Actor Vishnuvardhan | ಕೊನೆಗೂ ಸಾಹಸ ಸಿಂಹ ವಿಷ್ಣುವರ್ಧನ್ ಸ್ಮಾರಕ ಉದ್ಘಾಟನೆಗೆ ಮುಹೂರ್ತ: ಜನವರಿ 29ರಂದು ಫಿಕ್ಸ್‌ - Vistara News

ಪ್ರಮುಖ ಸುದ್ದಿ

Actor Vishnuvardhan | ಕೊನೆಗೂ ಸಾಹಸ ಸಿಂಹ ವಿಷ್ಣುವರ್ಧನ್ ಸ್ಮಾರಕ ಉದ್ಘಾಟನೆಗೆ ಮುಹೂರ್ತ: ಜನವರಿ 29ರಂದು ಫಿಕ್ಸ್‌

ಸುಮಾರು ಎರಡೂವರೆ ಎಕರೆ ಜಾಗದಲ್ಲಿ ಸಾಹಸ ಸಿಂಹ ವಿಷ್ಣುವರ್ಧನ್ (Actor Vishnuvardhan ) ಅವರ ಸ್ಮಾರಕ ನಿರ್ಮಾಣ ಆಗಿದೆ. ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಭಾಗಿಯಾಗಲಿದ್ದಾರೆ.

VISTARANEWS.COM


on

Actor Vishnuvardhan Memorial in Mysore
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಸಾಹಸ ಸಿಂಹ ವಿಷ್ಣುವರ್ಧನ್ (Actor Vishnuvardhan ) ಅವರ ಸ್ಮಾರಕ ಉದ್ಘಾಟನೆಗೆ ಕೊನೆಗೂ ಮುಹೂರ್ತ ಕೂಡಿಬಂದಿದೆ. ಮೈಸೂರಿನ ಎಚ್‌.ಡಿ ಕೋಟೆ ರಸ್ತೆಯ ಅಲ್ಲಾಳು ಗ್ರಾಮದಲ್ಲಿ ನಿರ್ಮಾಣವಾಗಿರುವ ಸ್ಮಾರಕವನ್ನು ಜನವರಿ 29ರಂದು (ಭಾನುವಾರ) ಬೆಳಗ್ಗೆ 11 ಗಂಟೆಗೆ ಉದ್ಘಾಟಿಸಲಾಗುತ್ತದೆ ಎಂದು ನಟ ಅನಿರುದ್ಧ ಸೋಷಿಯಲ್‌ ಮೀಡಿಯಾ ಮೂಲಕ ತಿಳಿಸಿದ್ದಾರೆ. ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಅವರು ಸ್ಮಾರಕದ ಲೋಕಾರ್ಪಣೆ ಮಾಡಲಿದ್ದಾರೆ.

ಸುಮಾರು ಎರಡೂವರೆ ಎಕರೆ ಜಾಗದಲ್ಲಿ ಸ್ಮಾರಕ ನಿರ್ಮಾಣ ಆಗಿದೆ. ವಿಷ್ಣುವರ್ಧನ್ ಅವರಿಗೆ ಸಂಬಂಧಿಸಿದ ಗ್ಯಾಲರಿ, ಆಡಿಟೋರಿಯಂ, ಕ್ಲಾಸ್ ರೂಮ್, ಕ್ಯಾಂಟೀನ್ ಏರಿಯಾ.. ಹೀಗೆ ಈ ಸ್ಮಾರಕದಲ್ಲಿ ಹತ್ತು ಹಲವು ವಿಶೇಷತೆಗಳಿವೆ.

ಇದನ್ನೂ ಓದಿ | Actor Vishnuvardhan | ʻಕೋಟಿಗೊಬ್ಬʼ ಕ್ಯಾಲೆಂಡರ್ ರಿಲೀಸ್: 20 ಕಲಾವಿದರ ಕುಂಚದಲ್ಲಿ ಮೂಡಿಬಂದ ವಿಷ್ಣುವರ್ಧನ್

ʻʻಮೈಸೂರಿನಲ್ಲಿರುವ ವಿಷ್ಣು ಸ್ಮಾರಕದಲ್ಲಿ ವಿಷ್ಣುವರ್ಧನ್ ಅವರ 600 ಫೋಟೊಗಳ ಗ್ಯಾಲರಿ ಇದೆ.ವಿಷ್ಣು ಸ್ಮಾರಕದಲ್ಲಿ ಎರಡು ಕ್ಲಾಸ್ ರೂಮ್ ಕೂಡ ನಿರ್ಮಾಣ ಮಾಡಲಾಗಿದೆ. ಆಡಿಟೋರಿಯಂ ಕೂಡ ಇಲ್ಲಿ ನಿರ್ಮಿಸಲಾಗಿದೆ. ಸಿನಿಮಾ ಮತ್ತು ನಾಟಕಗಳ ಚಟುವಟಿಕೆಗೆ ಇದು ಅನುಕೂಲವಾಗಲಿದೆ. ಸ್ಮಾರಕದಲ್ಲಿ ಕ್ಯಾಂಟೀನ್ ವ್ಯವಸ್ಥೆ ಮಾಡಲಾಗಿದೆ. ಎರಡು ಮುಕ್ಕಾಲು ಎಕರೆಯಲ್ಲಿ ಇಡೀ ಸ್ಮಾರಕ ನಿರ್ಮಾಣಗೊಂಡಿದೆʼʼ ಎಂದು ಅನಿರುದ್ಧ ಅವರು ಈ ಹಿಂದೆ ಮಾಹಿತಿ ಹಂಚಿಕೊಂಡಿದ್ದರು.

