ಬೆಂಗಳೂರು: ಶ್ರೀದೇವಿಯವರ ಹಿರಿಯ ಪುತ್ರಿ, ಬಾಲಿವುಡ್ ನಟಿ ಜಾಹ್ನವಿ ಕಪೂರ್ (Janhvi Kapoor), ಜ್ಯೂನಿಯರ್ ಎನ್‌ಟಿಆರ್ ಜತೆ ತೆರೆ ಹಂಚಿಕೊಳ್ಳುತ್ತಿದ್ದಾರೆ. ಈ ಮೂಲಕ ದಕ್ಷಿಣ ಸಿನಿರಂಗಕ್ಕೆ ಪದಾರ್ಪಣೆ ಮಾಡಿದ್ದಾರೆ. ಹೈದರಾಬಾದ್‌ನಲ್ಲಿ ಕೊರಟಾಲ ಶಿವ ನಿರ್ದೇಶನದಲ್ಲಿ ನಟಿ ಎನ್‌ಟಿಆರ್ 30 ಸಿನಿಮಾಗಾಗಿ ಜಾಹ್ನವಿ ಕಪೂರ್ ಈಗಾಗಲೇ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಇದೀಗ ಮತ್ತೆ ಇನ್ನೊಬ್ಬ ತೆಲುಗು ನಟನ ಜತೆ ತೆರೆ ಹಂಚಿಕೊಳ್ಳಲಿದ್ದಾರೆ.
ನಟಿ ಅಖಿಲ್ ಅಕ್ಕಿನೇನಿ ಜತೆ ನಟಿಸಲು ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ ಎಂದು ವರದಿಯಾಗಿದೆ. ಹೊಸ ಬಗೆಯ ಕಥೆಯಲ್ಲಿ ಜಾಹ್ನವಿ ಕಾಣಿಸಿಕೊಳ್ಳಲಿದ್ದಾರೆ. ಜಾಹ್ನವಿ ಕಪೂರ್ ಹೆಚ್ಚಾಗಿ ದಕ್ಷಿಣದ ಚಿತ್ರಗಳಲ್ಲಿ ಕೆಲಸ ಮಾಡಲು ಇಚ್ಛೆ ವ್ಯಕ್ತಪಡಿಸಿದ್ದು, ತಮಿಳು ಮತ್ತು ತೆಲುಗು ಇಂಡಸ್ಟ್ರಿಗಳಲ್ಲಿ ಪ್ರತಿ ಸ್ಟಾರ್ ಜತೆ ನಟಿಸಲು ಬಯಸುತ್ತೇನೆ ಎಂದು ಈಗಾಗಲೇ ಸ್ಪಷ್ಟಪಡಿಸಿದ್ದಾರೆ.
ಅನಿಲ್ ಕುಮಾರ್ ನಿರ್ದೇಶಿಸಲಿರುವ ಚಿತ್ರದಲ್ಲಿ ಜಾಹ್ನವಿ ಕಪೂರ್ ಅವರು ಅಖಿಲ್ ಜತೆ ಪರದೆ ಹಂಚಿಕೊಳ್ಳಲಿದ್ದಾರೆ ಎನ್ನಲಾಗಿದೆ. ಪ್ರಭಾಸ್ ಅವರ ಸಾಹೋ ಚಿತ್ರದಲ್ಲಿ ಸಹಾಯಕ ನಿರ್ದೇಶಕರಾಗಿ ಅನಿಲ್ ಕೆಲಸ ಮಾಡಿದ್ದರು. ಮೊದಲ ಬಾರಿಗೆ ಜಾಹ್ನವಿ- ಅಖಿಲ್ ತೆರೆಯ ಮೇಲೆ ಒಂದಾಗುತ್ತಿದ್ದಾರೆ.
ಸದ್ಯ ಸುರೇಂದರ್ ರೆಡ್ಡಿ ನಿರ್ದೇಶನದ ಅಖಿಲ್ ಅಕ್ಕಿನೇನಿ ಅವರ ಏಜೆಂಟ್ ಸಿನಿಮಾ ಬಾಕ್ಸ್ ಆಫೀಸ್ ಕಲೆಕ್ಷನ್‌ನಲ್ಲಿ ಮುಗ್ಗರಿಸಿದೆ. ಇಡೀ ತಂಡ, ಅಖಿಲ್ ಮತ್ತು ಅವರ ಅಭಿಮಾನಿಗಳಿಗೆ ಭಾರಿ ಆಘಾತ ಮತ್ತು ನಿರಾಸೆಯನ್ನು ಉಂಟುಮಾಡಿದೆ.
ಮಮ್ಮುಟ್ಟಿ ಚಿತ್ರದ ಪ್ರಮುಖ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ. ಸೈರಾ ನರಸಿಂಹ ರೆಡ್ಡಿ’ ಸಿನಿಮಾ ಖ್ಯಾತಿಯ ಸುರೇಂದ್ರ ರೆಡ್ಡಿ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ವಕ್ಕಂತಂ ವಂಶಿ ಕಥೆ ಬರೆದಿರುವ ಚಿತ್ರವನ್ನು ಎಕೆ ಎಂಟರ್‌ಟೈನ್‌ಮೆಂಟ್ಸ್ ಮತ್ತು ಸುರೇಂದರ್ 2 ಸಿನಿಮಾ ಬ್ಯಾನರ್‌ನಡಿ ರಾಮಬ್ರಹ್ಮ ಸುಂಕರ ನಿರ್ಮಾಣ ಮಾಡಿದ್ದಾರೆ. ಚಾಕೊಲೇಟ್ ಬಾಯ್ ಅವತಾರದಲ್ಲಿಯೇ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದ ನಟ ಇದೇ ಮೊದಲ ಬಾರಿಗೆ ಈ ಅವತಾರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.
ಇನ್ನೂ ಗಮನಿಸಬೇಕಾದ ಸಂಗತಿಯೆಂದರೆ, ಅವರು ತಮ್ಮ ತೂಕವನ್ನು ಇಳಿಕೆ ಮಾಡಿಕೊಂಡಿದ್ದಾರೆ. ಸೆನ್ಸೇಷನಲ್ ಮ್ಯೂಸಿಕ್ ಕಂಪೋಸರ್ ಹಿಪ್ ಹಾಪ್ ತಮಿಝಾ ಸಂಗೀತ ನೀಡಿದ್ದಾರೆ. ಚಿತ್ರಕ್ಕೆ ವಕ್ಕನಾಥಂ ವಂಶಿ ಕಥೆ ಬರೆದಿದ್ದು, ರಸೂಲ್ ಎಲ್ಲೂರು ಛಾಯಾಗ್ರಹಣ ಮಾಡಿದ್ದು, ರಾಷ್ಟ್ರ ಪ್ರಶಸ್ತಿ ವಿಜೇತ ನವೀನ್ ನೂಲಿ ಸಂಕಲನ, ಅವಿನಾಶ್ ಕೊಲ್ಲಾ ಕಲಾ ನಿರ್ದೇಶನ ಚಿತ್ರಕ್ಕಿದೆ. ಅಜಯ್ ಸುಂಕರ, ಪತಿ ದೀಪಾ ರೆಡ್ಡಿ ಸಹ ನಿರ್ಮಾಣದ ಜವಾಬ್ದಾರಿ ಹೊತ್ತುಕೊಂಡಿದ್ದಾರೆ.