ಕಭಿ ಈದ್ ಕಭಿ ದಿವಾಲಿ: Salman Khan ಹೊಸ ಚಿತ್ರದ ಹೆಸರು ಬದಲಾಗುತ್ತಾ? ಹಾಗಿದ್ರೆ ಯಾಕೆ? - Vistara News

ಸಿನಿಮಾ

ಕಭಿ ಈದ್ ಕಭಿ ದಿವಾಲಿ: Salman Khan ಹೊಸ ಚಿತ್ರದ ಹೆಸರು ಬದಲಾಗುತ್ತಾ? ಹಾಗಿದ್ರೆ ಯಾಕೆ?

ಬಾಕ್ಸ್‌ ಅಫೀಸ್‌ ಕಿಂಗ್‌ ಸಲ್ಮಾನ್‌ ಖಾನ್‌ ಬಹುನಿರೀಕ್ಷಿತ ಚಿತ್ರವಾದ ಕಭಿ ಈದ್‌ ಕಭಿ ದಿವಾಲಿ ಚಿತ್ರದ ಹೆಸರನ್ನು ಬದಲಾಯಿಸಲಾಗುತ್ತದೆ ಎಂಬ ಸುದ್ದಿ ಹರಡಿದೆ. ಹಾಗಿದ್ದರೆ ಸಲ್ಮಾನ್‌ ಮತ್ತೊಮ್ಮೆ ಭಾಯಿಜಾನ್‌ ಆಗುತ್ತಾರಾ?

VISTARANEWS.COM


on

kabhi eid kabhi diwali
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬಯಿ: ಸಲ್ಲೂಬಾಯಿ ಚಿತ್ರಗಳು ಅಂದ್ರೇನೇ ಹಾಗೇ. ಮನರಂಜನೆ, ಸಖತ್‌ ಹಾಡುಗಳು, ಉತ್ತಮ ಕಥೆ ಹಾಗೂ ಜಬರ್ದಸ್ತ್‌ ಸಾಹಸವನ್ನು ಒಳಗೊಂಡಿರುತ್ತದೆ. ಪ್ರೇಕ್ಷಕ ವರ್ಗವನ್ನು ಹಿಡಿದಿಡುವ ನಾಯಕರಲ್ಲಿ ಸಲ್ಮಾನ್‌ ಖಾನ್ ಮುಂಚೂಣಿಯಲ್ಲಿದ್ದಾರೆ. ಅವರ ಸಿನಿಮಾಗಳು ತೆರೆಯ ಮೇಲೆ ಬರುವ ಮೊದಲೇ ಸಾಕಷ್ಟು ಸುದ್ದಿ ಮಾಡಿರುತ್ತವೆ. ಹೀಗೆ ಸೆಟ್ಟೇರುವ ಹಂತದಲ್ಲೇ ಸಾಕಷ್ಟು ಗಮನ ಸೆಳೆದದ್ದು ಅವರ ಮುಂದಿನ ಸಿನಿಮಾದ ಟೈಟಲ್‌: ಕಭಿ ಈದ್‌ ಕಭಿ ದಿವಾಲಿ.

ಆದರೆ, ಈಗ ಬರುತ್ತಿರುವ ಸುದ್ದಿ ಪ್ರಕಾರ, ಈ ಟೈಟಲ್‌ ಬದಲಾಗಲಿದೆ. ಸಲ್ಮಾನ್‌ ಖಾನ್‌ ತಮ್ಮ ಇಷ್ಟದ ಟೈಟಲ್‌ ಆಗಿರುವ ಭಾಯಿ ಜಾನ್‌ಗೇ ಮರಳಲಿದ್ದಾರೆ. ಸಲ್ಮಾನ್‌ ಖಾನ್‌ ಅವರು ನಟಿಸಿದ ಭಜರಂಗಿ ಭಾಯಿ ಜಾನ್‌ ಭಾರಿ ಜನಪ್ರಿಯ ಚಿತ್ರ. 2015ರಲ್ಲಿ ಬಿಡುಗಡೆಯಾದ ಈ ಸಿನಿಮಾ ಸಲ್ಮಾನ್‌ ಖಾನ್‌ ಅವರನ್ನು ಮನೆ ಮನೆಯ ಹೀರೊ ಮಾಡಿತ್ತು. ಈಗ ಹೊಸ ಚಿತ್ರಕ್ಕೆ ಭಾಯಿ ಜಾನ್‌ ಎಂದು ಹೆಸರಿಟ್ಟರೆ ಅಭಿಮಾನಿಗಳು ಭಜರಂಗಿ ಭಾಯಿ ಜಾನ್‌ಗೂ ಕನೆಕ್ಟ್‌ ಮಾಡಿಕೊಳ್ಳುವ ಸಾಧ್ಯತೆ ಇದೆ. ಇದರಿಂದ ಚಿತ್ರದ ನಿರೀಕ್ಷೆ ಇನ್ನಷ್ಟು ಹೆಚ್ಚಲಿದೆ.

ಕಭಿ ಈದ್‌ ಕಭಿ ದಿವಾಲಿ ಸಿನಿಮಾಕ್ಕೆ ಸಂಬಂಧಿಸಿ ಈಗಾಗಲೇ ಹಲವು ಬದಲಾವಣೆಗಳು ಆಗಿ ಹೋಗಿದೆ. ಮೇ ತಿಂಗಳ ಆರಂಭದಲ್ಲಿ, ಆಯುಷ್ ಶರ್ಮಾ ಚಿತ್ರದಿಂದ ಹೊರನಡೆದಿದ್ದರು. ನಿರ್ದೇಶಕ ಫರ್ಹಾದ್‌ ಸಾಮ್ಜಿ ಅವರೊಂದಿಗೆ ಭಿನ್ನಾಭಿಪ್ರಾಯದಿಂದ ಅವರು ದೂರ ಸರಿದರು ಎನ್ನಲಾಗಿತ್ತು. ಆಗ ಸಂಬಂಧಿಕನೇ ಆಗಿರುವ ಆಯುಷ್‌ ಶರ್ಮನನ್ನು ಮರಳಿ ಕರೆ ತರುವ ಹೊಣೆಯನ್ನು ಸಲ್ಮಾನ್‌ ಖಾನ್‌ಗೇ ವಹಿಸಲಾಗಿತ್ತು. ಆದರೆ, ಸಲ್ಮಾನ್‌ ಖಾನ್‌ ಈ ಬಗ್ಗೆ ಹೆಚ್ಚು ಆಸಕ್ತಿ ತೋರಲಿಲ್ಲ. ಆಯುಷ್‌ ಶರ್ಮ ಅವರ ಪಾತ್ರವನ್ನು ಈಗ ಜಸ್ಸಿ ಗಿಲ್‌ ತುಂಬಿದ್ದಾರೆ. ಈ ನಡುವೆ ನಟ ಜಹೀರ್‌ ಇಕ್ಬಾಲ್‌ ಅವರೂ ಪ್ರಾಜೆಕ್ಟ್‌ ತೊರೆದಿದ್ದು, ಸಿದ್ಧಾರ್ಥ್‌ ನಿಗಮ್‌ ಆ ಸ್ಥಾನಕ್ಕೆ ಬಂದಿದ್ದಾರೆ.