ಕೊನೆಗೂ ಉದ್ಘಾಟನೆ ಭಾಗ್ಯ
ವಿಷ್ಣುವರ್ಧನ್‌ ಅವರ ಸ್ಮಾರಕಕ್ಕೆ ಸಂಬಂಧಿ ಕಳೆದ ಹಲವು ವರ್ಷಗಳಿಂದ ನಡೆಯುತ್ತಿದ್ದ ಹಗ್ಗಜಗ್ಗಾಟಕ್ಕೆ ಈಗ ತೆರೆ ಬೀಳುವ ಕಾಲ ಸನ್ನಿಹಿತವಾಗಿದೆ. ವಿಷ್ಣುವರ್ಧನ್‌ ಅವರು ೨೦೦೯ರ ಡಿಸೆಂಬರ್‌ ೩೦ರಂದು ನಿಧನರಾಗಿ ೧೩ ವರ್ಷಗಳೇ ಕಳೆದಿವೆ. ಆವತ್ತಿನಿಂದಲೇ ಸ್ಮಾರಕದ ವಿಚಾರದಲ್ಲಿ ಗೊಂದಲ ನಡೆಯುತ್ತಿತ್ತು. ಬೆಂಗಳೂರಿನಲ್ಲೇ ನಿರ್ಮಿಸಬೇಕೇ? ಮೈಸೂರಿನಲ್ಲೇ ಎಂಬ ಹಗ್ಗ ಜಗ್ಗಾಟ ನಡೆದಿತ್ತು. ಅಂತಿಮವಾಗಿ ಮೈಸೂರಿನಲ್ಲಿ ಎಂದು ತೀರ್ಮಾನವಾದರೂ ನಿರ್ಮಾಣ ವಿಳಂಬವಾಗಿದೆ. ಇದೀಗ ಕೊನೆಗೂ ಸ್ಮಾರಕಕ್ಕೆ ಉದ್ಘಾಟನಾ ಭಾಗ್ಯ ದೊರೆತು ವಿಷ್ಣು ಅಭಿಮಾನಿಗಳು ಖುಷಿಪಡುವಂತಾಗಿದೆ. ಹಿಂದೆ ಡಿಸೆಂಬರ್‌ ೧೬ಕ್ಕೆ ಸ್ಮಾರಕ ಉದ್ಘಾಟನೆಯಾಗಲಿದೆ ಎಂದು ಹೇಳಲಾಗಿತ್ತು, ಬಳಿಕ ದಿನಾಂಕ ಮುಂದೂಡಲಾಗಿತ್ತು.

ಇದನ್ನೂ ಓದಿ | Actor Vishnuvardhana | ಡಾ. ವಿಷ್ಣುವರ್ಧನ್‌ ನಿವಾಸದ ಗೃಹಪ್ರವೇಶ: ಕನಸಿನ ಮನೆಗೆ ಚೆಂದದ ಹೆಸರು, ವಿಡಿಯೊ ಇಲ್ಲಿದೆ!


ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Firecracker Explosion: ಪುರಿ ಜಗನ್ನಾಥ ದೇಗುಲದಲ್ಲಿ ಅಗ್ನಿ ದುರಂತ; 15 ಮಂದಿಗೆ ಗಾಯ

Firecracker Explosion: ವಿಶ್ವ ಪ್ರಸಿದ್ಧ ಒಡಿಶಾದ ಪುರಿ ಜಗನ್ನಾಥ ದೇಗುಲದಲ್ಲಿ ಬುಧವಾರ ರಾತ್ರಿ ಅಗ್ನಿ ದುರಂತವೊಂದು ಸಂಭವಿಸಿದ್ದು, ಸುಮಾರು 15 ಮಂದಿಗೆ ಸುಟ್ಟ ಗಾಯಗಳಾಗಿವೆ. ಭಗವಾನ್ ಜಗನ್ನಾಥನ ಚಂದನ್ ಜಾತ್ರಾ ಉತ್ಸವದ ಸಂದರ್ಭದಲ್ಲಿ ಪಟಾಕಿಗಳ ರಾಶಿ ಸ್ಫೋಟಗೊಂಡು ಈ ದುರಂತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಭಕ್ತರ ಗುಂಪು ಪಟಾಕಿ ಹಚ್ಚುತ್ತಿತ್ತು. ಈ ವೇಳೆ ಇದ್ದಕ್ಕಿದ್ದಂತೆ ಹಾರಿದ ಬೆಂಕಿಯ ಕಿಡಿ ಪಟಾಕಿಗಳ ರಾಶಿಗೆ ಅಪ್ಪಳಿಸಿತು. ಇದು ಸ್ಫೋಟಕ್ಕೆ ಕಾರಣ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

VISTARANEWS.COM


on

Firecracker Explosion
Koo

ಭುವನೇಶ್ವರ: ವಿಶ್ವ ಪ್ರಸಿದ್ಧ ಒಡಿಶಾದ ಪುರಿ ಜಗನ್ನಾಥ ದೇಗುಲ (Puri Jagannath temple)ದಲ್ಲಿ ಬುಧವಾರ ರಾತ್ರಿ ಅಗ್ನಿ ದುರಂತವೊಂದು ಸಂಭವಿಸಿದ್ದು, ಸುಮಾರು 15 ಮಂದಿಗೆ ಸುಟ್ಟ ಗಾಯಗಳಾಗಿವೆ. ಭಗವಾನ್ ಜಗನ್ನಾಥನ ಚಂದನ್ ಜಾತ್ರಾ ಉತ್ಸವದ ಸಂದರ್ಭದಲ್ಲಿ ಪಟಾಕಿಗಳ ರಾಶಿ ಸ್ಫೋಟಗೊಂಡು ಈ ದುರಂತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ (Firecracker Explosion).

