ಕನಸು ಈಡೇರಿದೆ ಎಂದ ರಶ್ಮಿಕಾ ಮಂದಣ್ಣ: ಯಾರು ಆ ಇಬ್ಬರು ಐಕಾನ್‌ ಸ್ಟಾರ್ಸ್‌?

Goodbye Movie

ಬೆಂಗಳೂರು : ಬಾಲಿವುಡ್‌ ನಟ ಅಮಿತಾಭ್ ಬಚ್ಚನ್, ನೀನಾ ಗುಪ್ತಾ ಹಾಗೂ ರಶ್ಮಿಕಾ ಮಂದಣ್ಣ ಅಭಿನಯದ ʻಗುಡ್ ಬೈʼ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಸಿನಿಮಾ ಟ್ರೈಲರ್‌ಗೆ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಸೌತ್​ ನಟಿ ರಶ್ಮಿಕಾ ಮಂದಣ್ಣ ಗುಡ್​ ಬೈ (Goodbye Movie) ಚಿತ್ರದ ಮೂಲಕ ಬಾಲಿವುಡ್‌ಗೆ ಎಂಟ್ರಿ ಕೊಟ್ಟಿದ್ದಾರೆ. ಇದೀಗ ನ್ಯಾಷನಲ್‌ ಕ್ರಶ್‌ ರಶ್ಮಿಕಾ ಮಂದಣ್ಣ ಇಬ್ಬರೂ ಸ್ಟಾರ್‌ಗಳ ಕುರಿತಾಗಿ ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ.

ಮಾಧ್ಯಮದವರೊಂದಿಗೆ ʻಗುಡ್ ಬೈʼ ಚಿತ್ರದ ಟ್ರೈಲರ್‌ ಕುರಿತು ಮಾತನಾಡುವಾಗ ಪುಷ್ಟ-2 ಸಿನಿಮಾ ಚಿತ್ರೀಕರಣದ ಬಗ್ಗೆ ಹೇಳಿಕೊಂಡಿದ್ದಾರೆ. ʻʻಪುಷ್ಪಾ-2 ಚಿತ್ರದಲ್ಲಿ ಅಲ್ಲು ಅರ್ಜುನ್ ಮತ್ತು ʻಗುಡ್ ಬೈʼ ಚಿತ್ರದಲ್ಲಿ ಅಮಿತಾಭ್‌ ಬಚ್ಚನ್ ಅವರೊಂದಿಗೆ ಕೆಲಸ ಮಾಡಿರುವುದು ಸಂತಸದ ವಿಚಾರ. ಹಾಗೂ ಭಾರತೀಯ ಚಿತ್ರರಂಗದಲ್ಲಿ ಈ ಇಬ್ಬರು ಐಕಾನ್‌ ಸ್ಟಾರ್ಸ್‌ ಜತೆ ಕೆಲಸ ಮಾಡುವುದರ ಮೂಲಕ ನನ್ನ ಬಹು ದೊಡ್ಡ ಕನಸು ಈಡೇರಿದೆʼʼ ಎಂದು ಹೇಳಿಕೊಂಡಿದ್ದಾರೆ.

ಇದನ್ನೂ ಓದಿ | Goodbye Movie | ಬಾಲಿವುಡ್ ಬಿಗ್ ಬಿ ಮಗಳಾಗಿ ರಶ್ಮಿಕಾ ಮಂದಣ್ಣ: ರಿಲೀಸ್‌ ಡೇಟ್‌ ಅನೌನ್ಸ್‌!

ಮಾಧ್ಯಮದವರೊಂದಿಗೆ ಮಾತನಾಡಿದ ರಶ್ಮಿಕಾ ʻʻಅಮಿತಾಭ್‌ ಅವರನ್ನು ನಾನು ಮೊದಲು ಭೇಟಿ ಮಾಡಿದ್ದು ನನ್ನ ಹುಟ್ಟು ಹಬ್ಬದ ದಿನದಂದು. ಅವತ್ತೇ ʻಗುಡ್ ಬೈʼ ಚಿತ್ರೀಕರಣ ಪ್ರಾರಂಭಗೊಂಡಿದ್ದು ಇನ್ನೊಂದು ಸಂತಸದ ಕ್ಷಣ. ತುಂಬಾ ದಿನಗಳಿಂದ ಅವರ ಜತೆ ನಟನೆ ಮಾಡಬೇಕೆಂಬ ಕನಸು ಇತ್ತು. ಇದೀಗ ಆ ಕನಸು ನನಸಾಗಿದೆʼʼ ಎಂದರು.

