ಬೆಂಗಳೂರು: ರಜನಿಕಾಂತ್ ಅಭಿನಯದ ‘ಜೈಲರ್’ ಸಿನಿಮಾ (Jailer Movie) ಆಗಸ್ಟ್ 10ರಂದು ವಿಶ್ವಾದ್ಯಂತ ತೆರೆ ಕಂಡಿತ್ತು. ಈ ಚಿತ್ರಕ್ಕೆ ಪ್ರೇಕ್ಷಕರಿಂದ ಅದ್ಭುತ ಪ್ರತಿಕ್ರಿಯೆ ವ್ಯಕ್ತವಾಗಿದೆ. ತಮಿಳುನಾಡಿನಲ್ಲಿ, ‘ಜೈಲರ್’ 900ಕ್ಕೂ ಹೆಚ್ಚು ಸ್ಕ್ರೀನ್‌ಗಳಲ್ಲಿ ಬಿಡುಗಡೆಯಾಯಿತು. ಐದನೇ ವಾರದಲ್ಲೂ ‘ಜೈಲರ್’ ತಮಿಳುನಾಡಿನ ಹಲವು ಚಿತ್ರಮಂದಿರಗಳಲ್ಲಿ ಯಶಸ್ವಿಯಾಗಿ ಓಡುತ್ತಿದೆ. ತಮಿಳುನಾಡಿನಲ್ಲಿ ‘ಜೈಲರ್’ 195 ಕೋಟಿ ರೂ. ರೂಪಾಯಿ ಗಳಿಸಿದೆ ಎಂದು ವರದಿಯಾಗಿದೆ. ಈ ಚಿತ್ರ ತಮಿಳುನಾಡಿನಲ್ಲಿ 100 ಕೋಟಿ ರೂ. ಗಳಿಸಿದ ಮೊದಲ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.
‘ಜೈಲರ್’ ಚಿತ್ರ 29ನೇ ದಿನದ ಅಂತ್ಯಕ್ಕೆ ವಿಶ್ವಾದ್ಯಂತ 610 ಕೋಟಿ ರೂ. ಗಳಿಸಿದೆ ಎಂದು ವರದಿಯಾಗಿದೆ. ‘ಜೈಲರ್’ ನಿರ್ಮಾಪಕರು ರಜನಿಕಾಂತ್, ನೆಲ್ಸನ್ ಮತ್ತು ಅನಿರುದ್ಧ್ ರವಿಚಂದರ್ ಅವರಿಗೆ ಕೋಟ್ಯಂತರ ರೂ.ಗಳ ಚೆಕ್ ಮತ್ತು ಐಷಾರಾಮಿ ಕಾರುಗಳನ್ನು ಉಡುಗೊರೆಯಾಗಿ ನೀಡಿದ್ದಾರೆ. ಏಕೆಂದರೆ ಈ ಮೂವರು ಚಿತ್ರದ ಐತಿಹಾಸಿಕ ಯಶಸ್ಸಿಗೆ ಪ್ರಮುಖ ಕಾರಣರಾಗಿದ್ದಾರೆ. ʼಜೈಲರ್’ ಕೇರಳ, ಕರ್ನಾಟಕ ಮತ್ತು ಇತರ ಹಲವು ಸ್ಥಳಗಳಲ್ಲಿ ಅತಿ ಹೆಚ್ಚು ಗಳಿಕೆ ಮಾಡಿದ ತಮಿಳು ಚಲನಚಿತ್ರವಾಗಿ ಹೊರಹೊಮ್ಮಿದೆ. ವಿಶ್ವಾದ್ಯಂತ ಅತಿ ಹೆಚ್ಚು ಗಳಿಕೆ ಮಾಡಿದ ತಮಿಳು ಚಲನಚಿತ್ರಗಳಲ್ಲಿ ಎರಡನೇ ಸ್ಥಾನದಲ್ಲಿದೆ.
ಇದನ್ನೂ ಓದಿ: Jailer Movie: ಜೈಲರ್ ಹಿಟ್; ಅಪೋಲೊ ಆಸ್ಪತ್ರೆಗಳಿಗೆ 1 ಕೋಟಿ ರೂ. ದೇಣಿಗೆ ನೀಡಿದ ಸನ್ ಪಿಕ್ಚರ್ಸ್
ನೆಲ್ಸನ್ ದಿಲೀಪ್‌ಕುಮಾರ್ ನಿರ್ದೇಶನದ ‘ಜೈಲರ್’ ಚಿತ್ರದಲ್ಲಿ ರಜನಿಕಾಂತ್ ನಿವೃತ್ತ ಪೊಲೀಸ್ ಅಧಿಕಾರಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಚಿತ್ರದಲ್ಲಿ ವಿನಾಯಕನ್, ಶಿವರಾಜಕುಮಾರ್, ಮೋಹನ್ ಲಾಲ್, ವಸಂತ್ ರವಿ, ಯೋಗಿ ಬಾಬು, ಸುನೀಲ್, ತಮನ್ನಾ ಭಾಟಿಯಾ, ರಮ್ಯಾ ಕೃಷ್ಣನ್ ಮತ್ತು ಮಿರ್ನಾ ಪ್ರಮುಖ ಪಾತ್ರಗಳಲ್ಲಿದ್ದಾರೆ. ಅನಿರುದ್ಧ್ ರವಿಚಂದರ್ ಸಂಗೀತ ನೀಡಿದ್ದು, ವಿಜಯ್ ಕಾರ್ತಿಕ್ ಕಣ್ಣನ್ ಛಾಯಾಗ್ರಹಣ ಮಾಡಿದ್ದಾರೆ. ಈಗಾಗಲೇ ಜೈಲರ್’ ಅಮೆಜಾನ್ ಪ್ರೈಮ್‌ನಲ್ಲಿ ಸ್ಟ್ರೀಮ್ ಆಗುತ್ತಿದೆ.