ಪೂಜಾ ಹೆಗ್ಡೆ ಎಂಟ್ರಿ
ಕಭಿ ಈದ್ ಕಭಿ ದಿವಾಲಿ ಸಿನಿಮಾದಲ್ಲಿ ಕರಾವಳಿ ಬೆಡಗಿ ಪೂಜಾ ಹೆಗ್ಡೆ ಸಹ ನಟಿಸಲಿದ್ದಾರೆ. ಭರವಸೆಯ ನಟಿ ಶೆಹನಾಜ್ ಗಿಲ್ ಅವರಿಗೆ ಇದು ಚೊಚ್ಚಲ ಬಾಲಿವುಡ್ ಚಿತ್ರವಾಗಲಿದೆ. ಅವರು ಈಗಾಗಲೇ ಚಿತ್ರೀಕರಣದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಮುಂಬಯಿಯಲ್ಲಿ ಮೊದಲ ಶೆಡ್ಯೂಲ್‌ನ ಚಿತ್ರೀಕರಣ ನಡೆಯುತ್ತಿದ್ದು, ಎರಡನೇ ಸುತ್ತು ಹೈದರಾಬಾದ್‌ನಲ್ಲಿ ನಡೆಯಲಿದೆ. ಬಳಿಕ ಉತ್ತರ ಭಾರತದ ಹಲವು ನಗರಗಳಲ್ಲಿ ಚಿತ್ರೀಕರಣ ನಡೆಯಲಿದೆ ಎಂದು ತಿಳಿದುಬಂದಿದೆ.
ಕಭಿ ಈದ್ ಕಭಿ ದಿವಾಲಿ ಹೊರತುಪಡಿಸಿ ಸಲ್ಮಾನ್ ಖಾನ್ ಇತರ ಹಲವು ಸಿನಿಮಾಗಳಲ್ಲಿ ಸಲ್ಮಾನ್‌ ಬ್ಯುಸಿ ಆಗಿದ್ದಾರೆ. ರೆಡಿ ಆಗುತ್ತಿದ್ದಾರೆ. ಕತ್ರಿನಾ ಕೈಫ್ ಸಹ ನಟಿಸಿರುವ ಟೈಗರ್ 3 ಗಾಗಿ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಈ ಚಿತ್ರವು 2023ರ ಏಪ್ರಿಲ್‌ನಲ್ಲಿ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಶಾರುಖ್ ಖಾನ್ ಅವರ ಪಠಾನ್ ಚಿತ್ರದಲ್ಲಿ ಹಿಂದೆಂದೂ ನೋಡಿರದ ಆಕ್ಷನ್ ಸೀಕ್ವೆನ್ಸ್ ಗಳಲ್ಲಿ ಸಲ್ಮಾನ್ ಖಾನ್ ಕಾಣಿಸಿಕೊಳ್ಳಲಿದ್ದಾರೆ. ಇದರ ಕೆಲವು ಆಯ್ದ ದೃಶ್ಯಗಳನ್ನು ಟೈಗರ್‌ 3ಯಲ್ಲಿಯೂ ಬಳಸಲಾಗುತ್ತದೆ ಎಂಬ ಸುದ್ದಿ ಇದೆ.

ಇದನ್ನೂ ಓದಿ: ಬಾಲಿವುಡ್‌ ನ ಜನ ಮೆಚ್ಚಿದ ಗಾಯಕ ಕೆಕೆ, ಶಾಸ್ತ್ರೀಯ ಸಂಗೀತ ಕಲಿಯದಿದ್ದರೂ, 3,000 ಜಿಂಗಲ್ಸ್‌ ಹಾಡಿದ್ದರು!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Actor Darshan: ನಟ ದರ್ಶನ್‌ ಇದ್ದ ಪ್ರಚಾರ ವಾಹನಕ್ಕೆ ವಿದ್ಯುತ್‌ ಸ್ಪರ್ಶ; ತಪ್ಪಿದ ಭಾರೀ ಅನಾಹುತ!

Actor Darshan: ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆ ತಾಲೂಕಿನ ಅಗ್ರಹಾರ ಬಾಚನಹಳ್ಳಿಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಸ್ಟಾರ್‌ ಚಂದ್ರು ಪರ ನಟ ದರ್ಶನ್ ಪ್ರಚಾರದಲ್ಲಿ ತೊಡಗಿದ್ದಾಗ ಅವಘಡ ನಡೆದಿದೆ.

VISTARANEWS.COM


on

Actor Darshan
Koo

ಮಂಡ್ಯ: ಜಿಲ್ಲೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಪರ ನಟ ದರ್ಶನ್ (Actor Darshan) ಅವರು ಶುಕ್ರವಾರ ಭರ್ಜರಿ ಪ್ರಚಾರ ನಡೆಸಿದ್ದಾರೆ. ಆದರೆ, ಪ್ರಚಾರದ ವೇಳೆ ನಟ ದರ್ಶನ್ ಇದ್ದ ಪ್ರಚಾರದ ವಾಹನಕ್ಕೆ ವಿದ್ಯುತ್ ತಂತಿ ಸ್ಪರ್ಶಿಸಿದ್ದು, ಕೂದಲೆಳೆಯ ಅಂತರದಲ್ಲಿ ಭಾರೀ ಅನಾಹುತವೊಂದು ತಪ್ಪಿರುವುದು ಕಂಡುಬಂದಿದೆ.

ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆ ತಾಲೂಕಿನ ಅಗ್ರಹಾರ ಬಾಚನಹಳ್ಳಿಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಸ್ಟಾರ್‌ ಚಂದ್ರು ಪರ ನಟ ದರ್ಶನ್ ಪ್ರಚಾರದಲ್ಲಿ ತೊಡಗಿದ್ದರು. ಪ್ರಚಾರದ ವಾಹನ ವೇಗವಾಗಿ ಮುಂದೆ ಸಾಗುತ್ತಿದ್ದಾಗ ದಿಢೀರ್ ವಿದ್ಯುತ್ ತಂತಿ ಸ್ಪರ್ಶಿಸಿದೆ. ವಾಹನಕ್ಕೆ ವಿದ್ಯುತ್ ತಂತಿ ಸ್ಪರ್ಶಿಸಿದ ಕೂಡಲೇ ತುಂಡಾಗಿ ಬಿದ್ದಿದ್ದರಿಂದ ಅನಾಹುತ ತಪ್ಪಿದೆ.

ಈ ಘಟನೆಯಲ್ಲಿ ನಟ ದರ್ಶನ್ ಸ್ವಲ್ಪದರಲ್ಲೇ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆಯಿಂದ ಕೆಲ ಕಾಲ ಸ್ಥಳದಲ್ಲಿ ಆತಂಕದ ವಾತಾವರಣವಿತ್ತು. ಈ ಘಟನೆಯ ಬಳಿಕ ನಟ ದರ್ಶನ್ ಅವರು ಚುನಾವಣಾ ಪ್ರಚಾರ ಮೊಟಕುಗೊಳಿಸಿ, ಬೆಂಗಳೂರಿಗೆ ತೆರಳಿದರು ಎಂಬುದಾಗಿ ತಿಳಿದುಬಂದಿದೆ.

ಇದನ್ನೂ ಓದಿ | letter to President: ಗೋವಾ ಕನ್ನಡಿಗರ ಮೇಲೆ ದೌರ್ಜನ್ಯ: ನ್ಯಾಯ ಕೊಡಿಸಲು ರಾಷ್ಟ್ರಪತಿಗಳಿಗೆ ಕರವೇ ನಾರಾಯಣಗೌಡ ಮನವಿ

ಉದ್ಯಮಿಗೆ ಚಮತ್ಕಾರಿ ಚೆಂಬು ಕೊಟ್ಟವರು ಅರೆಸ್ಟ್‌; 22 ಬ್ಯಾಂಕ್‌ಗಳಿಗೆ ಟೋಪಿ ಹಾಕಿದ ಫ್ಯಾಮಿಲಿ ಲಾಕ್‌

Fraud Case in Bengaluru

ಬೆಂಗಳೂರು: ಆ ನಯವಂಚಕರು ದೊಡ್ಡ ದೊಡ್ಡ ಉದ್ಯಮಿಗಳನ್ನೇ (Fraud Case) ಟಾರ್ಗೆಟ್‌ ಮಾಡುತ್ತಿದ್ದರು. ಅದರಲ್ಲೂ ದೇವರು, ಆಧ್ಯಾತ್ಮದ ನಂಬಿಕೆ ಇತ್ತು ಅಂದರೆ ಮುಗಿತು ವಂಚನೆಯ ಬಲೆಗೆ ಬೀಳಿಸಿಕೊಳ್ಳುತ್ತಿದ್ದರು. ಚಮತ್ಕಾರಿ ಪಾತ್ರೆ ಎಂದು ನಂಬಿಸಿ ಉದ್ಯಮಿಯೊಬ್ಬರನ್ನು ವಂಚಿಸಲು ಮುಂದಾಗಿದ್ದ ಗ್ಯಾಂಗ್ ಜಯನಗರ ಪೊಲೀಸರ ಅತಿಥಿಗಳಾಗಿದ್ದಾರೆ.

ಅದೃಷ್ಟದ ಚೆಂಬಿನ ಹಿಂದೆ ಬಿದ್ದ ಉದ್ಯಮಿಯೊಬ್ಬ ಲಕ್ಷ ಲಕ್ಷ ಕಳೆದುಕೊಂಡಿದ್ದ. ಆದರೆ ಪೊಲೀಸರ ಕ್ಷಿಪ್ರ ಕಾರ್ಯಾಚರಣೆಯಿಂದ ಕಳೆದುಕೊಂಡ ಹಣ ವಾಪಸ್‌ ಸಿಕ್ಕಿದ್ದು, ಅಂತರರಾಜ್ಯ ವಂಚಕ ಶಿವಶಂಕರ್, ಅಬ್ದುಲ್ ಸುಕ್ಕುರ್ ಹಾಗೂ ಸನ್ನಿ ಗಿಲ್ ಎಂಬುವವರು ಸಿಕ್ಕಿಬಿದ್ದಿದ್ದಾರೆ.