ಉತ್ಸವ ವೀಕ್ಷಣೆಗಾಗಿ ನೂರಾರು ಮಂದಿ ನರೇಂದ್ರ ಪುಷ್ಕರಿಣಿ ದಂಡೆ ಮೇಲೆ ಜಮಾಯಿಸಿದ್ದ ವೇಳೆ ಪಟಾಕಿ ಸ್ಫೋಟಗೊಂಡಿತ್ತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಭಕ್ತರ ಗುಂಪು ಪಟಾಕಿ ಹಚ್ಚುತ್ತಿತ್ತು. ಈ ವೇಳೆ ಇದ್ದಕ್ಕಿದ್ದಂತೆ ಹಾರಿದ ಬೆಂಕಿಯ ಕಿಡಿ ಪಟಾಕಿಗಳ ರಾಶಿಗೆ ಅಪ್ಪಳಿಸಿತು. ಇದು ಸ್ಫೋಟಕ್ಕೆ ಕಾರಣ ಎಂದು ಅವರು ವಿವರಿಸಿದ್ದಾರೆ.

ಪಟಾಕಿ ಸಿಡಿಯುತ್ತಿದ್ದಂತೆ ಅಲ್ಲಿ ನೆರೆದಿದ್ದ ಕೆಲವರು ತಮ್ಮನ್ನು ರಕ್ಷಿಸಿಕೊಳ್ಳಲು ಪುಷ್ಕರಿಣಿಗೆ ಜಿಗಿದಿದ್ದಾರೆ. ಇನ್ನು ಹಲವರು ಕೂಡಲೇ ಸ್ಥಳದಿಂದ ತೆರಳಿದ್ದರಿಂದ ಹೆಚ್ಚಿನ ಅನಾಹುತ ತಪ್ಪಿದೆ. ಗಾಯಗೊಂಡವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆ ಪೈಕಿ ನಾಲ್ವರ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಘಟನೆಯ ಬಗ್ಗೆ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ದುಃಖ ವ್ಯಕ್ತಪಡಿಸಿದ್ದು, ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಚಿಕಿತ್ಸೆಯ ವೆಚ್ಚವನ್ನು ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಭರಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ʼʼಪುರಿ ಜಗನ್ನಾಥ ಉತ್ಸವದ ವೇಳೆ ನಡೆದ ಬೆಂಕಿ ದುರಂತದಿಂದ ತೀವ್ರ ದುಃಖವಾಗಿದೆ. ಗಾಯಗೊಂಡವರಿಗೆ ಸರಿಯಾದ ಚಿಕಿತ್ಸೆಯನ್ನು ಖಚಿತಪಡಿಸಿಕೊಳ್ಳಲು ಮತ್ತು ವ್ಯವಸ್ಥೆಯನ್ನು ಮೇಲ್ವಿಚಾರಣೆ ಮಾಡಲು ಮುಖ್ಯ ಆಡಳಿತ ಕಾರ್ಯದರ್ಶಿ ಮತ್ತು ಜಿಲ್ಲಾಡಳಿತಕ್ಕೆ ನಿರ್ದೇಶಿಸಲಾಗಿದೆ. ಗಾಯಾಳುಗಳ ಎಲ್ಲ ವೈದ್ಯಕೀಯ ವೆಚ್ಚವನ್ನು ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಭರಿಸಲಾಗುವುದು. ಎಲ್ಲರಿಗೂ ಉತ್ತಮ ಆರೋಗ್ಯವನ್ನು ಹಾರೈಸುತ್ತೇನೆ” ಎಂದು ನವೀನ್ ಪಟ್ನಾಯಕ್ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಕೂಡ ಘಟನೆಯ ಬಗ್ಗೆ ದುಃಖ ವ್ಯಕ್ತಪಡಿಸಿದ್ದಾರೆ. “ಪುರಿ ಚಂದನ ಯಾತ್ರೆಯ ಸಂದರ್ಭದಲ್ಲಿ ನರೇಂದ್ರ ಪುಷ್ಕರಿಣಿ ದೇವಿಘಾಟ್‌ನಲ್ಲಿ ನಡೆದ ಅಪಘಾತದಲ್ಲಿ ಅನೇಕರು ಗಾಯಗೊಂಡಿದ್ದಾರೆ ಎಂಬ ಸುದ್ದಿ ಕೇಳಿ ದುಃಖವಾಗಿದೆ. ಭಗವಂತನ ಆಶೀರ್ವಾದದಿಂದ, ಚಿಕಿತ್ಸೆಯಲ್ಲಿರುವವರು ಶೀಘ್ರದಲ್ಲೇ ಗುಣಮುಖರಾಗಿ ಮನೆಗೆ ಮರಳಲಿ” ಎಂದು ಅವರು ಹಾರೈಸಿದ್ದಾರೆ.

ಇದನ್ನೂ ಓದಿ: Fire Accident: ದೇಗುಲದಲ್ಲಿ ಅಗ್ನಿ ದುರಂತ; 13 ಜನಕ್ಕೆ ಗಾಯ, ಸಿಎಂ ಸ್ವಲ್ಪದರಲ್ಲೇ ಪಾರು!

Continue Reading

ಪ್ರಮುಖ ಸುದ್ದಿ

Raitha Siri Yojana: ಸಿರಿ ಧಾನ್ಯ ಬೆಳೆಯುವವರಿಗೆ ಸಿಹಿ ಸುದ್ದಿ; ನಿಮ್ಮ ಖಾತೆಗೇ ಬರುತ್ತೆ 10 ಸಾವಿರ ರೂ.

ರೈತ ಸಿರಿ ಯೋಜನೆ (Raitha Siri Yojana) ಹಣ ನೇರವಾಗಿ ರೈತರ ಖಾತೆಗೆ ಜಮಾ ಆಗುತ್ತದೆ. ಸಿರಿಧಾನ್ಯ ಬೆಳೆ ಕುರಿತು ರೈತರಲ್ಲಿ ಅರಿವು ಮೂಡಿಸಲು ಹಂತ ಹಂತವಾಗಿ ಟ್ರೈನಿಂಗ್‌ ಕೂಡ ನೀಡಲು ಉದ್ದೇಶಿಲಾಗಿದೆ. ಈ ಯೋಜನೆಯ ಫಲಾನುಭವ ಪಡೆಯಲು ಬೇಕಾದ ಅರ್ಹತೆಗಳು ಹೀಗಿವೆ.

