ಬೆಂಗಳೂರು: ಕೌಸಲ್ಯಾ ಸುಪ್ರಜಾ ರಾಮ ಚಿತ್ರದಲ್ಲಿ ನಟಿಸಿರುವ ನಟ ನಾಗಭೂಷಣ ಅವರ (Actor Nagabhushana) ಕಾರು ದಂಪತಿಗೆ ಡಿಕ್ಕಿಯಾಗಿ, ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದರು. ಬೆಂಗಳೂರಿನ ವಸಂತನಗರ ಮುಖ್ಯರಸ್ತೆ ಬಳಿ ಶನಿವಾರ ರಾತ್ರಿ (ಸೆಪ್ಟೆಂಬರ್ 30) ದಂಪತಿ ಫುಟ್‌ಪಾತ್ ಮೇಲೆ ನಡೆದುಕೊಂಡು ಹೋಗುವಾಗ ನಾಗಭೂಷಣ ಕಾರು ಡಿಕ್ಕಿಯಾಗಿತ್ತು. ಇದಾದ ಬಳಿಕ ನಟ ಇದೇ ಮೊದಲ ಬಾರಿಗೆ ಮಾಧ್ಯಮಗಳ ಮುಂದೆ ಬಂದು ಮಾತನಾಡಿದ್ದಾರೆ. ಘಟನೆಯ ಬಗ್ಗೆ ಕಣ್ಣೀರಿಟ್ಟು ಹಲವು ವಿಚಾರಗಳನ್ನು ಹಂಚಿಕೊಂಡರು.
ಈ ಮುಂಚೆಯೇ ಮಾತನಾಡಬೇಕಿತ್ತು
ನಾಗಭೂಷಣ್ ಮಾತನಾಡಿ ʻʻಅಪಘಾತ ವಿಚಾರವಾಗಿ ಈ ಮುಂಚೆಯೇ ನಾನು ಮಾತನಾಡಬೇಕಿತ್ತು. ಸ್ವಲ್ಪ ಸಮಯ ತಗೆದುಕೊಂಡೆ. ನನಗೆ ಈ ನೋವಿನಿಂದ ಹೊರಬರಲು ಆಗುತ್ತಿರಲಿಲ್ಲ. ಸಮಯ ಬೇಕಿತ್ತು. ಹಿಟ್ ಅಂಡ್ ರನ್ ಕೇಸ್ ಅಲ್ಲಾ ಇದು. ಆಕ್ಸಿಡೆಂಟ್ ಆಗಿದ ತಕ್ಷಣ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದೆ. ಕಾನೂನು ಪ್ರಕ್ರಿಯೆಗೆ ಸಹಕರಿಸಿದ್ದೇನೆʼʼಎಂದರು.
ʻʻಗೌರಿ ಹಬ್ಬದಲ್ಲಿ ನನ್ನ ತಂದೆ ಅಪಘಾತದಲ್ಲಿ ತೀರಿಕೊಂಡರು. ಆ ನೋವು ಏನು ಅಂತ ನನಗೂ ಅನುಭವ ಆಗಿದೆ. ನನ್ನ ತಂದೆಯು ಇಂಥದ್ದೇ ಕಾರು ಅಪಘಾತದಲ್ಲಿ ನಿಧನರಾದರು. ಅದನ್ನು ಮಾಡಿದ್ದು ಯಾರು ಎನ್ನುವುದು ಈವರೆಗೂ ನಮಗೆ ಗೊತ್ತಿಲ್ಲ. ಅಪಘಾತ ಮಾಡಿದ ನಂತರ ಯಾರೂ ಓಡಿ ಹೋಗಬೇಡಿ. ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಿ. ನನ್ನ ತಂದೆಯ ಘಟನೆಯಿಂದ ನಾನು ಕಲಿತದ್ದು ಇದನ್ನೆ’ ಎಂದರು.