Fraud Case in bengaluru

ಈ ಮೂವರು ತಮ್ಮ ಬಳಿ ಅದೃಷ್ಟ ಖುಲಾಯಿಸುವ ಚಮತ್ಕಾರಿ ಪಾತ್ರೆ ಇದೆ. ಅದನ್ನೂ ಮನೆಯಲ್ಲಿ ಇಟ್ಟರೆ ನಿಮ್ಮ ಅದೃಷ್ಟವೇ ಬದಲಾಗುತ್ತದೆ. ಇದಕ್ಕೆ ವಿದೇಶಿ ಮಾರ್ಕೆಟ್‌ನಲ್ಲಿ ಕೋಟಿ ಕೋಟಿ ಬೆಲೆ ಇದೆ ಎಂದು ಬಣ್ಣ ಬಣ್ಣದ ಮಾತುಗಳನ್ನು ಹೇಳಿ ನಂಬಿಸುತ್ತಿದ್ದರು. ಅದೇ ರೀತಿ ಬೆಂಗಳೂರಿನ ಉದ್ಯಮಿಯೊಬ್ಬರನ್ನು ಟಾರ್ಗೆಟ್ ಮಾಡಿ, ಒಂದೂವರೆ ಕೋಟಿ ಕೊಟ್ಟರೆ ಈ ಅದೃಷ್ಟದ ಪಾತ್ರೆ ಕೊಡುವುದಾಗಿ ನಂಬಿಸಿದ್ದಾರೆ. ಕೊನೆಗೆ 70 ಲಕ್ಷ ರೂಪಾಯಿಗೆ ಡೀಲ್ ಮುಗಿಸಿದ್ದರು.

ವಿಡಿಯೊದಲ್ಲಿ ತೋರಿಸಿದ್ದ ಅದೃಷ್ಟ ಚೆಂಬನ್ನು ಕೊಡುತ್ತೇವೆ ದುಡ್ಡು ರೆಡಿ ಮಾಡಿಕೊಳ್ಳಿ ಎಂದಿದ್ದರು. ತಾಮ್ರದ ಪಾತ್ರೆ ತೆಗೆದುಕೊಂಡು ಯಡಿಯೂರು ಕೆರೆ ಬಳಿ ಬಂದು ಹಣ ತೆಗೆದುಕೊಳ್ಳಲು ವ್ಯವಹಾರ ನಡೆಸಿದ್ದರು. ಈ ಬಗ್ಗೆ ಮಾಹಿತಿ ತಿಳಿದ ಜಯನಗರ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ, ಆರೋಪಿಗಳನ್ನು ವಶಕ್ಕೆ ಪಡೆದಿದ್ದರು. ಉದ್ಯಮಿಗೆ ವಂಚಿಸಿ ಪಡೆದಿದ್ದ 70 ಲಕ್ಷ ರೂ. ಹಣವನ್ನು ಸೀಜ್ ಮಾಡಿದ್ದಾರೆ. ಸದ್ಯ ಆರೋಪಿಗಳನ್ನು ವಿಚಾರಣೆಗೊಳಪಡಿಸಿದಾಗ ಬೆಂಗಳೂರಿನಲ್ಲಿರುವ ಸುಮಾರು 20 ಉದ್ಯಮಿಗಳನ್ನು ಟಾರ್ಗೆಟ್ ಮಾಡಿಕೊಂಡು ವಂಚಿಸುವುದಕ್ಕೆ ಪ್ಲಾನ್ ಮಾಡಿದ್ದರು ಎನ್ನಲಾಗಿದೆ. ಆದರೆ ಅದಕ್ಕೂ ಮೊದಲೇ ಪೊಲೀಸರ ಬಲೆಗೆ ಸಿಕ್ಕಿ ಬಿದ್ದಿದ್ದಾರೆ.

ಇದನ್ನೂ ಓದಿ: Neha Murder Case : ನೇಹಾ ಕೊಂದವನ ಎನ್‌ಕೌಂಟರ್ ಮಾಡಿ ಬಿಸಾಕಿ; ಮುದ್ದು ಮಗಳಿಗೆ ಪೋಷಕರ ಕಣ್ಣೀರ ವಿದಾಯ

ನಕಲಿ ದಾಖಲೆ ಕೊಟ್ಟು 22 ಬ್ಯಾಂಕ್‌ಗಳಿಗೆ ವಂಚನೆ

ನಕಲಿ ದಾಖಲೆ ಸೃಷ್ಟಿಸಿ ಸಾಲ ಪಡೆದು ಬ್ಯಾಂಕ್‌ಗಳಿಗೆ ವಂಚಿಸಿದ್ದ ಖತರ್ನಾಕ್‌ ಫ್ಯಾಮಿಲಿಯ ಬಂಧನವಾಗಿದೆ. ಒಂದೇ ಕುಟುಂಬದ ಐವರು ಆರೋಪಿಗಳು ‌ಸೇರಿ ಆರು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರು ಸುಮಾರು 22 ಬ್ಯಾಂಕ್‌ಗಳಿಗೆ ವಂಚಿಸಿ, ಬರೋಬ್ಬರಿ 10 ಕೋಟಿ ರೂ. ಸಾಲ ಪಡೆದಿದ್ದರು.

Fraud Case in Bengaluru

ನಾಗೇಶ್‌, ಸತೀಶ್‌, ವೇದ, ಶೋಭಾ, ಸುಮ, ಶೇಷಗಿರಿ ಬಂಧಿತ ಆರೋಪಿಗಳಾಗಿದ್ದಾರೆ. ಒಂದೇ ಸ್ವತ್ತಿಗೆ ಸಂಬಂಧಿಸಿದಂತೆ ನಕಲಿ ದಾಖಲೆ ಸೃಷ್ಟಿಸಿ ಸಾಲ ಪಡೆಯುತ್ತಿದ್ದರು. ನಕಲಿ ದಾಖಲೆಗಳನ್ನು ಡೀಡ್ ಮಾಡಿಸಿ, ಸಬ್ ರಿಜಿಸ್ಟರ್ ಕಚೇರಿಯಲ್ಲಿ ನೊಂದಣಿ ಮಾಡಿಸುತ್ತಿದ್ದರು. ಬಳಿಕ ರಾಷ್ಟ್ರೀಕೃತ ಬ್ಯಾಂಕ್, ಸಹಕಾರಿ ಬ್ಯಾಂಕ್‌ಗಳಲ್ಲಿ ಕಂತು ಸಾಲ ಹಾಗೂ ಯಂತ್ರೋಪಕರಣ ಸಾಲ ಪಡೆಯುತ್ತಿದ್ದರು. ಹೀಗೆ ಒಟ್ಟು 22 ಬ್ಯಾಂಕ್‌ಗಳಲ್ಲಿ ಹತ್ತು ಕೋಟಿ ರೂ.ಗೂ ಅಧಿಕ ಸಾಲ‌ ಪಡೆದು ವಂಚನೆ ಮಾಡಿದ್ದಾರೆ. ಸದ್ಯ ಪತಿ, ಪತ್ನಿ ಹಾಗೂ ಈಕೆ ಸೋದರಿ, ಭಾವ ಹಾಗೂ ಅವರ ಸ್ನೇಹಿತೆ ಬಂಧಿತರಾಗಿದ್ದಾರೆ. ಬಂಧಿತ ಆರೋಪಿಗಳನ್ನು ಹತ್ತು ದಿನ ಕಸ್ಟಡಿಗೆ ಪಡೆದು ಜಯನಗರ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಸಿನಿಮಾ

Banned Film: ಈ 9 ಹಾಲಿವುಡ್ ಚಿತ್ರಗಳು ಭಾರತದಲ್ಲಿ ಬ್ಯಾನ್!

Banned Film: ಜನರ ಮನಸ್ಸಿನ ಮೇಲೆ ಪರಿಣಾಮ ಬೀರುವ ಹಾಗೂ ಸಮಾಜದ ಸ್ವಾಸ್ಥ್ಯ ಕೆಡಿಸುವ ಒಂದಷ್ಟು ಹಾಲಿವುಡ್ ಸಿನಿಮಾಗಳಿಗೆ ಸೆನ್ಸಾರ್ ಮಂಡಳಿ ಅನುಮತಿ ನೀಡಿಲ್ಲ. ಭಾರತದಲ್ಲಿ ಪ್ರದರ್ಶನಗೊಳ್ಳದ ಆ ಸಿನಿಮಾಗಳು ಯಾವುವು ಎಂಬುದರ ಮಾಹಿತಿ ಇಲ್ಲಿದೆ ನೋಡಿ.

