ಬೆಂಗಳೂರು: ಶಾರುಖ್ ಅಭಿನಯದ ʻಜವಾನ್ʼ ಸಿನಿಮಾ (Jawan Box Office Collection) 10ನೇ ದಿನಕ್ಕೆ ಬರೋಬ್ಬರಿ 850 ಕೋಟಿ ರೂ. ಕಲೆಕ್ಷನ್ ಮಾಡಿ ಮುನ್ನುಗ್ಗುತ್ತಿದೆ. ಸೆಪ್ಟೆಂಬರ್ 17ರಂದು ಭಾರತದಲ್ಲಿ ಈ ಚಿತ್ರ 36 ಕೋಟಿ ರೂ. ಗಳಿಸುವಲ್ಲಿ ಯಶಸ್ವಿಯಾಗಿದೆ. ಇದೇ ರೀತಿ ಕಲೆಕ್ಷನ್ ಮಾಡುತ್ತ ಹೋದರೆ ಪ್ರಪಂಚದಾದ್ಯಂತ ಬಾಕ್ಸ್ ಆಫೀಸ್‌ನಲ್ಲಿ ಸುಲಭವಾಗಿ 1000 ಕೋಟಿ ರೂ. ಗಳಿಕೆ ಕಾಣಲಿದೆ. ‘ಜವಾನ್’ ಸೆಪ್ಟೆಂಬರ್ 7ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಯಿತು. ಅಟ್ಲೀ ಅವರ ನಿರ್ದೇಶನದ ಈ ಚಿತ್ರ ಹಿಂದಿ, ತಮಿಳು ಮತ್ತು ತೆಲುಗು ಭಾಷೆಗಳಲ್ಲಿ ಬಿಡುಗಡೆಯಾಗಿದೆ.
ಥಿಯೇಟರ್‌ಗಳಲ್ಲಿ ಎರಡನೇ ವಾರಾಂತ್ಯದಲ್ಲಿ ಈ ರೀತಿ ಕಲೆಕ್ಷನ್ ಮಾಡುತ್ತಿರುವುದು ಹೊಸ ದಾಖಲೆಯೇ ಸರಿ. 11 ದಿನಗಳ ಒಟ್ಟು ಕಲೆಕ್ಷನ್ ಈಗ ಭಾರತದಲ್ಲಿ 477.28 ಕೋಟಿ ರೂ. ಆಗಿದೆ. ಸೆಪ್ಟೆಂಬರ್ 17ರಂದು ಚಿತ್ರವು ಶೇಕಡಾ 45.32ರಷ್ಟು ಆಕ್ಯುಪೆನ್ಸಿಯನ್ನು ದಾಖಲಿಸಿದೆ. ಟ್ರೇಡ್ ವಿಶ್ಲೇಷಕ ರಮೇಶ್ ಬಾಲಾ ಟ್ವಿಟರ್‌ನಲ್ಲಿ ʻʻ’ಜವಾನ್’ ಈಗಾಗಲೇ ವಿಶ್ವದಾದ್ಯಂತ 840 ಕೋಟಿ ರೂಪಾಯಿಗಳನ್ನು ದಾಟಿದೆʼʼ ಎಂದು ಬಹಿರಂಗಪಡಿಸಿದ್ದಾರೆ.
ಅಟ್ಲಿ ನಿರ್ದೇಶನದ ‘ಜವಾನ್’ ಚಿತ್ರದಲ್ಲಿ ನಯನತಾರಾ ಮತ್ತು ವಿಜಯ್ ಸೇತುಪತಿ ಜತೆಗೆ ದೀಪಿಕಾ ಪಡುಕೋಣೆ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಚಿತ್ರದಲ್ಲಿ ಸನ್ಯಾ ಮಲ್ಹೋತ್ರಾ, ಪ್ರಿಯಾಮಣಿ, ಗಿರಿಜಾ ಓಕ್, ಸಂಜೀತಾ ಭಟ್ಟಾಚಾರ್ಯ, ಲೆಹರ್ ಖಾನ್, ಆಲಿಯಾ ಖುರೇಷಿ, ರಿಧಿ ಡೋಗ್ರಾ, ಸುನಿಲ್ ಗ್ರೋವರ್ ಮತ್ತು ಮುಖೇಶ್ ಛಾಬ್ರಾ ಮತ್ತು ಸಂಜಯ್ ದತ್ ಅವರು ಅತಿಥಿ ಪಾತ್ರದಲ್ಲಿ ನಟಿಸಿದ್ದಾರೆ.