VISTARANEWS.COM


on

Raitha Siri Yojana
Koo

ಬೆಂಗಳೂರು: ಸಿರಿಧಾನ್ಯ (millet, Siridhanya) ಬೆಳೆಯುವ ಹಾಗೂ ಸಣ್ಣ ಪ್ರಮಾಣದ ಜಮೀನು (small land) ಹೊಂದಿರುವ ರೈತರಿಗೆ (farmers) ಸಿಹಿ ಸುದ್ದಿಯನ್ನು ಸರ್ಕಾರ ನೀಡಿದೆ. ಸಿರಿಧಾನ್ಯ ಬೆಳೆಯನ್ನು ಪ್ರೋತ್ಸಾಹಿಸುವ ಸಲುವಾಗಿ ರೈತ ಸಿರಿ ಯೋಜನೆ (Raitha Siri Yojana) ಜಾರಿಗೆ ತಂದಿದ್ದು, ಇದರಡಿಯಲ್ಲಿ ಧಾನ್ಯ ಬೆಳೆಯುವುದಕ್ಕೆ ಬೇಕಾಗಿರುವ ಬೀಜಗಳು (seeds) ಮತ್ತು ರಸಗೊಬ್ಬರ (manure) ಪೂರೈಕೆಗಾಗಿ ಸರ್ಕಾರ 10,000 ರೂ. ನೀಡಲಿದೆ.

ಈ ಹಣ ನೇರವಾಗಿ ರೈತರ ಖಾತೆಗೆ ಜಮಾ ಆಗುತ್ತದೆ. ಸಿರಿಧಾನ್ಯ ಬೆಳೆ ಕುರಿತು ರೈತರಲ್ಲಿ ಅರಿವು ಮೂಡಿಸಲು ಹಂತ ಹಂತವಾಗಿ ಟ್ರೈನಿಂಗ್‌ ಕೂಡ ನೀಡಲು ಉದ್ದೇಶಿಲಾಗಿದೆ. ಈ ಯೋಜನೆಯ ಫಲಾನುಭವ ಪಡೆಯಲು ಬೇಕಾದ ಅರ್ಹತೆಗಳು ಹೀಗಿವೆ:

  • ಅರ್ಜಿದಾರರು ಕರ್ನಾಟಕದ ಕಾಯಂ ನಾಗರಿಕರಾಗಿರಬೇಕು
  • ಅರ್ಜಿದಾರರು ವೃತ್ತಿಯಲ್ಲಿ ರೈತರಾಗಿರಬೇಕು
  • ರೈತ ಪ್ರಾಥಮಿಕವಾಗಿ ರಾಗಿ ಉತ್ಪಾದಕನಾಗಿರಬೇಕು
  • ಈ ಯೋಜನೆಗೆ ಅರ್ಹತೆ ಪಡೆಯಲು ಕನಿಷ್ಠ ಒಂದು ಹೆಕ್ಟೇರ್ ಕೃಷಿ ಆಸ್ತಿ ಅಗತ್ಯವಿದೆ

ಕರ್ನಾಟಕ ರೈತ ಸಿರಿ ಯೋಜನೆಗೆ ಅರ್ಜಿ ಸಲ್ಲಿಸಲು ಈ ಕೆಳಗಿನ ದಾಖಲೆಗಳು ಅಗತ್ಯ:

  • ಆಧಾರ್ ಕಾರ್ಡ್ ಅಥವಾ ಗುರುತಿನ ಪುರಾವೆ
  • ಅರ್ಜಿದಾರರ ಭೂಮಿಗೆ ಸಂಬಂಧಿಸಿದ ದಾಖಲೆಗಳು
  • ಶಾಶ್ವತ ನಿವಾಸಿ ಪ್ರಮಾಣಪತ್ರ
  • ವಿಳಾಸ ಪುರಾವೆ
  • ಪಡಿತರ ಚೀಟಿ
  • ಬ್ಯಾಂಕ್ ಖಾತೆ ವಿವರಗಳು
  • ಮೊಬೈಲ್ ನಂಬರ್
  • ಭೂ ದಾಖಲೆ ವಿವರಗಳು
  • ಪಾಸ್‌ಪೋರ್ಟ್ ಗಾತ್ರದ ಫೋಟೋಗಳು

ರೈತ ಸಿರಿ ಯೋಜನೆಯ ಉದ್ದೇಶ:

  • ರಾಜ್ಯದಲ್ಲಿ ಸಾವಯವ ಕೃಷಿಯನ್ನು ಉತ್ತೇಜಿಸುವುದು
  • ಕೃಷಿ ಕ್ಷೇತ್ರವನ್ನು ಉತ್ತೇಜಿಸುವುದು
  • ರಾಜ್ಯದ ರೈತರಿಗೆ ಆರ್ಥಿಕ ನೆರವು ನೀಡುವುದು
  • ರಾಗಿ ಬೆಳೆಗಾರರಿಗೆ ಪ್ರತಿ ಹೆಕ್ಟೇರ್‌ಗೆ 10,000 ರೂ ನೆರವು
  • ರಾಜ್ಯದ ಒಣಭೂಮಿಯಲ್ಲಿ ನೀರನ್ನು ಪುನಃಸ್ಥಾಪಿಸಲು ಕೃಷಿ ಹೊಂಡಗಳನ್ನು ನಿರ್ಮಿಸುವುದು

ಹೆಚ್ಚಿನ ಮಾಹಿತಿಗಾಗಿ https://raitamitra.karnataka.gov.in/info-2/Raita+Siri/en ಭೇಟಿ ನೀಡಿ

ಇದನ್ನೂ ಓದಿ: Headless Chicken: ತಲೆ ಕತ್ತರಿಸಿದರೂ ಈ ಕೋಳಿ 18 ತಿಂಗಳು ಬದುಕಿತ್ತು! ಸಾಯುವ ಮೊದಲು ಮಾಲೀಕನನ್ನು ಶ್ರೀಮಂತಗೊಳಿಸಿತು!