VISTARANEWS.COM


on

Banned Films
Koo

ಬೆಂಗಳೂರು: ಭಾರತದಲ್ಲಿ ಯಾವುದೇ ಚಲನಚಿತ್ರಗಳು ಪ್ರದರ್ಶನ ಕಾಣಬೇಕೆಂದರೆ ಮೊದಲು ಭಾರತೀಯ ಸೆನ್ಸಾರ್ ಮಂಡಳಿಯ ಅನುಮತಿ ಪಡೆಯಬೇಕು.  ಭಾರತೀಯ ಸೆನ್ಸಾರ್ ಮಂಡಳಿಯು ಉತ್ತಮವಾದ ಚಲನಚಿತ್ರಗಳನ್ನು ವೀಕ್ಷಿಸಲು ಅನುವು ಮಾಡಿಕೊಡುತ್ತದೆ. ಅಶ್ಲೀಲ ದೃಶ್ಯಾವಳಿ, ಕೆಟ್ಟ ಬೈಗುಳ ಪದಗಳಿರುವಂತಹ ಚಿತ್ರಗಳನ್ನು ಬ್ಯಾನ್ (Banned Film) ಮಾಡಲಾಗುತ್ತದೆ. ಇಂತಹ ಚಿತ್ರಗಳು ಜನರ ಮನಸ್ಸಿನ ಮೇಲೆ ಕೆಟ್ಟ ಪರಿಣಾಮ ಬೀರಿ ಸಮಾಜದ ಸ್ವಾಸ್ಥ್ಯ ಹಾಳಾಗುತ್ತದೆ ಎಂದು ಸೆನ್ಸಾರ್ ಮಂಡಳಿ ಅನುಮತಿ ನೀಡುವುದಿಲ್ಲ.

ಒಟಿಟಿ ಅಥವಾ ವಿದೇಶಿ ಮಾರುಕಟ್ಟೆಗಳಲ್ಲಿ ದೊಡ್ಡ ಹೆಸರು ಗಳಿಸಿರುವಂತಹ ಕೆಲವೊಂದು ಚಲನಚಿತ್ರಗಳು ಭಾರತದಲ್ಲಿ ಬಿಡುಗಡೆಯಾಗಲಿಲ್ಲ. ಸೆನ್ಸಾರ್ ಮಂಡಳಿ ಇದಕ್ಕೆ ಅನುಮತಿ ನೀಡಿರಲಿಲ್ಲ. ಈ ಪ್ರಸಿದ್ಧ ಚಲನಚಿತ್ರಗಳನ್ನು ಭಾರತೀಯ ಸೆನ್ಸಾರ್ ಮಂಡಳಿಯು ಸ್ಪಷ್ಟ ವಿಷಯಗಳ ಕಾರಣದಿಂದ ಭಾರತದಲ್ಲಿ ನಿಷೇಧಿಸಿದೆ. ಅಂತಹ ಹಾಲಿವುಡ್ ಚಿತ್ರಗಳ ಬಗ್ಗೆ ಇಲ್ಲಿದೆ ನೋಡಿ ಸಂಪೂರ್ಣವಾದ ಮಾಹಿತಿ.

Banned Film

1. ಫಿಫ್ಟಿ ಶೇಡ್ಸ್ ಆಫ್ ಗ್ರೇ(Fifty Shade Of Gray)

ಈ ಚಿತ್ರದ ಕಥೆ ಅನಾ ಎಂಬ ಕಾಲೇಜು ವಿದ್ಯಾರ್ಥಿನಿಯ ಸುತ್ತ ಸುತ್ತುತ್ತದೆ. ಆಕೆ ಒಬ್ಬ ವ್ಯಾಪಾರಿ ಉದ್ಯಮಿ ಕ್ರಿಶ್ಚಿಯನ್ನೊಂದಿಗೆ ಸಂಬಂಧ ಹೊಂದುತ್ತಾಳೆ. ಈ ಚಿತ್ರದಲ್ಲಿ ಹೆಚ್ಚು ಲೈಂಗಿಕತೆಯ ಬಗ್ಗೆ ಚಿತ್ರೀಕರಿಸಲಾಗಿದೆ. ಹಾಗಾಗಿ ಈ ಚಿತ್ರವನ್ನು ಭಾರತೀಯ ಸೆನ್ಸರ್ ಮಂಡಳಿ ನಿಷೇಧಿಸಿದೆ.

Banned Film

2. ದ ಡಾ ವಿನ್ಸಿ ಕೋಡ್ (The Da Vinci Code)

ಈ ಚಿತ್ರ ಡಿ ವಿನ್ಸಿ ಕೋಡ್ ರಾಬರ್ಟ್ ಲ್ಯಾಂಗ್ಡನ್ ಎಂಬ ಸಂಕೇತಶಾಸ್ತ್ರಜ್ಞನ ಬಗ್ಗೆ ಚಿತ್ರಿಸುತ್ತದೆ. ಅವರು ಪ್ಯಾರಿಸ್ ನಿಂದ ಲಂಡನ್ ಗೆ ಒಂದು ಕೊಲೆಯ ಬಗ್ಗೆ ತಿಳಿಯಲು ಹೋಗುತ್ತಾರೆ. ಈ ಚಿತ್ರದಲ್ಲಿ ಕ್ರಿಶ್ಚಿಯನ್ ವಿರೋಧಿ ಸಂದೇಶವನ್ನು ನೀಡಲಾಗಿದೆ. ಹಾಗಾಗಿ ಈ ಚಿತ್ರವನ್ನು ನಿಷೇಧಿಸುವಂತೆ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾಗಾಗಿ ಬಾರತೀಯ ಸೆನ್ಸಾರ್ ಮಂಡಳಿ ಈ ಚಿತ್ರವನ್ನು ಬ್ಯಾನ್ ಮಾಡಿದೆ.

3. ದ ಗರ್ಲ್ ವಿತ್ ಡ್ರ್ಯಾಗನ್ ಟ್ಯಾಟೂ (The Girl With Dragon Tattoo)

ಈ ಚಿತ್ರ ನಲವತ್ತು ವರ್ಷಗಳ ಹಿಂದೆ ನಾಪತ್ತೆಯಾದ ಮಹಿಳೆಯೊಬ್ಬಳ ಪ್ರಕರಣವನ್ನು ಭೇದಿಸಲು ಕಂಪ್ಯೂಟರ್ ಹ್ಯಾಕರ್ ಅನ್ನು ನೇಮಿಸಿಕೊಳ್ಳುವ ಪತ್ರಕರ್ತನ ಸುತ್ತ ಸುತ್ತುತ್ತದೆ. 2011ರಲ್ಲಿ ಬಿಡುಗಡೆಯಾದ ಈ ಚಿತ್ರದಲ್ಲಿ ಕೆಲವು ದೃಶ್ಯಗಳನ್ನು ಸೆನ್ಸರ್ ಮಂಡಳಿ ತೆಗೆದುಹಾಕುವಂತೆ ಹೇಳಿತು. ಆದರೆ ನಿರ್ದೇಶಕ ಡೇವಿಡ್ ಫಿಂಚರ್ ಇದನ್ನು ನಿರಾಕರಿಸಿದ್ದರಿಂದ ಭಾರತದಲ್ಲಿ ಈ ಚಿತ್ರ ಬಿಡುಗಡೆಯಾಗಲಿಲ್ಲ.

Banned Film

4. ಡರ್ಟಿ ಗ್ರ್ಯಾಂಡ್ ಪಾ( durty Grand pa)

ಇದು  ಯುಎಸ್ ನ ಮಿಲಿಟರಿ ಪರಿಣತರನ್ನು ಆಧರಿಸಿದ ಚಿತ್ರವಾಗಿದೆ. ಒಬ್ಬ ಅಜ್ಜ ಮೊಮ್ಮಗ ಜೇಸನ್ ಎನ್ನುವವನನ್ನು ತನ್ನ ಜೊತೆ ಪ್ಲೋರಿಡಾಕ್ಕೆ ಕರೆದೊಯ್ದರು. ಪ್ರವಾಸದ ವೇಳೆ ಅಜ್ಜನ ಸರಣಿ ದುಷ್ಕೃತ್ಯಗಳ ಬಗ್ಗೆ ಆತನಿಗೆ ತಿಳಿದಿರುವುದಿಲ್ಲ. ಈ ಚಿತ್ರದಲ್ಲಿ ಲೈಂಗಿಕತೆಯ ಬಗ್ಗೆ ಬಿಂಬಿಸಿದ ಕಾರಣ ಇದು ಭಾರತದಲ್ಲಿ ಬಿಡುಗಡೆಯಾಗಲಿಲ್ಲ.

