Site icon Vistara News

Indrajit Lankesh: ಇಂದ್ರಜಿತ್​ ಲಂಕೇಶ್ ಪುತ್ರನ ಸಿನಿಮಾಗೆ ʻಗೌರಿʼ ಟೈಟಲ್‌ ಫಿಕ್ಸ್‌;ಮುಹೂರ್ತಕ್ಕೆ ಸಿದ್ದರಾಮಯ್ಯ ಅತಿಥಿ

samarjit with Sanya

ಬೆಂಗಳೂರು: ಇಂದ್ರಜಿತ್​ ಲಂಕೇಶ್​ (Indrajit Lankesh) ಅವರು ನಿರ್ದೇಶಕನಾಗಿ ಹೆಸರು ಮಾಡಿದ್ದಾರೆ. ಈಗ ಅವರ ಪುತ್ರ ಸಮರ್ಜಿತ್​ ಲಂಕೇಶ್​ (Samarjit Lankesh) ಅವರು ಹೀರೊ ಆಗಿ ಚಿತ್ರರಂಗಕ್ಕೆ ಕಾಲಿಡುತ್ತಿದ್ದಾರೆ. ಇಂದ್ರಜಿತ್‌ ಲಂಕೇಶ್ ಅವರು ತಮ್ಮ ಮಗನ ಮೊದಲ ಸಿನಿಮಾಕ್ಕೆ ‘ಗೌರಿ’ ಎಂದು ಟೈಟಲ್ ಇಟ್ಟಿದ್ದಾರೆ. ಈ ಸಿನಿಮಾದ ಮುಹೂರ್ತ ಸಮಾರಂಭ ಆಗಸ್ಟ್ 31ರಂದು ನಡೆಯಲಿದೆ. ಆ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಖ್ಯ ಅತಿಥಿಯಾಗಿ ಆಗಮಿಸಲಿದ್ದಾರೆ.

ʻಗೌರಿ’ ಸಿನಿಮಾಕ್ಕೆ ಆ.31ರಂದು ಬೆಳಗ್ಗೆ ಬೆಂಗಳೂರಿನ ದೊಡ್ಡ ಗಣಪತಿ ದೇವಸ್ಥಾನದಲ್ಲಿ ಮುಹೂರ್ತ ಸಮಾರಂಭ ನಡೆಯಲಿದೆ. ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಶ್ರೀಶ್ರೀಶ್ರೀ ಡಾ ನಿರ್ಮಲಾನಂದನಾಥ ಸ್ವಾಮೀಜಿ ಅವರು ದಿವ್ಯ ಸಾನಿಧ್ಯ ವಹಿಸಲಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಖ್ಯ ಅತಿಥಿಗಳಾಗಿವೆ ಆಗಮಿಸಲಿದ್ದಾರೆ. ಈ ಸಿನಿಮಾಗಾಗಿ ಸಮರ್ಜಿತ್​ ಲಂಕೇಶ್​ ಅವರು ಡ್ಯಾನ್ಸ್​, ಫೈಟಿಂಗ್​, ಕುದುರೆ ಸವಾರಿ ಸೇರಿದಂತೆ ಅನೇಕ ಕಲೆಗಳನ್ನು ಕಲಿತು ಬಂದಿದ್ದಾರೆ. ಜಾಹೀರಾತು ಕ್ಷೇತ್ರದಲ್ಲಿ ಅವರಿಗೆ ಅನುಭವ ಇದೆ.

ಇದನ್ನೂ ಓದಿ: Kannada New Movie: ರಂಗಾಯಣ ರಘು ‘ಶಾಖಾಹಾರಿ’ ಸಿನಿಮಾಗೆ ಯೋಗರಾಜ್ ಭಟ್ ಸಾಥ್‌!

‘ಗೌರಿ’ ಚಿತ್ರದಲ್ಲಿ ಸಮರ್ಜಿತ್​ ಲಂಕೇಶ್​ಗೆ ಜೋಡಿಯಾಗಿ ‘ಬಿಗ್​ ಬಾಸ್​’ ಖ್ಯಾತಿಯ ಸಾನ್ಯಾ ಅಯ್ಯರ್​ ಅವರು ನಟಿಸಲಿದ್ದಾರೆ. ಇನ್ನು, ಈ ಸಿನಿಮಾದ ಹಾಡುಗಳಿಗೆ ಜೆಸ್ಸಿಗಿಫ್ಟ್ ಮತ್ತು ಚಂದನ್‌ ಶೆಟ್ಟಿ ಸಂಗೀತ ನೀಡುತ್ತಿದ್ದಾರೆ. ಎಜೆ ಶೆಟ್ಟಿ ಛಾಯಾಗ್ರಹಣ ಮಾಡುತ್ತಿದ್ದು, ಬಿ ಎ ಮಧು, ರಾಜಶೇಖರ್, ಮಾಸ್ತಿ ಸಂಭಾಷಣೆ ಬರೆಯುತ್ತಿದ್ದಾರೆ. ಹಾಡುಗಳಿಗೆ ಕೆ ಕಲ್ಯಾಣ್, ವಿ ನಾಗೇಂದ್ರ ಪ್ರಸಾದ್, ಕವಿರಾಜ್ ಸಾಹಿತ್ಯ ಬರೆಯುತ್ತಿದ್ದಾರೆ.

Exit mobile version