ಬೆಂಗಳೂರು: ಶಾರುಖ್ ಖಾನ್ ಅವರ ‘ಜವಾನ್‘ (Jawan Box Office) ಸೆಪ್ಟೆಂಬರ್ 7ರಂದು ಬಿಡುಗಡೆಯಾಗಿದ್ದು ಮೊದಲ ದಿನವೇ ಗಳಿಕೆಯಲ್ಲಿ ಬ್ಲಾಕ್‌ಬಸ್ಟರ್ ಎನಿಸಿದೆ. ‘ಜವಾನ್’ ಭಾರತದ ಎಲ್ಲಾ ಭಾಷೆಗಳಲ್ಲಿ 74.50 ರೂ ಗಳಿಸಿದೆ. ಹಿಂದಿ ಚಿತ್ರರಂಗದ ಇತಿಹಾಸದಲ್ಲಿ 129.06 ಕೋಟಿ ರೂಪಾಯಿ ಗಳಿಸುವ ಮೂಲಕ ಅತಿ ದೊಡ್ಡ ಆರಂಭಿಕ ದಿನವನ್ನು ಕಂಡಿತು. ಮೊರನೇ ದಿನ ಜವಾನ್ ಅಂತಾರಾಷ್ಟ್ರೀಯ ಮಟ್ಟದಲ್ಲಿ ಚಿತ್ರ 350 ಕೋಟಿ ರೂ. ದಾಟಿದೆ ಎಂದು ಟ್ರೇಡ್ ವಿಶ್ಲೇಷಕ ರಮೇಶ್ ಬಾಲಾ ಟ್ವೀಟ್ ಮಾಡಿದ್ದಾರೆ.
ಹಿಂದಿ ಬೆಲ್ಟ್‌ನಲ್ಲಿ ಒಟ್ಟಾರೆ ಶೇ 62.85 ಆಕ್ಯುಪೆನ್ಸಿಗೆ ಸಾಕ್ಷಿಯಾಗಿದೆ. ಚಿತ್ರದ ಒಟ್ಟು ಭಾರತೀಯ ಕಲೆಕ್ಷನ್ 202.73 ಕೋಟಿ ರೂ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಚಿತ್ರ 350 ಕೋಟಿ ದಾಟಿದೆ ಎಂದು ಟ್ರೇಡ್ ವಿಶ್ಲೇಷಕ ರಮೇಶ್ ಬಾಲಾ ಟ್ವೀಟ್ ಮಾಡಿದ್ದಾರೆ. ದೃಢಪಟ್ಟ ಅಂಕಿಅಂಶಗಳು ಇನ್ನಷ್ಟೇ ಬರಬೇಕಿದೆ.
ಟ್ರೇಡ್ ವರದಿಗಳ ಪ್ರಕಾರ, ಮೊದಲ ದಿನದಂದು, ‘ಜವಾನ್’ ಭಾರತದ ಎಲ್ಲಾ ಭಾಷೆಗಳಲ್ಲಿ 74.50 ರೂ ಗಳಿಸಿದೆ. ಗುರುವಾರ ಹಿಂದಿ ಆವೃತ್ತಿಯಲ್ಲಿ ಚಿತ್ರವು ಒಟ್ಟಾರೆ ಶೇಕಡಾ 58.67ರಷ್ಟು ಆಕ್ಯುಪೆನ್ಸಿಯನ್ನು ಕಂಡಿದೆ. ನಂತರ, ಶಾರುಖ್ ಅವರ ಮ್ಯಾನೇಜರ್ ಪೂಜಾ ದದ್ಲಾನಿ 1ನೇ ದಿನದ ಕಲೆಕ್ಷನ್ ಬಗ್ಗೆ ಹಂಚಿಕೊಂಡರು. ಚಿತ್ರವು ಮೊದಲ ದಿನವೇ 129.06 ಕೋಟಿ ರೂಪಾಯಿಗಳನ್ನು ಗಳಿಸುವ ಮೂಲಕ ಹಿಂದಿ ಚಿತ್ರರಂಗದ ಇತಿಹಾಸದಲ್ಲಿ ಅತಿದೊಡ್ಡ ಆರಂಭಿಕ ದಿನವಾಯಿತು ಎಂದು ಪೋಸ್ಟ್ ಹಂಚಿಕೊಂಡರು.
ಇದನ್ನೂ ಓದಿ: Jawan box office collection: 120 ಕೋಟಿ ರೂ. ದಾಟಿದ ʻಜವಾನ್ʼ; ಬಾಕ್ಸ್‌ಆಫೀಸ್‌ನಲ್ಲಿ ದಾಖಲೆ!
ಶಾರುಖ್ ಮತ್ತು ನಯನತಾರಾ ಇದೇ ಮೊದಲ ಬಾರಿಗೆ ಒಟ್ಟಿಗೆ ತೆರೆ ಹಂಚಿಕೊಂಡಿದ್ದಾರೆ. ಇವರಿಬ್ಬರ ಕ್ಯೂಟ್ ಜೋಡಿಯನ್ನು ಜನ ಹಾಡಿ ಹೊಗಳುತ್ತಿದ್ದಾರೆ. ದೀಪಿಕಾ ಪಡುಕೋಣೆ ಕೂಡ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ವಿಜಯ್ ಸೇತುಪತಿ ವಿಭಿನ್ನ ಅವತಾರಗಳಲ್ಲಿ ಕಾಣಿಸಿಕೊಂಡಿದ್ದಾರೆ.
ಜವಾನ್’ ಚಿತ್ರವನ್ನು ರೆಡ್ ಚಿಲ್ಲೀಸ್ ಎಂಟರ್‌ಟೇನ್‌ಮೆಂಟ್ ಸಂಸ್ಥೆಯಡಿ ಗೌರಿ ಖಾನ್ ನಿರ್ಮಿಸುತ್ತಿದ್ದು, ಅಟ್ಲೀ ನಿರ್ದೇಶನದಲ್ಲಿ ಮೂಡಿಬಂದಿದೆ. ಚಿತ್ರದ ಮ್ಯೂಸಿಕ್ ರೈಟ್ಸ್ ಈಗಾಗಲೇ 36 ಕೋಟಿ ರೂ.ಗೆ ಮಾರಾಟವಾಗಿದೆ ಎಂದು ವರದಿಯಾಗಿದೆ.