Site icon Vistara News

Jawan Box Office Collection: ವಿಶ್ವಾದ್ಯಂತ ಭಾರಿ ಕಲೆಕ್ಷನ್‌ ಮಾಡಿ ಮುನ್ನುಗ್ಗುತ್ತಿರುವ ʻಜವಾನ್‌ʼ

Sharukh Khan and Atlee

ಬೆಂಗಳೂರು: `ಜವಾನ್‌‘ ಸಿನಿಮಾ (Jawan Box Office Collection) ವಿಶ್ವಾದ್ಯಂತ ಸೆಪ್ಟೆಂಬರ್ 7ರಂದು ತೆರೆ ಕಂಡಿತ್ತು. ಸೆ.17ರ ಭಾನುವಾರದಂದು 400 ಕೋಟಿ ರೂ. ಗಡಿ ದಾಟಲು ಸಿದ್ಧವಾಗಿದೆ ಎಂದು ಸಿನಿ ತಜ್ಞ ತರಣ್ ಆದರ್ಶ್ ತಿಳಿಸಿದ್ದಾರೆ. ವಿಶ್ವ ಬಾಕ್ಸ್ ಆಫೀಸ್​ನಲ್ಲಿ ಸಿನಿಮಾ 730+ ಕೋಟಿ ರೂ. ಗಳಿಕೆ ಮಾಡಿದೆ ಎಂದು ರೆಡ್​ ಚಿಲ್ಲೀಸ್ ಎಂಟರ್​ಟೇನ್​ಮೆಂಟ್ ಮಾಹಿತಿ ನೀಡಿದೆ.

‘ಈ ಚಿತ್ರ ಹಿಂದಿ ಮಾತ್ರವಲ್ಲದೆ ತಮಿಳು ಹಾಗೂ ತೆಲುಗು ಭಾಷೆಗೂ ಡಬ್ ಆಗಿ ರಿಲೀಸ್ ಆಗಿರುವುದರಿಂದ ಚಿತ್ರಕ್ಕೆ ದಕ್ಷಿಣ ಭಾರತದಲ್ಲೂ ಹೆಚ್ಚಿನ ಕಲೆಕ್ಷನ್ ಆಗುತ್ತಿದೆ. ವಿಶ್ವ ಬಾಕ್ಸ್ ಆಫೀಸ್​ನಲ್ಲಿ ಸಿನಿಮಾ 730+ ಕೋಟಿ ರೂಪಾಯಿ ಗಳಿಕೆ ಮಾಡಿದೆ ಎಂದು ರೆಡ್​ ಚಿಲ್ಲೀಸ್ ಎಂಟರ್​ಟೇನ್​ಮೆಂಟ್ ಮಾಹಿತಿ ನೀಡಿದೆ. ಜವಾನ್ ಬಿಡುಗಡೆಯಾದಾಗಿನಿಂದಲೂ ಬಾಕ್ಸ್ ಆಫೀಸ್ ದಾಖಲೆಗಳನ್ನು ಛಿದ್ರಗೊಳಿಸುತ್ತಿದೆ. ಗಣೇಶ ಚತುರ್ಥಿ ಪ್ರಯುಕ್ತ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸಿನಿಮಾ ನೋಡುತ್ತಾರೆ. ಈ ಮೂಲಕ ಮತ್ತೆ ಚಿತ್ರದ ಗಳಿಕೆಯಲ್ಲಿ ಭಾರಿ ಏರಿಕೆ ಇರಲಿದೆ ಎಂದು ವರದಿಯಾಗಿದೆ. ಮಾಧ್ಯಮವೊಂದರ ಸಂದರ್ಶನದಲ್ಲಿ ಈಗಾಗಲೇ ಅಟ್ಲೀ ಅವರು ಜವಾನ್‌ ಸೀಕ್ವೆಲ್‌ ಬರಲಿದೆ ಎಂದು ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: Jawan Box Office Collection: ವಿಶ್ವಾದ್ಯಂತ 700 ಕೋಟಿ ರೂ. ಗಳಿಕೆ ಕಂಡ ಜವಾನ್‌!

ಡಂಕಿ ಸಿನಿಮಾ ಯಾವಾಗ?