Continue Reading

ಕರ್ನಾಟಕ

Karnataka Weather: ಇಂದು ದಕ್ಷಿಣ ಕನ್ನಡ, ಹಾಸನ, ಕೊಡಗು ಸೇರಿ ವಿವಿಧೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ!

Karnataka Weather: ಮುಂದಿನ 48 ಗಂಟೆಗಳ ಕಾಲ ಬೆಂಗಳೂರು ಮತ್ತು ಸುತ್ತಲಿನ ಪ್ರದೇಶಗಳಲ್ಲಿ ಸಾಮಾನ್ಯವಾಗಿ ಮೋಡ ಕವಿದ ಆಕಾಶ. ಹಗುರವಾದ ಮಳೆಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

VISTARANEWS.COM


on

Karnataka Weather
Koo

ಬೆಂಗಳೂರು: ರಾಜ್ಯದಲ್ಲಿ ಮೇ 30ರಂದು ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗುವ (Rain News) ಸಾಧ್ಯತೆ ಇದೆ. ಹಾಸನ, ಕೊಡಗು, ಮೈಸೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಲಘು ಮಳೆಯಾಗುವ (Karnataka Weather) ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಧಾರವಾಡ, ಗದಗ, ಹಾವೇರಿ, ಕೊಪ್ಪಳ ಜಿಲ್ಲೆಗಳಲ್ಲಿ ಮಾರುತಗಳು (ಗಂಟೆಗೆ 40-50 ಕಿಮೀ) ವೇಗದಲ್ಲಿ ಬೀಸುವ ಸಾಧ್ಯತೆ ಮತ್ತು ಬೆಂಗಳೂರು, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಮಂಡ್ಯ, ರಾಮನಗರದಲ್ಲಿ (30-40 ಕಿಮೀ) ವೇಗದಲ್ಲಿ ಬೀಸುವ ಸಾಧ್ಯತೆಯಿದೆ. ಶಿವಮೊಗ್ಗ ಜಿಲ್ಲೆಗಳು. ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಇರುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ಮುಂದಿನ 48 ಗಂಟೆಗಳ ಕಾಲ ಬೆಂಗಳೂರು ಮತ್ತು ಸುತ್ತಲಿನ ಪ್ರದೇಶಗಳಲ್ಲಿ ಸಾಮಾನ್ಯವಾಗಿ ಮೋಡ ಕವಿದ ಆಕಾಶ. ಹಗುರವಾದ ಮಳೆಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಕೆಲವೊಮ್ಮೆ ಮೇಲೆ ಗಾಳಿಯು ಪ್ರಬಲವಾಗಿರುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 32 °C ಮತ್ತು 22 ° C ಆಗಿರಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇನ್ನು ಮೇ 31ರಂದು ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಕೆಲವೆಡೆ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಬಿರುಗಾಳಿ (30-40 kmph) ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕನ್ನಡ ಜಿಲ್ಲೆಯ ಕೆಲವು ಸ್ಥಳಗಳಲ್ಲಿ ಲಘು ಮಳೆ/ಗುಡುಗು ಸಹಿತ ಮಳೆಯಾಗುವ ಸಂಭವವಿದೆ. ಧಾರವಾಡ, ಗದಗ, ಹಾವೇರಿ, ಕೊಪ್ಪಳ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ (ಗಂಟೆಗೆ 30-40 ಕಿ.ಮೀ) ವೇಗದ ಗಾಳಿ ಬೀಸುವ ಸಾಧ್ಯತೆಯಿದೆ. ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಇರುವ ಸಾಧ್ಯತೆಯಿದೆ.

ಇದನ್ನೂ ಓದಿ | Karnataka weather : ಗುಡುಗು ಸಹಿತ ಮಳೆಯೊಂದಿಗೆ 40 ಕಿ.ಮೀ ವೇಗದಲ್ಲಿ ಬೀಸುತ್ತೆ ಗಾಳಿ

ಇದೇ ರೀತಿ ಜೂನ್‌ 5ರವರೆಗೆ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಸೇರಿದಂತೆ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳು

Continue Reading

ಭವಿಷ್ಯ

Dina Bhavishya: ಈ ರಾಶಿಯವರು ಗೌಪ್ಯ ವಿಷಯಗಳನ್ನು ಹಂಚಿಕೊಳ್ಳುವ ಮುನ್ನ ಎಚ್ಚರವಿರಲಿ!