Banned Film

5. ಬ್ಲೂ ಜಾಸ್ಮಿನ್ ( Blue Jasmine)

ಈ ಚಿತ್ರದಲ್ಲಿ ಕೆಲವು ಪಾತ್ರಗಳು ಹೆಚ್ಚು ಧೂಮಪಾನ ಮಾಡುತ್ತಿರುವುದು ಕಂಡುಬಂದ ಕಾರಣ ಅದನ್ನು ತೆಗೆಯುವಂತೆ ಸೆನ್ಸಾರ್ ಮಂಡಳಿ ತಿಳಿಸಿದ್ದು, ಇದಕ್ಕೆ ನಿರ್ದೇಶಕರು ಒಪ್ಪದ ಕಾರಣ ಈ ಚಿತ್ರಕ್ಕೆ ಭಾರತದಲ್ಲಿ ನಿಷೇಧ ಹೇರಲಾಗಿದೆ.

6. ಐ ಸ್ಪಿಟ್ ಆನ್ ಯುವರ್ ಗ್ರೇವ್ ( I Spit On Your Grave)

ಈ ಚಿತ್ರ ವಿವಾದಾತ್ಮಕವಾಗಿದ್ದು, ಹಲವಾರು ಭಯಾನಕ ಲೈಂಗಿಕ ಕಿರುಕುಳದ ದೃಶ್ಯಗಳನ್ನು ಹೊಂದಿದೆ. ಮೀರ್ ಜಾರ್ಚಿ ನಿರ್ದೇಶನದ ಈ ಚಿತ್ರವನ್ನು ಭಾರತ ಮಾತ್ರವಲ್ಲದೇ ಯುಕೆ, ಕೆನಡಾ, ಚೀನಾ, ಆಸ್ಟ್ರೇಲಿಯಾ ಮತ್ತು ಇತರ ಹಲವು ದೇಶಗಳಲ್ಲಿ ನಿಷೇಧಿಸಲಾಗಿದೆ.

7. ಇಂಡಿಯಾನ ಜೋನ್ಸ್ ಆ್ಯಂಡ್ ದ ಟೆಂಪಲ್ ಆಫ್ ಡೂಮ್( Indiana Jones And The Temple Of Doom)

ಆರಾಧನೆಯ ಹೆಸರಿನಲ್ಲಿ ಬಲಿಪಶುಗಳನ್ನು ಬೆಂಕಿಗೆ ಎಸೆಯುವಂತಹ ಕ್ರೂರ ದೃಶ್ಯವನ್ನು ಒಳಗೊಂಡ ಈ ಚಿತ್ರವನ್ನು ಭಾರತದಲ್ಲಿ ಬಿಡುಗಡೆ ಮಾಡಲಿಲ್ಲ. ಭಾರತೀಯ ಸೆನ್ಸಾರ್ ಮಂಡಳಿ ಇದನ್ನು ಕೆಟ್ಟ ಆಚರಣೆಯ ಮನಸ್ಥಿತಿ ಎಂದು ನಿಷೇಧಿಸಿದೆ.

8. ಗೆಟ್ ಹಾರ್ಡ್(Get Hard)

ಕಾಮಿಡಿ ಥ್ರಿಲ್ಲರ್ ಜೇಮ್ಸ್ ಕಿಂಗ್ ಎಂಬ ವ್ಯಕ್ತಿಯನ್ನು ಬಗ್ಗೆ ತಿಳಿಸುತ್ತದೆ ಮತ್ತು ಅವರು ಅಪರಾಧಿ ಎಂದು ನಿರ್ಣಯಿಸಲಾಗುತ್ತದೆ. ಇದರಿಂದ ಜನರು ಆಕ್ರೋಶಗೊಳ್ಳಬಹುದು ಎಂದು ಈ ಚಿತ್ರ ಭಾರತದಲ್ಲಿ ಬಿಡುಗಡೆಯಾಗಿಲ್ಲ.

ಇದನ್ನೂ ಓದಿ: Viral Video: ಲ್ಯಾಂಬೋರ್ಗಿನಿ ಕಾರಿನ ಮೇಲೆ ಕುಣಿದು ಕುಪ್ಪಳಿಸಿದ ಮಹಿಳೆ; ಕಾರಿನ ಸ್ಥಿತಿ ನೋಡಿ ಮರುಗಿದ ನೆಟ್ಟಿಗರು!

Banned Film

9. ಮ್ಯಾಜಿಕ್ ಮೈಕ್ XXL( magic mike XXL)

ಈ ಚಿತ್ರ ಸ್ಟ್ರಿಪ್ಪರ್ ಎಂಬ ಪುರುಷನ ಜೀವನವನ್ನು ಬಿಂಬಿಸುತ್ತದೆ. ಈ ವ್ಯಕ್ತಿ ಸಮಾವೇಶಕ್ಕಾಗಿ ಮಿರ್ಟಲ್ ಬೀಚ್ ಗೆ ತಮ್ಮ ಸ್ನೇಹಿತರೊಂದಿಗೆ ಪ್ರಯಾಣಿಸುತ್ತಾನೆ. ಆ ವೇಳೆ ಅವರು ತಮ್ಮ ಹಿಂದಿನ ಹಳೆಯ ನೆನಪುಗಳನ್ನು ಪುನರುಜ್ಜೀವನ ಗೊಳಿಸುತ್ತಾರೆ. ಇದರಲ್ಲಿ ಹೆಚ್ಚು ಲೈಂಗಿಕತೆಯ ಬಗ್ಗೆ ಬಿಂಬಿಸಲಾದ್ದರಿಂದ ಭಾರತದಲ್ಲಿ ಮೊದಲ ಬಾರಿಗೆ ನಿಷೇಧಗೊಂಡಿತ್ತು. ನಂತರ ಅದರಲ್ಲಿರುವ ದೃಶ್ಯವನ್ನು ಕತ್ತರಿಸಲು ಸೆನ್ಸಾರ್ ಮಂಡಳಿ ತಿಳಿಸಿದರೂ ಅದನ್ನು ನಿರಾಕರಿಸಿದ ಕಾರಣ ಅದು ಎರಡನೇ ಬಾರಿ ನಿಷೇಧಗೊಂಡಿತ್ತು. ಹಾಗಾಗಿ ಈ ಚಿತ್ರ ಭಾರತದಲ್ಲಿ ಬಿಡುಗಡೆಯಾಗಲಿಲ್ಲ.

Continue Reading

ಸ್ಯಾಂಡಲ್ ವುಡ್

Yuva Movie: ಒಟಿಟಿಗೆ ಬಂದಾಯ್ತು ʻಯುವʼ: ಸಿನಿಮಾ ನೋಡಬಹುದು, ಆದರೆ….

Yuva Movie: ಈ ಚಿತ್ರದ ಮೊದಲ ಹಾಡಿಗೆ ನಿರ್ದೇಶಕ ಸಂತೋಷ್ ಆನಂದ್‌ರಾಮ್ ಸಾಹಿತ್ಯ ಬರೆದಿದ್ದಾರೆ. ನಕಾಶ್ ಅಜೀಜ್ ಜತೆ ಸೇರಿ ಸಂತೋಷ್ ಆನಂದ್ ರಾಮ್ ಹಾಗೂ ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ ಹಾಡಿದ್ದಾರೆ. ಮೋಹನ್ ಭಜರಂಗಿ ಸಾಂಗ್ ಕೊರಿಯೋಗ್ರಫಿ ಮಾಡಿದ್ದಾರೆ. ಸುಮಾರು 3 ಕೋಟಿ ರೂ. ಮೊತ್ತಕ್ಕೆ ‘ಯುವ’ ಆಡಿಯೊ ರೈಟ್ಸ್ ಆನಂದ್ ಆಡಿಯೊ ಪಾಲಾಗಿದೆ ಎನ್ನಲಾಗಿದೆ.