ʻಗುಡ್ ಬೈʼ ಟ್ರೈಲರ್‌ ಹೈಲೆಟ್ಸ್‌!
ʻಗುಡ್ ಬೈʼ ಚಿತ್ರದಲ್ಲಿ ಅಮಿತಾಭ್ ಬಚ್ಚನ್‌ ಮತ್ತು ರಶ್ಮಿಕಾ ನಡುವಿನ ಫ್ಯಾಮಿಲಿ ಫೈಟ್​ ಹೈಲೈಟ್​ ಆಗಲಿದೆ. ಅಪ್ಪ ಮಗಳ ಬಾಂಧವ್ಯ ನೋಡಬಹುದಾಗಿದೆ. ಜತೆಗೆ ಭಾವನಾತ್ಮಕ ಸನ್ನಿವೇಶಗಳನ್ನು ಇಲ್ಲಿ ಕಾಣಬಹುದಾಗಿದೆ. ಇದೊಂದು ಪರಿಪೂರ್ಣ ಫ್ಯಾಮಿಲಿ ಎಂಟರ್‌ಟೈನರ್ ಚಿತ್ರ ಎಂದು ಹೇಳಲಾಗುತ್ತಿದೆ. ಇದರೊಂದಿಗೆ ಹಾಸ್ಯನಟ ಸುನಿಲ್ ಗ್ರೋವರ್ ಕೂಡ ಚಿತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ಚಿತ್ರವು ಅಕ್ಟೋಬರ್ ೭ರಂದು ಚಿತ್ರಮಂದಿರಗಳಲ್ಲಿ ವಿಶ್ವಾದ್ಯಂತ ಬಿಡುಗಡೆಗೆ ಸಿದ್ಧವಾಗಿದೆ. ಈ ಚಿತ್ರವನ್ನು ಏಕ್ತಾ ಕಪೂರ್ ನಿರ್ಮಿಸಿದ್ದಾರೆ. ವಿಕಾಸ್ ಬಹ್ಲ್ ನಿರ್ದೇಶನದ ಈ ಚಿತ್ರದಲ್ಲಿ ಸಾಹಿಲ್ ಮೆಹ್ತಾ, ಶಿವಿನ್ ನಾರಂಗ್ ಮತ್ತು ಪಾವೈಲ್ ಗುಲಾಟಿ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

ರಶ್ಮಿಕಾ ಮಂದಣ್ಣ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದು, ತಮಿಳಿನ ʻವರಿಸುʼ ಚಿತ್ರದಲ್ಲಿ ದಳಪತಿ ವಿಜಯ್ ಜತೆ ನಾಯಕಿಯಾಗಿ ನಟಿಸಲಿದ್ದಾರೆ. ವಂಶಿ ಪೈಡಿಪಲ್ಲಿ ನಿರ್ದೇಶನದ ಈ ಚಿತ್ರಕ್ಕೆ, ರಾಷ್ಟ್ರ ಪ್ರಶಸ್ತಿ ವಿಜೇತ ದಿಲ್ ರಾಜು ಅವರು ವೆಂಕಟೇಶ್ವರ ಕ್ರಿಯೇಷನ್ಸ್‌ನ ಪ್ರತಿಷ್ಠಿತ ಬ್ಯಾನರ್ ಅಡಿಯಲ್ಲಿ ಚಿತ್ರಕ್ಕೆ ಬೆಂಬಲ ನೀಡುತ್ತಿದ್ದಾರೆ. ರಶ್ಮಿಕಾ ಬಾಲಿವುಡ್‌ನಲ್ಲಿ ಸಿದ್ಧಾರ್ಥ್ ಮಲ್ಹೋತ್ರಾ ಅವರೊಂದಿಗೆ ʻಮಿಷನ್ ಮಜ್ನುʼ ಚಿತ್ರದಲ್ಲಿಯೂ ಕಾಣಿಸಿಕೊಳ್ಳಲಿದ್ದಾರೆ.

ಇದನ್ನೂ ಓದಿ | ಡ್ರೆಸ್ ಕಾರಣಕ್ಕೆ ಮತ್ತೆ ಸುದ್ದಿಯಾದGoodbye Movie ನಟಿ ರಶ್ಮಿಕಾ ಮಂದಣ್ಣ; ಹಾಟ್‌ ಫೋಟೊ ವೈರಲ್‌

Exit mobile version