VISTARANEWS.COM


on

Dina Bhavishya
Koo

ಚಂದ್ರನು ಕುಂಭ ರಾಶಿಯಿಂದ ಬುಧವಾರ ರಾತ್ರಿ 08:32ಕ್ಕೆ ಮೀನ ರಾಶಿಯನ್ನು ಪ್ರವೇಶಿಸುತ್ತಾನೆ. ಇದರಿಂದಾಗಿ ಮೇಷ, ವೃಷಭ, ಸಿಂಹ, ಕನ್ಯಾ, ಧನಸ್ಸು, ಕುಂಭ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Kannada Dina Bhavishya) ನೋಡುವುದಾದರೆ, ಕಟಕ ರಾಶಿಯವರು ವ್ಯಾಪಾರ ಹಾಗೂ ಉದ್ಯೋಗದಲ್ಲಿ ಆರ್ಥಿಕ ಲಾಭವನ್ನು ಪಡೆಯುವ ಸಾಧ್ಯತೆ. ಗೌಪ್ಯ ವಿಷಯಗಳನ್ನು ಇತರರೊಂದಿಗೆ ಹಂಚಿಕೊಳ್ಳುವ ಮುನ್ನ ಎಚ್ಚರವಿರಬೇಕು. ಇನ್ನು ಕುಂಭ ರಾಶಿಯವರು ಕೋಪದ ಮನಸ್ಥಿತಿ ಇತರರ ಮೇಲೆ ಪ್ರಭಾವ ಬೀರಬಹುದು. ಅನಿವಾರ್ಯ ಕಾರಣಗಳಿಂದ ಸ್ನೇಹಿತರ ಸಹಾಯ ಬೇಡುವ ಸಾಧ್ಯತೆ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (30-05-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ವೈಶಾಖ ಮಾಸ, ಕೃಷ್ಣ ಪಕ್ಷ.
ತಿಥಿ: ಸಪ್ತಮಿ 11:43 ವಾರ: ಗುರುವಾರ
ನಕ್ಷತ್ರ: ಧನಿಷ್ಠಾ 07:30 ಯೋಗ: ವೈಧೃತಿ 20:51
ಕರಣ: ಭವ 20:51 ಅಮೃತ ಕಾಲ: ರಾತ್ರಿ 11:25 ರಿಂದ 12:56 ರವರಗೆ
ದಿನದ ವಿಶೇಷ: ಶ್ರೀರಾಮ ಪಟ್ಟಾಭಿಷೇಕ, ತುಂಬುರರ ಜಯಂತಿ

ಸೂರ್ಯೋದಯ : 05:52   ಸೂರ್ಯಾಸ್ತ : 06:42

ರಾಹುಕಾಲ : ಮಧ್ಯಾಹ್ನ 1:30 ರಿಂದ 3:00
ಗುಳಿಕಕಾಲ: ಬೆಳಗ್ಗೆ 9:00 ರಿಂದ 10:30
ಯಮಗಂಡಕಾಲ: ಬೆಳಗ್ಗೆ 06:00 ರಿಂದ 07:30

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಬಣ್ಣದ ಮಾತುಗಳನ್ನು ನಂಬಿ ಇಂದು ಯಾವುದೇ ಹೂಡಿಕೆ ವ್ಯವಹಾರಗಳಲ್ಲಿ ತೊಡಗುವುದು ಬೇಡ. ಇಂದು ಒತ್ತಡದ ದಿನದ ಹೊರತಾಗಿಯೂ ಆರೋಗ್ಯ ಪರಿಪೂರ್ಣವಾಗಿರುತ್ತದೆ. ನಿಮ್ಮ ಆಪ್ತರಿಗೆ ನಿಮ್ಮ ಮಾತುಗಳು ಬೇಸರ ತರಿಸಬಹುದು. ಅನಾವಶ್ಯಕ ವಾದದಲ್ಲಿ ಸಿಲುಕಿಕೊಳ್ಳುವ ಸಾಧ್ಯತೆ ಇದೆ, ಹೀಗಾಗಿ ಎಚ್ಚರಿಕೆ ಇರಲಿ. ದಿಢೀರ್ ಪ್ರಯಾಣ ಸಾಧ್ಯತೆಗಳು ಇದ್ದು, ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 5

Horoscope Today

ವೃಷಭ: ಹಾಸ್ಯಪ್ರಜ್ಞೆಯ ನಡವಳಿಕೆಯಿಂದಾಗಿ ಇತರರನ್ನು ಚುಂಬಕದಂತೆ ಆಕರ್ಷಿಸಿ ಕೆಲಸ ಕಾರ್ಯಗಳನ್ನು ಯಶಸ್ವಿಯಾಗಿ ಪೂರೈಸಿಕೊಳ್ಳುವಿರಿ. ಭೂ ಹಾಗೂ ಹೂಡಿಕೆ ವ್ಯವಹಾರಗಳಲ್ಲಿ ದಿನದ ಮಟ್ಟಿಗೆ ತೊಡುಗುವುದು ಬೇಡ. ಇದರಿಂದ ಆರ್ಥಿಕವಾಗಿ ಬಳಲುವ ಸಾಧ್ಯತೆ.
ಆರೋಗ್ಯ ಪರಿಪೂರ್ಣ.ಉದ್ಯೋಗಿಗಳಿಗೆ ಮಿಶ್ರ ಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 4

Horoscope Today

ಮಿಥುನ: ಉತ್ಸಾಹ ತುಂಬಿದ ವಾತಾವರಣ. ಇಂದು ನೀವು ಚೈತನ್ಯಯುಕ್ತವಾಗಿರುತ್ತೀರಿ. ಅನಾವಶ್ಯಕ ಖರ್ಚು ಮಾಡಿ ನಂತರ ದುಃಖಿಸುಸುವುದು ಬೇಡ. ನಿಮಗೆ ಕುಟುಂಬದ ಯಜಮಾನನ ಬೆಂಬಲ ಸಿಗಲಿದೆ. ಆರೋಗ್ಯ ಪರಿಪೂರ್ಣ. ಉದ್ಯೋಗಿಗಳಿಗೆ ಒತ್ತಡ.ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 2