VISTARANEWS.COM


on

Yuva Movie streaming ott yuva rajkumar
Koo

ಬೆಂಗಳೂರು: ಕನ್ನಡದ ಪ್ರತಿಷ್ಠಿತ ಚಿತ್ರ ನಿರ್ಮಾಣ ಸಂಸ್ಥೆ ‘ಹೊಂಬಾಳೆ ಫಿಲ್ಮ್ಸ್​’ (Hombale Films) ನಿರ್ಮಿಸುತ್ತಿರುವ, ಯುವ ರಾಜ್‌ಕುಮಾರ್ ಅಭಿನಯದ ಚಿತ್ರ ʼಯುವʼ (Yuva Movie). ಮಾರ್ಚ್‌ 29ರಂದು ತೆರೆ ಕಂಡಿತ್ತು. ಆದರೀಗ ಸಿನಿಮಾ ತೆರೆ ಕಂಡ 21 ದಿನಕ್ಕೆ ಒಟಿಟಿಗೆ ಬಂದಿದೆ. ಸದ್ದಿಲ್ಲದೇ ಸಿನಿಮಾ ಅಮೇಜಾನ್ ಪ್ರೈಂನಲ್ಲಿ ಸ್ಟ್ರೀಮಿಂಗ್ (Amazon Prime) ಆಗುತ್ತಿದೆ.

ವಿಶೇಷ ಎಂದರೆ ಸಿನಿಮಾವನ್ನು ಪ್ರೈಂ ಚಂದಾದಾರರು ವೀಕ್ಷಿಸಲು ಸಾಧ್ಯವಿಲ್ಲ. ಸದ್ಯಕ್ಕೆ ಬಾಡಿಗೆ ಪದ್ಧತಿಯಲ್ಲಿ ಸಿನಿಮಾ ವೀಕ್ಷಣೆಗೆ ಲಭ್ಯವಿದೆ. 349 ರೂ. ಕೊಟ್ಟು ಸಿನಿಮಾ ವೀಕ್ಷಿಸಬೇಕಿದೆ. ಚಾಮರಾಜನಗರದಲ್ಲಿ ‘ಯುವ’ ಚಿತ್ರದ ಟೈಟಲ್ ಟ್ರ್ಯಾಕ್ ರಿಲೀಸ್ ಮಾಡಲಾಗಿತ್ತು. ಹೊಸಪೇಟೆಯಲ್ಲಿ ಅಭಿಮಾನಿಗಳ ಸಮ್ಮುಖದಲ್ಲಿ ಅದ್ಧೂರಿಯಾಗಿ ಪ್ರೀ ರಿಲೀಸ್ ಈವೆಂಟ್ ಕೂಡ ನಡೆದಿತ್ತು.ಸಿನಿಮಾ 20 ದಿನಕ್ಕೆ ಭರ್ಜರಿ ಕಲೆಕ್ಷನ್ ಮಾಡಿದೆ. ಒಟಿಟಿಗೆ ಬಂದಿದ್ದರೂ ಚಿತ್ರಮಂದಿರಗಳಲ್ಲಿ ಯಶಸ್ವಿ ಪ್ರದರ್ಶನ ಕಾಣುತ್ತಿದೆ.

ಈ ಚಿತ್ರದ ಮೊದಲ ಹಾಡಿಗೆ ನಿರ್ದೇಶಕ ಸಂತೋಷ್ ಆನಂದ್‌ರಾಮ್ ಸಾಹಿತ್ಯ ಬರೆದಿದ್ದಾರೆ. ನಕಾಶ್ ಅಜೀಜ್ ಜತೆ ಸೇರಿ ಸಂತೋಷ್ ಆನಂದ್ ರಾಮ್ ಹಾಗೂ ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ ಹಾಡಿದ್ದಾರೆ. ಮೋಹನ್ ಭಜರಂಗಿ ಸಾಂಗ್ ಕೊರಿಯೋಗ್ರಫಿ ಮಾಡಿದ್ದಾರೆ. ಸುಮಾರು 3 ಕೋಟಿ ರೂ. ಮೊತ್ತಕ್ಕೆ ‘ಯುವ’ ಆಡಿಯೊ ರೈಟ್ಸ್ ಆನಂದ್ ಆಡಿಯೊ ಪಾಲಾಗಿದೆ ಎನ್ನಲಾಗಿದೆ.

ಇದನ್ನೂ ಓದಿ: Yuva Rajkumar: ʻಯುವʼನ ಆರ್ಭಟ ಶುರು: ಸಿನಿಮಾ ನೋಡಿ ಬೆಳ್ಳುಳ್ಳಿ ಕಬಾಬ್‌ ಚಂದ್ರು ಏನಂದ್ರು?

ಏಪ್ರಿಲ್ 23ರಂದು ಯುವ ರಾಜ್‌ಕುಮಾರ್ ಹುಟ್ಟುಹಬ್ಬ. ಮರುದಿನ ಡಾ. ರಾಜ್‌ಕುಮಾರ್ ಜಯಂತೋತ್ಸವ ಇದೆ. ಹಾಗಾಗಿ ಅದೇ ಸಂಭ್ರಮದಲ್ಲಿ ಹೊಸ ಸಿನಿಮಾ ಘೋಷಣೆ ಮಾಡುವ ನಿರೀಕ್ಷೆಯಿದೆ ಎನ್ನಲಾಗಿದೆ.

Continue Reading

ಕಿರುತೆರೆ

Kannada Serials TRP: ಐಪಿಎಲ್​ ಎಫೆಕ್ಟ್‌: ಯಾವ ಧಾರಾವಾಹಿ ಈ ವಾರ ಟಾಪ್‌?

Kannada Serials TRP: ಎರಡು ಡಿಜಿಟ್ ಸಂಖ್ಯೆಯಲ್ಲಿ ಟಿಆರ್​ಪಿ (TRP) ಪಡೆದ ಧಾರಾವಾಹಿಗಳ ಟಿಆರ್‌ಪಿ ಭಾರಿ ಕುಸಿತ ಕಂಡಿದೆ. ಈ ವಾರ ಎಲ್ಲಾ ಧಾರಾವಾಹಿಗಳ ಟಿಆರ್​ಪಿಯಲ್ಲಿ ಇಳಿಕೆ ಕಂಡಿದೆ. ಕಲರ್ಸ್ ಕನ್ನಡದ ಧಾರಾವಾಹಿ ‘ರಾಮಾಚಾರಿ’ (Ramachari Serila Kannada) ಮೂರನೇ ಸ್ಥಾನ ಪಡೆದುಕೊಂಡಿದೆ. ಸೀತಾ ರಾಮ’ ಧಾರಾವಾಹಿಗೆ ನಾಲ್ಕನೇ ಸ್ಥಾನ ಸಿಕ್ಕಿದೆ. ಈ ಧಾರಾವಾಹಿ ಟಿಆರ್​ಪಿಯಲ್ಲಿ ಮುನ್ನಡೆ ಸಾಧಿಸಿದೆ.

VISTARANEWS.COM


on

Kannada Serials TRP IPL Matches Effected On Kannada Serial
Koo

ಬೆಂಗಳೂರು: ಈ ಮೊದಲು ಬಿಗ್ ಬಾಸ್ ಬಂದಾಗ ಧಾರಾವಾಹಿಗಳ ಟಿಆರ್​ಪಿ (Kannada Serials TRP) ಕಡಿಮೆ ಆಗಿತ್ತು. ಎರಡು ಡಿಜಿಟ್ ಸಂಖ್ಯೆಯಲ್ಲಿ ಟಿಆರ್​ಪಿ (TRP) ಪಡೆದ ಧಾರಾವಾಹಿಗಳ ಟಿಆರ್‌ಪಿ ಭಾರಿ ಕುಸಿತ ಕಂಡಿದೆ. ಈ ವಾರ ಎಲ್ಲಾ ಧಾರಾವಾಹಿಗಳ ಟಿಆರ್​ಪಿಯಲ್ಲಿ ಇಳಿಕೆ ಕಂಡಿದೆ.

