Site icon Vistara News

Jailor Movie : ರಜನಿಕಾಂತ್‌ ʼಜೈಲರ್‌ʼ ಬಿಡುಗಡೆ ದಿನಾಂಕ ಫಿಕ್ಸ್‌; ಕನ್ನಡದಲ್ಲೂ ಇದೆಯೆ?

jailor movie release

ಸೂಪರ್‌ಸ್ಟಾರ್ ರಜನಿಕಾಂತ್ ನಟನೆಯ ‘ಜೈಲರ್’ (Jailor Movie) ಈ ವರ್ಷದ ಬಹುನಿರೀಕ್ಷಿತ ಸಿನಿಮಾಗಳಲ್ಲಿ ಒಂದು. ʼತಲೈವʼ ವೃತ್ತಿ ಬದುಕಿನ ವಿಶೇಷ ಚಿತ್ರ ಇದಾಗಿದ್ದು, ದಕ್ಷಿಣ ಭಾರತ ಹಾಗೂ ಬಾಲಿವುಡ್‌ ದಿಗ್ಗಜರು‌ ಕೂಡ ಈ ಸಿನಿಮಾದ ಭಾಗವಾಗಿದ್ದಾರೆ. ಸದ್ಯ ಕಾವಾಲಾಯ್ಯ ಹಾಡಿನ ಮೂಲಕ ಭಾರೀ ಸೆನ್ಸೇಷನ್ ಸೃಷ್ಟಿಸುತ್ತಿರುವ ಈ ಚಿತ್ರದ ಬಿಡುಗಡೆ ದಿನಾಂಕ ಫಿಕ್ಸ್‌ ಆಗಿದೆ. ಆಗಸ್ಟ್ ತಿಂಗಳ 10ನೇ ತಾರೀಖಿನಂದು ಸಿನಿಮಾ ಕನ್ನಡ, ತಮಿಳು ಹಾಗೂ ತೆಲುಗು ಭಾಷೆಯಲ್ಲಿ ತೆರೆ ಕಾಣಲಿದೆ.

ಸನ್ ಪಿಕ್ಚರ್ ನಿರ್ಮಾಣ ಮಾಡುತ್ತಿರುವ ಈ ಸಿನಿಮಾವನ್ನು ನೆಲ್ಸನ್ ದಿಲೀಪ್ ಕುಮಾರ್ ನಿರ್ದೇಶನ ಮಾಡಿದ್ದಾರೆ. ಇದೇ ಮೊದಲ ಬಾರಿಗೆ ರಜನಿಕಾಂತ್ ಜತೆ ಸ್ಯಾಂಡಲ್‌ವುಡ್‌ನ ಹ್ಯಾಟ್ರಿಕ್‌ ಹೀರೋ ಶಿವರಾಜ್‌ಕುಮಾರ್ ವಿಶೇಷ ಪಾತ್ರದಲ್ಲಿ ನಟಿಸಿರುವುದು ಕುತೂಹಲ ಕೆರಳಿಸಿದೆ. ಇನ್ನು ಬಾಲಿವುಡ್‌ ನಟ ಜಾಕಿ ಶರಾಫ್‌, ಮಲಯಾಳಂನ ಸೂಪರ್‌ಸ್ಟಾರ್ ಮೋಹನ್‌ಲಾಲ್, ಟಾಲಿವುಡ್ ನಟ ಸುನಿಲ್, ನಾಗಬಾಬು, ನಟಿ ರಮ್ಯಾ ಕೃಷ್ಣ, ತಮನ್ನಾ ಭಾಟಿಯಾ ಜೈಲರ್‌ ಸಿನಿಮಾದಲ್ಲಿ ನಟಿಸಿದ್ದು, ಸಿನಿಪ್ರಿಯರಿಗೆ ಇವರೆಲ್ಲರನ್ನೂ ಒಂದೇ ಸಿನಿಮಾದಲ್ಲಿ ನೋಡುವ ಭಾಗ್ಯ ಸಿಗಲಿದೆ.

ಇದನ್ನೂ ಓದಿ: Jain Muni Murder: ಜೈನ ಮುನಿ ಹತ್ಯೆಗೆ ಬಿಗ್‌ ಟ್ವಿಸ್ಟ್;‌ ಹುಸೇನ್‌ ದಲಾಯತ್‌ ಕೂಡಾ ಕೊಲೆಯಲ್ಲಿ ಭಾಗಿ
ರಜನಿಕಾಂತ್‌ ನಟಿಸಿರುವ 169ನೇ ಸಿನಿಮಾ ಜೈಲರ್. ಅವರ ಹೊಸ ಸಿನಿಮಾ ಎಂಟ್ರಿಗೆ ಕಾದು‌ ಕುಳಿತಿರುವ ಅಭಿಮಾನಿಗಳು ಹಬ್ಬ ಮಾಡಲು ಸಜ್ಜಾಗಿದ್ದಾರೆ. ರಾಕ್ ಸ್ಟಾರ್ ಅನಿರುದ್ಧ್ ರವಿಚಂದರ್ ಸಂಗೀತ‌ ನಿರ್ದೇಶನದ ಜೈಲರ್ ಸಿನಿಮಾವನ್ನೂ ಚೆನ್ನೈ, ಮಂಗಳೂರು, ಹೈದರಾಬಾದ್, ಕೇರಳ ಸೇರಿದಂತೆ ಹಲವೆಡೆ ಶೂಟಿಂಗ್ ನಡೆಸಲಾಗಿದೆ.‌


ರಜನಿಕಾಂತ್‌ ಅವರು ಈ ಸಿನಿಮಾದ ನಂತರ ಮಗಳು ಐಶ್ವರ್ಯ ಅವರ ನಿರ್ದೇಶನದಲ್ಲಿ ಬರಲಿರುವ ಲಾಲ್‌ ಸಲಾಂ ಸಿನಿಮಾದಲ್ಲಿ ನಟಿಸಲಿದ್ದಾರೆ. ಹಲವು ವರ್ಷಗಳ ನಂತರ ಐಶ್ವರ್ಯ ಅವರು ಸಿನಿ ರಂಗಕ್ಕೆ ವಾಪಸಾಗುತ್ತಿದ್ದು, ಆ ಸಿನಿಮಾ ಬಗ್ಗೆ ಕೂಡ ಅಭಿಮಾನಿಗಳಲ್ಲಿ ಹೆಚ್ಚಿನ ನಿರೀಕ್ಷೆಯಿದೆ.

Exit mobile version