ರೆಡ್ ಚಿಲ್ಲೀಸ್ ಎಂಟರ್‌ಟೈನ್‌ಮೆಂಟ್ ಈ ಚಿತ್ರವನ್ನು ಪ್ರಸ್ತುತಪಡಿಸಿದ್ದು, ‘ಜವಾನ್’ ಸಿನಿಮಾವನ್ನು ಗೌರಿ ಖಾನ್ ನಿರ್ಮಿಸಿದ್ದಾರೆ. ಗೌರವ್ ವರ್ಮಾ ಸಹ ನಿರ್ಮಾಣ ಮಾಡಿದ್ದಾರೆ. ಈ ಚಿತ್ರವು ಕಮರ್ಷಿಯಲ್ ಎಂಟರ್‌ಟೈನರ್ ಆಗಿದ್ದು, ಎಸ್‌ಆರ್‌ಕೆ ದ್ವಿಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಪುಣೆ, ಮುಂಬೈ, ಹೈದರಾಬಾದ್, ಚೆನ್ನೈ, ರಾಜಸ್ಥಾನ ಮತ್ತು ಔರಂಗಾಬಾದ್‌ನಲ್ಲಿ ಚಿತ್ರೀಕರಣ ನಡೆದಿದೆ. ಅನಿರುದ್ಧ್ ರವಿಚಂದರ್ ಈ ಚಿತ್ರಕ್ಕೆ ಸಂಗೀತ ನೀಡಿದ್ದಾರೆ.
ಇದನ್ನೂ ಓದಿ: Jawan Box Office Collection: ವಿಶ್ವಾದ್ಯಂತ ಭಾರಿ ಕಲೆಕ್ಷನ್ ಮಾಡಿ ಮುನ್ನುಗ್ಗುತ್ತಿರುವ ʻಜವಾನ್ʼ
The #KingKhan @iamsrk is here to RULE…………. #Pathaan #Jawan #Dunki pic.twitter.com/GuXSdoiunF
— Azam Sajjad (@AzamDON) September 18, 2023
ಇದೊಂದು ಸಂಭ್ರಮಾಚರಣೆ
ʼಜವಾನ್ʼ ಚಿತ್ರದ ಯಶಸ್ಸಿನ ಸಂಭ್ರಮವನ್ನು ಹಂಚಿಕೊಂಡಾಗ ಶಾರುಖ್ ಖಾನ್, “ಇದೊಂದು ಸಂಭ್ರಮಾಚರಣೆ. ಒಂದು ಚಿತ್ರದೊಂದಿಗೆ ವರ್ಷಗಳ ಕಾಲ ಬದುಕುವ ಅವಕಾಶ ನಮಗೆ ಸಿಗುವುದು ಅಪರೂಪ. ಕೋವಿಡ್ ಮತ್ತು ಸಮಯದ ಕೊರತೆಯಿಂದಾಗಿ ನಾಲ್ಕು ವರ್ಷಗಳಿಂದ ಜವಾನ್ ತಯಾರಿಯಲ್ಲಿ ಇತ್ತು. ಈ ಚಿತ್ರದಲ್ಲಿ ಸಾಕಷ್ಟು ಮಂದಿ ಶ್ರಮ ಪಟ್ಟಿದ್ದಾರೆ. ಅದರಲ್ಲೂ ದಕ್ಷಿಣದ ಜನರು ಮುಂಬೈಗೆ ಬಂದು ನೆಲೆಸಿರುವವರು. ಕಳೆದ ನಾಲ್ಕು ವರ್ಷಗಳಿಂದ ಮುಂಬೈನಲ್ಲಿ ನೆಲೆಸಿದ್ದಾರೆ ಮತ್ತು ಈ ಚಿತ್ರಕ್ಕಾಗಿ ಹಗಲಿರುಳು ಶ್ರಮಿಸುತ್ತಿದ್ದಾರೆ. ಇದು ಅತ್ಯಂತ ಕಷ್ಟದ ಕೆಲಸವಾಗಿದೆʼʼ ಎಂದಿದ್ದರು.