Horoscope Today

ಕಟಕ: ನೀವು ಇತರರನ್ನು ಶ್ಲಾಘಿಸುವ ಮೂಲಕ ಯಶಸ್ಸನ್ನು ಆನಂದಿಸುವ ಸಾಧ್ಯತೆ ಇದೆ. ವ್ಯಾಪಾರ ಹಾಗೂ ಉದ್ಯೋಗದಲ್ಲಿ ಆರ್ಥಿಕ ಲಾಭವನ್ನು ಪಡೆಯುವ ಸಾಧ್ಯತೆ. ಗೌಪ್ಯ ವಿಷಯಗಳನ್ನು ಇತರರೊಂದಿಗೆ ಹಂಚಿಕೊಳ್ಳುವ ಮುನ್ನ ಎಚ್ಚರವಿರಲಿ. ಆರ್ಥಿಕವಾಗಿ ಪ್ರಗತಿ. ಪ್ರೇಮಿಗಳಿಗೆ ಶುಭ ಸುದ್ದಿ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 6

Horoscope Today

ಸಿಂಹ: ಆತ್ಮವಿಶ್ವಾಸತೆಯಿಂದ ಕೆಲಸ ಕಾರ್ಯಗಳಲ್ಲಿ ಪ್ರಗತಿ. ಆಪ್ತರೊಂದಿಗೆ ವಾದಕ್ಕಿಳಿಯುವ ಸಾಧ್ಯತೆ ಇದ್ದು, ಆದಷ್ಟು ಮಾತಿನಲ್ಲಿ ಹಿಡಿತವಿರಲಿ. ವಿದ್ಯಾರ್ಥಿಗಳು ಉಜ್ವಲ ಭವಿಷ್ಯಕ್ಕಾಗಿ ಮನೋರಂಜನೆಗೆ ಕಡಿವಾಣ ಹಾಕುವುದು ಉತ್ತಮ. ಆರೋಗ್ಯ ಪರಿಪೂರ್ಣ, ಅನಿವಾರ್ಯ ಕಾರಣಗಳಿಂದ ಖರ್ಚು. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 4

Horoscope Today

ಕನ್ಯಾ: ಸಕಾರಾತ್ಮಕ ಆಲೋಚನೆಗಳು ನಿಮಗೆ ಪುಷ್ಟಿ ನೀಡಲಿವೆ. ಸೃಜನಶೀಲ ಕ್ಷೇತ್ರಗಳಲ್ಲಿರುವವರು ಬಹಳ ದಿನಗಳಿಂದ ಕಾಯುತ್ತಿದ್ದ ಪ್ರಸಿದ್ಧಿ ಮತ್ತು ಗುರುತಿಸುವಿಕೆಯನ್ನು ಪಡೆಯುವ ಒಂದು ಯಶಸ್ವಿ ದಿನ. ವಿವಾಹ ಅಪೇಕ್ಷಿತರಿಗೆ ಶುಭ ಸೂಚನೆ ಸಿಗಲಿದೆ. ಆರೋಗ್ಯ ಪರಿಪೂರ್ಣ. ಆರ್ಥಿಕವಾಗಿ ಸದೃಢ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 2

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಅತಿಯಾದ ಒತ್ತಡದಿಂದ ಮಾನಸಿಕವಾಗಿ ಹಾಗೂ ದೈಹಿಕವಾಗಿ ಬಳಲುವ ಸಾಧ್ಯತೆ. ಜೀವನದ ಪ್ರಮುಖ ನಿರ್ಧಾರಗಳ ಕುರಿತು ನೀವು ಕುಟುಂಬದೊಂದಿಗೆ ಚರ್ಚಸುವ ಸಾಧ್ಯತೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಉದ್ಯೋಗಿಗಳಿಗೆ ಯಶಸ್ಸು ಸಿಗಲಿದೆ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 5

Horoscope Today

ವೃಶ್ಚಿಕ: ಹಳೆಯ ಸ್ನೇಹಿತರೊಂದಿಗೆ ಆತ್ಮೀಯ ಮಾತುಕತೆ. ಭವಿಷ್ಯದ ಜೀವನಕ್ಕಾಗಿ ಹೂಡಿಕೆ ಕುರಿತು ಆಲೋಚನೆ ಇರಲಿದ್ದು, ಸಂಗಾತಿಯಿಂದ ಸಲಹೆ ಪಡೆಯುವ ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣ. ಆರ್ಥಿಕವಾಗಿ ಸಾಧಾರಣ ಪ್ರಗತಿ ಇರಲಿದ್ದು, ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

Horoscope Today

ಧನಸ್ಸು: ಅನೇಕ ದಿನಗಳಿಂದ ನನೆಗುದಿಗೆ ಬಿದ್ದಿರುವ ಕೋರ್ಟ್, ಕಚೇರಿ ವ್ಯಾಜ್ಯಗಳು ವಿಜಯವನ್ನು ತಂದು ಕೊಡಲಿವೆ. ದಿನದ ಕೊನೆಯಲ್ಲಿ ಯಾವುದಾದರೂ ಕಾರಣದಿಂದ ಒತ್ತಡಕ್ಕೆ ಒಳಗಾಗುವ ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣ, ಆರ್ಥಿಕವಾಗಿ ಪ್ರಗತಿ. ಉದ್ಯೋಗಿಗಳಿಗೆ ಮಿಶ್ರಫಲ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 4

Horoscope Today

ಮಕರ: ಆರೋಗ್ಯ ಪರಿಪೂರ್ಣವಾಗಿರುತ್ತದೆ. ಯಾವುದೋ ಮೂಲದಿಂದ ಆರ್ಥಿಕವಾಗಿ ಬಲಗೊಳ್ಳಲಿದ್ದೀರಿ. ಕುಟುಂಬದ ಸದಸ್ಯರ ಅಪಸ್ವರದಿಂದಾಗಿ ಮಾನಸಿಕವಾಗಿ ಒತ್ತಡಕ್ಕೆ ಒಳಗಾಗುವ ಸಾಧ್ಯತೆ. ಮಾತಿಗೆ ವಿರಾಮ ನೀಡುವುದು ಉತ್ತಮ. ಉದ್ಯೋಗಿಗಳಿಗೆ ಪ್ರೋತ್ಸಾಹ ಸಿಗಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 4

