Site icon Vistara News

Devara Movie: ಜ್ಯೂನಿಯರ್‌ ಎನ್‌ಟಿಆರ್‌ ‘ದೇವರ‘ ಸಿನಿಮಾ ರಿಲೀಸ್‌ ಡೇಟ್‌ ಪೋಸ್ಟ್‌ಪೋನ್‌?

Jr NTR Devara release postponed

ಬೆಂಗಳೂರು:ದೇವರ‘ ಸಿನಿಮಾ (Devara Movie) ಒಂದು ದೊಡ್ಡ-ಬಜೆಟ್ ಕಮರ್ಷಿಯಲ್ ಆ್ಯಕ್ಷನ್ ಎಂಟರ್‌ಟೈನರ್. ಕೊರಟಾಲ ಶಿವ ಈ ಸಿನಿಮಾ ನಿರ್ದೇಶಕರು. ಈಗಾಗಲೇ  ಸೈಫ್ ಅಲಿ ಖಾನ್ ಅವರು ʻದೇವರʼ ಶೂಟಿಂಗ್‌ನಲ್ಲಿ ನಡೆದ ಅಪಘಾತದಿಂದ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗಿದ್ದಾರೆ. ಈ ಸುದ್ದಿ ಬೆನ್ನಲ್ಲೇ ಇದೀಗ ಮತ್ತೆ ʻದೇವರʼ ಸಿನಿಮಾದ ಹೊಸ ಅಪ್‌ಡೇಟ್‌ ವೈರಲ್‌ ಆಗುತ್ತಿದೆ. ಮೊದಲ ಭಾಗಕ್ಕೆ ‘ದೇವರ: ಭಾಗ 1’ ಎಂದು ಹೆಸರಿಡಲಾಗಿದೆ. ಈ ಮುಂಚೆ ಚಿತ್ರತಂಡ ಏಪ್ರಿಲ್ 5 ರಂದು ಸಿನಿಮಾ ರಿಲೀಸ್‌ ಡೇಟ್‌ವನ್ನು ಘೋಷಿಸಿತ್ತು. ಆದರೀಗ ಚಿತ್ರದ ಬಿಡುಗಡೆ ದಿನಾಂಕ ಮುಂದೂಡಿಕೆ ಆಗಿದೆ ಎನ್ನಲಾಗುತ್ತಿದೆ. ಆಗಸ್ಟ್ ಅಥವಾ ಸೆಪ್ಟೆಂಬರ್‌ನಲ್ಲಿ ಬಿಡುಗಡೆಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ.

ಜ್ಯೂನಿಯರ್‌ ಎನ್‌ಟಿಆರ್‌ ಅವರ ಜನ್ಮದಿನವಾದ ಜನವರಿ 8 ರಂದು, ‘ದೇವರ’ ನಿರ್ಮಾಪಕರು ಫಸ್ಟ್‌ ಲುಕ್‌ವನ್ನು ಹಂಚಿಕೊಂಡಿದ್ದರು, ಅಲ್ಲಿಂದ ಸಿನಿಮಾ ಬಗ್ಗೆ ಸಿನಿರಸಿಕರಿಗೆ ನಿರೀಕ್ಷೆ ಹೆಚ್ಚಾಗಿತ್ತು. ಇದೀಗ ಮೂಲಗಳ ಪ್ರಕಾರ ಸಿನಿಮಾ ಬಿಡುಗಡೆ ದಿನಾಂಕ ಮುಂದೂಡಿಕೆ ಆಗಿದೆ. ಸೈಫ್ ಅಲಿಖಾನ್ ಶಸ್ತ್ರಚಿಕಿತ್ಸೆಗೆ ಒಳಗಾಗಿರುವ ಕಾರಣಗಳಿಂದಾಗಿ ಈ ನಿರ್ಧಾರ ಚಿತ್ರತಂಡ ತೆಗೆದುಕೊಂಡಿದೆ ಎಂದು ವರದಿಯಾಗಿದೆ. ಚಿತ್ರವು ಆಗಸ್ಟ್ ಅಥವಾ ಸೆಪ್ಟೆಂಬರ್‌ನಲ್ಲಿ ಬಿಡುಗಡೆಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ. ಆದರೆ ಈ ಬಗ್ಗೆ ಚಿತ್ರತಂಡ ಎಲ್ಲಿಯೂ ಅಧಿಕೃತ ಮಾಹಿತಿಯನ್ನು ಹಂಚಿಕೊಂಡಿಲ್ಲ.

ಇದನ್ನೂ ಓದಿ: Devara Movie: ಜ್ಯೂನಿಯರ್ ಎನ್​ಟಿಆರ್ ʻದೇವರ​ʼ ಸಿನಿಮಾದಲ್ಲಿ ಕನ್ನಡಿಗ ತಾರಕ್ ಪೊನ್ನಪ್ಪ

ಜ್ಯೂನಿಯರ್‌ ಎನ್‌ಟಿಆರ್‌, ಸೈಫ್ ಅಲಿ ಖಾನ್ ಮತ್ತು ಜಾನ್ವಿ ಕಪೂರ್ ಪ್ರಮುಖ ಪಾತ್ರಗಳಲ್ಲಿದ್ದಾರೆ.ದೇವರ’ ಚಿತ್ರವನ್ನು ಕೊರಟಾಲ ಶಿವ ನಿರ್ದೇಶಿಸಿದ್ದಾರೆ. 2016ರಲ್ಲಿ ಇವರು ಜನತಾ ಗ್ಯಾರೇಜ್ ಎಂಬ ಸಿನಿಮಾವನ್ನು ನಿರ್ದೇಶಿಸಿದ್ದರು. ಅದರಲ್ಲಿ ಕೂಡ ಜ್ಯೂನಿಯರ್ ಎನ್​ಟಿಆರ್ ನಾಯಕನಾಗಿದ್ದರು. ಅದಾದ ಮೇಲೆ ಕೊರಟಾಲ ಶಿವ ಅವರೊಟ್ಟಿಗೆ ಜ್ಯೂ.ಎನ್​ಟಿಆರ್ ಯಾವುದೇ ಸಿನಿಮಾವನ್ನೂ ಮಾಡಿರಲಿಲ್ಲ. ಇದೀಗ ‘ದೇವರ’ ಮೂಲಕ ಒಂದಾಗಿದ್ದಾರೆ. ದೇವರ ಸಿನಿಮಾದಲ್ಲಿ ಜ್ಯೂನಿಯರ್ ಎನ್​ಟಿಆರ್​ ದ್ವಿಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂಬ ವದಂತಿಯೂ ಇದೆ. ಅಪ್ಪ-ಮಗ ಎರಡೂ ಪಾತ್ರದಲ್ಲಿ ಇವರೇ ಅಭಿನಯ ಮಾಡಲಿದ್ದಾರಂತೆ. ಇದೊಂದು ಪಕ್ಕಾ ಆ್ಯಕ್ಷನ್​ ಚಿತ್ರದಂತೆ ಕಾಣಿಸುತ್ತಿದೆ. ಯುವಸುಧಾ ಆರ್ಟ್ಸ್ ಮತ್ತು ಜ್ಯೂನಿಯರ್‌ ಎನ್‌ಟಿಆರ್‌ ಆರ್ಟ್ಸ್ ಈ ಚಿತ್ರವನ್ನು ನಿರ್ಮಿಸಿದ್ದು, ನಂದಮೂರಿ ಕಲ್ಯಾಣ್ ರಾಮ್ ಅವರು ಪ್ರಸ್ತುತಪಡಿಸಿದ್ದಾರೆ.

Exit mobile version