ಲಕ್ಷ್ಮೀ ನಿವಾಸ

ಸಾಯಿ ನಿರ್ಮಲ ಪ್ರೊಡಕ್ಷನ್‌ ಸಂಸ್ಥೆಯ ನಿರ್ಮಾಣ, ಆದರ್ಶ್ ಉಮೇಶ್ ಹೆಗಡೆ ನಿರ್ದೇಶನ ಈ ಧಾರಾವಾಹಿಗೆ (lakshmi nivasa kannada serial) ಇದೆ. ಕಿರುತೆರೆಯಲ್ಲಿ ಈ ಹಿಂದೆ ಹೀರೊ ಹೀರೋಯಿನ್‌ಗಳಾಗಿ‌ ಮಿಂಚಿದ್ದ ಹಲವು ಅನುಭವಿ ಕಲಾವಿದರು ಈ ಧಾರಾವಾಹಿಯ ಮುಖ್ಯಭೂಮಿಕೆಯಲ್ಲಿದ್ದಾರೆ. ಇಬ್ಬರು ಹೆಣ್ಣು ಮಕ್ಕಳ ಮದುವೆ ಮಾಡಬೇಕು ಎಂದು ಕಷ್ಟಪಡುವ ತಂದೆಯ ಕಥೆ-ವ್ಯಥೆಯ ಜೊತೆ ಸಾಕಷ್ಟು ಭಾವನಾತ್ಮಕ ವಿಚಾರಗಳನ್ನು ಈ ಧಾರಾವಾಹಿಯಲ್ಲಿ (Kannada Serials TRP) ತೋರಿಸಲಾಗಿದೆ. ಸದ್ಯ ಜಯಂತ್‌ನ ಅಸಲಿ ಮುಖ ಜಾಹ್ನವಿ ತಿಳಿಯಬೇಕಿದೆ. ಈ ಧಾರಾವಾಹಿ ಟಿಆರ್​ಪಿಯಲ್ಲಿ ಮೊದಲ ಸ್ಥಾನ ಪಡೆದುಕೊಂಡಿದೆ. ಅದ್ದೂರಿ ಬಜೆಟ್​ನಲ್ಲಿ ಈ ಧಾರಾವಾಹಿ ಸಿದ್ಧವಾಗಿದೆ. ಜೀ ವಾಹಿನಿಯಲ್ಲಿ ಪ್ರಸಾರ ಕಾಣುತ್ತಿದೆ.

‘ಪುಟ್ಟಕ್ಕನ ಮಕ್ಕಳು’

ಈ ವಾರ ಪುಟ್ಟಕ್ಕನ ಮಕ್ಕಳು ಧಾರಾವಾಹಿ ಎರಡನೇ ಸ್ಥಾನ ಪಡೆದುಕೊಂಡಿದೆ. ಈ ಧಾರಾವಾಹಿ ಈ ಮೊದಲು ಎರಡಂಕಿ ಟಿಆರ್​ಪಿ ಪಡೆಯುತ್ತಿತ್ತು. ಆದರೆ, ಇತ್ತೀಚೆಗೆ ಟಿಆರ್​ಪಿ ಕುಸಿಯುತ್ತಿದೆ. ಈ ಧಾರಾವಾಹಿಯಲ್ಲಿ ಪುಟ್ಟಕ್ಕನ ಮೊದಲ ಮಗಳು ಸಹನಾ ಜೀವನ ಈಗಾಗಲೇ ಬೀದಿಗೆ ಬಿದ್ದಿದೆ. ಹಾಗೇ ಪುಟ್ಟಕ್ಕನ ಎರಡನೇ ಮಗಳು ಅತ್ತೆ ಬಂಗಾರಮ್ಮಳನ್ನು ಜೈಲಿಗೆ ಕಳುಹಿಸಿದ್ದಾಳೆ. ಈಗ ಬಂಗಾರಮ್ಮ ಜೈಲಿನಲ್ಲಿ ನಿಂತು ಪುಟ್ಟಕ ಮುಂದೇನೆ ತನ್ನ ಮನೆಯಿಂದಲೇ ಸ್ನೇಹಾಳನ್ನು ಮನೆಯಿಂದ ಆಚೆ ಹಾಕುವುದಾಗಿ ಹೇಳಿದ್ದಾಳೆ. ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ (puttakkana makkalu Serial) ಶುರುವಾಗಿ ಎರಡು ವರ್ಷಗಳು ಸಂದಿವೆ. ಉಮಾಶ್ರೀ, ಸಂಜನಾ ಬುರ್ಲಿ, ಧನುಷ್ ಎನ್​ಎಸ್ ಮೊದಲಾದವರು ಈ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ. ಜೀ ವಾಹಿನಿಯಲ್ಲಿ ಪ್ರಸಾರ ಕಾಣುತ್ತಿದೆ.

ಇದನ್ನೂ ಓದಿ: Kannada Serials TRP: ಟಿಆರ್‌ಪಿ ರೇಸ್‌ನಲ್ಲಿ ‘ಶ್ರಾವಣಿ ಸುಬ್ರಮಣ್ಯ’: ಟಾಪ್​ ಐದರಲ್ಲಿ ಇಲ್ಲ ʻರಾಮಾಚಾರಿʼ!

‘ರಾಮಾಚಾರಿ’

ಕಲರ್ಸ್ ಕನ್ನಡದ ಧಾರಾವಾಹಿ ‘ರಾಮಾಚಾರಿ’ (Ramachari Serila Kannada) ಮೂರನೇ ಸ್ಥಾನ ಪಡೆದುಕೊಂಡಿದೆ. ಮೌನ, ರುತ್ವಿಕ್ ಕೃಪಾಕರ್ ಮೊದಲಾದವರು ಈ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ. ಕಿಟ್ಟಿಯ ಪಾತ್ರ ಕೂಡ ಜನ ಮೆಚ್ಚಿದ್ದಾರೆ. ಈ ಧಾರಾವಾಹಿಯ ಟಿಆರ್​ಪಿಯಲ್ಲಿ ಏರಿಳಿತ ಆಗುತ್ತಲೇ ಇದೆ. ಇದು ಕಲರ್ಸ್‌ ಕನ್ನಡದಲ್ಲಿ ಪ್ರಸಾರ ಕಾಣುತ್ತಿದೆ.

ಸೀತಾ ರಾಮ

‘ಸೀತಾ ರಾಮ’ ಧಾರಾವಾಹಿಗೆ ನಾಲ್ಕನೇ ಸ್ಥಾನ ಸಿಕ್ಕಿದೆ. ಈ ಧಾರಾವಾಹಿ ಟಿಆರ್​ಪಿಯಲ್ಲಿ ಮುನ್ನಡೆ ಸಾಧಿಸಿದೆ. ಸದ್ಯ ಅಶೋಕ್ ಹಾಗೂ ಆಕೆಯ ಗೆಳೆತಿಯ ಜತೆ ಮದುವೆ ನಡೆಯುತ್ತಿದೆ. ಇದರಿಂದ ಟಿಆರ್​ಪಿ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಧಾರಾವಾಹಿ ಜೀ ವಾಹಿನಿಯಲ್ಲಿ ಪ್ರಸಾರ ಕಾಣುತ್ತಿದೆ.

ಇದನ್ನೂ ಓದಿ: Kannada Serials TRP: ಟಾಪ್‌ 4ನಲ್ಲಿ `ರಾಮಾಚಾರಿ’ ಧಾರಾವಾಹಿ; ರೇಸ್‌ನಲ್ಲಿ ಇಲ್ಲ ʻಸತ್ಯʼ, ʻಶ್ರೀರಸ್ತು ಶುಭಮಸ್ತುʼ!

‘ಶ್ರಾವಣಿ ಸುಬ್ರಮಣ್ಯ’

ಕೆಲವು ದಿನಗಳ ಹಿಂದೆಯಷ್ಟೇ ಜೀ ಕನ್ನಡ ಧಾರಾವಾಹಿಯಲ್ಲಿ ಶ್ರಾವಣಿ ಸುಬ್ರಮಣ್ಯ ಪ್ರಸಾರ ಕಾಣುತ್ತಿದೆ. ಇದು ಐದನೇ ಸ್ಥಾನದಲ್ಲಿದೆ. ಮನೆಯಲ್ಲಿ ಸಿರಿವಂತಿಕೆಯ ತುಂಬಿದ್ದರೂ ಅಪ್ಪನ ಪ್ರೀತಿಗಾಗಿ ಹಾತೊರೆಯುವ ಮಗಳು ಒಂದೆಡೆಯಾದರೆ ಮನೆಯಲ್ಲಿ ಬಡತನವಿದ್ದರೂ ಪ್ರೀತಿಯಲ್ಲಿ ಶ್ರೀಮಂತರಾಗಿರುವ ಮಧ್ಯಮ ವರ್ಗದ ಕುಟುಂಬದ ಕಥೆಯ ಜತೆ ಎರಡು ಹೃದಯಗಳ ಕಥೆಯನ್ನು ಶ್ರಾವಣಿ ಸುಬ್ರಹ್ಮಣ್ಯ ಮೂಲಕ ಚಾನೆಲ್‌ ಪ್ರೇಕ್ಷಕರ ಮುಂದಿಟ್ಟಿದೆ. ಹಿರಿಯ ಕಲಾವಿದರಾದ ಮೋಹನ್‌ ಮತ್ತು ಬಾಲರಾಜ್‌ , ಕಿರುತೆರೆಯ ಖ್ಯಾತ ಕಲಾವಿದೆಯೆರಾದ ಅಪೂರ್ವ ಮತ್ತು ಸ್ನೇಹ ಇವರು ಜೊತೆ ಯುವ ಕಲಾವಿದರು ಈ ಧಾರಾವಾಹಿಯಲ್ಲಿ ಕಾಣಿಸಿಕೊಂಡಿದ್ದಾರೆ.