ಈ ಬಾರಿ ಶಾರುಖ್‌ ಕ್ರಿಸ್‌ಮಸ್ ಮತ್ತು ಹೊಸ ವರ್ಷಕ್ಕೆ ʼಡಂಕಿʼ ಸಿನಿಮಾವನ್ನು ಫ್ಯಾನ್ಸ್‌ಗೆ ಗಿಫ್ಟ್‌ ಆಗಿ ನೀಡಲಿದ್ದಾರೆ. ʼಡಂಕಿʼ ಚಿತ್ರಕ್ಕೆ ಜಿಯೋ ಸ್ಟುಡಿಯೋಸ್, ರೆಡ್ ಚಿಲ್ಲೀಸ್ ಎಂಟರ್‌ಟೈನ್‌ಮೆಂಟ್ ಮತ್ತು ರಾಜ್‌ಕುಮಾರ್ ಹಿರಾನಿ ಫಿಲ್ಮ್ಸ್ ಬೆಂಬಲ ನೀಡಿವೆ. ಚಿತ್ರವನ್ನು ರಾಜ್‌ಕುಮಾರ್ ಹಿರಾನಿ ನಿರ್ದೇಶಿಸಿದ್ದಾರೆ. ತಾಪ್ಸಿ ಪನ್ನು ನಾಯಕಿಯಾಗಿದ್ದಾರೆ. ಇದರಲ್ಲಿ ಶಾರುಖ್ ಖಾನ್ ಮತ್ತು ತಾಪ್ಸಿಯ ಹೊರತಾಗಿ ಬೊಮನ್ ಇರಾನಿ ಕೂಡ ನಟಿಸಲಿದ್ದಾರೆ.

ಇದನ್ನೂ ಓದಿ: Jawan Success Meet: ʻಜವಾನ್‌ʼ ಸಕ್ಸೆಸ್‌ ಮೀಟ್‌ಗೂ ಬಾರದ ನಯನತಾರಾ; ಶಾರುಖ್‌ ಹೇಳಿದ್ದೇನು?

ಇದೊಂದು ಸಂಭ್ರಮಾಚರಣೆ

ʼಜವಾನ್‌ʼ ಚಿತ್ರದ ಯಶಸ್ಸಿನ ಸಂಭ್ರಮವನ್ನು ಹಂಚಿಕೊಂಡಾಗ ಶಾರುಖ್ ಖಾನ್, “ಇದೊಂದು ಸಂಭ್ರಮಾಚರಣೆ. ಒಂದು ಚಿತ್ರದೊಂದಿಗೆ ವರ್ಷಗಳ ಕಾಲ ಬದುಕುವ ಅವಕಾಶ ನಮಗೆ ಸಿಗುವುದು ಅಪರೂಪ. ಕೋವಿಡ್ ಮತ್ತು ಸಮಯದ ಕೊರತೆಯಿಂದಾಗಿ ನಾಲ್ಕು ವರ್ಷಗಳಿಂದ ಜವಾನ್ ತಯಾರಿಯಲ್ಲಿ ಇತ್ತು. ಈ ಚಿತ್ರದಲ್ಲಿ ಸಾಕಷ್ಟು ಮಂದಿ ಶ್ರಮ ಪಟ್ಟಿದ್ದಾರೆ. ಅದರಲ್ಲೂ ದಕ್ಷಿಣದ ಜನರು ಮುಂಬೈಗೆ ಬಂದು ನೆಲೆಸಿರುವವರು. ಕಳೆದ ನಾಲ್ಕು ವರ್ಷಗಳಿಂದ ಮುಂಬೈನಲ್ಲಿ ನೆಲೆಸಿದ್ದಾರೆ ಮತ್ತು ಈ ಚಿತ್ರಕ್ಕಾಗಿ ಹಗಲಿರುಳು ಶ್ರಮಿಸುತ್ತಿದ್ದಾರೆ. ಇದು ಅತ್ಯಂತ ಕಷ್ಟದ ಕೆಲಸವಾಗಿದೆʼʼ ಎಂದಿದ್ದರು.

ಶಾರುಖ್, ನಯನತಾರಾ ಮತ್ತು ವಿಜಯ್ ಸೇತುಪತಿ ಅವರಲ್ಲದೆ, ಚಿತ್ರದಲ್ಲಿ ದೀಪಿಕಾ ಪಡುಕೋಣೆ ಮತ್ತು ಸಂಜಯ್ ದತ್ ವಿಶೇಷ ಪಾತ್ರಗಳಲ್ಲಿ ನಟಿಸಿದ್ದಾರೆ. ಚಿತ್ರದಲ್ಲಿ ಸನ್ಯಾ ಮಲ್ಹೋತ್ರಾ, ಪ್ರಿಯಾಮಣಿ, ಗಿರಿಜಾ ಓಕ್, ಸಂಜೀತಾ ಭಟ್ಟಾಚಾರ್ಯ, ಲೆಹರ್ ಖಾನ್, ಆಲಿಯಾ ಖುರೇಷಿ, ರಿಧಿ ಡೋಗ್ರಾ, ಸುನಿಲ್ ಗ್ರೋವರ್ ಮತ್ತು ಮುಖೇಶ್ ಛಾಬ್ರಾ ನಟಿಸಿದ್ದಾರೆ.

Exit mobile version