ಬೆಂಗಳೂರು: ಕಿರೀಟಿ ರೆಡ್ಡಿ ಚೊಚ್ಚಲ ಅಭಿನಯದ & ವಾರಾಹಿ ಸಂಸ್ಥೆ ನಿರ್ಮಿಸುತ್ತಿರುವ 15ನೇ ಚಿತ್ರದ ಟೈಟಲ್ ರಿವೀಲ್ ಆಗಿದೆ. ‘ಜೂನಿಯರ್’ ಆಗಿ ಸಿನಿ ಪ್ರೇಕ್ಷಕರನ್ನು ಸೆಳೆಯಲು ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಪುತ್ರ ಕಿರೀಟಿ ರೆಡ್ಡಿ (Janardhan Reddy Son) ರೆಡಿಯಾಗಿದ್ದಾರೆ. ಈ ಹಿಂದೆ ಇಂಟ್ರೊಡಕ್ಷನ್ ಟೀಸರ್ ಮೂಲಕ ಗಮನ ಸೆಳೆದಿದ್ದ ಕಿರೀಟಿ ಸಿನಿಮಾ, ಇದೀಗ ಟೈಟಲ್ ಮೂಲಕವೂ ಕುತೂಹಲ ಕೆರಳಿಸಿದೆ.
ಕಿರೀಟಿ ರೆಡ್ಡಿ ಮೊದಲ ಸಿನಿಮಾಗೆ ‘ಜೂನಿಯರ್’ ಎಂಬ ಟೈಟಲ್ ಫೈನಲ್ ಆಗಿದೆ. ಕೆಲ ತಿಂಗಳ ಹಿಂದಷ್ಟೇ ಅದ್ಧೂರಿಯಾಗಿ ನೆರವೇರಿದ್ದ ಈ ಸಿನಿಮಾ ಮುಹೂರ್ತಕ್ಕೆ ಸ್ಟಾರ್ ನಿರ್ದೇಶಕ ಎಸ್.ಎಸ್.ರಾಜಮೌಳಿ ಸಾಥ್ ನೀಡಿದ್ದರು.
ಸಾಕಷ್ಟು ನಿರೀಕ್ಷೆ
ವಾರಾಹಿ ಚಲನಚಿತ್ರ ಯೂಟ್ಯೂಬ್ ಚಾನೆಲ್ನಲ್ಲಿ ಕಿರೀಟಿ ಮೊದಲ ಚಿತ್ರದ ಟೈಟಲ್ ಲಾಂಚ್ ಆಗಿದೆ. ರಾಧಾಕೃಷ್ಣ ರೆಡ್ಡಿ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಈ ಚಿತ್ರಕ್ಕೆ ತೆಲುಗಿನ ಖ್ಯಾತ ನಿರ್ಮಾಣ ಸಂಸ್ಥೆ ವಾರಾಹಿ ಪ್ರೊಡಕ್ಷನ್ ಬಂಡವಾಳ ಹೂಡಿ, ಸಿನಿಮಾ ನಿರ್ಮಿಸುತ್ತಿದೆ. ಕನ್ನಡ, ತಮಿಳು, ತೆಲುಗು ಹಾಗೂ ಮಲೆಯಾಳಂ ಭಾಷೆಗಳಲ್ಲಿ ಈ ಸಿನಿಮಾ ತೆರೆಗೆ ಬರುತ್ತಿದ್ದು, ಈಗಾಗಲೇ ಸಾಕಷ್ಟು ನಿರೀಕ್ಷೆ ಮೂಡಿಸಿದೆ.
‘ಮಾಯಾಬಜಾರ್’ ಖ್ಯಾತಿಯ ರಾಧಾಕೃಷ್ಣ ರೆಡ್ಡಿ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ‘ಜೂನಿಯರ್’ ಸಿನಿಮಾ ದೊಡ್ಡ ಬಜೆಟ್ನಲ್ಲಿ ತಯಾರಾಗುತ್ತಿದೆ. ಹಿರಿಯ ನಟ ಕ್ರೇಜಿಸ್ಟಾರ್ ರವಿಚಂದ್ರನ್, ಜೆನಿಲಿಯಾ ಹಾಗೇ ಶ್ರೀಲೀಲಾ ಸೇರಿದಂತೆ ದೊಡ್ಡ ತಾರಾಬಳಗವಿದೆ. ಚಿತ್ರದ ತಾಂತ್ರಿಕ ವರ್ಗ ಕೂಡ ಸಾಕಷ್ಟು ಗಮನ ಸೆಳೆಯುತ್ತಿದೆ. ರಾಕ್ ಸ್ಟಾರ್ ದೇವಿಶ್ರೀ ಪ್ರಸಾದ್ ಸಂಗೀತ, ಬಾಹುಬಲಿ ಖ್ಯಾತಿಯ ಸೆಂಥಿಲ್ ಕುಮಾರ್ ಕ್ಯಾಮೆರಾ ವರ್ಕ್, ರವೀಂದರ್ ಕಲಾ ನಿರ್ದೇಶನ, ಪೀಟರ್ ಹೆನ್ ಆ್ಯಕ್ಷನ್ ಚಿತ್ರಕ್ಕಿದೆ.
ಇದನ್ನೂ ಓದಿ: Avatar Box Office | ಬಾಕ್ಸ್ ಆಫೀಸ್ ಅಖಾಡದಲ್ಲಿ ಮತ್ತೆ ಗುಡುಗಿದ ಅವತಾರ್-1