ಬೆಂಗಳೂರು: RRR ಚಿತ್ರದ ಮೂಲಕ ಪ್ಯಾನ್ ಇಂಡಿಯಾ ಸ್ಟಾರ್ ಆದ ಜ್ಯೂನಿಯರ್ ಎನ್‌ಟಿಆರ್ (Jr NTR) ಬಾಲಿವುಡ್‌ಗೆ ಎಂಟ್ರಿ ಕೊಡುತ್ತಿದ್ದಾರೆ. ಯಶ್ ರಾಜ್ ಫಿಲ್ಮ್ಸ್ ಅವರ ವಾರ್-2 ಸಿನಿಮಾ ಮೂಲಕ ಬಾಲಿವುಡ್‌ಗೆ ಪದಾರ್ಪಣೆ ಮಾಡಲು ಸಿದ್ಧರಾಗಿದ್ದಾರೆ. ಅಯನ್ ಮುಖರ್ಜಿ ನಿರ್ದೇಶನದ ಈ ಚಿತ್ರ ವರ್ಷದ ಕೊನೆಯಲ್ಲಿ ಬಿಡುಗಡೆಯಾಗುವ ನಿರೀಕ್ಷೆಯಿದೆ. ಇದೀಗ ವೈರಲ್ ಆಗುತ್ತಿರುವ ಸುದ್ದಿ ಎಂದರೆ ವಾರ್ 2ನಲ್ಲಿ ಜ್ಯೂನಿಯರ್ ಎನ್‌ಟಿಆರ್ ʻನೆಗೆಟಿವ್ ಶೇಡ್ʼ ಪಾತ್ರವನ್ನು ನಿರ್ವಹಿಸಲಿದ್ದಾರೆ ಎನ್ನಲಾಗುತ್ತಿದೆ.
ವರದಿಯ ಪ್ರಕಾರ, ಜ್ಯೂನಿಯರ್ ಎನ್‌ಟಿಆರ್ ವಿಲನ್ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. “ಅಂತಿಮ ಸ್ಕ್ರಿಪ್ಟ್ ಇನ್ನೂ ತಯಾರಾಗಿಲ್ಲ. ವಾರ್ 2ನಲ್ಲಿ ಜ್ಯೂನಿಯರ್ ಎನ್‌ಟಿಆರ್ ಪಾತ್ರವು ಕೆಲವು ನೆಗೆಟಿವ್ ಶೇಡ್ ಹೊಂದಿರಲಿದೆʼʼ ಎನ್ನಲಾಗಿದೆ. ವಾರ್ 2 ನವೆಂಬರ್‌ನಲ್ಲಿ ಚಿತ್ರೀಕರಣವನ್ನು ಪ್ರಾರಂಭಿಸಲಿದೆ ಎಂದು ಮಾಧ್ಯಮವೊಂದು ವರದಿ ಮಾಡಿದೆ. ಹೃತಿಕ್ ರೋಷನ್ ಒಂದು ತಿಂಗಳ ಬಳಿಕ ಸೆಟ್‌ಗೆ ಬರಲಿದ್ದಾರೆ ಎನ್ನಲಾಗಿದೆ.
ಬ್ರಹ್ಮಾಸ್ತ್ರ ಸಿನಿಮಾ ಬಳಿಕ ಆದಿತ್ಯ ಚೋಪ್ರಾ ಅವರು ಅಯನ್ ಮುಖರ್ಜಿ ಅವರ ನಿರ್ದೇಶಕ್ಕೆ ಮನಸೋತು, ಈ ಸಿನಿಮಾ ಮಾಡಲು ಅವಕಾಶ ನೀಡಿದ್ದಾರೆ ಎನ್ನಲಾಗಿದೆ. ಜ್ಯೂನಿಯರ್ ಎನ್‌ಟಿಆರ್ ಇತ್ತೀಚಿನ ಬ್ಲಾಕ್‌ಬಸ್ಟರ್ ಆರ್‌ಆರ್‌ಆರ್ ಸಿನಿಮಾಗಾಗಿ 45 ಕೋಟಿ ರೂ. ಪಡೆದಿದ್ದರು. ವಾರ್ 2 ಸಿನಿಮಾಗಾಗಿ 100 ಕೋಟಿ ರೂ. ಸಂಭಾವನೆ ಪಡೆಯುತ್ತಿದ್ದಾರೆ ಎನ್ನಲಾಗಿದೆ.