Horoscope Today

ಕುಂಭ: ನಿಮ್ಮ ಕೋಪದ ಮನಸ್ಥಿತಿ ಇತರರ ಮೇಲೆ ಪ್ರಭಾವ ಬೀರಬಹುದು. ಅನಿವಾರ್ಯ ಕಾರಣಗಳಿಂದ ಸ್ನೇಹಿತರ ಸಹಾಯ ಬೇಡುವ ಸಾಧ್ಯತೆ. ನಿಮ್ಮ ಕೆಲಸದ ಮೇಲೆ ಗಮನ ಹರಿಸಿದಲ್ಲಿ ಯಶಸ್ಸು ಮತ್ತು ಮನ್ನಣೆ ನಿಮ್ಮದಾಗುತ್ತದೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಆರ್ಥಿಕವಾಗಿ ಪ್ರಗತಿ ಹೊಂದಲಿದ್ದೀರಿ. ಉದ್ಯೋಗಿಗಳಿಗೆ ಸಾಧಾರಣ ಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1

Horoscope Today

ಮೀನ: ಅನಿವಾರ್ಯ ಕಾರಣಗಳಿಂದ ಕುಟುಂಬದ ಸದಸ್ಯರೊಂದಿಗೆ ಮನಸ್ತಾಪ, ಆದಾಗ್ಯೂ ನೀವು ನಿಮ್ಮ ಶಾಂತ ಸ್ವಭಾವದಿಂದ ಎಲ್ಲವನ್ನು ಸರಿಗೊಳಿಸಬಹುದು. ಆರೋಗ್ಯ ಪರಿಪೂರ್ಣವಾಗಿರಲಿದ್ದು, ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ಇನ್ನು ಉದ್ಯೋಗಿಗಳಿಗೆ ಹೆಚ್ಚಿನ ಒತ್ತಡ ಇರಲಿದೆ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 8

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading
Advertisement
Gold Smuggling
ದೇಶ7 mins ago

Gold Smuggling: ಶಶಿ ತರೂರ್‌ ಪಿಎ ಅರೆಸ್ಟ್‌- ಚುನಾವಣೆ ಹೊತ್ತಲ್ಲೇ ಕಾಂಗ್ರೆಸ್‌ ನಾಯಕನಿಗೆ ತೀವ್ರ ಮುಜುಗರ

Firecracker Explosion
ದೇಶ9 mins ago

Firecracker Explosion: ಪುರಿ ಜಗನ್ನಾಥ ದೇಗುಲದಲ್ಲಿ ಅಗ್ನಿ ದುರಂತ; 15 ಮಂದಿಗೆ ಗಾಯ

Raitha Siri Yojana
ಪ್ರಮುಖ ಸುದ್ದಿ35 mins ago

Raitha Siri Yojana: ಸಿರಿ ಧಾನ್ಯ ಬೆಳೆಯುವವರಿಗೆ ಸಿಹಿ ಸುದ್ದಿ; ನಿಮ್ಮ ಖಾತೆಗೇ ಬರುತ್ತೆ 10 ಸಾವಿರ ರೂ.

Nosebleeds In Summer
ಆರೋಗ್ಯ1 hour ago

Nosebleeds In Summer: ಬೇಸಿಗೆಯ ತಾಪಕ್ಕೆ ಮೂಗಿನಲ್ಲಿ ರಕ್ತಸ್ರಾವವೇ? ತಡೆಯಲು ಇಲ್ಲಿವೆ ಸರಳ ಉಪಾಯ

Karnataka Weather
ಕರ್ನಾಟಕ2 hours ago

Karnataka Weather: ಇಂದು ದಕ್ಷಿಣ ಕನ್ನಡ, ಹಾಸನ, ಕೊಡಗು ಸೇರಿ ವಿವಿಧೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ!

Hair Growth Tips
ಆರೋಗ್ಯ2 hours ago

Hair Growth Tips: ಕೂದಲು ಉದುರುವುದಕ್ಕೆ ಬೀಟಾ ಕ್ಯಾರೊಟಿನ್‌ ಮದ್ದು!

Dina Bhavishya
ಭವಿಷ್ಯ3 hours ago

Dina Bhavishya: ಈ ರಾಶಿಯವರು ಗೌಪ್ಯ ವಿಷಯಗಳನ್ನು ಹಂಚಿಕೊಳ್ಳುವ ಮುನ್ನ ಎಚ್ಚರವಿರಲಿ!

Girlfriend
ದೇಶ8 hours ago

Girlfriend: ‘ಬಾಡಿಗೆ ಗರ್ಲ್‌ಫ್ರೆಂಡ್‌’ ಆಗಲು ಸಿದ್ಧಳೆಂದ ಯುವತಿ; ಈಕೆಯ ‘ದರಪಟ್ಟಿ’ ನೋಡಿ,‌ ನೀವೂ ಟ್ರೈ ಮಾಡಿ

CAA Certificate
ದೇಶ9 hours ago

CAA Certificate: ದೀದಿ ವಿರೋಧದ ಮಧ್ಯೆಯೂ ಬಂಗಾಳದಲ್ಲಿ ಸಿಎಎ ಜಾರಿಗೆ ತಂದ ಕೇಂದ್ರ; ಪೌರತ್ವ ಪ್ರದಾನ!

Modi Meditation
ದೇಶ10 hours ago

Modi Meditation: ಮೋದಿಗೆ ಧ್ಯಾನ ಮಾಡಲು ಬಿಡಬೇಡಿ; ಚುನಾವಣೆ ಆಯೋಗಕ್ಕೆ ಕಾಂಗ್ರೆಸ್ ಮೊರೆ!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ2 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು2 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ3 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ4 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು4 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ1 week ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 week ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು1 week ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

ಟ್ರೆಂಡಿಂಗ್‌