Site icon Vistara News

Jr NTR: ʻವಾರ್‌-2ʼ ಸಿನಿಮಾಗಾಗಿ ಭಾರಿ ಮೊತ್ತದ ಸಂಭಾವನೆ ಪಡೆದ ಜ್ಯೂನಿಯರ್‌ ಎನ್‌ಟಿಆರ್‌?

Jr NTR Hikes Fee For War 2

ಬೆಂಗಳೂರು: ‘ವಾರ್-2’ ಚಿತ್ರದಲ್ಲಿ ಹೃತಿಕ್ ರೋಷನ್ ಜತೆ ಜ್ಯೂನಿಯರ್‌ ಎನ್‌ಟಿಆರ್‌ (Jr NTR) ಅಭಿನಯಿಸುತ್ತಿದ್ದಾರೆ. ವರದಿಗಳ ಪ್ರಕಾರ ಈ ಚಿತ್ರಕ್ಕಾಗಿ ಜ್ಯೂನಿಯರ್‌ ಎನ್‌ಟಿಆರ್‌ ಭಾರಿ ಮೊತ್ತದ ಸಂಭಾವನೆಯನ್ನು ಪಡೆದಿದ್ದಾರೆ ಎನ್ನಲಾಗಿದೆ. ಜ್ಯೂನಿಯರ್‌ ಎನ್‌ಟಿಆರ್‌ ಇತ್ತೀಚಿನ ಬ್ಲಾಕ್‌ಬಸ್ಟರ್ ಆರ್‌ಆರ್‌ಆರ್‌ ಸಿನಿಮಾಗಾಗಿ 45 ಕೋಟಿ ರೂ. ಪಡೆದಿದ್ದರು. ವಾರ್‌ 2 ಸಿನಿಮಾಗಾಗಿ 100 ಕೋಟಿ ರೂ. ಸಂಭಾವನೆ ಪಡೆಯುತ್ತಿದ್ದಾರೆ ಎನ್ನಲಾಗಿದೆ.

ಸಿದ್ದಾರ್ಥ್ ಆನಂದ್ ಅವರು ‘ವಾರ್’ ಚಿತ್ರವನ್ನು ನಿರ್ದೇಶನ ಮಾಡಿದ್ದರು. ಈ ಚಿತ್ರ ಬಾಕ್ಸ್ ಆಫೀಸ್​ನಲ್ಲಿ ಯಶಸ್ಸು ಕಂಡಿತು. ಈ ಚಿತ್ರದಲ್ಲಿ ಹೃತಿಕ್ ರೋಷನ್ ಹಾಗೂ ಟೈಗರ್ ಶ್ರಾಫ್ ನಟಿಸಿದ್ದರು. ಮೊದಲ ಪಾರ್ಟ್​​ನಲ್ಲಿ ಟೈಗರ್ ಶ್ರಾಫ್ ಪಾತ್ರ ಕೊನೆಗೊಂಡಿದೆ. ಹೀಗಾಗಿ ‘ವಾರ್-2’ ಚಿತ್ರದಲ್ಲಿ ಹೃತಿಕ್ ಮಾಡಿರುವ ಕಬೀರ್ ಪಾತ್ರ ಮುಂದುವರಿಯುತ್ತಿದೆ. ಜ್ಯೂನಿಯರ್‌ ಎನ್‌ಟಿಆರ್‌ ಅವರು ತಮ್ಮ ಮೊದಲ ಬಾಲಿವುಡ್​ ಚಿತ್ರಕ್ಕೆ ಇಷ್ಟು ದೊಡ್ಡ ಮೊತ್ತದ ಸಂಭಾವನೆ ಪಡೆಯುತ್ತಿರುವುದು ವಿಶೇಷ. ವಾರ್‌-2 ಪ್ಯಾನ್ ಇಂಡಿಯಾ ಚಲನಚಿತ್ರವಾಗಿದ್ದು, ಉತ್ತರ ಮತ್ತು ದಕ್ಷಿಣ ಭಾಗದ ಸೂಪರ್‌ಸ್ಟಾರ್‌ಗಳನ್ನು ಹೊಂದಿದೆ. ವಾರ್‌-2 ಅಯನ್ ಮುಖರ್ಜಿ ನಿರ್ಮಿಸುವ ಸಾಧ್ಯತೆಯಿದೆ.