ಸಿದ್ದಾರ್ಥ್ ಆನಂದ್ ಅವರು ‘ವಾರ್’ ಚಿತ್ರವನ್ನು ನಿರ್ದೇಶನ ಮಾಡಿದ್ದರು. ಈ ಚಿತ್ರ ಬಾಕ್ಸ್ ಆಫೀಸ್ನಲ್ಲಿ ಯಶಸ್ಸು ಕಂಡಿತು. ಈ ಚಿತ್ರದಲ್ಲಿ ಹೃತಿಕ್ ರೋಷನ್ ಹಾಗೂ ಟೈಗರ್ ಶ್ರಾಫ್ ನಟಿಸಿದ್ದರು. ಮೊದಲ ಪಾರ್ಟ್ನಲ್ಲಿ ಟೈಗರ್ ಶ್ರಾಫ್ ಪಾತ್ರ ಕೊನೆಗೊಂಡಿದೆ. ಹೀಗಾಗಿ ‘ವಾರ್-2’ ಚಿತ್ರದಲ್ಲಿ ಹೃತಿಕ್ ಮಾಡಿರುವ ಕಬೀರ್ ಪಾತ್ರ ಮುಂದುವರಿಯುತ್ತಿದೆ. ಜ್ಯೂನಿಯರ್ ಎನ್‌ಟಿಆರ್ ಅವರು ತಮ್ಮ ಮೊದಲ ಬಾಲಿವುಡ್ ಚಿತ್ರಕ್ಕೆ ಇಷ್ಟು ದೊಡ್ಡ ಮೊತ್ತದ ಸಂಭಾವನೆ ಪಡೆಯುತ್ತಿರುವುದು ವಿಶೇಷ. ವಾರ್-2 ಪ್ಯಾನ್ ಇಂಡಿಯಾ ಚಲನಚಿತ್ರವಾಗಿದ್ದು, ಉತ್ತರ ಮತ್ತು ದಕ್ಷಿಣ ಭಾಗದ ಸೂಪರ್‌ಸ್ಟಾರ್‌ಗಳನ್ನು ಹೊಂದಿದೆ.
ಇದನ್ನೂ ಓದಿ: Jr NTR: ʻವಾರ್-2ʼ ಸಿನಿಮಾಗಾಗಿ ಭಾರಿ ಮೊತ್ತದ ಸಂಭಾವನೆ ಪಡೆದ ಜ್ಯೂನಿಯರ್ ಎನ್‌ಟಿಆರ್?
300 ಕೋಟಿ ಬಜೆಟ್‌ನಲ್ಲಿ ಎನ್‌ಟಿಆರ್ 30 ಸಿನಿಮಾ
ಇತ್ತೀಚೆಗಷ್ಟೆ ನಟ ಕೊರಟಾಲ ಶಿವ ಅವರೊಂದಿಗೆ ಎನ್‌ಟಿಆರ್ 30 ಸಿನಿಮಾವನ್ನು ಲಾಂಚ್ ಮಾಡಿದರು ಜ್ಯೂನಿಯರ್ ಎನ್‌ಟಿಆರ್. ನಿರ್ದೇಶಕ ಎಸ್‌ಎಸ್ ರಾಜಮೌಳಿ ಅವರು ಮುಹೂರ್ತಕ್ಕೆ ಆಗಮಿಸಿದ್ದರು. ಹೈದರಾಬಾದ್, ಗೋವಾ ಮತ್ತು ವಿಶಾಖಪಟ್ಟಣಂನಲ್ಲಿ ಚಿತ್ರದ ಚಿತ್ರೀಕರಣ ನಡೆಯಲಿದೆ ಎಂದು ಹೇಳಲಾಗುತ್ತಿದೆ. 2024ರ ಏಪ್ರಿಲ್ 5 ರಂದು ಚಿತ್ರಮಂದಿರಗಳಲ್ಲಿ ಚಿತ್ರವನ್ನು ಬಿಡುಗಡೆ ಮಾಡಲು ಚಿತ್ರತಂಡ ಯೋಜಿಸುತ್ತಿದೆ ಎನ್ನಲಾಗಿದೆ. ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿಯನ್ನು ಚಿತ್ರತಂಡ ಹಂಚಿಕೊಂಡಿಲ್ಲ. ಜಾನ್ವಿ ಕಪೂರ್ ಮತ್ತು ಸೈಫ್ ಅಲಿ ಖಾನ್ ಪ್ರಮುಖ ಪಾತ್ರಗಳಲ್ಲಿದ್ದಾರೆ.
ಅನಿರುದ್ಧ ಸಂಗೀತ ನಿರ್ದೇಶಕರಾಗಿದ್ದು, ರತ್ನವೇಲು ಛಾಯಾಗ್ರಹಣ ಮಾಡಲಿದ್ದಾರೆ. ನಂದಮೂರಿ ಕಲ್ಯಾಣರಾಮ್ ಪ್ರಸ್ತುತಪಡಿಸಿದ್ದು, ಯುವಸುಧಾ ಆರ್ಟ್ಸ್ ಮತ್ತು ಎನ್‌ಟಿಆರ್ ಆರ್ಟ್ಸ್ ಬ್ಯಾನರ್‌ನಡಿಯಲ್ಲಿ ಮಿಕ್ಕಿಲಿನೇನಿ ಸುಧಾಕರ್ ಮತ್ತು ಹರಿ ಕೃಷ್ಣ ಕೆ ನಿರ್ಮಿಸಿದ್ದಾರೆ. 300 ಕೋಟಿ ಬಜೆಟ್‌ನಲ್ಲಿ ಸಿನಿಮಾ ಮಾಡಲಾಗುತ್ತಿದೆ ಎಂದು ಚಿತ್ರತಂಡ ಹೇಳಿಕೊಂಡಿದೆ.