ಆ ಕುಟಂಬದವರ ಜತೆ ನನ್ನವರು ಸಂಪರ್ಕದಲ್ಲಿದ್ದಾರೆ
ನಟ ಅಳುತ್ತಲೇ ಮಾತು ಮುಂದುವರಿಸಿ ʻʻಅಪಘಾತ ಒಳಗಾದ ಕುಟುಂಬದವರನ್ನು ಏನು ಅಂತ ಹೋಗಿ ಮಾತಾಡಿಸಲಿ. ನನ್ನಿಂದ ಏನಾದರೂ ಸಹಾಯ ಅವರಿಗೆ ಬೇಕಿದ್ದರೆ ಖಂಡಿತ ಮಾಡುತ್ತೇನೆ. ನಮ್ಮವರು ಆ ಕುಟುಂಬದವರ ಜತೆ ಸಂಪರ್ಕದಲ್ಲಿದ್ದಾರೆ.
ಇದನ್ನೂ ಓದಿ: Actor Nagabhushana: ನಾಗಭೂಷಣ ಕಾರು ಅಪಘಾತ; ಸ್ಟೇಷನ್ ಬೇಲ್ ಮೇಲೆ ಬಿಡುಗಡೆ!
ಏನಿದು ಘಟನೆ?
ಕೌಸಲ್ಯಾ ಸುಪ್ರಜಾ ರಾಮ ಚಿತ್ರದಲ್ಲಿ ನಟಿಸಿರುವ ನಟ ನಾಗಭೂಷಣ ಅವರ (Actor Nagabhushana) ಕಾರು ದಂಪತಿಗೆ ಡಿಕ್ಕಿಯಾಗಿ, ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದರು. ಬೆಂಗಳೂರಿನ ವಸಂತನಗರ ಮುಖ್ಯರಸ್ತೆ ಬಳಿ ಶನಿವಾರ ರಾತ್ರಿ (ಸೆಪ್ಟೆಂಬರ್ 30) ದಂಪತಿ ಫುಟ್‌ಪಾತ್ ಮೇಲೆ ನಡೆದುಕೊಂಡು ಹೋಗುವಾಗ ನಾಗಭೂಷಣ ಕಾರು ಡಿಕ್ಕಿಯಾಗಿತ್ತು.
ಕೃಷ್ಣ (58) ಹಾಗೂ ಅವರ ಪತ್ನಿ ಪ್ರೇಮಾ (48) ಅವರು ರಾತ್ರಿ ವಾಕಿಂಗ್ ಮಾಡುವಾಗ ನಟ ನಾಗಭೂಷಣ ಅವರು ಚಲಾಯಿಸುತ್ತಿದ್ದ ಕಾರು ಡಿಕ್ಕಿಯಾಗಿತ್ತು. ಮೊದಲು ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿಯಾಗಿ, ನಂತರ ಫುಟ್‌ಪಾತ್ ಮೇಲೆ ನಡೆದುಕೊಂಡು ಹೋಗುತ್ತಿದ್ದ ದಂಪತಿಗೆ ಕಾರು ಡಿಕ್ಕಿಯಾಗಿತ್ತು ಅಪಘಾತದ ತೀವ್ರತೆಗೆ ಪ್ರೇಮಾ ಅವರು ಸ್ಥಳದಲ್ಲೇ ಮೃತಪಟ್ಟಿದ್ದರು. ಇನ್ನು ಗಂಭೀರವಾಗಿ ಗಾಯಗೊಂಡಿರುವ ಕೃಷ್ಣರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.
ಉತ್ತರಹಳ್ಳಿ ಕೋಣನಕುಂಟೆ ಕ್ರಾಸ್ ದಾರಿಯ ಮಧ್ಯೆ ರಾತ್ರಿ 9.45ರ ಸುಮಾರಿಗೆ ಅಪಘಾತ ಸಂಭವಿಸಿತ್ತು. ಕೃಷ್ಣ ಹಾಗೂ ಪ್ರೇಮಾ ದಂಪತಿಯ ಪುತ್ರ ಪಾರ್ಥ ಎಂಬುವರು ಕುಮಾರಸ್ವಾಮಿ ಸಂಚಾರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಅಪಾರ್ಟ್‌ಮೆಂಟ್ ಬಳಿಯ ಫುಟ್‌ಪಾತ್ ಮೇಲೆ ವಾಕಿಂಗ್ ಮಾಡುವಾಗ ವೇಗವಾಗಿ ಬಂದ ಕಾರು ಡಿಕ್ಕಿಯಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.