Continue Reading
Advertisement
ಕರ್ನಾಟಕ2 hours ago

Water Crisis: ಬೆಂಗಳೂರಿನ 110 ಹಳ್ಳಿಗಳಿಗೆ ಗುಡ್ ನ್ಯೂಸ್ ಕೊಟ್ಟ ಜಲಮಂಡಳಿ; ಶೀಘ್ರದಲ್ಲೇ ಹೆಸರಘಟ್ಟ ಕೆರೆಯಿಂದ ನೀರು!

Neha Hiremttt
ಪ್ರಮುಖ ಸುದ್ದಿ2 hours ago

ವಿಸ್ತಾರ ಸಂಪಾದಕೀಯ: ನೇಹಾ ಹಿರೇಮಠಗೆ ನ್ಯಾಯ ಸಿಗಲಿ, ಆರೋಪಿಗೆ ಗಲ್ಲು ಶಿಕ್ಷೆಯಾಗಲಿ

Narendra Modi
ದೇಶ2 hours ago

Narendra Modi : ವಿಶ್ವವೇ ನೋಡಿದೆ.. ಯುಪಿ ರ್ಯಾಲಿಯಲ್ಲಿ ಶಮಿಯನ್ನು ಹೊಗಳಿದ ಮೋದಿ

IPL 2024
ಕ್ರೀಡೆ2 hours ago

IPL 2024 : ಚೆನ್ನೈ ವಿರುದ್ಧ ಲಕ್ನೊ ತಂಡಕ್ಕೆ8 ವಿಕೆಟ್ ಭರ್ಜರಿ ಗೆಲುವು

Operation Hasta
ಕರ್ನಾಟಕ2 hours ago

Operation Hasta: ಮಾಜಿ‌ ಸಚಿವ ಮಾಲೀಕಯ್ಯ ಗುತ್ತೇದಾರ್, ಮಾಜಿ ಶಾಸಕಿ ಶಾರದಾ ಶೆಟ್ಟಿ ಕಾಂಗ್ರೆಸ್‌ ಸೇರ್ಪಡೆ

Ballari Lok Sabha constituency Congress candidate e Tukaram Election campaign
ಬಳ್ಳಾರಿ3 hours ago

Lok Sabha Election 2024: ಬಡವರ ಬಾಳು ಬಂಗಾರ ಮಾಡಿದ್ದು ಕಾಂಗ್ರೆಸ್‌: ಈ. ತುಕಾರಾಂ

Lok Sabha Election 2024
Lok Sabha Election 20243 hours ago

Lok Sabha Election 2024: 1 ವೋಟಿಗಾಗಿ ದಟ್ಟ ಕಾಡಿನಲ್ಲಿ 18 ಕಿ.ಮೀ. ನಡೆದ ಚುನಾವಣಾ ಸಿಬ್ಬಂದಿ

Narendra Modi
ಪ್ರಮುಖ ಸುದ್ದಿ3 hours ago

Narendra Modi : ಮತದಾನ ಮಾಡಿದವರಿಗೆ ಥ್ಯಾಂಕ್ಸ್ ಹೇಳಿದ ಮೋದಿ; ಎನ್​ಡಿಎಗೆ ಮತ ನೀಡಿದ್ದಾರೆ ಎಂದ ಪ್ರಧಾನಿ

Lok sabha Election
ರಾಜಕೀಯ3 hours ago

lok Sabha Election : ಮೊದಲ ಹಂತದಲ್ಲಿ ಶೇ.60.3ರಷ್ಟು ಮತದಾನ

Actor Darshan
ಕರ್ನಾಟಕ3 hours ago

Actor Darshan: ನಟ ದರ್ಶನ್‌ ಇದ್ದ ಪ್ರಚಾರ ವಾಹನಕ್ಕೆ ವಿದ್ಯುತ್‌ ಸ್ಪರ್ಶ; ತಪ್ಪಿದ ಭಾರೀ ಅನಾಹುತ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Neha Murder Case
ಹುಬ್ಬಳ್ಳಿ10 hours ago

Neha Murder Case : ನೇಹಾ ಕೊಂದವನ ಎನ್‌ಕೌಂಟರ್ ಮಾಡಿ ಬಿಸಾಕಿ; ಮುದ್ದು ಮಗಳಿಗೆ ಪೋಷಕರ ಕಣ್ಣೀರ ವಿದಾಯ

Dina bhavishya
ಭವಿಷ್ಯ21 hours ago

Dina Bhavishya: ರಹಸ್ಯ ಕಾರ್ಯಗಳಿಂದ ಈ ರಾಶಿಯವರಿಗೆ ಇಂದು ಯಶಸ್ಸು ಗ್ಯಾರಂಟಿ

Dina Bhavishya
ಭವಿಷ್ಯ3 days ago

Dina Bhavishya : ಈ ಎರಡು ರಾಶಿಯವರು ಇಂದು ಹೂಡಿಕೆ ವ್ಯವಹಾರಕ್ಕೆ ತಲೆ ಹಾಕಲೇಬೇಡಿ

dina bhavishya
ಭವಿಷ್ಯ4 days ago

Dina Bhavishya : ಇವತ್ತು ಒಂದು ದಿನ ಈ ರಾಶಿಯವರು ಹೊಸ ಕೆಲಸಕ್ಕೆ ಕೈ ಹಾಕ್ಬೇಡಿ

HD Kumaraswamy apologised to womens for his statement and slams DK Shivakumar
Lok Sabha Election 20245 days ago

HD Kumaraswamy: ನನ್ನ ಹೇಳಿಕೆಯಿಂದ ನೋವಾಗಿದ್ದರೆ ವಿಷಾದಿಸುತ್ತೇನೆ; ಡಿಕೆಶಿ ವಿರುದ್ಧ ಹರಿಹಾಯ್ದ ಎಚ್‌ಡಿಕೆ

Dina Bhavishya
ಭವಿಷ್ಯ5 days ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಕಾರ್ಯಸ್ಥಳದಲ್ಲಿ ಕಿರಿಕಿರಿ ಸಾಧ್ಯತೆ

Modi in Karnataka Modi roadshow in coastal area Mangalore Watch video
Lok Sabha Election 20245 days ago

Modi in Karnataka: ಕರಾವಳಿಯಲ್ಲಿ ಮೋದಿ ಮೋಡಿ; ಭರ್ಜರಿ ರೋಡ್‌ ಶೋ! ವಿಡಿಯೊ ನೋಡಿ

dina bhavishya
ಭವಿಷ್ಯ6 days ago

Dina Bhavishya: ಸತ್ಯ ಹೇಳಿದ್ರೆ ಈ ರಾಶಿಯವರಿಗೆ ಬಂಧುಗಳಿಂದ ಟೀಕೆಗಳು ಎದುರಾಗುತ್ತವೆ

Dina Bhavishya
ಭವಿಷ್ಯ7 days ago

Dina Bhavishya : ಹಣಕಾಸಿನ ವ್ಯವಹಾರಗಳಲ್ಲಿ ಈ ರಾಶಿಯವರಿಗೆ ಯಶಸ್ಸು ಕಟ್ಟಿಟ್ಟಬುತ್ತಿ

Rameshwaram Cafe Blast Fake IDs created and captured bombers hiding in Kolkata
ಕ್ರೈಂ1 week ago

Rameshwaram Cafe Blast: ನಕಲಿ ಐಡಿ ಸೃಷ್ಟಿಸಿ ಕೋಲ್ಕತ್ತಾದಲ್ಲಿ ಅಡಗಿದ್ದ ಬಾಂಬರ್‌ಗಳನ್ನು ಸೆರೆ ಹಿಡಿದಿದ್ದೇ ರೋಚಕ!

ಟ್ರೆಂಡಿಂಗ್‌