Site icon Vistara News

Kantara Movie: ಕಾಂತಾರ-2ಗೆ ಊರ್ವಶಿ ರೌಟೇಲಾ? ರಿಷಬ್‌ ಶೆಟ್ಟಿ ಜತೆ ಫೋಟೊ ಹಂಚಿಕೊಂಡ ನಟಿ

Is Urvashi Rautela part of Rishab Shetty’s Kantara Movie 2

ಬೆಂಗಳೂರು: ರಿಷಬ್ ಶೆಟ್ಟಿ ನಿರ್ದೇಶನದ ಕಾಂತಾರ (Kantara Movie) ವಿಶ್ವಾದ್ಯಂತ 400 ಕೋಟಿ ರೂ.ಗೂ ಹೆಚ್ಚು ಕಲೆಕ್ಷನ್‌ ಮಾಡಿದೆ. ಕಾಂತಾರ ಚಿತ್ರದ ಮೂಲಕ ಪ್ಯಾನ್-ಇಂಡಿಯಾ ಸ್ಟಾರ್ ಆಗಿ ಹೊರಹೊಮ್ಮಿದರು ರಿಷಬ್‌. ಸದ್ಯ ಕಾಂತಾರ-2 ಪ್ರಿಕ್ವೆಲ್‌ ಸಿನಿಮಾ ಮಾಡಲು ಮುಂದಾಗಿದ್ದಾರೆ. ಇದೀಗ ನಟಿ ಊರ್ವಶಿ ರೌಟೇಲಾ ಅವರು ರಿಷಬ್‌ ಶೆಟ್ಟಿ ಜತೆ ಕಾಣಿಸಿಕೊಂಡಿದ್ದಾರೆ. ರಿಷಬ್‌ ಜತೆಗಿನ ಫೋಟೊವನ್ನು ನಟಿ ಹಂಚಿಕೊಂಡಿದ್ದಾರೆ. ಊರ್ವಶಿ ರೌಟೇಲಾ ಕಾಂತಾರ ಪ್ರಿಕ್ವೆಲ್‌ನ ಭಾಗವಾಗಿರಬಹುದು ಎಂದು ಹೇಳಲಾಗುತ್ತಿದೆ.

ಕಾಂತಾರ ಚಿತ್ರವನ್ನು ಹೊಂಬಾಳೆ ಫಿಲಂಸ್ ಬ್ಯಾನರ್ ಅಡಿಯಲ್ಲಿ ನಿರ್ಮಿಸಲಾಗಿದೆ. ಭಾನುವಾರ, ಫೆಬ್ರವರಿ 11 ರಂದು, ಊರ್ವಶಿ ರೌಟೇಲಾ ಅವರು ರಿಷಬ್ ಶೆಟ್ಟಿ ಅವರೊಂದಿಗಿನ ಫೋಟೊವನ್ನು ಹಂಚಿಕೊಂಡಿದ್ದಾರೆ. ಕಾಂತಾರ-2 ಎಂದು ಹ್ಯಾಶ್‌ಟ್ಯಾಗ್‌ ನೀಡಿದ್ದಾರೆ. ಇದೀಗ ನಟಿ ಕಾಂತಾರ-2 ಸಿನಿಮಾದಲ್ಲಿ ಇದ್ದಾರೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: Kantara Movie: ಕಾಂತಾರ ಕಥೆ ಹುಟ್ಟಿದ್ದು ಹೇಗೆ? ಪ್ಯಾನ್‌ ಇಂಡಿಯಾ ಸಿನಿಮಾ ಯಾಕಾಯ್ತು? ಮಾಹಿತಿ ಬಿಚ್ಚಿಟ್ಟ ರಿಷಬ್‌

ಪ್ರಿಕ್ವೆಲ್‌ ಆಗಿ ಬರಲಿದೆ ಕಾಂತಾರ 2

ಕಾಂತಾರ-1 ಸಿಕ್ವೆಲ್‌ ಆಗಿದ್ದರೆ, ಕಾಂತಾರ-2 ಪ್ರಿಕ್ವೆಲ್‌ (Prequel film) ಆಗಿ ಮೂಡಿಬರಲಿದೆ. ಕಾಂತಾರ-2 ಸಿನಿಮಾ ಕಾಂತಾರಕ್ಕಿಂತ ಮೊದಲಿನ ಕತೆಯಾಗಿದ್ದು, ಇದು ಗ್ರಾಮಸ್ಥರು, ದೇವತೆ ಮತ್ತು ತೊಂದರೆಗೊಳಗಾದ ರಾಜನ ನಡುವಿನ ಸಂಬಂಧವನ್ನು ಅನ್ವೇಷಿಸುತ್ತದೆ. ರಾಜನು ಗ್ರಾಮಸ್ಥರನ್ನು ಮತ್ತು ತನ್ನ ಸುತ್ತಲಿನ ಭೂಮಿಯನ್ನು ರಕ್ಷಿಸಲು ದೇವತೆಯೊಂದಿಗೆ ಒಪ್ಪಂದ ಮಾಡಿಕೊಂಡಿರುತ್ತಾನೆ. ʻಮನುಷ್ಯ ಮತ್ತು ಪ್ರಕೃತಿಯ ಕದನʼ ಚಿತ್ರದ ತಿರುಳು ಇದಾಗಿದೆ. ಕಾಂತಾರ-2, 2024ರಲ್ಲಿ ಥಿಯೇಟರ್‌ಗೆ ಬರಲಿದೆ ಎಂದು ರಿಷಬ್‌ ಖಚಿತಪಡಿಸಿದ್ದಾರೆ.

ಇದನ್ನೂ ಓದಿ: Kantara Movie: ಕಾಂತಾರ ತಂಡಕ್ಕೆ ಸಿಹಿ ಸುದ್ದಿ: ಕೇರಳ‌ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ

ಕಾಂತಾರ-1 ಚಿತ್ರದಲ್ಲಿ ನಾಯಕ ಶಿವ ಮತ್ತು ಅವರ ತಂದೆಯಾಗಿ ರಿಷಬ್ ಶೆಟ್ಟಿ ದ್ವಿಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಸಪ್ತಮಿ ಗೌಡ, ಕಿಶೋರ್, ಅಚ್ಯುತ್ ಕುಮಾರ್, ಪ್ರಮೋದ್ ಶೆಟ್ಟಿ, ಪ್ರಕಾಶ್ ತುಮಿನಾಡ್, ನವೀನ್ ಡಿ ಪಡೀಲ್ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಕಾಂತಾರ ಚಿತ್ರವನ್ನು ಹೊಂಬಾಳೆ ಫಿಲ್ಮ್ಸ್‌ ಬ್ಯಾನರ್ ಅಡಿಯಲ್ಲಿ ವಿಜಯ್ ಕಿರಗಂದೂರು ನಿರ್ಮಿಸಿದ್ದಾರೆ. ಕಾಂತಾರ ಕನ್ನಡದಲ್ಲಿ ಬಿಡುಗಡೆಯಾಗಿ ಯಶಸ್ಸು ಕಂಡಾಗ ಹಿಂದಿ, ತಮಿಳು, ಮಲಯಾಳಂ ಮತ್ತು ತೆಲುಗು ಭಾಷೆಗಳಲ್ಲಿ ತೆರೆಕಂಡಿತು.

Exit mobile version