ಇತ್ತೀಚೆಗಷ್ಟೆ ನಟ ಕೊರಟಾಲ ಶಿವ ಅವರೊಂದಿಗೆ ಎನ್‌ಟಿಆರ್‌ 30 ಸಿನಿಮಾವನ್ನು ಲಾಂಚ್‌ ಮಾಡಿದರು ಜ್ಯೂನಿಯರ್‌ ಎನ್‌ಟಿಆರ್‌. ನಿರ್ದೇಶಕ ಎಸ್‌ಎಸ್ ರಾಜಮೌಳಿ ಅವರು ಮುಹೂರ್ತಕ್ಕೆ ಆಗಮಿಸಿದ್ದರು. ಹೈದರಾಬಾದ್, ಗೋವಾ ಮತ್ತು ವಿಶಾಖಪಟ್ಟಣಂನಲ್ಲಿ ಚಿತ್ರದ ಚಿತ್ರೀಕರಣ ನಡೆಯಲಿದೆ ಎಂದು ಹೇಳಲಾಗುತ್ತಿದೆ. 2024ರ ಏಪ್ರಿಲ್ 5 ರಂದು ಚಿತ್ರಮಂದಿರಗಳಲ್ಲಿ ಚಿತ್ರವನ್ನು ಬಿಡುಗಡೆ ಮಾಡಲು ಚಿತ್ರತಂಡ ಯೋಜಿಸುತ್ತಿದೆ ಎನ್ನಲಾಗಿದೆ. ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿಯನ್ನು ಚಿತ್ರತಂಡ ಹಂಚಿಕೊಂಡಿಲ್ಲ.

ಇದನ್ನೂ ಓದಿ: Jr NTR: ಖಡಕ್‌ ವಾರ್ನಿಂಗ್‌ ಬೆನ್ನಲ್ಲೇ ಫೋಟೊಗಾಗಿ ಜ್ಯೂನಿಯರ್‌ ಎನ್‌ಟಿಆರ್‌ ಮೇಲೆ ಅಟ್ಯಾಕ್‌ ಮಾಡಿದ ಅಭಿಮಾನಿ

ಅನಿರುದ್ಧ ಸಂಗೀತ ನಿರ್ದೇಶಕರಾಗಿದ್ದು, ರತ್ನವೇಲು ಛಾಯಾಗ್ರಹಣ ಮಾಡಲಿದ್ದಾರೆ. ನಂದಮೂರಿ ಕಲ್ಯಾಣರಾಮ್ ಪ್ರಸ್ತುತಪಡಿಸಿದ್ದು, ಯುವಸುಧಾ ಆರ್ಟ್ಸ್ ಮತ್ತು ಎನ್‌ಟಿಆರ್ ಆರ್ಟ್ಸ್ ಬ್ಯಾನರ್‌ನಡಿಯಲ್ಲಿ ಮಿಕ್ಕಿಲಿನೇನಿ ಸುಧಾಕರ್ ಮತ್ತು ಹರಿ ಕೃಷ್ಣ ಕೆ ನಿರ್ಮಿಸಿದ್ದಾರೆ. 300 ಕೋಟಿ ಬಜೆಟ್‌ನಲ್ಲಿ ಸಿನಿಮಾ ಮಾಡಲಾಗುತ್ತಿದೆ ಎಂದು ಚಿತ್ರತಂಡ ಹೇಳಿಕೊಂಡಿದೆ.

Exit mobile version